BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ
  • ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ
  • ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ
  • ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ
  • ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ
  • ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ
  • ಸಿಂಹಾದ್ರಿ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹ
  • ಹುಳಿಯಾರು ಪ.ಪಂ ಕಸ ವಿಲೇವಾರಿ ಘಟಕಕ್ಕೆ ಭೂಮಿ ಮಂಜೂರು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅನುದಾನವನ್ನು ಫೆಬ್ರುವರಿ ಮಾಹೆಯೊಳಗೆ ಸದ್ಭಳಕೆ ಮಾಡಿ: ಸಿಇಓ ಅನೀಸ್ ಕಣ್ಮಣಿ ಜಾಯ್
ತುಮಕೂರು ಜಿಲ್ಲಾ ಸುದ್ಧಿಗಳು

ಅನುದಾನವನ್ನು ಫೆಬ್ರುವರಿ ಮಾಹೆಯೊಳಗೆ ಸದ್ಭಳಕೆ ಮಾಡಿ: ಸಿಇಓ ಅನೀಸ್ ಕಣ್ಮಣಿ ಜಾಯ್

By News Desk BenkiyabaleUpdated:December 13, 2018 4:22 pm

 ತುಮಕೂರು:

      ಜಿಲ್ಲಾ ಪಂಚಾಯತಿಯ ಲಿಂಕ್ ಡಾಕ್ಯೂಮೆಂಟ್‍ನಡಿ ಬಿಡುಗಡೆಯಾಗುವ ಅನುದಾನವನ್ನು ಮುಂಬರುವ 2019ರ ಫೆಬ್ರುವರಿ ಮಾಹೆಯ ಅಂತ್ಯದ ಒಳಗೆ ಸದ್ಭಳಕೆ ಮಾಡುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ನವೆಂಬರ್ ಅಂತ್ಯದ ಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಲಿಂಕ್ ಡಾಕ್ಯೂಮೆಂಟ್ ಅನುದಾನವನ್ನು ಸದ್ಭಳಕೆ ಮಾಡಿಕೊಂಡು ಪ್ರಗತಿಯನ್ನು ಡಿ.ಎಸ್.ಸಾಫ್ಟ್‍ವೇರ್‍ನಲ್ಲಿ ಅಪ್‍ಲೋಡ್ ಮಾಡಬೇಕಾಗುತ್ತದೆ. ಈ ಪ್ರಗತಿಯನ್ನು ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ಮಾಡುತ್ತಿದ್ದು, ತುಮಕೂರು ಜಿಲ್ಲೆ ಶೇ. 49ರಷ್ಟು ಮಾತ್ರ ಪ್ರಗತಿಯಾಗಿದೆ. ಇದು ಜಿಲ್ಲಾ ಪಂಚಾಯತಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದರು.

      ಸಹಕಾರ, ಸಣ್ಣ ನೀರಾವರಿ, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳು ಅನುದಾನ ಬಳಕೆಯ ಪ್ರಗತಿಯಲ್ಲಿ ಕುಂಠಿತವಾಗಿರುವುದು ಕಂಡು ಬಂದಿದೆ. ಅನುದಾನ ಸದ್ಭಳಕೆ ಮಾಡಿಕೊಂಡು ಪ್ರಗತಿಯಾಗಿದ್ದರೆ ಡಿ.ಎಸ್.ಸಾಫ್ಟ್‍ವೇರ್‍ನಲ್ಲಿ ಅಪ್‍ಡೇಟ್ ಮಾಡದಿರುವ ಇಲಾಖೆಗಳು ಎರಡು ದಿನದೊಳಗೆ ಅಪ್‍ಡೇಟ್ ಮಾಡುವಂತೆ ಅವರು ಸೂಚಿಸಿದರು.

Displaying DSC_0693.JPG

      ಕೆ.ಡಿ.ಪಿ.ಸಭೆ ನಡೆಯುವ ದಿನಾಂಕಕ್ಕಿಂತ ಒಂದು ವಾರ ಮುಂಚಿತವಾಗಿ ಲಿಂಕ್ ಡಾಕ್ಯೂಮೆಂಟ್‍ನ ಪ್ರಗತಿಯ ಬಗ್ಗೆ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಯೋಜನಾಧಿಕಾರಿ ಬಾಲರಾಜು ಅವರಿಗೆ ಸೂಚನೆ ನೀಡಿದ ಸಿಇಓ ಅವರು, ಅನುಪಾಲನಾ ವರದಿಯನ್ನು ಜಿಲ್ಲಾ ಪಂಚಾಯತಿಗೆ ನೀಡುವಾಗ ಖುದ್ದು ಅಧಿಕಾರಿಗಳೇ ಪರಿಶೀಲಿಸಿ ವರದಿ ನೀಡುವಂತೆ ನಿರ್ದೇಶನ ನೀಡಿದರು.

      ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಪಿ.ಆರ್.ಐ.ಡಿ. ಹಾಗೂ ಇನ್ನೂ ಇತರೆ ಏಜೆನ್ಸಿಗಳು ಶಾಲೆಗಳ ದುರಸ್ತಿ ಕಾಮಗಾರಿಗಳನ್ನು ನಿಗಧಿತ ಸಮಯಕ್ಕೆ ಪೂರ್ಣಗೊಳಿಸುವಂತೆ ಅವರು ಸೂಚನೆ ನೀಡಿದರು. ತಿಪಟೂರಿನ 5 ಗ್ರಾಮಗಳಿಗೆ ಹಾಗೂ ಪಾವಗಡ ತಾಲ್ಲೂಕಿನ 2 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದು, ಮುಂದೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಮಸ್ಯಾತ್ಮಕ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, 194.83ಕೋಟಿ ರೂ.ಗಳ ಅನುದಾನ ಬಿಡುಗಡೆಯಾಗಿದ್ದು, 3674 ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಇಂಜಿನಿಯರಿಂಗ್ ವಿಭಾಗದ ಇಂಜಿನಿಯರುಗಳು ಸಭೆಗೆ ಮಾಹಿತಿ ನೀಡಿದರು.

      ತುಮಕೂರು ಜಿಲ್ಲೆಯಲ್ಲಿರುವ ನಕಲಿ ವೈದ್ಯರು/ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ವ್ಯಾಪಕ ಪ್ರಚಾರ ಕೈಗೊಳ್ಳುವಂತೆ ಹಾಗೂ ಕೂಡಲೇ ಈ ಆಸ್ಪತ್ರೆಗಳಿಗೆ ಬೀಗಮುದ್ರೆ ಹಾಕುವಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ನಾರಾಯಣ ಮೂರ್ತಿ ಡಿಎಚ್‍ಓ ಅವರಿಗೆ ಸೂಚನೆ ನೀಡಿದರು.

Displaying DSC_0714.JPG

      ಇದಕ್ಕೆ ಪ್ರತಿಕ್ರಿಯಿಸಿದ ಡಿಹೆಚ್‍ಓ ಡಾ: ಚಂದ್ರಿಕಾರವರು ಸಿರಾ, ಮಧುಗಿರಿ, ಪಾವಗಡ, ಕೊರಟಗೆರೆ ಸೇರಿದಂತೆ ಜಿಲ್ಲೆಯಲ್ಲಿರುವ ನಕಲಿ ವೈದ್ಯರು/ ಆಸ್ಪತ್ರೆ ಪತ್ತೆ ಹಚ್ಚಿ ಮಾಧ್ಯಮಗಳಲ್ಲಿ ಪ್ರಚಾರ ನೀಡಲಾಗಿದೆ. ಆಸ್ಪತ್ರೆಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು.

      ರೈತರ ಬೆಳೆವಿಮೆಯ ಬಿಡುಗಡೆಯ ಬಗ್ಗೆ ಚರ್ಚಿಸಿ ಸರ್ಕಾರಕ್ಕೆ ವರದಿ ನೀಡುವ ಸಂಬಂಧ ಬರುವ ಸೋಮವಾರ ಸಿಇಓ ಅಧ್ಯಕ್ಷತೆಯಲ್ಲಿ ಬ್ಯಾಂಕ್‍ಗಳ ಹಾಗೂ ವಿಮಾ ಕಂಪನಿಗಳ ಸಭೆಯನ್ನು ಕರೆಯಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

     ಜಿಲ್ಲೆಯಲ್ಲಿ ಬರಗಾಲವಿರುವುದರಿಂದ ಮೇವು ಬ್ಯಾಂಕ್‍ಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದ್ದು, ಕೊರಟಗೆರೆ ತಾಲ್ಲೂಕಿನಲ್ಲಿ 4 ಸ್ಥಳದಲ್ಲಿ, ಪಾವಗಡ 2 ಸ್ಥಳಗಳು ಸೇರಿದಂತೆ ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿ ಮೇವು ಬ್ಯಾಂಕ್ ಸ್ಥಾಪಿಸಲು ಸ್ಥಳ ಗುರುತಿಸಿದೆ ಎಂದು ಪಶು ವೈದ್ಯ ಇಲಾಖೆಯ ಡಾ: ಪ್ರಕಾಶ್‍ರವರು ತಿಳಿಸಿದರು.

