BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ
  • ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ
  • ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ
  • ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ
  • ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ
  • ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ
  • ೧೧ ಕೆ.ವಿ ಮಾರ್ಗಗಳ ಸಮಗ್ರ ನಿರ್ವಹಣೆ
  • ಗ್ರಾಮಗಳ ಅಭಿವೃದ್ಧಿಗಾಗಿ ೧೭ಕೋಟಿ ೮೪ಲಕ್ಷ ವೆಚ್ಚ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾನವ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖಗಳು : ನ್ಯಾ|| ರಾಜೇಂದ್ರ ಬಾದಾಮಿಕರ್
ತುಮಕೂರು ಜಿಲ್ಲಾ ಸುದ್ಧಿಗಳು

ಮಾನವ ಹಕ್ಕುಗಳು ಒಂದೇ ನಾಣ್ಯದ ಎರಡು ಮುಖಗಳು : ನ್ಯಾ|| ರಾಜೇಂದ್ರ ಬಾದಾಮಿಕರ್

By News Desk BenkiyabaleUpdated:December 10, 2018 4:34 pm

ತುಮಕೂರು :

      ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದ್ದು ಎಲ್ಲರೂ ಸಂವಿಧಾನಕ್ಕೆ ಅನುಸಾರವಾಗಿ ನಡೆದುಕೊಂಡು ಮಾನವ ಹಕ್ಕುಗಳನ್ನು ಗೌರವಿಸಬೇಕು ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ರಾಜೇಂದ್ರ ಬಾದಾಮಿಕರ್ ತಿಳಿಸಿದರು.

      ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿದ್ದ “ವಿಶ್ವ ಮಾನವ ಹಕ್ಕುಗಳ ದಿನಾಚರಣೆ”ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅನಾದಿ ಕಾಲದಿಂದಲೂ ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ಜರುಗುತ್ತಲೇ ಇವೆ. 1990ರ ಕಾಯಿದೆಯಂತೆ ಮಾನವ ಹಕ್ಕುಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ. ತಿದ್ದುಪಡಿ ಕಾಯ್ದೆಯಲ್ಲಿ ಜನರು ಸಂವಿಧಾನದಲ್ಲಿರುವ ಹಕ್ಕುಗಳ ಬಗ್ಗೆ ಕೇಳಿದರೆ ಸಾಲದು. ಕರ್ತವ್ಯಗಳನ್ನು ಕೂಡ ಅರಿಯಬೇಕು ಎಂದರು.Displaying DSC_0328.JPG

      ತುಮಕೂರು ಜಿಲ್ಲೆಯಲ್ಲಿ ಕೇವಲ 3 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿದ್ದು, ಈ ಪೈಕಿ 1 ಪ್ರಕರಣ ಇತ್ಯರ್ಥಪಡಿಸಿದ್ದು, ಇನ್ನು 2 ಪ್ರಕರಣಗಳಿಗೆ ಉಚ್ಛನ್ಯಾಯಾಲಯದಲ್ಲಿ ತಡೆಯಾಜ್ಞೆ ನೀಡಲಾಗಿದೆ. ಈ ಪ್ರಕರಣಗಳನ್ನು ನೋಡಿದರೆ, ತುಮಕೂರು ಜಿಲ್ಲೆಯಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗುತ್ತಿಲ್ಲವೆ ಎಂದು ಪ್ರಶ್ನಿಸಿದರು.

