BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ
  • ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು
  • ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ
  • ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ
  • ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ
  •  ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ
  • ಮಹಿಳೆಯರಿಗಾಗಿ ವಿಶೇಷ ಸೀರತ್ ಪ್ರವಚನ ಕಾರ್ಯಕ್ರಮ
  • ಕನಿಷ್ಠ ಕೂಲಿ, ಗುತ್ತಿಗೆ ಕಾರ್ಮಿಕರ ಖಾಯಂಮಾತಿ ಶಾಸನಕ್ಕೆ ಒತ್ತಾಯಿಸಿ ಶಾಸಕರಿಗೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಳೆಯಿಂದ ಮನೆ ಹಾನಿ: ಪರಿಹಾರಕ್ಕಾಗಿ ಸೂಚನೆ
ಇತರೆ ಸುದ್ಧಿಗಳು

ಮಳೆಯಿಂದ ಮನೆ ಹಾನಿ: ಪರಿಹಾರಕ್ಕಾಗಿ ಸೂಚನೆ

By News Desk BenkiyabaleUpdated:August 17, 2022 6:18 pm

ತುಮಕೂರು:


ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯ ಅಂತ್ಯ ಹಾಗೂ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಸಂಬಂಧಪಟ್ಟಂತೆ ಪರಿಹಾರವನ್ನು ಶೀಘ್ರ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಎಲ್ಲಾ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಮಳೆ ನಷ್ಟ ಪರಿಹಾರ ನೀಡಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಅವರು, ಮಳೆಯಿಂದ ಮೃತಪಟ್ಟ 8 ಪ್ರಕರಣಗಳ ವಾರಸುದಾರರಿಗೆ ಈಗಾಗಲೇ ಪರಿಹಾರ ನೀಡಲಾಗಿದ್ದು, ಹಾನಿಗೊಳಗಾದ ಮನೆ ಮಾಲೀಕರಿಗೆ ಪರಿಹಾರ ನೀಡುವ ಕೆಲವೇ ಪ್ರಕರಣಗಳು ಬಾಕಿ ಇದ್ದು, ಕೂಡಲೇ ಪರಿಹಾರ ನೀಡಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಅವರು ನಿರ್ದೇಶನ ನೀಡಿದರು.
ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಜಿಲ್ಲೆಯಲ್ಲಿ ಕೋವಿಡ್-19ರಿಂದ ಮೃತಪಟ್ಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಸ್ವೀಕೃತ ಎಲ್ಲಾ ಅರ್ಜಿಗಳನ್ನು ಅನುಮೋದಿಸಿ ಈಗಾಗಲೇ ಪರಿಹಾರ ನೀಡಲಾಗಿದೆ. ಕೋವಿಡ್‍ನಿಂದ ಮೃತಪಟ್ಟವರಿಗೆ ಪರಿಹಾರ ನೀಡುವ ಸಂಬಂಧ ಯಾವುದೇ ಅರ್ಜಿಯನ್ನು ವಿಲೇವಾರಿ ಮಾಡದೆ ಬಾಕಿ ಇಟ್ಟುಕೊಂಡು ವಿಳಂಬ ಮಾಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಕೋವಿಡ್ ಪರಿಹಾರದ ಯಾವುದೇ ಅರ್ಜಿಯನ್ನು ಬಾಕಿ ಇಟ್ಟುಕೊಳ್ಳದೆ 1 ವಾರದೊಳಗಾಗಿ ವಿಲೇವಾರಿ ಮಾಡಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ: ಕೆ. ವಿದ್ಯಾಕುಮಾರಿ ಮಾತನಾಡಿ, ಮನೆ ಇಲ್ಲದ ಗ್ರಾಮೀಣ ಪ್ರದೇಶದವರಿಗೆ ವಸತಿ ಸೌಲಭ್ಯ ಕಲ್ಪಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಬಾಕಿ ಇರುವ ಮನೆ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳಿಸತಕ್ಕದ್ದು ಎಂದು ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಯಡಿ 2010 ರಿಂದ 2021ರವರೆಗೆ 21166 ಮನೆಗಳ ನಿರ್ಮಾಣ ಮಾಡಬೇಕಾಗಿದ್ದು, ಈ ಪೈಕಿ 5554 ಮನೆಗಳು ಗೋಡೆ ಮತ್ತು ಛಾವಣಿ ಹಂತದಲ್ಲಿವೆ. ಬುನಾದಿ ಹಂತದಲ್ಲಿರುವ 8115 ಮನೆಗಳ ನಿರ್ಮಾಣ ಕಾಮಗಾರಿಯನ್ನೂ ಸಹ ಅಕ್ಟೋಬರ್ ಮಾಹೆಯೊಳಗೆ ಪೂರ್ಣಗೊಳಿಸಬೇಕು. ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭಿಸದೇ ಇರುವ 7497 ಮನೆ ನಿರ್ಮಾಣ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು ಎಂದರಲ್ಲದೆ, ಪ್ರಸಕ್ತ ವರ್ಷದಲ್ಲಿ ಸುಮಾರು 12210 ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದ್ದು, ಫಲಾನುಭವಿಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಸರ್ಕಾರದಿಂದ ಈಗಾಗಲೇ ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ 9,000 ಹಕ್ಕುಪತ್ರಗಳು ಬಂದಿದ್ದು, ಹಕ್ಕುದಾರರಿಗೆ ಶೀಘ್ರವೇ ಪತ್ರಗಳನ್ನು ನೀಡಲಾಗುವುದು. ಹಕ್ಕುಪತ್ರ ಪಡೆದವರು ಕೂಡಲೇ ಮನೆ ನಿರ್ಮಾಣ ಕಾರ್ಯವನ್ನು ಪ್ರಾರಂಭಿಸಬೇಕೆಂದು ಸೂಚನೆ ನೀಡಲಾಗಿದೆ ಎಂದರಲ್ಲದೆ, ತಹಶೀಲ್ದಾರರು ತಮ್ಮ ತಾಲ್ಲೂಕುಗಳಲ್ಲಿ ವಸತಿ ಯೋಜನೆಗಾಗಿ ಮಂಜೂರು ಮಾಡಿರುವ ಜಮೀನನ್ನು ಹದ್ದುಬಸ್ತು ಮಾಡಿ ನಿವೇಶನವಾಗಿ ಪರಿವರ್ತಿಸಿ ಸೆಪ್ಟೆಂಬರ್ ಮಾಹೆಯೊಳಗೆ ಹಂಚಿಕೆ ಮಾಡುವಲ್ಲಿ ಕ್ರಮವಹಿಸಬೇಕೆಂದು ಸೂಚನೆ ನೀಡಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಂಜನಪ್ಪ ಸಭೆಗೆ ಮಾಹಿತಿ ನೀಡುತ್ತಾ, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಂಬೇಡ್ಕರ್ ಹಾಗೂ ವಾಜಪೇಯಿ ವಸತಿ ಯೋಜನೆಯಡಿ 2021-22ನೇ ಸಾಲಿನಲ್ಲಿ 1000 ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರದಿಂದ ಗುರಿ ನಿಗಧಿಪಡಿಸಲಾಗಿದೆ. ಇದರಲ್ಲಿ 441 ಫಲಾನುಭವಿಗಳನ್ನು ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆಯಲಾಗಿದ್ದು, 126 ಫಲಾನುಭವಿಗಳ ಪಟ್ಟಿಯನ್ನು ಅನುಮೋದನೆಗಾಗಿ ಸಲ್ಲಿಸಬೇಕಾಗಿದೆ. ಉಳಿದಂತೆ 433 ಫಲಾನುಭವಿಗಳನ್ನು ಆಯ್ಕೆ ಮಾಡಬೇಕಾಗಿದೆ ಎಂದು ತಿಳಿಸಿದರು.
ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ವಸತಿ ಯೋಜನೆಯಡಿ ಫಲಾನುಭವಿ ಆಯ್ಕೆಯಲ್ಲಿ ಲೋಪವಾಗಬಾರದು. ಒಮ್ಮೆ ಆಯ್ಕೆ ಮಾಡಿದ ಫಲಾನುಭವಿಯನ್ನು ಮತ್ತೊಮ್ಮೆ ಆಯ್ಕೆ ಮಾಡಬಾರದು. “ಸರ್ವರಿಗೂ ಸೂರು” ನೀಡಬೇಕೆಂಬ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಪ್ರಗತಿ ಸಾಧಿಸಬೇಕು. ಈ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ನೀಡುವ ಮೂಲಕ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಈ ವಸತಿ ಯೋಜನೆಗಳಡಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣಪಂಚಾಯತಿ ವ್ಯಾಪ್ತಿಯ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಸಾಮಾನ್ಯ ವರ್ಗದವರಿಗೆ 1.20 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 2ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ವಿ. ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ತಹಶೀಲ್ದಾರ್ ಮೋಹನ್ ಕುಮಾರ್, ಭೂದಾಖಲೆಗಳ ಉಪನಿರ್ದೇಶಕ ಸುಜಯ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ನರಸಿಂಹಮೂರ್ತಿ, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleದೇಶ ಭಕ್ತಿಗೀತೆಗಳಿಂದ ದೇಶದ ಮಹತ್ವದ ಅರಿವು: ಸಿಇಓ
Next Article ಬರಗೂರು ಗ್ರಾ.ಪಂ.ಗೆ ಸಿಇಓ ದಿಢೀರ್ ಭೇಟಿ: ಕಾಮಗಾರಿ ಪರಿಶೀಲನೆ
News Desk Benkiyabale

