BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ
  • ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ
  • ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ
  • ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ
  • ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್
  • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ
  • ದುಶ್ಚಟಕ್ಕೆ ದಾಸರಾಗದಿರಿ, ಸಮಾಜದ ಜವಾಬ್ದಾರಿ ಹೊರಿ
  • ತುಮಕೂರಿನಲ್ಲಿ ಜೂನ್ ೨೬ರಿಂದ ಸಾಹಿತ್ಯದ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶ
ಇತರೆ ಸುದ್ಧಿಗಳು

ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶ

By News Desk BenkiyabaleUpdated:February 18, 2023 4:50 pm

ತುಮಕೂರು


ಜಿಲ್ಲೆಯಲ್ಲಿ ಫೆಬ್ರವರಿ ಅಂತ್ಯಕ್ಕೆ ಫಲಾನುಭವಿಗಳ ಸಮಾವೇಶವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಸಮಾವೇಶ ಕಾರ್ಯಕ್ರಮವನ್ನು ನಡೆಸಲಾಗುವುದು. ಸಮಾವೇಶದಲ್ಲಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಸೌಲಭ್ಯಗಳನ್ನು ನೀಡಲಾಗುವುದು ಎಂದರು.
ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ, ರೇಷ್ಮೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮೀನುಗಾರಿಕೆ, ಕಾರ್ಮಿಕ ಇಲಾಖೆಗಳು ಸೇರಿದಂತೆ ವಿವಿಧ ನಿಗಮಗಳು ನೀಡುವ ಸಾಲ-ಸಹಾಯಧನ, ರೈತ ವಿದ್ಯಾನಿಧಿ, ವಿದ್ಯಾಸಿರಿ, ಗಂಗಾ ಕಲ್ಯಾಣ, ವಿದ್ಯಾರ್ಥಿವೇತನ, ಪಿಎಂ ಕಿಸಾನ್, ಪ್ರೋತ್ಸಾಹಧನ, ಕಾನೂನು ತರಬೇತಿ ಹಾಗೂ ಮತ್ತಿತರ ಸೌಲಭ್ಯಗಳಿಗಾಗಿ ಫಲಾನುಭವಿಗಳ ಆಯ್ಕೆ ಬಾಕಿಯಿದ್ದಲ್ಲಿ ಕೂಡಲೇ ಆಯ್ಕೆ ಮಾಡಿ ಇಲಾಖಾವಾರು ಪಟ್ಟಿಯನ್ನು ತುರ್ತಾಗಿ ಸಲ್ಲಿಸಬೇಕು ಎಂದು ಸೂಚಿಸಿದರು.
ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲು ಫೆಬ್ರವರಿ ಮಾಹೆಯಲ್ಲಿ ಜಿಲ್ಲೆಗೆ ಭೇಟಿ ನೀಡುವ ನಿರೀಕ್ಷೆಯಿದ್ದು, ನಗರದಲ್ಲಿ ಉದ್ಘಾಟನೆಗೆ ಸಿದ್ಧಗೊಂಡಿರುವ ಕಟ್ಟಡ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮಾತನಾಡಿ ಇಲಾಖಾಧಿಕಾರಿಗಳು ನಿಗಧಿತ ನಮೂನೆಯಲ್ಲಿ 2022-23ನೇ ಸಾಲಿಗೆ ಸಂಬಂಧಿಸಿದಂತೆ ತಮ್ಮ ಇಲಾಖೆಗೆ ನಿಗಧಿಯಾಗಿ ಈವರೆಗೂ ಫಲಾನುಭವಿಗಳನ್ನು ಆಯ್ಕೆ ಮಾಡದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕೂಡಲೇ ಆರ್ಥಿಕ ವಿವರ ಸೇರಿದಂತೆ ಮಾಹಿತಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಮಾತನಾಡಿ ಜಿಲ್ಲೆಯಲ್ಲಿ ಮಾರ್ಚ್ 3, 4 ಮತ್ತು 5ರಂದು ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಮಂತ್ರಿಗಳು ಕ್ರೀಡಕೂಟವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರಲ್ಲದೆ, 24 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ 6000 ಮಹಿಳಾ ಕ್ರೀಡಾಪಟುಗಳು ಸೇರಿದಂತೆ ಸುಮಾರು 10,000 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಪಟುಗಳ ವಾಸ್ತವ್ಯಕ್ಕಾಗಿ ಜಿಲ್ಲಾ ಕ್ರೀಡಾಂಗಣ, ವಿಶ್ವವಿದ್ಯಾನಿಲಯ, ಎಸ್‍ಎಸ್‍ಐಟಿ, ಎಸ್‍ಐಟಿ ಕಾಲೇಜು ಸೇರಿದಂತೆ ಸರ್ಕಾರಿ ಜೂನಿಯರ್ ಕಾಲೇಜನ್ನು ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೃಷಿ, ತೋಟಗಾರಿಕೆ, ರೇಷ್ಮೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ವಿಕಲಚೇತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಪಶು ಸಂಗೋಪಾನಾ, ಕಾರ್ಮಿಕ ಇಲಾಖೆ, ವಿವಿಧ ನಿಗಮಗಳು, ಜಿಲ್ಲಾ ಪಂಚಾಯತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)
tumkur
Previous Articleಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧು ವಿಚಾರಣೆಯ ಆದೇಶವನ್ನು ಕಾಯ್ದಿರಿಸಿದೆ ಹೈಕೋರ್ಟ್
Next Article ಫೆ.28 : ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರಾ ಮಹೋತ್ಸವ
News Desk Benkiyabale

Related Posts

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm news

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm news

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm news
ತಾಜಾ ಸುದ್ಧಿಗಳು

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm

ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ: ಸಿಇಒ

June 25, 2026 5:38 pm
Our Youtube Channel
Our Picks

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

June 27, 2026 5:34 pm

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm

ಕೊಲೆ ಆರೋಪಿಗಳು ಕೇರಳದಲ್ಲಿ ಅರೆಸ್ಟ್

June 26, 2026 5:28 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಗುರಿ, ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ

By News Desk BenkiyabaleJune 27, 2026 5:34 pm

ತುಮಕೂರು: ಮನುಷ್ಯನಿಗೆಗುರಿ ಮತ್ತು ಛಲ ಇದ್ದರೆ ಸಮಾಜದಲ್ಲಿ ಮೇಲೆ ಬರಲು ಸಾಧ್ಯ ಎಂದು ಮಾಜಿ ಸಚಿವ, ಮಧುಗಿರಿ ಕ್ಷೇತ್ರದ ಶಾಸಕ…

ಕೊರಟಗೆರೆ ಕ್ಷೇತ್ರದಿಂದ ