BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನೇಕಾರ ಸಮುದಾಯ ರಾಜಕೀಯ ಶಕ್ತಿ ಹೊಂದಲಿ
ಇತರೆ ಸುದ್ಧಿಗಳು

ನೇಕಾರ ಸಮುದಾಯ ರಾಜಕೀಯ ಶಕ್ತಿ ಹೊಂದಲಿ

By News Desk BenkiyabaleUpdated:August 17, 2022 6:25 pm

ತುಮಕೂರು:


ನೇಕಾರರ ಸಮುದಾಯ ಶಿಕ್ಷಣ ಮತ್ತು ರಾಜಕಾರಣ ಕ್ಷೇತ್ರದಲ್ಲಿ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದು, ನೇಕಾರರ ಒಕ್ಕೂಟದ ಹೆಸರಿನಲ್ಲಿ ಒಂದಾಗಿರುವ ನೇಕಾರ ಸಮುದಾಯಗಳು ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಕುಮಾರ್ ತಿಳಿಸಿದ್ದಾರೆ.
ನಗರದ ಹೊರಪೇಟೆಯ ಶ್ರೀನೀಲಕಂಠೇಶ್ವರ ಸಮುದಾಯ ಭವನದಲ್ಲಿ ತುಮಕೂರು ಜಿಲ್ಲಾ ನೇಕಾರರ ಒಕ್ಕೂಟದಿಂದ ಆಯೋಜಸಿದ್ದ ರಾಷ್ಟ್ರೀಯ ನೇಕಾರರ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಎಲ್ಲಾ ಸೇರಿದಂತೆ ನಾಲ್ಕು ಜನರಿಲ್ಲ. ಇಂತಹವರಿಗೆ ಅಧಿಕಾರ ನೀಡಲು ಸಾಧ್ಯವೇ ಎಂದು ಹೀಯಾಳಿಸುವವರಿಗೆ ಮುಂದಿನ ದಿನಗಳಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರ್ಪಡಿಸುವ ಗುರುತರ ಜವಾಬ್ದಾರಿ ಎಲ್ಲಾ ನೇಕಾರ ಬಂಧುಗಳ ಮೇಲಿದೆ ಎಂದರು.
ನೇಕಾರರ ತಮ್ಮ ಶ್ರಮವನ್ನೇ ನಂಬಿ ಬದುಕುತ್ತಿದ್ದಾರೆ.ಆದರೆ ಮಧ್ಯವರ್ತಿಗಳ ಹಾವಳಿಯಿಂದ ಅಂದಿನ ಕೂಲಿಯೂ ಸಿಗದಂತಹ ಪರಿಸ್ಥಿತಿ ಎದುರಾಗಿದೆ.ಕೋವಿಡ್‍ನಿಂದ ಆದ ಅರ್ಥಿಕ ನಷ್ಟದಿಂದ ಕಂಗಾಲಾಗಿದ್ದ ಸಮುದಾಯವನ್ನು, ಸ್ವಾತಂತ್ರದ ಅಮೃತ ಮಹೋತ್ಸವಕ್ಕೆ ನೈಲಾನ್ ಮತ್ತು ಪಾಲಿಸ್ಟರ್‍ನಿಂದ ತಯಾರಿಸಿ ವಿದೇಶದಲ್ಲಿ ತಯಾರಾದ ಬಾವುಟವನ್ನು ತರಿಸುವ ಮೂಲಕ ನಮ್ಮ ಹೊಟ್ಟೆಯ ಮೇಲೆ ಹೊಡೆದಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ನೇಕಾರರಿಗೆ ಉಚಿತ ವಿದ್ಯುತ್, ಮಗ್ಗ ಹಾಗೂ ವಸತಿಯನ್ನು ನೀಡುವುದರ ಜೊತೆಗೆ, ನೇಕಾರರ ಮಕ್ಕಳಿಗೆ ಶಿಕ್ಷಣವನ್ನು ಉಚಿತವಾಗಿ ನೀಡುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಚುನಾವಣೆ ಸಮಯದಲ್ಲಿ ಮಾತ್ರ ನೇಕಾರರು ನೆನಪಾಗುತ್ತಾರೆ.