BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತರಿಂದ ದುಪ್ಪಟ್ಟು ದರ ವಸೂಲಿ: ತನಿಖೆಗೆ ಒತ್ತಾಯ
ಇತರೆ ಸುದ್ಧಿಗಳು

ರೈತರಿಂದ ದುಪ್ಪಟ್ಟು ದರ ವಸೂಲಿ: ತನಿಖೆಗೆ ಒತ್ತಾಯ

By News Desk BenkiyabaleUpdated:August 18, 2022 6:21 pm
????????????????????????????????????

ತುಮಕೂರು

????????????????????????????????????

ಸರಕಾರದ ಕೃಷಿ ಯಂತ್ರಧಾರೆ ಯೋಜನೆಯಡಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಸೇವೆ ಒದಗಿಸಬೇಕಾದ ಏಜನ್ಸಿಗಳು ರೈತರಿಗೆ ದುಪ್ಪಟ್ಟು ದರ ವಸೂಲಿ ಮಾಡಿ ಮೋಸ ಮಾಡುತ್ತಿರುವುದಲ್ಲದೆ, ಕಡಿಮೆ ಗುಣಮಟ್ಟದ ಯಂತ್ರಗಳನ್ನು ಖರೀದಿ ಮಾಡಿ ಕೋಟ್ಯಾಂತರ ರೂ. ಅವ್ಯವಹಾರದಲ್ಲಿ ತೊಡಗಿದ್ದು, ಇದರ ಕುರಿತು ಉನ್ನತ ಮಟ್ಟದ ತನಿಖೆಗೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವಂತೆ ಭಾರತೀಯ ಕೃಷಿಕ ಸಮಾಜದ ಕೋಡಿಹಳ್ಳಿ ಜಗದೀಶ್ ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 50 ಹೋಬಳಿಗಳಲ್ಲಿ ಕೃಷಿ ಯಂತ್ರಧಾರೆ ಏಜೆನ್ಸಿಗಳು ಕೆಲಸ ಮಾಡುತ್ತಿದ್ದು, ಸಣ್ಣ ಮತ್ತು ಮಧ್ಯಮ ರೈತರಿಗೆ ಅನುಕೂಲವಾಗುವಂತೆ ಸರಕಾರ ನಿಗಧಿಪಡಿಸಿದ ರಿಯಾಯಿತಿ ದರದಲ್ಲಿ ರೈತರಿಗೆ ಸೇವೆ ಒದಗಿಸಬೇಕಾದ ಏಜೆನ್ಸಿಯವರು ಒಂದಕ್ಕೆ ಒಂದುವರೆ ಪಟ್ಟು ಬಾಡಿಗೆ ವಸೂಲಿ ಮಾಡಿ,ರಸೀದಿಯನ್ನು ನೀಡದೆ ರೈತರಿಗೆ ಜೊತೆಗೆ ಸರಕಾರಕ್ಕೂ ಮೋಸ ಮಾಡುತ್ತಿದ್ದಾರೆ. ಈ ಸಂಬಂಧ ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಲೋಕಾಯುಕ್ತರಿಗೆ ದೂರು ಸಲ್ಲಿಸಲಾಗಿದೆ ಎಂದರು.

ಸರಕಾರ 70:30ರ ಅನುಪಾತದಲ್ಲಿ ಸುಮಾರು 8 ಕೋಟಿ ರೂಗಳ ಯಂತ್ರೋಪರಣಗಳನ್ನು ಈ ಯೋಜನೆಯಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಗೆ 11 ಹೋಬಳಿ, ವಿ.ಎಸ್.ಟಿ ಟ್ರಾಕ್ಟರ್ ಮತ್ತು ಟಿಲ್ಲರ್‍ಗೆ 20 ಹೋಬಳಿ ಮತ್ತು ವರ್ಷ ಅಸೋಸಿಯೇಟ್ಸ್‍ಗೆ 18 ಹೋಬಳಿಗಳಲ್ಲಿ ಕೃಷಿ ಯಂತ್ರಧಾರೆ ನಿರ್ವಹಣೆಯ ಹೊಣೆ ನೀಡಿದೆ.ಅಲ್ಲದೆ ಜಿಲ್ಲಾ ಪಂಚಾಯಿತಿ ಸಿಇಓ ಅವರ ಅಧ್ಯಕ್ಷತೆಯಲ್ಲಿ ಯಂತ್ರೋಪಕರಣಗಳ ಸ್ಥಳೀಯ ಬಾಡಿಗೆಯನ್ನು ಆಧರಿಸಿ,ಬಾಡಿಗೆ ದರವನ್ನು ನಿಗಧಿ ಮಾಡಿದೆ. ಹೀಗಿದ್ದರೂ ಹೆಬ್ಬೂರು ಹೋಬಳಿಯ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಕೃಷಿ ಯಂತ್ರಧಾರೆ ಏಜೆನ್ಸಿಯಿಂದ 42 ಬ್ಲೆಡ್‍ನ ರೋಟೋ ವೆಟರ್‍ಗೆ ಒಂದು ಗಂಟೆಗೆ 700 ರೂ ಬಾಡಿಗೆ ಬದಲು 1200 ರೂ ಪಡೆಯಲಾಗಿದೆ. ಕೆಲವು ಕಡೆಗಳಲ್ಲಿ ಕೃತಕ ಬೇಡಿಕೆ ಸೃಷ್ಟಿಸಿ 1500 ರೂಗಳವರೆಗೆ ಬಾಡಿಗೆ ಪಡೆದು,ರಸೀದಿಯನ್ನು ಪಡೆಯದೇ ವಂಚಿಸಲಾಗುತ್ತಿದೆ.
ಇದರ ಹಿಂದೆ ಕೃಷಿ ಅಧಿಕಾರಿಗಳು ಮತ್ತು ಏಜೆನ್ಸಿಯವರ ಪಾತ್ರವಿದ್ದು, ಸಮಗ್ರ ತನಿಖೆಗೆ ನಡೆಸಿದರೆ ಸತ್ಯಾಂಶ ಹೊರಬರಲಿದೆ ಎಂದರು.
ರೈತರಿಗೆ ಮತ್ತು ಸರಕಾರಕ್ಕೆ ಕೃಷಿ ಯಂತ್ರಧಾರೆ ಏಜೆನ್ಸಿಗಳಿಂದ ಆಗುತ್ತಿರುವ ಅನ್ಯಾಯವನ್ನು ಗುರುತಿಸುವ ನಿಟ್ಟಿನಲ್ಲಿ ಭಾರತೀಯ ಕೃಷಿಕ ಸಮಾಜ ಕೆಲ ಏಜೆನ್ಸಿಗಳಿಗೆ ಭೇಟಿ ನೀಡಿ ಪರಿಶೀಲಿಸಿದಾಗ, ಸರಕಾರದಿಂದ ಖರೀದಿ ಮಾಡಿದ ಹೊಸ ಯಂತ್ರಗಳ ಬದಲು, ಐದಾರು ವರ್ಷಗಳ ಕಾಲ ಈಗಾಗಲೇ ಉಳುಮೆ ಮಾಡಿರುವ ಯಂತ್ರಗಳನ್ನು ಬಳಕೆ ಮಾಡಲಾಗುತ್ತಿದೆ. ಇನ್ನೂ ಕೆಲವು ಕಡೆ ಹೊಸ ಯಂತ್ರಗಳನ್ನು ರೈತರಿಗೆ ತಿಳಿಯದಂತೆ ಮುಚ್ಚಿಟ್ಟು, ಹಳೆಯ ಯಂತ್ರಗಳನ್ನು ದುಪ್ಪಟ್ಟು ಬಾಡಿಗೆ ಪಡೆದು ನೀಡಲಾಗುತ್ತಿದೆ.
ಐದು ವರ್ಷಗಳ ನಂತರ ಹಾಲಿ ಯಂತ್ರಗಳ ಬದಲು ಹೊಸ ಯಂತ್ರ ಖರೀದಿ ನೆಪದಲ್ಲಿ ಈ ಹಿಂದೆ ಖರೀದ ಮಾಡಿದ್ದ ಯಂತ್ರಗಳನ್ನೇ ಪುನಃ ನಮೂದಿಸಿ, ಲಕ್ಷಾಂತರ ರೂ ಅವ್ಯವಹಾರ ನಡೆಸಿದ್ದಾರೆ. ಇದರ ವಿರುದ್ದ ಉನ್ನತ ಮಟ್ಟದ ತನಿಖೆ ನಡೆದು ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಆಗಬೇಕೆಂಬುದು ಭಾರತೀಯ ಕೃಷಿಕ ಸಮಾಜದ ಒತ್ತಾಯವಾಗಿದೆ ಎಂದು ಕೋಡಿಹಳ್ಳಿ ಜಗದೀಶ್ ತಿಳಿಸಿದರು.
ಭಾರತೀಯ ಕೃಷಿಕ ಸಮಾಜದ ಮಹಿಳಾ ಘಟಕದ ಅಧ್ಯಕ್ಷ ಸಂಧ್ಯ.ಸಿ.ಟಿ ಮಾತನಾಡಿ, ಸರಕಾರ ನಿಗಧಿ ಪಡಿಸಿರುವ ಕೃಷಿ ಯಂತ್ರಧಾರೆಯ ಬಾಡಿಗೆ ದರವನ್ನು ಪ್ರತಿ ರೈತ ಸಂಪರ್ಕ ಕೇಂದ್ರ ಹಾಗೂ ಏಜೆನ್ಸಿಯ ಮುಂದೆ ಪ್ರದರ್ಶಿಸಬೇಕು ಎಂಬ ನಿಯಮವಿದೆ. ಆದರೆ ಇದುವರೆಗೂ ಒಂದು ಆರ್.ಎಸ್.ಕೆ. ಮುಂದೆಯೂ ದರ ಪಟ್ಟಿ ಪ್ರಕಟಿಸಿಲ್ಲ.ಇದರಿಂದ ರೈತರು ವಿಧಿಯಿಲ್ಲದೆ ಹೆಚ್ಚಿನ ದರ ನೀಡಿ ಮೋಸ ಹೋಗುತ್ತಿದ್ದಾರೆ. ದರ ಪಟ್ಟಿ ಪ್ರದರ್ಶನಕ್ಕೆ ಕೃಷಿ ಇಲಾಖೆ ಮುಂದಾಗಬೇಕು ಎಂದರು.
ಸುದ್ದಿಗೋಷ್ಠಿಯಲ್ಲಿ ಭಾರತೀಯ ಕೃಷಿಕ ಸಮಾಜದ ಗೌರವಾಧ್ಯಕ್ಷ ಪುಟ್ಟರಾಜು, ಉಪಾಧ್ಯಕ್ಷ ಶ್ರೀನಿವಾಸಮೂರ್ತಿ.ಎ.ಎಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆನಂದ್ ಬಿ.ಎಂ.,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಅಮಾನಿಕೆರೆ ಕೋಡಿಹಳ್ಳ ಸ್ಲಂ ವಿದ್ಯುತ್ ಸಂಪರ್ಕಕ್ಕಾಗಿ ಆಗ್ರಹ
Next Article ಲಂಚ ಪ್ರಕರಣ: ಪಿಡಿಓಗೆ 4 ವರ್ಷ ಜೈಲು!
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.