BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರೈತ ವಿದ್ಯಾನಿಧಿ ಯೋಜನೆ ಸದುಪಯೊಗಕ್ಕೆ ಸಿಇಓ ಕರೆ
ಇತರೆ ಸುದ್ಧಿಗಳು

ರೈತ ವಿದ್ಯಾನಿಧಿ ಯೋಜನೆ ಸದುಪಯೊಗಕ್ಕೆ ಸಿಇಓ ಕರೆ

By News Desk BenkiyabaleUpdated:September 16, 2022 5:45 pm

ತುಮಕೂರು


ರೈತ ಕುಟುಂಬದ ಎಲ್ಲಾ ಮಕ್ಕಳು ಇತರೆ ಯಾವುದೇ ವಿದ್ಯಾರ್ಥಿವೇತನ ಪಡೆಯುತ್ತಿದ್ದರೂ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ
ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಪ್ರಸಕ್ತ 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಮತ್ತು ಎಲ್ಲಾ ತಾಲ್ಲೂಕು ಶಿಕ್ಷಣಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳವರೆಗೆ ಪ್ರವೇಶ ಪಡೆದಿರುವ ರಾಜ್ಯದ ರೈತರ ಎಲ್ಲ ಮಕ್ಕಳ ಖಾತೆಗಳಿಗೆ 2021-22ನೇ ಆರ್ಥಿಕ ವರ್ಷದಿಂದ ಅನ್ವಯವಾಗುವಂತೆ ನೇರ ನಗದು ವರ್ಗಾವಣೆ (ಆiಡಿeಛಿಣ ಃeಟಿeಜಿiಣ ಖಿಡಿಚಿಟಿsಜಿeಡಿ- ಆಃಖಿ) ಮೂಲಕ 2 ಸಾವಿರದಿಂದ 11 ಸಾವಿರ ರೂ.ಗಳವರೆಗೆ ವಾರ್ಷಿಕ ಶಿಷ್ಯವೇತನದ ರೂಪದಲ್ಲಿ ಪಾವತಿಸಲಾಗುತ್ತಿದೆ ಎಂದರು.
ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮದಡಿ 8 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ವಾರ್ಷಿಕವಾಗಿ ರೂ.2000 ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆಯಲ್ಲದೇ 2021-22ನೇ ಸಾಲಿಗೆ ಪದವಿ ಪೂರ್ವ ಶಿಕ್ಷಣ ಕೋರ್ಸ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ Sಚಿಣs Iಆ ಮತ್ತು ಈIಆ ಅನ್ವಯ ಅರ್ಹರನ್ನು ಗುರುತಿಸಿ ವಿದ್ಯಾರ್ಥಿವೇತನ ನೀಡಲಾಗಿದೆ.
ಇತರೆ ಎಲ್ಲಾ ಪದವಿ ಕೋರ್ಸ್‍ಗಳ ರೈತರ ಮಕ್ಕಳು ಜಾಲತಾಣ hಣಣಠಿs://ssಠಿ.ಠಿosಣmeಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮತ್ತು ಓPಅI mಚಿಠಿಠಿiಟಿg ಹಾಗೂ ತಂದೆ- ತಾಯಿ ಅಥವಾ ಕುಟುಂಬದ ಹಿರಿಯರ ಹೆಸರಿನಲ್ಲಿ ರೈತ ಪುರಾವೆಯಾಗಿರುವ ಈIಆ ಹೊಂದಿರುವುದು ಕಡ್ಡಾಯ ಎಂದರಲ್ಲದೇ ಈIಆ ನೋಂದಣಿಯನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಲ್ಲಿ ಮಾಡಿಸಬಹುದೆಂದು ತಿಳಿಸಿದರು.
ಕೃಷಿ ಜಂಟಿ ನಿರ್ದೇಶಕಿ ರಾಜಸುಲೋಚನ ಸಭೆಗೆ ಮಾಹಿತಿ ನೀಡುತ್ತಾ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ 8 ರಿಂದ 10 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಮಾತ್ರ 2000 ವಿದ್ಯಾರ್ಥಿ ವೇತನ ಪಾವತಿಸಲಾಗುತ್ತಿದೆ ಎಂದ ಅವರು ಪಿ.ಯು.ಸಿ/ ಐಟಿಐ/ ಡಿಪ್ಲೊಮಾ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ರೂ.2500 ಮತ್ತು ವಿದ್ಯಾರ್ಥಿನಿಯರಿಗೆ 3000 ನೀಡಲಾಗುತ್ತಿದೆ ಎಂದರು.
ಎಲ್ಲಾ ಬಿ.ಎ/ ಬಿ.ಎಸ್ಸಿ/ ಬಿ.ಕಾಂ/ ಬಿ.ಇ/ ಬಿ.ಟೆಕ್/ ಎಂಬಿಬಿಎಸ್( ವೃತ್ತಿಪರ ಕೋರ್ಸ್‍ಗಳನ್ನು ಹೊರತುಪಡಿಸಿ) ಎಲ್ಲಾ ಸ್ನಾತಕ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರೂ. 5000 ಮತ್ತು ವಿದ್ಯಾರ್ಥಿನಿಯರಿಗೆ 5500 ವಾರ್ಷಿಕ ಶಿಷ್ಯವೇತನ ನೀಡಲಾಗುತ್ತಿದೆ.ಎಲ್.ಎಲ್.ಬಿ/ ಪ್ಯಾರ ಮೆಡಿಕಲ್/ ಬಿ.ಫಾರ್ಮ್/ ನಸಿರ್ಂಗ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ರೂ.7500 ಮತ್ತು ವಿದ್ಯಾರ್ಥಿನಿಯರಿಗೆ ರೂ. 8000 ಹಾಗೂ ಎಲ್ಲಾ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ರೂ.10,000 ಮತ್ತು ವಿದ್ಯಾರ್ಥಿನಿಯರಿಗೆ ರೂ.11.000 ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರಲ್ಲದೇ ಈವರೆಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೊಂದಣಿಯಾಗಿರುವ 51,541 ವಿದ್ಯಾರ್ಥಿ/ನಿಯರ ಪೈಕಿ 41,199 ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗಿದೆ ಎಂದರು.
ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ಮತ್ತು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.

(Visited 1 times, 1 visits today)
tumkur
Previous Articleಎನ್.ಐ.ಎ ದಾಳಿಯ ವಿರುದ್ಧ ಎಡಿಪಿಐ ಪ್ರತಿಭಟನೆ
Next Article ಅ.9 : ತುಮಕೂರಿಗೆ ಜೋಡೋ ಪಾದಯಾತ್ರೆ
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.