BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಾಯಿ – ಶಿಶುಗಳ ಸಾವು : ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ
ಇತರೆ ಸುದ್ಧಿಗಳು

ತಾಯಿ – ಶಿಶುಗಳ ಸಾವು : ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಆಗ್ರಹ

By News Desk BenkiyabaleUpdated:November 05, 2022 5:31 pm
????????????????????????????????????

ತುಮಕೂರು

ತಾಯಿ ಕಾರ್ಡ್ ಆಧಾರ್ ಕಾರ್ಡ್ ಇಲ್ಲವೆಂದು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಕೊಳ್ಳದೆ ನಿರ್ಲಕ್ಷ್ಯವಹಿಸಿ ತಾಯಿ ಮತ್ತು ಅವಳಿ ಶಿಶುಗಳ ಸಾವಿಗೆ ಕಾರಣರಾಗಿರುವ ಜಿಲ್ಲಾಸ್ಪತ್ರೆಯ ಡಾ.ಉಷಾ ಮತ್ತು ಕರ್ತವ್ಯದಲ್ಲಿದ್ದ ನರ್ಸ್‍ಗಳಾದ ಯಶೋಧ, ಸವಿತ, ವಿದ್ಯಾಭಾರತಿಯವರನ್ನು ಅಮಾನತು ಮಾಡಿರುವುದು ತಕ್ಷಣದ ಕ್ರಮವಾದರು ತಪ್ಪಿತಸ್ಥರ ವಿರುದ್ಧ ಕ್ರಮಿನಲ್ ಮೊಕದ್ದಮೆ ದಾಖಲಿಸಬೇಕು ಮತ್ತು ಉನ್ನತ ಮಟ್ಟದ ತನಿಖೆಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ತುರ್ತಾಗಿ ಮಾಡಿ ತಪ್ಪಿತಸ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗುವಂತೆ ಪಿಯುಸಿಎಲ್ ತುಮಕೂರು, ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಆಗ್ರಹಿಸಲಾಯಿತು. ಇಂದು ಘಟನೆ ನಡೆದ ಭಾರತಿನಗರ ಪ್ರದೇಶಕ್ಕೆ ಇಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆಯಲಾಯಿತು,
ಬುಧವಾರ ಕಸ್ತೂರಿ(30)ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಅಕ್ಕಪಕ್ಕದ ಮನೆಯ ಮಹಿಳೆಯರ ಪರವಾಗಿ ತುಮಕೂರು ಕೊಳಗೇರಿ ಸಮಿತಿಯ ಮಹಿಳಾ ಕಾರ್ಯಕರ್ತರು ಜಿಲ್ಲಾಸ್ಪತ್ರೆಗೆ ದಾಖಲಿಸಲು ಮುಂದಾದಾಗ ಕರ್ತವ್ಯನಿರತ ವೈಧ್ಯರು ಮತ್ತು ಸಿಬ್ಬಂಧಿಗಳು ತಾಯಿ ಕಾರ್ಡ್ ಆಧಾರ್ ಕಾರ್ಡ್ ಇಲ್ಲವೆಂದು ಚಿಕಿತ್ಸೆಗೆ ಬೆಂಗಳೂರಿಗೆ ಹೋಗುವಂತೆ ಗದರಿಸಿ ಆಚೆ ಕಳಿಸಿರುವ ಬಗ್ಗೆ ಸ್ಲಂ ಸಮಿತಿಯ ಕಾರ್ಯಕರ್ತರಾದ ಸರೋಜಮ್ಮ, ಶಾರದಮ್ಮ, ಗಂಗಮ್ಮ ಭೇಟಿ ನೀಡಿದ ಪಿಯುಸಿಎಲ್ ತಂಡದ ಗಮನಕ್ಕೆ ತಂದರು. ಸ್ಥಳೀಯ ಸ್ಲಂ ಸಮಿತಿ ಕಾರ್ಯಕರ್ತರಾದ ಸರೋಜಮ್ಮ ಮಾತನಾಡಿ ನಾನು ಜಿಲ್ಲಾಸ್ಪತ್ರೆಗೆ ಕಸ್ತೂರಿಯವರನ್ನು ಹೆರಿಗೆ ನೋವು ಕಾಣಿಸಕೊಂಡಾಗ ಅಕ್ಕಪಕ್ಕದವರ ಸಹಕಾರ ಪಡೆದು ನನ್ನ ಆರೋಗ್ಯ ಸರಿಯಿಲ್ಲದಿದ್ದರು ಕರೆದುಕೊಂಡು ಹೋಗಿ ನಡೆಯಲು ಸಾಧ್ಯವಾಗದ ಕಸ್ತೂರಿರವರನ್ನು ಚಿಕಿತ್ಸೆಗೆ ದಾಖಲಿಸಿಕೊಳ್ಳಲು ಪರಿಪರಿಯಾಗಿ ವಿನಂತಿಸಿದರು ತಾಯಿ ಕಾರ್ಡ್ ಇಲ್ಲದೇ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಗದರಿಸಿ ಇಚೆಗೆ ಕಳಿಸದರು ಈ ಸಂದರ್ಭದಲ್ಲಿ ಚಿಕಿತ್ಸೆಗೆ ದಾಖಲಿಸಿಕೊಂಡಿದ್ದರೆ ಮೂರು ಜೀವಗಳು ಉಳಿಯುತ್ತಿದ್ದವು ಎಂದು ಕಣ್ಣೀರಿಟ್ಟರು.
ಕಸ್ತೂರಿ ಕಳೆದ ಒಂದೂವರೆ ತಿಂಗಳ ಹಿಂದೆ 7 ವರ್ಷದ ಹೆಣ್ಣು ಮಗುವಿನೊಂದಿಗೆ ಭಾರತಿ ನಗರಕ್ಕೆ ಬಂದು ನನ್ನ ಗಂಡ ಆರು ತಿಂಗಳ ಹಿಂದೆ ಸಾವನಪ್ಪಿದ್ದು ಮನೆಯವರ ಹಿಂಸೆಯಿಂದ ಬೆಂಗಳೂರು ಬಿಟ್ಟು ಬಂದಿದ್ದೇನೆ ನನಗೆ ಆಶ್ರಯ ನೀಡುವಂತೆ ಕೋರಿದಾಗ ಮಹಿಳಾ ಸಮಿತಿಯ ಕಾರ್ಯಕರ್ತರು ತುಂಬು ಗರ್ಭಿಣಿಯನ್ನು ಕಳೆದ ಒಂದೂವರೆ ತಿಂಗಳಿಂದ ಪೋಷಣೆ ಮಾಡಿರುತ್ತಾರೆ. ತಮಿಳು ಮೂಲದವರಾಗಿರುವ ಕಸ್ತೂರಿಯವರ ವೈಯಕ್ತಿಕ ಮಾಹಿತಿಯನ್ನು ಹೆಚ್ಚಾಗಿ ಸ್ಥಳೀಯರಿಗೆ ನೀಡಿರಲಿಲ್ಲ ಈ ಬಗ್ಗೆ ಸ್ಥಳೀಯ ಅಂಗನವಾಡಿ ಕಾರ್ಯಕರ್ತರ ಗಮನಕ್ಕೆ ತಂದಾಗ ಆಧಾರ್‍ಕಾರ್ಡ್ ನೀಡುವಂತೆ ಕೇಳಿದರು ಆಧಾರ್‍ಕಾರ್ಡ್ ಇರಲಿಲ್ಲ ಹಾಗಾಗಿ ಅಕ್ಕಪಕ್ಕದ ಮನೆಯವರೆ ಊಟ ನೀಡಿದ್ದು ಸ್ಲಂ ಸಮಿತಿಯ ಕವಿತರವರ ಮನೆಯಲ್ಲಿ ತಾತ್ಕಾಲಿಕ ಆಶ್ರಯ ನೀಡಿರುತ್ತಾರೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಏಕೆಂದರೆ ಯಾವುದೇ ದಾಖಲೆಗಳು ಇಲ್ಲದಿದ್ದರು ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಬೇಕಾಗಿರುವುದು ಜಿಲ್ಲಾಸ್ಪತ್ರೆಯ ಕರ್ತವ್ಯ. ಆದ್ದರಿಂದ ಸರ್ಕಾರ ಮೂರು ಜೀವಗಳ ಹಾನಿಗೆ ಜವಾಬ್ದಾರಿ ಹೊರಬೇಕು ಎಂದು ಪ್ರೊ.ಕೆ ದೊರೈರಾಜ್ ಹೇಳಿದರು.
ಹಾಗೂ ಈ ಪ್ರಕರಣವನ್ನು ಬೆಳಕಿಗೆ ತಂದ ತುಮಕೂರು ಸ್ಲಂ ಸಮಿತಿಯ ಮಹಿಳಾ ಕಾರ್ಯಕರ್ತರನ್ನು ಅಭಿನಂಧಿಸುತ್ತೇನೆ, ಎಷ್ಟೋ ಘಟನೆಗಳು ನಡೆದರು ಬೆಳಕಿಗೆ ಬರುಲಿಲ್ಲ ಸರ್ಕಾರ ಕೂಡಲೇ ಮೃತ ಮಹಿಳೆಯ ಸಂಬಂಧಿಗಳ ಮಾಹಿತಿ ಸಂಗ್ರಹಿಸಿ ಮೃತ ದೇಹವನ್ನು ಹಸ್ತಾಂತರಿಸಬೇಕು 7 ವರ್ಷದ ಹೆಣ್ಣು ಮಗುವಿನ ಶಿಕ್ಷಣ ಮತ್ತು ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿದ ಅವರು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ಸ್ಪಂಧನೆ ನೀಡುತ್ತಿವೆ, ಆದರೆ ಸ್ಥಳೀಯರನ್ನು ಬೆಧರಿಸುವ ವಾತಾವರಣ ನಿರ್ಮಾಣ ಮಾಡುತ್ತಿರುವುದು ಸರಿಯಲ್ಲ ಚಿಕಿತ್ಸೆಗೆ ನಿರ್ಲಕ್ಷ್ಯವಹಿಸುವವರ ವಿರುದ್ಧ ಕ್ರಮಕ್ಕೆ ಪೋಲಿಸ್ ಇಲಾಖೆ ಮತ್ತು ಜಿಲ್ಲಾಡಳಿತ ಮುಂದಾಗಬೇಕೆಂದು ಒತ್ತಾಯಿಸಿದರು.
