BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
  • ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ
  • ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ
  • ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ
  • ಸರ್ವರ್ ಸಮಸ್ಯೆ: ಪಡಿತರಕ್ಕಾಗಿ ೨ ದಿನಗಳಿಂದ ಕಾದು ಕುಳಿತ ಗ್ರಾಹಕರು
  • ಈ ಬಾರಿ ಹಬ್ಬ ಬಲು ದುಬಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿಯುವಂತೆ ಮಾಡುವುದು ಪಕ್ಷದ ಗುರಿಯಾಗಬೇಕು : ಮಯೂರ ಜಯಕುಮಾರ್
ಇತರೆ ಸುದ್ಧಿಗಳು

ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರ ಹಿಡಿಯುವಂತೆ ಮಾಡುವುದು ಪಕ್ಷದ ಗುರಿಯಾಗಬೇಕು : ಮಯೂರ ಜಯಕುಮಾರ್

By News Desk BenkiyabaleUpdated:August 24, 2022 6:25 pm

ತುಮಕೂರು:

ಬ್ಲಾಕ್ ಕಮಿಟಿ,ವಿಲೇಜ್ ಕಮಿಟಿಗಳನ್ನು ಸಶಕ್ತಗೊಳಿಸುವ ಮೂಲಕ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರ ಹಿಡಿಯುವಂತೆ ಮಾಡುವುದು ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರ ಗುರಿಯಾಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಯೂರ ಜಯಕುಮಾರ್ ಕರೆ ನೀಡಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್‍ನ ಹಿರಿಯ ಮುಖಂಡರು,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಬ್ಲಾಕ್ ಕಮಿಟಿ ಮತ್ತು ವಿಲೇಜ್ ಕಮಿಟಿಗಳು ಬಲಗೊಂಡರೆ, ಸುಲಭವಾಗಿ ಮತದಾರರನ್ನು ಸೆಳೆಯಬಹುದೆಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವವರಿದ್ದಾರೆ.ಅಂತಹವರನ್ನು ಗುರುತಿಸಿ,ಅವರ ಮತಗಳು ಕಾಂಗ್ರೆಸ್ ಪಕ್ಷದತ್ತ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಮಾಡಬೇಕಿದೆ.ಬಿಜೆಪಿಯ ಆಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಬಿಜೆಪಿಗೆ ಪರ್ಯಾಯ ಎಂಬುದನ್ನು ನಾವು ಸಾಭೀತು ಪಡಿಸಬೇಕಿದೆ.ಬಿಜೆಪಿಯ ವಿರುದ್ದ ಮತಗಳು ಎಂದಿಗೂ ಜೆಡಿಎಸ್ ಪಕ್ಷದ ಪಾಲಾಗದಂತೆ ನಾವೆಲ್ಲರೂ ಎಚ್ಚರಿಕೆ ವಹಿಸಬೇಕಿದೆ.2018ರ ಚುನಾವಣೆಯಲ್ಲಿ ಬಿಜೆಪಿ ವಿರುದ್ದದ ಮತಗಳನ್ನು ಸೆಳೆಯುವಲ್ಲಿ ಪಕ್ಷ ವಿಫಲವಾಗಿದ್ದರಿಂದಲೇ ಜೆಡಿಎಸ್ ಹೆಚ್ಚು ಸ್ಥಾನಗಳನ್ನು ಪಡೆಯಲು ಸಾಧ್ಯವಾಯಿತು.ಈ ಬಾರಿ ಹಾಗಾಗದಂತೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬರ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕೆಂದು ಮಯೂರ ಜಯಕುಮಾರ್ ತಿಳಿಸಿದರು.