ಯಾವುದೇ ಪಕ್ಷವಿರಲಿ,ನಮ್ಮ ಸಮುದಾಯಕ್ಕೆ ಅವಕಾಶ ಸಿಕ್ಕರೆ ಎಲ್ಲರೂ ಒಗ್ಗೂಡಿ, ಅವರ ಗೆಲುವಿಗೆ ಶ್ರಮಿಸಿ, ನಮ್ಮ ರಾಜಕೀಯ ಪ್ರಾತಿನಿಧ್ಯ ಹೊಂದಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರು ಹೆಚ್ಚಿನ ಸಂಘಟನೆಯಲ್ಲಿ ತೊಡಗುವಂತೆ ಧನಿಯಕುಮಾರ್ ಸಲಹೆ ನೀಡಿದರು.
ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ,ನೇಕಾರರ ಸಮುದಾಯಕ್ಕೆ ಸುಮಾರು 4000 ವರ್ಷಗಳ ಇತಿಹಾಸವಿದೆ. ಸಿಂಧು ಕಣಿವೆ ಮತ್ತು ಹರಪ್ಪ, ಮಹೆಂಜೋದಾರೋ ನಾಗರಿಕತೆಯ ವೇಳೆಯಲ್ಲಿಯೇ ನೇಕಾರಿಕೆ ಇತ್ತು. ವಸ್ತ್ರೋದ್ಯಮ ಇಂದು ಬಹುದೊಡ್ಡ ಉದ್ಯಮವಾಗಿ ಬೆಳೆದಿದೆ. ದೇಶದ 29 ರಾಜ್ಯಗಳಲ್ಲಿ 27 ವಿವಿಧ ರೀತಿಯ ಬಟ್ಟೆಗಳನ್ನು ನೇಯ್ಗೆ ಮಾಡಿ ಮಾರಾಟ ಮಾಡಲಾಗುತ್ತಿದೆ. ಇಂದಿಗೂ 25 ಲಕ್ಷ ಮಗ್ಗಗಳಿದ್ದು, 45-50 ಲಕ್ಷ ಜನರಿಗೆ ನೇರವಾಗಿ, ಕೋಟ್ಯಾಂತರ ಜನರಿಗೆ ಪರೋಕ್ಷವಾಗಿ ಅನ್ನ ನೀಡುತ್ತಿದೆ. ಹಾಗಾಗಿ ಸರಕಾರ ನೇಕಾರರಿಗೆ ರಿಯಾಯಿತಿ ದರದಲ್ಲಿ ಕಚ್ಚಾವಸ್ತು ನೀಡಿ, ಮಾರುಕಟ್ಟೆ ವ್ಯವಸ್ಥೆ ಮಾಡಬೇಕು. ವಸ್ತ್ರಗಳ ಮೇಲಿನ ತೆರಿಗೆ ಕಡಿತಗೊಳಿಸಬೇಕು.ಹಾಗೆಯೇ ಮಕ್ಕಳಿಗೆ ಶಿಕ್ಷಣ ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ನೇಕಾರರ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷ ಶ್ರೀಮತಿ ಜಯಲಕ್ಷ್ಮಿ ಬಸವರಾಜು ಮಾತನಾಡಿ,ರಾಜ್ಯದಲ್ಲಿ ನೇಕಾರರ ಸಮುದಾಯದ 27 ಉಪಪಂಗಡಗಳು ಸೇರಿ 70 ಲಕ್ಷ ಜನಸಂಖ್ಯೆ ಇದ್ದೇವೆ.ಇಷ್ಟು ದೊಡ್ಡ ಜನಸಂಖ್ಯೆ ಇದ್ದರೂ ಎಂ.ಡಿ.ಎಲ್. ಮತ್ತು ಕೆ.ಸಿ.ಕೊಂಡಯ್ಯ ಅವರುಗಳನ್ನು ಹೊರತು ಪಡಿಸಿದರೆ ಬೇರೆ ಜನಪ್ರತಿನಿಧಿಗಳಿಲ್ಲ. ಒಕ್ಕೂಟದ ರಾಜ್ಯಾಧ್ಯಕ್ಷರ ಮುಂದೆ ದೊಡ್ಡ ಸವಾಲಿದೆ. ಅದನ್ನನು ಸಮರ್ಥವಾಗಿ ನಿಭಾಯಿಸಿ, ಎಲ್ಲರಿಗೂ ನ್ಯಾಯ ದೊರಕಿಸಿಕೊಡಲಿ ಎಂದರು.
