BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಹೊಂದಿಕೊಳ್ಳಿ
ಇತರೆ ಸುದ್ಧಿಗಳು

ವಿದ್ಯಾರ್ಥಿಗಳು ತಂತ್ರಜ್ಞಾನಕ್ಕೆ ಹೊಂದಿಕೊಳ್ಳಿ

By News Desk BenkiyabaleUpdated:December 03, 2022 5:08 pm

ತುಮಕೂರು


ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಮತ್ತು ಮಾರುಕಟ್ಟೆಯ ಅಗತ್ಯತೆಗೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಚಾಣಾಕ್ಷತೆಯನ್ನು ತೋರಬೇಕಿದೆ ಎಂದು ಮಹಿಂದ್ರಾ ಮತ್ತು ಮಹಿಂದ್ರಾ ರೀಸರ್ಚ್ ವ್ಯಾಲಿಯ ಉಪಾಧ್ಯಕ್ಷ ಡಾ.ಶಂಕರ್ ವೇಣುಗೋಪಾಲ್ ಹೇಳಿದ್ದಾರೆ.
ನಗರದ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ಆಯೋಜಿಸಿದ್ದ 13ನೇ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಸೃಜನಶೀಲ ಮೆದುಳಿಗೆ ನಿಯಂತ್ರಣವನ್ನು ನೀಡಿ, ಊಹೆಗಳಿಗೆ ಸವಾಲೊಡ್ಡಿ ಎಂದು ಹೇಳಿದರು.
ವಿದ್ಯಾರ್ಥಿಗಳು ವಿಭಿನ್ನ ಆಲೋಚನೆಗಳಿಗೆ ಸಾಕಷ್ಟು ಸಮಯವನ್ನು ನೀಡಿ ಮುನ್ನಡೆಯಬೇಕಿದೆ.ಆರಂಭಿಕ ನಿಬರ್ಂಧಗಳನ್ನು ಗುರುತಿಸಿ, ಸರಿಯಾದ ದಿಕ್ಕಿನಲ್ಲಿ ಕಲ್ಪನೆಯನ್ನು ರೂಪಿಸಲು ಪರಿಪಕ್ವ ಜ್ಞಾನವನ್ನು ಬಳಸಿ.ನಾವೀನ್ಯತೆಯೆಂಬುದು ಒಳನೋಟವುಳ್ಳ ಮೌಲ್ಯವನ್ನು ಸೃಷ್ಟಿಸುತ್ತದೆ ಮತ್ತು ನಿಮ್ಮ ಆಲೋಚನೆಗಳನ್ನು ಯಶಸ್ವಿಯಾಗಿ ಮಾರುಕಟ್ಟೆಗೆ ತರುತ್ತದೆ ಎಂದು ಇಂಜಿನಿಯರಿಂಗ್ ಪದವಿಧರರಿಗೆ ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮೀಜಿ ಮಾತನಾಡಿ,ಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ದೇಶದ ಸರಾಸರಿಗಿಂತಲೂ ಹೆಚ್ಚು ಅಂದರೆ ಶೇ39ರಷ್ಟು ಹೆಣ್ಣು ಮಕ್ಕಳು ಕಲಿಯುವ ಮೂಲಕ 12ನೇ ಶತಮಾನದ ಬಸವಣ್ಣನವರ ಅನುಭವ ಮಂಟಪದ ಮಹಿಳಾ ಸಬಲೀಕರಣದ ಕನಸನ್ನು ನನಸು ಮಾಡಲು ಮಾಡಿದ್ದಾರೆ ಎಂದು ತಿಳಿಸಿದರು.
ಲಿಂಗ, ಜಾತಿ,ಧರ್ಮ,ವರ್ಗ,ವರ್ಣ ಭೇಧವಿಲ್ಲದೆ ಎಲ್ಲರಿಗೂ ಅಡಳಿತದಲ್ಲಿ ಅವಕಾಶ ದೊರೆಯುಬೇಕು ಎಂಬ ಬಸಣ್ಣವನರ ಆಶಯ ವನ್ನು ಲಿಂಗೈಕ್ಯ ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಆಶೀರ್ವಾದದಿಂದ ಸಾಧ್ಯವಾಗಿದೆ.ಭಾರತದ ಸರಾಸರಿಯಲ್ಲಿ ಶೇ20ರಷ್ಟು ಹೆಣ್ಣು ಮಕ್ಕಳು ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಷಯಗಳನ್ನು ಕಲಿಯುತಿದ್ದರೆ, ಎಸ್.