ಬ್ಲಾಕ್ ಮತ್ತು ವಿಲೇಜ್ ಕಮಿಟಿಗಳು ಪಕ್ಷದ ಆಧಾರ ಸ್ತಂಭಗಳಿದ್ದಂತೆ ಹಾಗಾಗಿ ಜಿಲ್ಲೆಯಲ್ಲಿರುವ ಎಲ್ಲಾ 22 ಬ್ಲಾಕ್‍ಗಳಿಗೂ ಮುಂದಿನ 15 ದಿನಗಳ ಒಳಗೆ ಪದಾಧಿಕಾರಿಗಳ ನೇಮಕ ಮಾಡುವುದು ಕಡ್ಡಾಯ.ಇದರ ಜೊತೆಗೆ ಜಿಲ್ಲಾ ಕಾಂಗ್ರೆಸ್‍ಗೆ ಸಂಘಟನಾ ಕಾರ್ಯದರ್ಶಿಗಳನ್ನು ನೇಮಕ ಮಾಡಬೇಕಾಗಿದೆ.ಬೇರೆ ಜಿಲ್ಲೆಗಳಿಗೆ ಹೊಲಿಕೆ ಮಾಡಿದರೆ ತುಮಕೂರು ದೊಡ್ಡ ಜಿಲ್ಲೆ, ಹಾಗೂ ರಾಜಕೀಯವಾಗಿಯೂ ವಿಭಿನ್ನವಾಗಿದೆ.ಇಡೀ ರಾಜ್ಯದಲ್ಲಿ ಜೆಡಿಎಸ್ ಪಕ್ಷದ ಸಾಧನೆ ಇಳಿಮುಖದಲ್ಲಿದ್ದರೆ, ತುಮಕೂರಿನಲ್ಲಿ ಪ್ರಗತಿಯಲ್ಲಿದೆ.ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪಕ್ಷದ ಕಾರ್ಯಕರ್ಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಪಲೋಡ್ ಮಾಡುವ ಜೊತೆಗೆ,ವಿರೋಧಪಕ್ಷಗಳ ಟೀಕೆಗೆ ತಕ್ಷಣವೇ ತೀಕ್ಷ್ಣ ಪ್ರತಿಕ್ರಿಯೆ ನೀಡುವುದನ್ನು ಸಾಮಾಜಿಕ ಜಾಲತಾಣ ನಿರ್ವಹಿಸುವವರು ಮಾಡಬೇಕೆಂದು ಮಯೂರು ಜಯಕುಮಾರ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹೇಳಿದಂತೆ ಚುನಾವಣಾ ವರ್ಷವಾಗಿರುವುದರಿಂದ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಬೇಕಿದೆ.ಸಕ್ರಿಯವಾಗಿರುವ ಪದಾಧಿಕಾರಿಗಳಿಗೆ ಪ್ರೋತ್ಸಾಹ ನೀಡಿ,ನಿಷ್ಕ್ರೀಯ ಪದಾಧಿಕಾರಿಗಳನ್ನು ಬದಲಾಯಿಸಿ, ಹೊಸಬರನ್ನು ನೇಮಿಸುವ ಕೆಲಸ ಶೀಘ್ರದಲ್ಲಿಯೇ ಆಗಲಿದೆ.ಯುವ ಕಾಂಗ್ರೆಸ್, ಎನ್.ಎಸ್.ಯು.ಐ ಸೇರಿದಂತೆ ವಿವಿಧ ಮಂಚೂಣಿ ಘಟಕಗಳು ಸಕ್ರಿಯವಾಗಿ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.
ಕಾರ್ಯಕರ್ತರನ್ನು ಕುರಿತು ಶಾಸಕ ಡಾ.ಹೆಚ್.ಡಿ.ರಂಗನಾಥ್,ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮಾತನಾಡಿದರು.ವೇದಿಕೆಯಲ್ಲಿ ಮಾಜಿ ಸಚಿವ ಟಿ.ಬಿ.ಜಯಚಂದ್ರ,ಮಾಜಿ ಶಾಸಕರಾದ ಕೆ.ಷಡಕ್ಷರಿ, ಎಸ್.ಷಪಿ ಅಹಮದ್,ವಿಧಾನಪರಿಷತ್ ಸದಸ್ಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಆರ್.ರಮೇಶ್, ಕೆಂಚಮಾರಯ್ಯ, ಎಸ್.ವಿ.ವೆಂಕಟೇಶ್,ಕೆಪಿಸಿಸಿ ಉಸ್ತುವಾರಿ ಕೇಶವಮೂರ್ತಿ,ಬಾಲಕೃಷ್ಣ ಮತ್ತಿತರರು ಪಾಲ್ಗೊಂಡಿದದ್ದರು

 

(Visited 1 times, 1 visits today)
tumkur
Previous Articleಸರ್ಕಾರಕ್ಕೆ ಮತ್ತು ಸಾರ್ವಜನಿಕರ ಮಧ್ಯೆ ಸೇತುವೆಯಾಗಿ ಜಯಕರ್ನಾಟಕ ಜನಪರ ವೇದಿಕೆ: ಜೆ.ಶ್ರೀನಿವಾಸ್
Next Article ಭೀಕರ ರಸ್ತೆ ಅಪಘಾತ: 9 ಮಂದಿ ಸಾವು
News Desk Benkiyabale

Related Posts

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm news
ತಾಜಾ ಸುದ್ಧಿಗಳು
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
news

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm
news

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm
news

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
news

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
news

ರಾಜೀವ್‌ಗಾಂಧಿ ಹಾಗೂ ದೇವರಾಜು ಅರಸು ಅವರ ಜನ್ಮ ದಿನಾಚರಣೆ

August 20, 2026 4:59 pm
Our Youtube Channel
Our Picks

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm

ಡಿ.ದೇವರಾಜ ಅರಸುರವರ ೧೧೧ನೇ ಜನ್ಮ ದಿನಾಚರಣೆ

August 20, 2026 5:51 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

By News Desk BenkiyabaleAugust 21, 2026 7:05 pm

ತುಮಕೂರು: ಭ್ರಷ್ಟಾಚಾರ ಹಾಗೂ ಲಂಚ ಪ್ರಕರಣದಲ್ಲಿ ಸಿಲುಕಿದ್ದ ತುರುವೇಕೆರೆ ತಾಲೂಕಿನ ಮಾಯಸಂದ್ರ ನಾಡಕಚೇರಿ ವ್ಯಾಪ್ತಿಯ ತುಯಲಹಳ್ಳಿ ವೃತ್ತದ ಗ್ರಾಮ ಸಹಾಯಕ…

ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ

August 21, 2026 7:03 pm

ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ

August 21, 2026 7:02 pm

ನಾಡಿನಾದ್ಯಂತ ಸಂಭ್ರಮದ ವರಮಹಾಲಕ್ಷಿ ಹಬ್ಬ ಆಚರಣೆ

August 21, 2026 1:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.