BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ
  • ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ
  • ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್
  • ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ
  • ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ
  • ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ
  • ಡಾ.ಶಿವಕುಮಾರ ಶ್ರೀಗಳ ಪುಣ್ಯಸಂಸ್ಮರಣೆ: ದಾಸೋಹದಿನ ಆಚರಣೆ
  • ರೇಷ್ಮೆ ಕೃಷಿ ಬೆಳಗಾರರ ಗುಂಪು ಸಭೆ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸುರೇಶ್‍ಗೌಡರ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಮುಖ್ಯಮಂತ್ರಿ
ಇತರೆ ಸುದ್ಧಿಗಳು

ಸುರೇಶ್‍ಗೌಡರ ಗೆಲುವು ತಡೆಯಲು ಯಾರಿಂದಲೂ ಸಾಧ್ಯವಿಲ್ಲ : ಮುಖ್ಯಮಂತ್ರಿ

By News Desk BenkiyabaleUpdated:December 07, 2022 5:25 pm

ತುಮಕೂರು

ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮಾಜಿ ಶಾಸಕ ಸುರೇಶ್‍ಗೌಡ ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಹೇಳಿದರು.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಬಿ. ಸುರೇಶ್‍ಗೌಡ ಅವರು ನಿರ್ಮಿಸಿರುವ ಗ್ರಾಮಾಂತರ ಬಿಜೆಪಿ ಕಚೇರಿ ಶಕ್ತಿಸೌಧವನ್ನು ಉದ್ಘಾಟಿಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ. ವಿಶಿಷ್ಟವಾದ ವ್ಯಕ್ತಿತ್ವ ಹೊಂದಿರುವ ಸುರೇಶ್‍ಗೌಡ ಅವರು ಶಾಶ್ವತವಾಗಿ ಶಾಸಕರಾಗುವಂತಹ ಕೆಲಸವನ್ನು ಈ ಕ್ಷೇತ್ರದಲ್ಲಿ ಮಾಡಿದ್ದಾರೆ ಎಂದರು.

ಸ್ವಚ್ಛವಾದ ಹೃದಯ, ಕೊಟ್ಟ ಮಾತಿನಂತೆ ನಡೆಯುವ ಧೀಮಂತಿಕೆ ಸುರೇಶ್‍ಗೌಡ ಅವರಲ್ಲಿದೆ. ಅವರು ಮಾಡಿರುವ ಕೆಲಸ ನೋಡಿದರೆ 2008 ರಿಂದ 13 ರವರೆಗೆ ಅವರು ಶಾಶ್ವತ ಶಾಸಕರಾಗುವ ಕೆಲಸ ಮಾಡಿದ್ದಾರೆ. ವಿದ್ಯುತ್ ಶಕ್ತಿ ಗ್ರಿಡ್, ಶಾಲೆಗಳು, ರೈತರಿಗೆ ಉಪಯುಕ್ತವಾಗುವ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪರಿವರ್ತಕ ಅಳವಡಿಕೆ ಸೇರಿದಂತೆ ಸರ್ಕಾರದ ಕಾರ್ಯಕ್ರಮವನ್ನು ಜನರಿಗೆ ಮುಟ್ಟಿಸುವ ಹಂಬಲ ಅವರಿಗಿದೆ ಎಂದರು. ತಾತ್ಕಾಲಿಕವಾಗಿ ಅವರು ವಿಧಾನಸೌಧದಲ್ಲಿ ಇರದಿದ್ದರೂ ಕ್ಷೇತ್ರದ ಪ್ರತಿಯೊಬ್ಬ ಮತದಾರನ ಮನದಲ್ಲಿದ್ದಾರೆ. ಸೋತರೂ ಮನೆಯಲ್ಲಿ ಕುಳಿತಿಲ್ಲ ಎಂದು ಅವರು ಹೇಳಿದರು.

ಜನಸಾಮಾನ್ಯರಿಗೆ ಜನಪ್ರಿಯ ಶಾಸಕರು ಬೇಕಿಲ್ಲ. ಜನೋಪಯೋಗಿ ಶಾಸಕರು ಬೇಕು. ಚುನಾವಣೆ ಮುಗಿಯುವ ಮುನ್ನವೇ ಜನಪ್ರಿಯ ಶಾಸಕರಾಗಿರುತ್ತಾರೆ. ಇಪ್ಪತ್ತೈದು ಸಾವಿರ ಅಂತರದಲ್ಲಿ ಸುರೇಶ್‍ಗೌಡ ಗೆಲ್ಲುತ್ತಾರೆ. ಇದನ್ನು ತಡೆಯಲು ಯಾರಿಗೂ ಶಕ್ತಿ, ತಾಕತ್ ಇಲ್ಲ ಎಂದರು.

ಅಭಿವೃದ್ಧಿ ಚಕ್ರ ನಿರಂತರವಾಗಿ ತಿರುಗಬೇಕು. ನಿಮ್ಮ ಬದುಕಿನ ಗುಣಮಟ್ಟ ಹೆಚ್ಚಾಗಬೇಕು. ಸರ್ಕಾರದ ಯೋಜನೆ ಕಟ್ಟಕಡೆಯ ವ್ಯಕ್ತಿಗೂ ಮುಟ್ಟಬೇಕೆಂದರೆ ಸುರೇಶ್‍ಗೌಡರ ಕೈ ಹಿಡಿಯಬೇಕು ಎಂದು ಅವರು ಕರೆ ನೀಡಿದರು.