ಐ.ಟಿ.ಯಲ್ಲಿ ಶೇ39ರಷ್ಟು ಹೆಣ್ಣು ಮಕ್ಕಳು ಇಂಜಿನಿಯರಿಂಗ್ ಶಿಕ್ಷಣ ಪಡೆಯುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಉದ್ಯೋಗಾವಕಾಶಗಳಲ್ಲಿಯೂ ಎಸ್.ಐ.ಟಿ ಮುಂದಿದ್ದು, ಕಳೆದ ವರ್ಷ 1400 ವಿದ್ಯಾರ್ಥಿಗಳು ಪ್ಲೆಸ್‍ಮೆಂಟ್ ಕ್ಯಾಂಪಸ್ ಸೆಲಕ್ಷನ್ ನಲ್ಲಿ ಆಗಿದೆ. ವಾರ್ಷಿಕ 46 ಲಕ್ಷ ರೂಗಳ ವೇತನ ಪಡೆದಿರುವುದು ಹೆಮ್ಮೆಯ ವಿಚಾರ.ಭಾರತ ಯುವಜನತೆಯನ್ನೇ ಹೆಚ್ಚಾಗಿ ಹೊಂದಿರುವ ದೇಶ.ದೇಶದ ಒಟ್ಟಾರೆ ಜನಸಂಖ್ಯೆಯ ಶೇ65ರಷ್ಟು ಜನರು 35 ವರ್ಷದ ಒಳಗಿನ ಯುವಕರಾಗಿದ್ದಾರೆ.ಪ್ರಧಾನಿ ನರೇಂದ್ರಮೋದಿ ಅವರ ಆಶಯದಂತೆ ಈ ಯುವ ಶಕ್ತಿ ದೇಶ ಕಟ್ಟುವಲ್ಲಿ ಬಳಕೆಯಾಗಬೇಕೆಂಬುದು ನಮ್ಮ ಆಶಯವಾಗಿದೆ. ಸಂಶೋಧನೆ ಮತ್ತು ಉದ್ದಿಮೆ ಸ್ಥಾಪನೆ ಭಾರತದ ಅರ್ಥಿಕ ಬೆಳವಣಿಗೆ ಮತ್ತು ದೇಶದ ಸುಸ್ಥಿರ ಅಭಿವೃದ್ದಿಗೆ ಸಹಕಾರಿ ಯಾಗಲಿದೆ.ಸಂಶೋಧನೆ,ಉದ್ದಿಮೆ ಸ್ಥಾಪನೆಗೆ ಪೂರಕವಾಗಿರಬೇಕು ಎಂಬ ಕಾರಣಕ್ಕೆ ಶಿಕ್ಷಣ ಮತ್ತು ಕೈಗಾರಿಕೆಗಳನ್ನು ಒಗ್ಗೂಡಿ ಸುವ ಕೆಲಸ ನಡೆಯುತ್ತಿದೆ ಎಂದು ಸ್ವಾಮೀಜಿ ನುಡಿದರು.
ಇಂದು ನಡೆದ 13ನೇ ಪದವಿ ಪ್ರಧಾನ ಸಮಾರಂಭದಲ್ಲಿ 911 ಬಿ.ಇ,337 ಎಂ.ಟೆಕ್ ವಿಧ್ಯಾರ್ಥಿಗಳು ಪದವಿ ಆರ್ಹತಾ ಪತ್ರ ಪಡೆದಿದ್ದು, ಎಸ್.ಐ.ಟಿ ಹಾಗೂ ದಾನಿಗಳು ನೀಡಿರುವ ಸುಮಾರು 60 ಚಿನ್ನದ ಪದಕಗಳನ್ನು 31 ಜನ ವಿದ್ಯಾರ್ಥಿಗಳು ಪಡೆದಿದ್ದು, 12 ಪುರುಷರು ಮತ್ತು 22 ಜನ ಮಹಿಳೆಯರು ಹಂಚಿಕೊಂಡಿದ್ದಾರೆ. ಬಯೋಟೆಕ್ನಾಲಿಜಿಯ ವಿದ್ಯಾರ್ಥಿನಿ ಅತಿ ಹೆಚ್ಚು ಅಂಕ ಪಡೆದು, ಡಾ.ಶ್ರೀಶಿವಕುಮಾರಸ್ವಾಮೀಜಿಗಳ ಚಿನ್ನದ ಪದಕ ಪಡೆದಿದ್ದಾರೆ.
ವೇದಿಕೆಯಲ್ಲಿ ಎಸ್.ಐ.ಟಿ. ನಿರ್ದೇಶಕ ಡಾ.ಎಂ.ಎನ್.ಚನ್ನಬಸಪ್ಪ, ಸಿಇಓ ಡಾ.ಶಿವಕುಮಾರಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ವಿ.ದಿನೇಶ್ ಹಾಗೂ ಎಸ್.ಐ.ಟಿ ಕಾಲೇಜಿನ ಎಲ್ಲಾ ವಿಷಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಈ ಬಾರಿ ಸುಧಾಕರ್ ಲಾಲ್ ಗೆಲ್ಲುತ್ತಾರೆ : ಎಚ್ ಡಿ ಕೆ
Next Article ಸಂಸ್ಕಾರದ ಚೌಕಟ್ಟಿನಲ್ಲಿ ಪ್ರತಿಭೆಯನ್ನು ಪೋಷಿಸಿ : ಡಾ. ಪ್ರಶಾಂತ ನಾಯಕ್
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.