      ಮಹಿಳೆಯರು ಮತ್ತು ಮಕ್ಕಳ ಮೇಲೆ ಮಾನವ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿವೆ. ನಾವು ಸಂವಿಧಾನಕ್ಕೆ ರೀತಿ ನಿಯಮವಾಗಿ ನಡೆದುಕೊಂಡರೆ ಸಾಕು ಯಾವುದೇ ರೀತಿಯಾದ ಮಾನವ ಹಕ್ಕುಗಳ ಉಲ್ಲಂಘನೆ ಆಗುವುದಿಲ್ಲ. ಒಬ್ಬ ವೈರಿಯನ್ನು ನೇರವಾಗಿ ಎದುರಿಸಬಹುದು ಏಕೆಂದರೆ ಅವರು ಯಾರು ಎಂದು ಗೊತ್ತಿರುತ್ತದೆ. ಆದರೆ ಆಂತರಿಕ ಶಕ್ತಿಗಳ ಬಗ್ಗೆ ಗೊತ್ತಾಗುವುದಿಲ್ಲ. ಇದರಿಂದಾಗಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ಅವರು ತಿಳಿಸಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ವಹಿಸಿದ್ದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ: ದಿವ್ಯಾ ವಿ.ಗೋಪಿನಾಥ್, ವಿದ್ಯೋದಯ ಲಾ ಕಾಲೇಜಿನ ಪ್ರಾಂಶುಪಾಲರಾದ ಪ್ರೋ|| ಕೆ.ವೆಂಕಟಾಚಲಪತಿ ಸ್ವಾಮಿ ಮತ್ತು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷಕ ಜೆ.ಕೆ. ಅನಿಲ್ ಮತ್ತಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ “ಮಾನವ ಹಕ್ಕುಗಳ ಮಹತ್ವ ಹಾಗೂ ಅದರ ಅನುಷ್ಠಾನ” ಕುರಿತು ವಿಶೇಷ ಉಪನ್ಯಾಸವನ್ನು ಏರ್ಪಡಿಸಲಾಗಿತ್ತು.

(Visited 48 times, 1 visits today)
Previous Articleಕ್ಯಾನ್ಸರ್ ತಪಾಸಣಾ ಶಿಬಿರದ ಅನುಕೂಲ ಪಡೆಯಿರಿ : ಶಾಸಕ ಜೆ.ಸಿ.ಮಾಧುಸ್ವಾಮಿ
Next Article ಬಾಕಿ ಇರುವ 7634 ವಿಮಾ ಅರ್ಜಿಗಳನ್ನು ಶೀಘ್ರ ವಿಲೇ ಮಾಡಲು ಸಂಸದರ ಸೂಚನೆ
News Desk Benkiyabale

Related Posts

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm news

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm ಇತರೆ ಸುದ್ಧಿಗಳು

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ವ್ಯಾಪಕ ವಿರೋಧ

June 11, 2026 4:50 pm
Our Youtube Channel
Our Picks

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

June 13, 2026 5:26 pm

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm

ಸರ್ಕಾರಿ ಆಸ್ಪತ್ರೆಯಲ್ಲಿ ಹಾವು ಕಡಿತದ ಔಷಧಿ ಇಲ್ಲ: ಸ್ಪಷ್ಟನೆ

June 11, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

By News Desk BenkiyabaleJune 13, 2026 5:26 pm

ತುರುವೇಕೆರೆ: ವಿದ್ಯುತ್ ಇಲಾಖೆ ಖಾಸಗೀಕರಣ ವಿರೋಧಿಸಿ ಪಟ್ಟಣದ ಬೆಸ್ಕಾಂ ಇಲಾಕೆ ಸಿಬ್ಬಂದಿಗಳು, ಗುತ್ತಿಗೆದಾರ, ಜಿವಿ.ಪಿ ಸಿಬ್ಬಂದಿಗಳು ಬೆಸ್ಕಾಂ ಮುಂಭಾಗದಲ್ಲಿ ಶುಕ್ರವಾರ…

ಗೋವನ್ನು ರಾಷ್ಟಿಯ ಪ್ರಾಣಿಯನ್ನಾಗಿ ಘೋಷಿಸಿ

June 13, 2026 5:23 pm

ಆರ್ಥಿಕ ಬೆಳವಣಿಗೆಗೆ ಸಹಕಾರಿ ಸಂಸ್ಥೆಗಳು ಸಹಕಾರಿ

June 13, 2026 5:19 pm

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

June 11, 2026 5:15 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.