ದುಡಿಯುವ ವರ್ಗಕ್ಕೆ ಸಹಾಯ ಮಾಡಬೇಕು. ಅವರು ದೇಶವನ್ನು ಕಟ್ಟುತ್ತಾರೆ. ಎಸ್ಸಿ ಎಸ್ಟಿ ಮೀಸಲಾತುಯನ್ನು ಹೆಚ್ಚು ಮಾಡಿದ್ದೇವೆ. ಎಲ್ಲ ವರ್ಗದವರಿಗೂ ವಿಶೇಷವಾದ ಹಣಕಾಸಿನ ಸಹಾಯ ಮಾಡುತ್ತಿದ್ದೇವೆ. ಸ್ತ್ರೀ ಶಕ್ತಿ ಸಂಘಕ್ಕೆ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ ಎಂದರು.

ಮಾಜಿ ಶಾಸಕ ಸುರೇಶ್‍ಗೌಡ ಮಾತನಾಡಿ, ದಿನದ 24 ಗಂಟೆಯೂ ಗ್ರಾಮಾಂತರ ಕ್ಷೇತ್ರ ಜನರಿಗಾಗಿ ನಮ್ಮ ಕಚೇರಿ ತೆರೆದಿರುತ್ತದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಖಡ್ಗ ನೀಡಿ ಗೌರವಿಸಲಾಯಿತು. ನಂತರ ಮುಖ್ಯಮಂತ್ರಿಗಳು ಆ ಖಡ್ಗವನ್ನು ಗ್ರಾಮದೇವತೆಗೆ ಸಮರ್ಪಿಸಿದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಸಚಿವರಾದ ಗೋವಿಂದ ಕಾರಜೋಳ, ಗೋಪಾಲಯ್ಯ, ಬಿ.ಸಿ. ನಾಗೇಶ್, ಶಾಸಕರಾದ ಜ್ಯೋತಿಗಣೇಶ್, ಡಾ. ರಾಜೇಶ್‍ಗೌಡ ಮತ್ತಿತರರು ಉಪಸ್ಥಿತರಿದ್ದರು.

(Visited 6 times, 1 visits today)
tumkur turuvekere
Previous Articleಡಿ.15, 16 : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
Next Article ತುಮಕೂರು ವಿವಿ ನೂತನ ಕಟ್ಟಡ ಉದ್ಘಾಟನೆ
News Desk Benkiyabale

Related Posts

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm
ಇತರೆ ಸುದ್ಧಿಗಳು

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm
ಇತರೆ ಸುದ್ಧಿಗಳು

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm
ಇತರೆ ಸುದ್ಧಿಗಳು

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
ಇತರೆ ಸುದ್ಧಿಗಳು

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
ಇತರೆ ಸುದ್ಧಿಗಳು

ತೆಂಗು ಬೆಳೆ: ಜಾಗೃತಿ ಮೂಡಿಸುವ ಕಾರ್ಯಕ್ರಮದ ವಾಹನಕ್ಕೆ ಶಾಸಕರಿಂದ ಹಸಿರು ನಿಶಾನೆ

January 22, 2026 4:20 pm
Our Youtube Channel
Our Picks

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

January 27, 2026 4:05 pm

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm

ಕೇಂದ್ರದ ವಿಳಂಬ ನೀತಿಗೆ ಪ್ರತಿಭಟನೆ ಅನಿವಾರ್ಯ

January 27, 2026 3:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಗ್ರಾಮೀಣ ಪತ್ರಕರ್ತರಿಗೆ ಆಶ್ರಯ ನಿವೇಶನದ ಭರವಸೆ

By News Desk BenkiyabaleJanuary 27, 2026 4:05 pm

ತುಮಕೂರು: ಜಿಲ್ಲೆಯಾದ್ಯಂತ ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ಸಂದರ್ಭದಲ್ಲಿ ಗ್ರಾಮೀಣಭಾಗದ ಕಾರ್ಯ ನಿರತ ಪತ್ರಕರ್ತರನ್ನು ಪರಿಗಣಿಸುವಂತೆ ಜಿಲ್ಲಾಧಿಕಾರಿಗೆ ಜಿಲ್ಲಾ ಉಸ್ತುವಾರಿ…

ಬ್ರಿಟಿಷರ ವಿರುದ್ಧ ಹೋರಾಡಿ ಪ್ರಾಣಾರ್ಪಣೆ ಮಾಡಿದ ವೀರರನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ: ಬಿ.ಕೆ.ಸಪ್ತಶ್ರೀ ಹೇಳಿಕೆ

January 27, 2026 4:02 pm

ಸಂವಿಧಾನದ ಆಶಯಗಳನ್ನು ಬದಿಗೊತ್ತಿ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ: ಶಾಸಕ ವೆಂಕಟೇಶ್

January 27, 2026 3:59 pm

ಕಾಸ್ಮೋಪಾಲಿಟನ್ ಕ್ಲಬ್‌ವತಿಯಿಂದ ನಿವೃತ್ತ ಯೋಧರಿಗೆ ಸನ್ಮಾನ

January 27, 2026 3:57 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.