Displaying DSC_0681.JPG

      ಜಿಲ್ಲಾ ಪಂಚಾಯತಿಯಿಂದ ಬಿಡುಗಡೆಯಾಗಿರುವ ಎಲ್ಲಾ ಅನುದಾನವನ್ನು ಫೆಬ್ರವರಿ ಮಾಹೆಯ ಒಳಗೆ ಸದ್ಭಳಕೆ ಮಾಡಿಕೊಳ್ಳಿ, ಸರ್ಕಾರಕ್ಕೆ ವಾಪಸ್ ಹೋಗಲು ಅವಕಾಶ ನೀಡಬೇಡಿ ಎಂದು ಜಿಲ್ಲಾ ಪಂಚಾಯತಿಯ ಅಧ್ಯಕ್ಷೆ ಲತಾ ರವಿಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಬರಗಾಲದ ಹಿನ್ನಲೆಯಲ್ಲಿ ಹೇಮಾವತಿ ನಾಲೆಯಿಂದ ಬರುವ ನೀರನ್ನು ಕೆರೆಗಳಿಗೆ ತುಂಬಿಸಲು ಹೆಚ್ಚಿನ ಆಧ್ಯತೆ ನೀಡಿ. ಇಲ್ಲದಿದ್ದರೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ ಎಂದು ಜಿಲ್ಲಾ ಪಂಚಾಯತಿಯ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅವರು ಹೇಮಾವತಿ ನಾಲಾ ಇಂಜಿನಿಯರ್‍ಗಳಿಗೆ ನಿರ್ದೇಶನ ನೀಡಿದರು.

      ಸಭೆಯಲ್ಲಿ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಡಾ: ನವ್ಯಬಾಬು, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಅಕ್ಕಮಹಾದೇವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶನ ಸದಸ್ಯ ಪಿ.ಯು. ದಿನೇಶ್ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

(Visited 29 times, 1 visits today)
Previous Articleಮಕ್ಕಳ ಪ್ರತಿಭೆಯನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ
Next Article ವಕೀಲರು ನಾವು ಹೇಳುವುದೆಲ್ಲಾ ಸತ್ಯಾ ಎಂಬ ಭ್ರಮೆಯಲ್ಲಿರಬಾರದು
News Desk Benkiyabale

Related Posts

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm news
ತಾಜಾ ಸುದ್ಧಿಗಳು
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm
news

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm
news

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm
news

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
news

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
news

ಕುಡಿಯುವ ನೀರಿನ ಸಮಸ್ಯೆ: ಪರ್ಯಾಯ ಮೂಲಗಳನ್ನು ಗುರುತಿಸಲು ಜಿಲ್ಲಾಧಿಕಾರಿ ಸೂಚನೆ

September 23, 2026 5:51 pm
Our Youtube Channel
Our Picks

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

September 24, 2026 6:21 pm

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm

ನಿರಂತರ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಡಿಸಿ ಸೂಚನೆ

September 23, 2026 5:52 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನಾಗರಕಟ್ಟೆ ಗಣಪತಿ: ಅ. ೩ರಂದು ವಿಸರ್ಜನಾ ಮಹೋತ್ಸವ

By News Desk BenkiyabaleSeptember 24, 2026 6:21 pm

ತುಮಕೂರು: ನಗರದ ಬಿಜಿಎಸ್ ವೃತ್ತದ ನಾಗರಕಟ್ಟೆ ಗಣಪತಿ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿಯ ವಿಸರ್ಜನಾ ಮಹೋತ್ಸವದ ಶೋಭಾಯಾತ್ರೆ ಅಕ್ಟೋಬರ್…

ವಿಹೆಚ್‌ಪಿ, ಭಜರಂಗದಳ ಹಿಂದೂಗಣಪತಿ ಶೋಭಾಯಾತ್ರೆ

September 24, 2026 6:20 pm

ವಿದ್ಯುತ್ ಬೆಳಕನ್ನು ಕಾಣದೆ ಬದುಕುತ್ತಿರುವ ಅಲೆಮಾರಿ ದಕ್ಕಲಿಗ ಸಮುದಾಯ

September 24, 2026 6:18 pm

ಅ.೨೩ರಂದು ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ

September 24, 2026 6:16 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.