BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದೆ
  • ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ
  • ಪಾವಗಡ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮಹಿಳೆ ಸಾವು
  • KMERC- CEPMIZ ಯೋಜನೆಯ ವಿವಿಧ ಕಾಮಗಾರಿಗಳ ಸ್ಥಳ ವೀಕ್ಷಣೆ
  • ಜಿಲ್ಲೆಯ ಕಲಾವಿದರನ್ನು ಭೇಟಿಯಾದ ರಾಜ್ಯಪಾಲರು
  • ಮಹಿಳೆಯರು ಮತದಾರರಷ್ಟೇ ಅಲ್ಲ, ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು
  • ಗ್ರಂಥಾಲಯಗಳು ಆಲೋಚನೆಗಳಿಗೆ ರೆಕ್ಕೆ ನೀಡುವ ಜ್ಞಾನದ ದೇಗುಲಗಳು
  • ತುಮಕೂರನ್ನು ಪ್ರಮುಖ ಕ್ರೀಡಾ ಕೇಂದ್ರವನ್ನಾಗಿ ರೂಪಿಸಲು ಬದ್ಧ: ಡಿಸಿಎಂ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅಸಾಹಯಕರ ಮೇಲೆ ದೌರ್ಜನ್ಯವಾದಗ ಪ್ರತಿಭಟಿಸಿ ದೇಶಾಭಿಮಾನ ತೋರಿಸಿ
ಇತರೆ ಸುದ್ಧಿಗಳು

