BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು
  • ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ
  • ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ
  • ೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ
  • ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು
  • ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ
  • ಕಾ0ಗ್ರೆಸ್ ಮತದಾರರ ಪಟ್ಟಿಗೆ ಅಕ್ರಮವಾಗಿ ಸೇರಿಸುವ ಕೆಲಸ ಮಾಡಿಲ್ಲ
  • ದಾಬಸ್‌ಪೇಟ್-ರಾಯದುರ್ಗ ರಾ. ಹೆದ್ದಾರಿಗೆ ಸಿದ್ದತೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲು ಜಿಲ್ಲಾಧಿಕಾರಿ ಸೂಚನೆ
ಇತರೆ ಸುದ್ಧಿಗಳು

ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleUpdated:August 10, 2022 4:59 pm

ತುಮಕೂರು:


ಕೇಂದ್ರ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆಂದು ಕಲ್ಯಾಣ ಯೋಜನೆಗಳನ್ನು ರೂಪಿಸಿದ್ದು, ಅಧಿಕಾರಿಗಳು ಹೆಚ್ಚಿನ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಕಾರ್ಡುಗಳನ್ನು ವಿತರಿಸಿ ಸಾಲಸೌಲಭ್ಯ ಒದಗಿಸುವತ್ತ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಬದಿಯಲ್ಲಿ, ಕೈಗಾಡಿಗಳಲ್ಲಿ ವ್ಯಾಪಾರ ಮಾಡಿ ತಮ್ಮ ಕುಟುಂಬವನ್ನು ನಿರ್ವಹಿಸುವ ವ್ಯಾಪಾರಿಗಳಿಗೆ ಸಹಾಯ ಮಾಡಲು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಅರ್ಹರಿಗೆ ಸಾಲದ ವ್ಯವಸ್ಥೆ ಕಲ್ಪಿಸಬೇಕೆಂದು ತಿಳಿಸಿದರು.
ತಮ್ಮ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಸಮಿತಿ ಸಭೆ ನಡೆಸಿ ಜೂನ್ 2022ರ ಅಂತ್ಯಕ್ಕೆ ಸಾಧಿಸಲಾದ ಕೌಶಲ್ಯ ಸಂಬಂಧಿತ ಇಲಾಖಾವಾರು ಕಾರ್ಯಕ್ರಮಗಳ ಪ್ರಗತಿ ವರದಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ ದೀನ್ ದಯಾಳ್ ಉಪಾಧ್ಯಾಯ್ ಗ್ರಾಮೀಣ ಕೌಶಲ್ಯ ಯೋಜನೆ( ಡಿಡಿಯುಜಿಕೆವೈ) ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ) ಪ್ರಧಾನಮಂತ್ರಿ ಕೌಶಲ್ಯ ವಿಕಾಸ್ ಯೋಜನೆ ( ಪಿಎಂಕೆವಿವೈ) ಗಳನ್ನು ಜಾರಿಗೊಳಿಸಿದ್ದು ಅರ್ಹರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ವೃತ್ತಿ ಮಾರ್ಗದರ್ಶನ ಮಾಡಲು ಪೂರಕ ಕಾರ್ಯಕ್ರಮಗಳನ್ನು ರೂಪಿಸಬೇಕೆಂದರು.
ಪ್ರಸಕ್ತ ಸಾಲಿನ ಡೇ-ನಲ್ಮ್ ಯೋಜನೆಯ ಪ್ರಗತಿ ಪರಿಶೀಲಿಸಿದ ಅವರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಸಹಾಯ ಗುಂಪುಗಳ ರಚನೆ ಮಾಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ವಯಕ್ತಿಕ ಸಾಲ, ಗುಂಪುಸಾಲ, ಬ್ಯಾಂಕ್ ಕ್ರೆಡಿಟ್ ಲಿಂಕೇಜ್, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣೆ ಉದ್ದಿಮೆಯಡಿ ಅರ್ಹರಿಗೆ ಸಾಲಸೌಲಭ್ಯ, ಸಹಾಯಧನ ಒದಗಿಸಿ ಅವರ ಆರ್ಥಿಕ ಸ್ಥಿತಿ ಸುಧಾರಿಸುವತ್ತ ಅಧಿಕಾರಿಗಳು ಶ್ರಮಿಸಬೇಕು ಎಂದು ತಿಳಿಸಿದರು.
ಅಂತರರಾಷ್ಟ್ರೀಯ ವಲಸೆ ಕೇಂದ್ರ- ಕರ್ನಾಟಕ ಯೋಜನೆಯಡಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ವಲಸೆ ಮಾಹಿತಿ ಕೇಂದ್ರದಲ್ಲಿ ಕುವೈತ್, ಯು.ಕೆ, ದುಬೈ, ರೋಮಾನಿಯಾ ದೇಶಗಳಲ್ಲಿ ಮನೆ ಕೆಲಸ, ನರ್ಸ್, ಕಟ್ಟಡ ನಿರ್ಮಾಣ ಮೇಸ್ತ್ರಿಗಳು, ಟ್ರೈನ್ ಫ್ಯಾಕ್ಟರಿ, ಟೆಕ್ನಿಷಿಯನ್ ವರ್ಕರ್ಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಲಸೆ ಕಾರ್ಮಿಕರಿಗಿರುವ ಬೇಡಿಕೆ ವಿವರ ಲಭ್ಯವಿದ್ದು, ಈವರೆಗೂ ವಲಸೆಗಾಗಿ ನೋಂದಾಣಿಯಾದ 351 ಅಭ್ಯರ್ಥಿಗಳಿಗೆ ಸಮಾಲೋಚನೆ ನಡೆಸಲಾಗಿದೆ ಎಂದರಲ್ಲದೇ, ವಿದೇಶದಲ್ಲಿ ಉದ್ಯೋಗ ಮಾಡಲು ಬಯಸುವವರು ವಲಸೆ ಮಾಹಿತಿ ಕೇಂದ್ರದಲ್ಲಿ ಅಗತ್ಯ ಮಾಹಿತಿ ಪಡೆಯಬಹುದೆಂದರು.
ಜಿಲ್ಲಾ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ವಿದ್ಯಾರ್ಥಿಗಳಿಗೆ 2 ತಿಂಗಳ ಕಾಲ ತರಬೇತಿಯನ್ನು ನೀಡಲಾಗುತ್ತಿದೆ ಎಂದರು.
ಖSಇಖಿI, ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಎನ್.ಆರ್.ಎಲ್.ಎಂ- ಸಂಜೀವಿನಿ, ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಪಶುವೈದ್ಯಕೀಯ ಇಲಾಖೆಗಳಡಿ ಅಗತ್ಯ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಕೌಶಲ್ಯಾಧಿಕಾರಿ ಶ್ರೀನಿವಾಸ್, ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಡಿಡಿಪಿಐ ನಂಜಯ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 6 times, 1 visits today)
tumkur Tumkur dc yspatil
Previous Articleಶಿಥಿಲಾವಸ್ಥೆಯ ಕಟ್ಟಡಗಳನ್ನು ಕೆಡವಿ ಹಾಕತಕ್ಕದ್ದು: ಪಾಲಿಕೆ ಆಯುಕ್ತೆ
Next Article ಜಂತು ನಿವಾರಣಾ ಮಾತ್ರೆ ಸೇವಿಸಿ: ಸಿಇಓ ಸಲಹೆ
News Desk Benkiyabale

