BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮತದಾರರ ವೇಳಾಪಟ್ಟಿ ಪ್ರಕಟ
ಇತರೆ ಸುದ್ಧಿಗಳು

ಮತದಾರರ ವೇಳಾಪಟ್ಟಿ ಪ್ರಕಟ

By News Desk BenkiyabaleUpdated:November 10, 2022 5:58 pm

ತುಮಕೂರು


ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023ರ ಸಂಬಂಧ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಎಲ್ಲಾ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಗಳನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ.
ವೇಳಾಪಟ್ಟಿಯನ್ವಯ ಸಾರ್ವಜನಿಕರ ಮಾಹಿತಿಗಾಗಿ ಈಗಾಗಲೇ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಲಾಗಿದ್ದು, ಡಿಸೆಂಬರ್ 8ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು. ಈ ಅವಧಿಯಲ್ಲಿ ಬಿ.ಎಲ್.ಓ.ಗಳು ಮನೆ-ಮನೆಗೆ ಭೇಟಿ ನೀಡಿ ಅರ್ಹ ಮತದಾರರಿಂದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರನ್ನು ತೆಗೆದು ಹಾಕುವ ಅಥವಾ ವರ್ಗಾವಣೆ ಮಾಡುವ ಬಗ್ಗೆ ಅಗತ್ಯ ದಾಖಲೆಗಳೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಪಡೆಯಲಿದ್ದಾರೆ. ನಂತರ 2023ರ ಜನವರಿ 5ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ಕರಡು ಮತದಾರರ ಪಟ್ಟಿಯಲ್ಲಿ 10,82,752 ಪುರುಷರು, 10,79,769 ಮಹಿಳೆಯರು, 92 ಇತರರು ಸೇರಿದಂತೆ ಒಟ್ಟು 21,62,613 ಮತದಾರರಿದ್ದು, ಸೇವಾ ಮತದಾರರ ಪಟ್ಟಿಯಲ್ಲಿ 749 ಪುರುಷರು, 40 ಮಹಿಳೆಯರು ಸೇರಿದಂತೆ ಒಟ್ಟು 789 ಮತದಾರರಿರುತ್ತಾರೆ. ಅಲ್ಲದೆ, ಜಿಲ್ಲೆಯಲ್ಲಿ 26,856 ವಿಕಲಚೇತನ ಮತದಾರರನ್ನು ನೋಂದಣಿ ಮಾಡಲಾಗಿದೆ.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಪ್ರಯುಕ್ತ ನವೆಂಬರ್ 12 ಮತ್ತು 20 ಹಾಗೂ ಡಿಸೆಂಬರ್ 3 ಮತ್ತು 4ರಂದು ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು. ಪರಿಷ್ಕರಣೆ ಅವಧಿಯಲ್ಲಿ ವಿಶೇಷ ಚೇತನ, ಗುಡ್ಡಗಾಡು, ಹಕ್ಕಿ-ಪಿಕ್ಕಿ, ಅರಣ್ಯಗಳಲ್ಲಿ ವಾಸಿಸುವವರು, ಲೈಂಗಿಕ ಕಾರ್ಯಕರ್ತರು, ಅನಾಥರು, ತೃತೀಯ ಲಿಂಗಿಗಳ ಸೇರ್ಪಡೆಗಾಗಿ ವಿಶೇಷ ಗಮನಹರಿಸಲಾಗುವುದು.
ಜಿಲ್ಲೆಯ ಜೆಂಡರ್ ರೇಷಿಯೋ 997 ಮತ್ತು ಇ.ಪಿ.ರೇಷಿಯೋ 77.27 ಇರುವುದರಿಂದ ಜೆಂಡರ್ ರೇಷಿಯೋ ಕಡಿಮೆ ಮಾಡಲು ಮರಣ ಹೊಂದಿದ, ಮದುವೆಯಾಗಿ ಹೋಗಿರುವ ಮಹಿಳಾ ಮತದಾರರನ್ನು ಹಾಗೂ ಇ.ಪಿ. ರೇಷಿಯೋ ಕಡಿಮೆ ಮಾಡಲು ಮರಣ ಹೊಂದಿದ, ಖಾಯಂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ನಿಯಮಾನುಸಾರ ಮತದಾರರ ಪಟ್ಟಿಯಿಂದ ಕೈಬಿಡಲು ಕ್ರಮವಹಿಸಲಾಗುವುದು.
ಜಿಲ್ಲೆಯಲ್ಲಿ 30,165 ಯುವ ಮತದಾರರನ್ನು ಸೇರ್ಪಡೆ ಮಾಡಲಾಗಿದೆ. ಉಳಿಕೆ ಇರುವ ಅರ್ಹ ಯುವ ಮತದಾರರ ಸೇರ್ಪಡೆಗೆ ಬಿಎಲ್‍ಓಗಳು ಮನೆ-ಮನೆ ಭೇಟಿ ನೀಡುವ ಸಂದರ್ಭದಲ್ಲಿ ವಿಶೇಷ ಗಮನ ನೀಡಿ ನೋಂದಣಿ ಮಾಡಲಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರತಿ ವರ್ಷ ಜನವರಿ 1ನ್ನು ಅರ್ಹತಾ ದಿನಾಂಕವಾಗಿ ಪರಿಗಣಿಸಿ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿತ್ತು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪ್ರಸ್ತುತ ಜನವರಿ 1, ಏಪ್ರಿಲ್ 1, ಜುಲೈ 1, ಅಕ್ಟೋಬರ್ 1ನ್ನು ಅರ್ಹತಾ ದಿನಾಂಕಗಳೆಂದು ಗೊತ್ತುಪಡಿಸಲಾಗಿದೆ. ಗೊತ್ತುಪಡಿಸಲಾದ ದಿನಾಂಕಗಳಿಗೆ 18 ವರ್ಷ ತುಂಬಲಿರುವ ಯುವ ಮತದಾರರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗಾಗಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬಹುದಾಗಿದೆ. ಸಂಬಂಧಿಸಿದ ಬಿಎಲ್‍ಒ/ಎಇಆರ್‍ಒ/ಇಆರ್‍ಒಗಳು ಈ ಅರ್ಜಿಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇ ಪಡಿಸಲು ಕ್ರಮವಹಿಸಲಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲಾ ಅರ್ಹ ಮತದಾರರು ಈ ಮತದಾರರ ಪಟ್ಟಿ ಪರಿಷ್ಕರಣೆಯ ಸದುಪಯೋಗ ಪಡೆದು ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ನಿಗಧಿತ ನಮೂನೆಯಲ್ಲಿ ಡಿಸೆಂಬರ್ 8ರೊಳಗಾಗಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಮತದಾರರು ಗಿoಣeಡಿs ಊeಟಠಿಟiಟಿe ಂಠಿಠಿ ಅಥವಾ ತಿತಿತಿ.ಟಿvsಠಿ.iಟಿ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ಅವರು ತಿಳಿಸಿದ್ದಾರೆ.

(Visited 11 times, 1 visits today)
tumkur
Previous Articleಮತದಾನ ಪ್ರಕ್ರಿಯೆಯಲ್ಲಿ ಯುವಕರ ಪಾತ್ರ ಅಪಾರ
Next Article ಶಿಕ್ಷಣ ಶಿಲ್ಪಿ ಡಾ.ಎಚ್.ಎಂ.ಗಂಗಾಧರಯ್ಯ ಸ್ಮಾರಕ ಉಪನ್ಯಾಸ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.