ಅಸಾಹಯಕರ ಮೇಲೆ ದೌರ್ಜನ್ಯವಾದಗ ಪ್ರತಿಭಟಿಸಿ ದೇಶಾಭಿಮಾನ ತೋರಿಸಿ

By News Desk BenkiyabaleUpdated:October 14, 2022 4:46 pm

ತುಮಕೂರು


ಯುವಜನತೆ ತಮ್ಮ ರಾಷ್ಟ್ರಾಭಿಮಾನವನ್ನು ಚುನಾವಣೆ ಸಂದರ್ಭದಲ್ಲಿ ತೋರಿಸಿದರೆ ಸಾಲದು, ಮಹಿಳೆಯರು, ಮಕ್ಕಳು, ಅಸಾಹಯಕರ ಮೇಲೆ ದೌರ್ಜನ್ಯಗಳಾದಾಗಲೂ ಪ್ರತಿಭಟಿಸುವ ಮೂಲಕ ದೇಶಾಭಿಮಾನವನ್ನು
ತೋರಿಸುವ ಅಗತ್ಯವಿದೆ ಎಂದು ಜಯಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಡಾ.ಬಿ.ಎನ್.ಜಗದೀಶ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಕನ್ನಡ ಭವನದಲ್ಲಿ ಜಯಕರ್ನಾಟಕ ಸಂಘಟನೆ ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು, ಹಸುಗೂಸುಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸುವ ಕಾನೂನು ಬರುವಂತೆ ಸರಕಾರಗಳ ಮೇಲೆ ಒತ್ತಡ ತರುವ ಕೆಲಸ ಮಾಡಬೇಕಿದೆ ಎಂದರು.
ಜಯಕರ್ನಾಟಕ ಸಂಘಟನೆ ಸ್ವಾರ್ಥಕ್ಕಾಗಿ ಹುಟ್ಟಿಕೊಂಡ ಸಂಘಟನೆಯಲ್ಲ.ಬಡವರು,ಅಶಕ್ತರ ಪರವಾಗಿ ಸಾಮಾಜಿಕ ಕಳಕಳಿಯಿಂದ ಹುಟ್ಟಿಕೊಂಡ ಸಂಸ್ಥೆಯಾಗಿದೆ.ಇಂದು ಇಡೀ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಕಳೆದ ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ಲೈಗಿಂಕ ದೌರ್ಜನ್ಯಕ್ಕೆ ಒಳಗಾಗಿ ಹತ್ಯೆಗೀಡಾದ ಕುಮಾರಿ ದಿವ್ಯಾ ಅವರ ಆತ್ಮಕ್ಕೆ ಶಾಂತಿ ಕೋರಿದ್ದೇವೆ. ಇದು ಸಾಲದು, ಇಂತಹ ಕೃತ್ಯವೆಸಗುವ ವ್ಯಕ್ತಿಗಳಿಗೆ ತಕ್ಷಣವೇ ಗಲ್ಲು ಶಿಕ್ಷೆ ವಿಧಿಸುವಂತಹ ಕಾನೂನು ಜಾರಿಗೆ ಬರುವಂತೆ ಹೋರಾಟ ನಡೆಸಬೇಕಿದೆ.ಯುವಜನತೆ ದೇಶದ ಆಸ್ತಿ.ತಾರತಮ್ಯ ರಹಿತ ಸಮಾಜದ ನಿರ್ಮಾಣ ನಮ್ಮ ಗುರಿಯಾಗಬೇಕು ಎಂದು ಡಾ.ಬಿ.ಎನ್.ಜಗದೀಶ್ ತಿಳಿಸಿದರು.
ದೇಶದ ಯುವಜನರನ್ನು ಮಾದಕ ವಸ್ತುಗಳ ವ್ಯಸನ ಮತ್ತು ನಿರುದ್ಯೋಗ ಕಿತ್ತು ತಿನ್ನುತ್ತಿದೆ.ವಿದ್ಯಾವಂತ ಯುವಜನರು ಉದ್ಯೋಗವಿಲ್ಲದ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ.ದುಡಿಯುವ ಕೈಗಳಿಗೆ ಕೆಲಸ ದೊರೆಯುವಂತೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಬೇಕು.ಈ ನಿಟ್ಟಿನಲ್ಲಿ ಜಯಕರ್ನಾಟಕ ಮುಂದಿನ ದಿನಗಳಲ್ಲಿ ಅಭಿಯಾನ ಆರಂಭಿಸಲಿದೆ ಎಂದರು.
ಜಯಕರ್ನಾಟಕ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ರಾಮಚಂದ್ರಯ್ಯ ಮಾತನಾಡಿ,ಜಯಕರ್ನಾಟಕ ಸಂಘಟನೆ ಹೊಸ ನಾಯಕರನ್ನು ಸೃಷ್ಟಿಸುವ ಕೆಲಸವನ್ನು ಆರಂಭದಿಂದಲೂ ಮಾಡುತ್ತಾ ಬಂದಿದೆ.ಯುವಕರಲ್ಲಿ ಮೊದಲು ನಾವು ಭಾರತೀಯರು, ಆ ನಂತರ ಕನ್ನಡಿಗರು ಎಂಬ ಉದ್ದಾತ್ತ ಗುಣಗಳನ್ನು ತುಂಬುವುದರ ಜೊತೆಗೆ,ಸರಕಾರ ಮತ್ತು ಜನರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣವನ್ನು ಕಾರ್ಯಕರ್ತರಲ್ಲಿ ತುಂಬುವ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯುವಘಟಕ, ಮಹಿಳಾ ಘಟಕಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದು ಮತ್ತಷ್ಟು ಶಕ್ತಿ ತುಂಬಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ರಂಗಸ್ವಾಮಿ ವಹಿಸಿದ್ದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ,ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಮುನಿಸ್ವಾಮಿ,ಹರೀಶ್, ರಜತ್,ಶ್ರೀಮತಿ ವಿಜಯ, ಶ್ರೀಮತಿ ಮಂಜುಳ, ದಿವ್ಯಾಸೋಮಶೇಖರ್,ಚೇತನ್ ದಾಸರಹಳ್ಳಿ, ತುಮಕೂರು ನಗರಾಧ್ಯಕ್ಷ ದೀಕ್ಷಿತ್, ಯುವಘಟಕದ ಅಧ್ಯಕ್ಷ ರಂಗನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದು. ಇದೇ ವೇಳೆ ನೂರಕ್ಕೂ ಹೆಚ್ಚು ಯುವಕರು ಜಯಕರ್ನಾಟಕ ಸಂಘಟನೆಗೆ ಸೇರ್ಪಡೆಗೊಂಡರು.

