BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅ.17 : ಎಐಟಿಯುಸಿ ಪ್ರತಿಭಟನೆ
ಇತರೆ ಸುದ್ಧಿಗಳು

ಅ.17 : ಎಐಟಿಯುಸಿ ಪ್ರತಿಭಟನೆ

By News Desk BenkiyabaleUpdated:October 13, 2022 4:59 pm

ತುಮಕೂರು


ಕಟ್ಟಡ ಕಾರ್ಮಿಕ ಕಲ್ಯಾಣ ನಿಧಿಯಿಂದ ಕೊಳಚೆ ನಿಮೂರ್ಲನಾ ಮಂಡಳಿಗೆ ನೀಡಿರುವ 433 ಕೋಟಿ ರೂಗಳನ್ನು ಕೂಡಲೇ ಹಿಂಪಡೆಯಬೇಕು, ಆರ್ಹ ಫಲಾನುಭವಿಗಳ ವಸತಿ ಯೋಜನೆಗೆ ಅನುದಾನ ನೀಡುವಂತೆ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಟೋಬರ್ 17 ರಂದು ರಾಜ್ಯದಾದ್ಯಂತ ಕಟ್ಟಡ ಕಾರ್ಮಿಕರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,2006ರಲ್ಲಿ ಜಾರಿಗೆ ಬಂದ ಕಾರ್ಮಿಕ ಕಲ್ಯಾಣ ಮಂಡಳಿಯ ಸೆಸ್ ಹಣವನ್ನು ಮಂತ್ರಿಗಳು,ಅಧಿಕಾರಿಗಳು ಬೇಕಾಬಿಟ್ಟು ಖರ್ಚು ಮಾಡಲು ಹೊರಟಿದ್ದಾರೆ.ಇದರಿಂದ ನಿಜವಾದ ಕಟ್ಟಡ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.
ಕಾರ್ಮಿಕರ ಹಲವಾರು ಹೋರಾಟಗಳ ಫಲವಾಗಿ 2006ರಲ್ಲಿ ಜಾರಿಗೆ ಬಂದ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಸುಮಾರು 48 ಲಕ್ಷ ಜನ ಕಾರ್ಮಿಕರು ತಮ್ಮ ಹೆಸರು ನೊಂದಾಯಿಸಿದ್ದು, ಇವರಲ್ಲಿ ಶೇ 50ರಷ್ಟು ಜನರು ನಕಲಿ ಕಾರ್ಮಿಕರನ್ನು ಅಧಿಕಾರಿಗಳು ಸೇರಿಸಿದ್ದಾರೆ. ಮೊದಲು ಇವರ ನೊಂದಾವಣೆಯನ್ನು ಕೈಬಿಡಬೇಕು, ಹಾಗೆಯೇ ಸೆಸ್ ಹಣದಲ್ಲಿ 1 ಲಕ್ಷ ಕಾರ್ಮಿಕರಿಗೆ ಮಾಸಿಕ 1400 ರೂಗಳಂತೆ ಬಸ್ ಪಾಸ್ ನೀಡಿದೆ. ಇದರಲ್ಲಿ ಬಹಳ ಅವ್ಯವಹಾರ ನಡೆದಿದ್ದು,ಕೂಡಲೇ ವಿತರಿಸಿರುವ ಎಲ್ಲಾ ಬಸ್ ಪಾಸ್ ರದ್ದುಗೊಳಿಸಿ, ಕಾರ್ಮಿಕರಿಗೆ ಮಂಡಳಿ ಹೆಸರಿಸಿರುವ ಸವಲತ್ತುಗಳನ್ನು ನೀಡಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಗಿರೀಶ್ ತಿಳಿಸಿದರು.
