BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು
  • ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ
  • ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ
  • ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ
  • ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ
  • ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ
  • ೮೦ನೇ ಸ್ವಾತಂತ್ರ ದಿನದ ಅಂಗವಾಗಿ ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನ ಕೊಡುಗೆ
  • ಮೂಲಭೂತ ಸೌಕರ್ಯಗಳಿಲ್ಲದೆ ಜನರ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತ್ ಜೋಡೋ ತುಮಕೂರಿನಲ್ಲಿ ಯಾತ್ರೆ
ಇತರೆ ಸುದ್ಧಿಗಳು

ಭಾರತ್ ಜೋಡೋ ತುಮಕೂರಿನಲ್ಲಿ ಯಾತ್ರೆ

By News Desk BenkiyabaleUpdated:September 09, 2022 7:24 pm

ತುಮಕೂರು :


ಎಐಸಿಸಿ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಲೆಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಆರ್.ರಾಮಕೃಷ್ಣ ಅವರ ನೇತೃತ್ವದಲ್ಲಿ ಸದ್ಭಾವನಾ ಸಭೆ ಮತ್ತು ಸರ್ವಧರ್ಮ ಪ್ರಾರ್ಥನೆಯನ್ನು ಹಮ್ಜಿಕೊಳ್ಳಲಾಗಿತ್ತು.
ರಾಹುಲ್‍ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3570 ಕಿ.ಮಿ.ದೂರದ 12 ರಾಜ್ಯ ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಮೂಲಕ ಹಾದು ಹೋಗುವ ಭಾರತ ಜೋಡೋ ಯಾತ್ರೆಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರು ಹುತಾತ್ಮರಾದ
ಶ್ರೀಪೆರಂಬೂರಿನಿಂದ ಆರಂಭಗೊಂಡಿದ್ದು,ಇದರ ಯಶಸ್ವಿಗಾಗಿ ಹಿಂದೂ ಧರ್ಮದ ಪರವಾಗಿ ಭದರಿನಾಥ ಧೀಕ್ಷಿತ್, ಇಸ್ಲಾಂ ಧರ್ಮದ ಪರವಾಗಿ ಮೌಲ್ವಿಗಳಾಆದ ನಯಾಜ್,ಕ್ರೈಸ್ತ ಧರ್ಮದ ಪರವಾಗಿ ಪಾಧರ್ ರಜನೀಶ್ ಪ್ರಕಾಶ್ ಅವರುಗಳು ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಮಾಜಿ ಶಾಸಕ ಡಾ.ರಫೀಕ್ ಅಹಮದ್,ಕಾಂಗ್ರೆಸ್ ಪಕ್ಷಕ್ಕೆ ಇದೊಂದು ಐತಿಹಾಸಿಕ ದಿನ. ಭವಿಷ್ಯದ ಪ್ರಧಾನಿ ಎಂದು ಬಿಂಬಿತವಾಗಿರುವ ರಾಹುಲ್‍ಗಾಂಧಿಯವರು ಈ ದೇಶದ ಜನರಿಗಾಗಿ, ಅವರ ಮೇಲಾಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳ ಖಂಡಿಸಿ,ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈ ಭಾರತ್ ಜೋಡೋ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಬರುವ ಆಕ್ಟೋಬರ್ 09 ರಿಂದ 12ರವರಗೆ ಈ ಯಾತ್ರ ಹಾದು ಹೋಗಲಿದೆ. ಈ ನಾಲ್ಕು ದಿನಗಳ ಕಾಲ ಜಿಲ್ಲೆಯ ಯಾರಾರು ಭಾಗವಹಿಸಬೇಕು ಎಂಬುದನ್ನು ಕೆ.ಪಿಸಿಸಿ ಅಧ್ಯಕ್ಷರು ಈಗಾಗಲೇ ತಿಳಿಸಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 5 ಸಾವಿರ ಜನರು ದಿನವಹಿ ಭಾಗವಹಿಸಿ, ಒಂದು ಒಳ್ಳೆಯ ಉದ್ದೇಶಕ್ಕಾಗಿ ನಡೆಯುತ್ತಿರುವ ಪಾದಯಾತ್ರೆಯನ್ನು ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.
ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ,ರಾಷ್ಟ್ರದಲ್ಲಿ ನಡೆಯುತ್ತಿರುವ ಕೋಮು ಗಲಭೆ, ಧರ್ಮಗಳ ನಡುವಿನ ಸಂಘರ್ಷದ ನಡುವೆ ದೇಶದ ಐಕ್ಯತೆ ಮತ್ತು ಸಮಗ್ರತೆಯ ದೃಷ್ಟಿಯಿಂದ ಈ ಯಾತ್ರೆ ಬಹಳ ಮಹತ್ವ ಪಡೆದುಕೊಳ್ಳಲಿದೆ. ಗುಂಡ್ಲುಪೇಟೆ ಮೂಲಕ ಜಿಲ್ಲೆಗೆ ಆಗಮಿಸುವ ಯಾತ್ರೆಯನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನಿಸೋಣ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ ಮಾತನಾಡಿ,ಕಾಂಗ್ರೆಸ್ ಪಕ್ಷವನ್ನು ಉತ್ತೇಜಿಸುವ ಸಲುವಾಗಿ, ಬಿಜೆಪಿಯಿಂದ ಈ ದೇಶದ ಜನರ ಮೇಲಿನ ಆಗಿರುವ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ,ಬಡವರಿಗೆ ಸಂವಿಧಾನದ ಅಡಿಯಲ್ಲಿ ಎಲ್ಲ ಹಕ್ಕುಗಳನ್ನು ನೀಡುವ ಸಲುವಾಗಿ ಈ ಭಾರತ ಜೋಡೋ ಯಾತ್ರೆ ಮಹತ್ವದ್ದಾಗಿದೆ. ನಾವೆಲ್ಲರೂ ಕುಟುಂಬ ಸಮೇತ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ಸಲಹೆ ನೀಡಿದರು.
ಮತೋರ್ವ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ ಮಾತನಾಡಿ,ಇಂದು ಆರಂಭಗೊಂಡಿರುವ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ 21 ದಿನಗಳ ಕಾಲ 511 ಕಿ.ಮಿ.ಚಲಿಸಲಿದೆ.ಪ್ರತಿದಿನ ಮಧ್ಯಾಹ್ನ ಊಟದ ನಂತರ ಸಾರ್ವಜನಿಕ ಸಮಾರಂಭಗಳು ನಡೆಯಲಿದ್ದು,ಈ ವೇಳೆ ಆಯಾಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಮಸ್ಯೆಗಳ ಕುರಿತು ಚರ್ಚೆಗಳು ನಡೆಯಲಿವೆ. ತಾವೆಲ್ಲರೂ ಹೆಚ್ಚು ಜನರನ್ನು ಈ ಯಾತ್ರೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕೆಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಹೊನ್ನಗಿರಿಗೌಡ,ಪಾಲಿಕೆ ಸದಸ್ಯರಾದ ಮಹೇಶ್, ನಯಾಜ್, ದೀಪಶ್ರೀ, ಪ್ರಭಾವತಿ, ನೂರೂನ್ನೀಸಾ,ನಾಜೀರಾಭಾನು,ವಿರೋಧಪಕ್ಷದ ನಾಯಕ ಜೆ.ಕುಮಾರ್,ಹೆಚ್.ಸಿ.ಹನುಮಂತಯ್ಯ,ಪುಟ್ಟರಾಜು,ಸುಜಾತ, ಸಂಜೀವ್ ಕುಮಾರ್, ನಟರಾಜಶೆಟ್ಟಿ,ವಿವಿಧ ಬ್ಲಾಕ್ ಮತ್ತು ಮಂಜೂಣಿ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಜಾತಿಯ ದಳ್ಳುರಿಯಲ್ಲಿ ಮಹಾನಗರ ಪಾಲಿಕೆ ಚುನಾವಣೆ : ಮೇಯರ್ ಮತ್ತು ಉಪಮೇಯರ್ ಜಟಾಪಟಿ
Next Article ಮತಗಟ್ಟೆ ಅಧಿಕಾರಿ ಸ್ಥಾನದಿಂದ ಕೈ ಬಿಡುವಂತೆ ಒತ್ತಾಯ
News Desk Benkiyabale