ರಾಜ್ಯ ನೇಕಾರರ ಒಕ್ಕೂಟದ ರಾಜ್ಯಾಧ್ಯಕ್ಷ ಸೋಮಶೇಖರ್ ಮಾತನಾಡಿ, ರಾಜ್ಯದಲ್ಲಿ ಉಪಪಂಗಡದ ಹೆಸರಿನಲ್ಲಿ ಹರಿದು ಹಂಚಿ ಹೋಗಿರುವ ನೇಕಾರರ ಸಮುದಾಯವನ್ನು ಒಗ್ಗೂಡಿಸುವ ಉದ್ದೇಶದಿಂದ ನೇಕಾರರ ಸಮುದಾಯಗಳ ಒಕ್ಕೂಟವನ್ನು ರಚಿಸಲಾಗಿದೆ. ಇದನ್ನು ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಸಕ್ರಿಯವಾಗಿ ಕಟ್ಟುವ ಮೂಲಕ ನಮ್ಮ ಶಕ್ತಿಯನ್ನು ಆಳುವ ಸರಕಾರಗಳಿಗೆ ತೋರಿಸಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಘಟಕಗಳನ್ನು ಪುನರರಚಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. 70 ಲಕ್ಷ ದಷ್ಟು ಜನಸಂಖ್ಯೆ ಇರುವ ನೇಕಾರ ಸಮುದಾಯಕ್ಕೆ ಬೆಂಗಳೂರಿನಲ್ಲಿ ಒಂದು ಭವನ ಕಟ್ಟಬೇಕೆಂಬುದು ನಮ್ಮ ಮಹದಾಸೆ. ಈ ನಿಟ್ಟಿನಲ್ಲಿ ಸರಕಾರಕ್ಕೆ ನಿವೇಶನ ಮತ್ತು ಅನುದಾನಕ್ಕೆ ಮನವಿ ಮಾಡಲಾಗಿದೆ ಎಂದರು.
ಸಮಾರಂಭ ಕುರಿತು ನೇಕಾರರ ಒಕ್ಕೂಟದ ಯೋಗಾನಂದ, ಲಿಂಗರಾಜು, ರಂಗಸ್ವಾಮಿ ಮಾತನಾಡಿದರು.ಇದೇ ವೇಳೆ ನೇಕಾರರ ಸಮುದಾಯದ ಅಭಿವೃದ್ದಿಗೆ ದುಡಿದ ಟಿ.ಬಿ.ಚೌಡೇಶ್,ಎಸ್.ಎನ್.ರಂಗಸ್ವಾಮಿ,ಪಿ.ರಾಮಕೃಷ್ಣ, ಶ್ರೀಮತಿ ಕಮಲಮ್ಮ ಅವರುಗಳನ್ನು ಸನ್ಮಾನಿಸಲಾಯಿತು.ತುಮಕೂರು ಜಿಲ್ಲಾ ನೇಕಾರರ ಒಕ್ಕೂಟವನ್ನು ಪುನಃರಚಿಸಲಾಯಿತು.ಗೌರವ ಅಧ್ಯಕ್ಷರಾಗಿ ಟಿ.ಹೆಚ್.ಶಿವಾ ನಂದ್, ಅಧ್ಯಕ್ಷರಾಗಿ ಧನಿಯಕುಮಾರ್, ಉಪಾಧ್ಯಕ್ಷರುಗಳಾಗಿ ಕರಿಯಪ್ಪ, ಎನ್.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಯಾಗಿ ಆರ್.ರಾಮಕೃಷ್ಣಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ಅನಿಲ್‍ಕುಮಾರ್.ಆರ್, ಖಜಾಂಚಿಯಾಗಿ ಚೌಡಯ್ಯ ಅವರುಗಳನ್ನು ಆಯ್ಕೆ ಮಾಡಲಾಯಿತು.

(Visited 2 times, 1 visits today)
tumkur
Previous Articleಡೆಂಗ್ಯೂ, ಚಿಕನ್‍ಗುನ್ಯಾ ಹರಡದಂತೆ ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ
Next Article ಸೌದಿಯಿಂದ ಮರಳಿ ಬಾರದ ಪತ್ನಿ: ವಿಷ ಸೇವಿಸಿ ಪತಿ ಸಾವು, ಮೂವರು ಮಕ್ಕಳು ಚಿಂತಾಜನಕ!
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.