ಕೋರೋನ ಸಂದರ್ಭದಲ್ಲಿ ಸರಕಾರ ಕಾರ್ಮಿಕ ಬೆವರಿನ ಹಣದಲ್ಲಿ ಕಿಟ್ ನೀಡಿ, ತಾನು ಪ್ರಚಾರ ಪಡೆಯಲು ಮುಂದಾಗಿದೆ. ನಮ್ಮಲ್ಲಿ ಸುಮಾರು 40 ವಿವಿಧ ರೀತಿಯ ಕೆಲಸ ಮಾಡುವ ಕಟ್ಟಡ ಕಾರ್ಮಿಕರಿದ್ದು, ಅವರಲ್ಲಿ ಪ್ಲಂಬರ್, ಏಲೆಕ್ಟ್ರೇಷನ್,ಬಾರ್ ಬೆಂಡರ್,ಪೈಂಟರ್ ಮತ್ತು ಗಾರೆ ಕೆಲಸ ಮಾಡುವವರಿಗೆ ಮಾತ್ರ ಕಿಟ್ ನೀಡಿ, ಇತರೆ ವರ್ಗದ ಕೆಲಸಗಾರರಿಗೆ ನೀಡಿಲ್ಲ. ಅಲ್ಲದೆ ಕಾರ್ಮಿಕ ಮಂಡಳಿಯ ನಿಯಮವನ್ನು ಮೀರಿ,ಕೊಳಚೆ ನಿಮೂರ್ಲನಾ ಮಂಡಳಿ ಮೂಲಕ ಕೊಳಗೇರಿಗಳಲ್ಲಿ ವಾಸವಿರುವ ಜನರಿಗೆ ಈ ಹಣದಲ್ಲಿ ಮನೆ ನಿರ್ಮಿಸಿಕೊಡಲು ಮುಂದಾಗಿರುವುದು ಕಾನೂನು ಬಾಹಿರವಾಗಿದ್ದು,ಈ ವಿಚಾರವಾಗಿ ಅಕ್ಟೋಬರ್ 17ರ ಬೃಹತ್ ಹೋರಾಟದ ಜೊತೆಗೆ,ಕಾನೂನು ಸಮರ ನಡೆಸಲಿದೆ ಎಂದು ಕರ್ನಾಟಕ ಕಟ್ಟಡ ಮತ್ತು ಕಲ್ಲು ಕ್ವಾರಿ ಕೆಲಸಗಾರರ ಸಂಘ(ರಿ) ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೀಶ್ ತಿಳಿಸಿದರು.
ಅಕ್ಟೋಬರ್ 17ರ ಸೋಮವಾರದಂದು ಮೊದಲಿಗೆ ಟೌನ್‍ಹಾಲ್ ವೃತ್ತದಲ್ಲಿ ಸೇರುವ ಸಾವಿರಾರು ಕಟ್ಟಡ ಮತ್ತು ಕಲ್ಲುಕ್ಯಾರಿ ಇತರೆ ನಿರ್ಮಾಣ ಕಾರ್ಮಿಕರು,ಅಶೋಕ ರಸ್ತೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ, ಕೆಲ ಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ.ಸರಕಾರ ಒಂದು ವೇಳೆ ನಮ್ಮ ಮನವಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಮನೆ ಮುತ್ತಿಗೆಯಂತಹ ಹೋರಾಟವನ್ನು ಎಐಟಿಯುಸಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಿದ್ದೇವೆ ಎಂದು ಗಿರೀಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ(ರಿ) ರಾಜ್ಯ ಸಮಿತಿ ಸದಸ್ಯರಾದ ದೇವರಾಜು,ಕೃಷ್ಣಕುಮಾರಿ,ಜಿಲ್ಲಾ ಖಜಾಂಚಿ ಅಶ್ವಥನಾರಾಯಣ,ಶ್ರೀನಿವಾಸ್, ಶಂಕರಪ್ಪ, ಶಿವಾನಂದ್, ಗೋವಿಂದ ರಾಜು, ರಾಘವೇಂದ್ರ,ವಸಂತರಾಜು, ಕುಮಾರ್, ಬಸವರಾಜು, ಪುನಿತ್ ಮತ್ತಿತರರು
ಉಪಸ್ಥಿತರಿದ್ದರು.

(Visited 3 times, 1 visits today)
Previous Articleಜಿಲ್ಲೆಯ ವಿವಿದೆಡೆ ದೇವಾಲಯಗಳಲ್ಲಿ ಶಿವ ಪೂಜೆ
Next Article ಸರ್ಕಾರ ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಿ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.