Related Posts

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm news
ತಾಜಾ ಸುದ್ಧಿಗಳು
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm
news

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm
news

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm
news

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
news

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
news

ವಿಕಸಿತ ಭಾರತ ನಿರ್ಮಾಣದಲ್ಲಿ ಯುವಜನತೆಯ ಪಾತ್ರ ನಿರ್ಣಾಯಕ

August 15, 2026 5:26 pm
Our Youtube Channel
Our Picks

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

August 15, 2026 5:56 pm

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm

ಭಗತ್‌ಕ್ರಾಂತಿ ಸೇನೆಯಿಂದ ಭಕ್ತಿಯ ಪಂಜಿನ ಮೆರವಣಿಗೆ

August 15, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು

By News Desk BenkiyabaleAugust 15, 2026 5:56 pm

ತುಮಕೂರು: ತುಮಕೂರಿನ ಜನತೆ ಶಾಂತಿ ಪ್ರಿಯರು, ಸಜ್ಜನಿಕೆಗೆ ಹೆಸರಾದವರು, ದೇಶಪ್ರೇಮಿಗಳು. ಕೊಟ್ಟ ಮಾತಿನಂತೆ ನಮ್ಮ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ…

ಬರ ಪರಿಸ್ಥಿತಿ: ಪರ್ಯಾಯ ಬೆಳೆಗಳನ್ನು ಬೆಳೆಯಲು ಸಲಹೆ

August 15, 2026 5:33 pm

ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ನೊಂದಣಿಗೆ ಆಗ್ರಹಿಸಿ ಪ್ರತಿಭಟನೆ

August 15, 2026 5:32 pm

ಮಕ್ಕಳ ಉತ್ತಮ ಭವಿಷ್ಯವೇ ದೇಶದ ನಿಜವಾದ ಸ್ವಾತಂತ್ರ: ಕೃಷ್ಣಪ್ಪ

August 15, 2026 5:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.