Related Posts

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm news
ತಾಜಾ ಸುದ್ಧಿಗಳು
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm
news

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm
news

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm
news

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
news

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
news

 ರೇಬಿಸ್ ರೋಗ ಹರಡದಂತೆ ತಡೆಗಟ್ಟುವುದೇ ವಿಶ್ವ ರೇಬಿಸ್ ದಿನಾಚರಣೆಯ ಗುರಿ

September 28, 2026 5:12 pm
Our Youtube Channel
Our Picks

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

September 29, 2026 5:00 pm

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm

ಪ್ರಜಾ ಸೇವಾ ಅಭಿಯಾನದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ

September 29, 2026 4:53 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ಆದ್ಯತೆ

By News Desk BenkiyabaleSeptember 29, 2026 5:00 pm

ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ…

ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಯನ್ನು ಕಾಂಗ್ರೆಸ್ ಗೆಲ್ಲಬೇಕು

September 29, 2026 4:58 pm

ಮೇವು ಬ್ಯಾಂಕ್, ಆಧಾರ್ ಕೇಂದ್ರ ಸ್ಥಾಪನೆಗೆ ಮನವಿ

September 29, 2026 4:56 pm

ತುಮಕೂರು ದಸರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಚಾಲನೆ

September 29, 2026 4:54 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.