(Visited 1 times, 1 visits today)
tumkur
Previous Articleಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಉನ್ನತವಾಗಿ ಬೆಳೆದು ಕೀರ್ತಿಗಳಿಸಿ
Next Article ಆತ್ಮನಿರ್ಭರ ಭಾರತದ ಕನಸು ನನಸಾಗಲು ರೈತರ ಆದಾಯ ಹೆಚ್ಚಾಗಲಿ : ಸಂಸದ
News Desk Benkiyabale

Related Posts

ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದೆ

November 19, 2026 6:27 pm news

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ

November 19, 2026 6:26 pm news

ಪಾವಗಡ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮಹಿಳೆ ಸಾವು

November 19, 2026 6:24 pm news
ತಾಜಾ ಸುದ್ಧಿಗಳು
news

ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದೆ

November 19, 2026 6:27 pm
news

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ

November 19, 2026 6:26 pm
news

ಪಾವಗಡ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮಹಿಳೆ ಸಾವು

November 19, 2026 6:24 pm
news

KMERC- CEPMIZ ಯೋಜನೆಯ ವಿವಿಧ ಕಾಮಗಾರಿಗಳ ಸ್ಥಳ ವೀಕ್ಷಣೆ

November 18, 2026 5:40 pm
news

ಜಿಲ್ಲೆಯ ಕಲಾವಿದರನ್ನು ಭೇಟಿಯಾದ ರಾಜ್ಯಪಾಲರು

November 18, 2026 5:39 pm
news

ಮಹಿಳೆಯರು ಮತದಾರರಷ್ಟೇ ಅಲ್ಲ, ನಿರ್ಧಾರ ಕೈಗೊಳ್ಳುವ ನಾಯಕಿಯರಾಗಬೇಕು

November 18, 2026 5:37 pm
Our Youtube Channel
Our Picks

ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದೆ

November 19, 2026 6:27 pm

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ

November 19, 2026 6:26 pm

ಪಾವಗಡ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮಹಿಳೆ ಸಾವು

November 19, 2026 6:24 pm

KMERC- CEPMIZ ಯೋಜನೆಯ ವಿವಿಧ ಕಾಮಗಾರಿಗಳ ಸ್ಥಳ ವೀಕ್ಷಣೆ

November 18, 2026 5:40 pm

ಜಿಲ್ಲೆಯ ಕಲಾವಿದರನ್ನು ಭೇಟಿಯಾದ ರಾಜ್ಯಪಾಲರು

November 18, 2026 5:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಚಿಕ್ಕನಾಯಕನಹಳ್ಳಿ ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಕೊಡುಗೆ ನೀಡಿದೆ

By News Desk BenkiyabaleNovember 19, 2026 6:27 pm

ಹುಳಿಯಾರು: ಚಿಕ್ಕನಾಯಕನಹಳ್ಳಿಯ ಸಾಹಿತ್ಯಿಕ ಕೊಡುಗೆ: ಚಿಕ್ಕನಾಯಕನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಂಪರೆಗೆ ತನ್ನದೇ ಆದ ಉನ್ನತವಾದ ಕೊಡುಗೆಯನ್ನು ನೀಡಿದೆ. ಕನ್ನಡದ…

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಐಕ್ಯತಾ ಪ್ರಮಾಣ ವಚನ ಸ್ವೀಕಾರ

November 19, 2026 6:26 pm

ಪಾವಗಡ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮಹಿಳೆ ಸಾವು

November 19, 2026 6:24 pm

KMERC- CEPMIZ ಯೋಜನೆಯ ವಿವಿಧ ಕಾಮಗಾರಿಗಳ ಸ್ಥಳ ವೀಕ್ಷಣೆ

November 18, 2026 5:40 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.