Related Posts

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm news

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm news

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm news
ತಾಜಾ ಸುದ್ಧಿಗಳು

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm

ಯುವ ಮನಸ್ಸುಗಳನ್ನು ಸಂಗೀತದತ್ತ ಸೆಳೆಯುವ ನಿಟ್ಟಿನಲ್ಲಿ ತಾಯಂದಿರು ಮಾರ್ಗದರ್ಶನ ಅಗತ್ಯ: ಹಾಲಪ್ಪ

July 13, 2026 6:02 pm
Our Youtube Channel
Our Picks

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

July 14, 2026 4:07 pm

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm

ರಸ್ತೆ ಒತ್ತುವರಿ ವಿವಾದ ಬಗೆಹರಿಸಿದ ಅಧಿಕಾರಿಗಳು

July 14, 2026 3:56 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಮದ್ಯ ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು

By News Desk BenkiyabaleJuly 14, 2026 4:07 pm

ಹುಳಿಯಾರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಳಿಯಾರಿನಲ್ಲಿ ಹಮ್ಮಿಕೊಂಡಿರುವ ಈ ಮಧ್ಯವರ್ಜನ ಶಿಬಿರವು ವ್ಯಸನಿಗಳ ಬದುಕಿನಲ್ಲಿ ಹೊಸ ಬೆಳಕು ನೀಡುವ ಒಂದು…

ಶೈಕ್ಷಣಿಕ ಮೂಲಸೌಕರ್ಯಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕ

July 14, 2026 4:02 pm

ಅನಿಲಗಳ ಅಕ್ರಮ ದಾಸ್ತಾನು: ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

July 14, 2026 4:00 pm

೧೫ ಲಕ್ಷ ರೂ. ವಿಮೆ ಕ್ಲೆ0ಮ್ ಚೆಕ್ ವಿತರಣೆ

July 14, 2026 4:03 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.