ಸ್ಲಂ ಜನಾಂದೋಲನದ ಸಂಚಾಲಕ ಎ.ನರಸಿಂಹಮೂರ್ತಿ ಮಾತನಾಡಿ ಈಗಿನ ಎನ್,ಯು,ಹೆಚ್,ಆರ್,ಎಂ ಮಾನದಂಡಗಳು ಇದನ್ನು ಹೇಳಿದರು. ಆರೋಗ್ಯ ಇಲಾಖೆ ಪಾಲಿಸುತ್ತಿಲ್ಲ ಹಾಗಾಗಿ ಸದರಿ ಮಹಿಳೆ ಪರಿಶಿಷ್ಟ ಜಾತಿಗೆ ಸೇರಿದಲ್ಲಿ ಎಸ್‍ಸಿ/ಎಸ್‍ಟಿ ದೌರ್ಜನ್ಯ ಕಾಯಿದೆಯಡಿಯು ಸಹಾ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು ಸತ್ಯಾ ಮರೆಮಾಚಲು ಕೆಲವೊಂದು ಕಾಣದ ಕೈಗಳು ಪ್ರಯತ್ನಿಸುತ್ತದ್ದು ಪೋಲಿಸ್ ಇಲಾಖೆ ಇದಕ್ಕೆ ಆಸ್ಪದ ನೀಡದೇ ನೈಜ ವರದಿಯನ್ನು ಉನ್ನತ ಮಟ್ಟದ ತನಿಖಾ ಸಮಿತಿಯ ಮುಂದೆ ಮಂಡಿಸಬೇಕು, ನೆರವಿಗೆ ಬಂದವರ ಮೇಲೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು, ತಪ್ಪಿದಲ್ಲಿ ಗಂಭೀರವಾದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಉನ್ನತ ಮಟ್ಟದ ಸಮಿತಿ ಸರಿಯಾದ ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯಾಂಗ ತನಿಖೆಗೆ ಮುಖ್ಯಮಂತ್ರಿಗಳು ಆದೇಶಿಸುವಂತೆ ಒತ್ತಾಯಿಸಬೇಕಾಗುತ್ತದೆ. ಪ್ರಸ್ತುತ ಮಾಹಿತಿ ಪ್ರಕಾರ ನೀತಿ ಆಯೋಗದ ಸೂಚನೆ ಮೇಲೆ ತುಮಕೂರು ಜಿಲ್ಲಾಸ್ಪತ್ರೆಯನ್ನು ಖಾಸಗೀಕರಣಗೊಳಿಸಲು ರಾಜ್ಯಸರ್ಕಾರ ಮುಂದಾಗಿದೆ ತಕ್ಷಣ ಕೈಬಿಡಬೇಕು ಇಲ್ಲವಾದಲ್ಲಿ ತುಮಕೂರು ನಾಗರೀಕರು ಪ್ರತಿಭಟಿಸಬೇಕಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘದ ನಟರಾಜಪ್ಪ, ಪಿಯುಸಿಎಲ್‍ನ ಕಾರ್ಯದರ್ಶಿ ತಿರುಮಲಯ್ಯ, ಕೊಳಗೇರಿ ಸಮಿತಿಯ ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಶಂಕರಯ್ಯ, ಗಣೇಶ್ ಹಾಗೂ ಭಾರತಿನಗರ ಶಾಖಾ ಸಮಿತಿ ಪದಾಧಿಕಾರಿಗಳಾದ ಶಾರದಮ್ಮ.ಗಂಗಾ,ಕೆಂಪಣ್ಣ,ಗಂಗಮ್ಮ ಉಪಸ್ಥಿತರಿದ್ದರು.

(Visited 2 times, 1 visits today)
tumkur
Previous Articleಸಾರ್ವಜನಿಕರಿಗೆ ಕಾನೂನು ಅರಿವು ಅಗತ್ಯ
Next Article ಸ್ತನ ಕ್ಯಾನ್ಸರ್ ಜಾಗೃತಿ ಜಾಥಾ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.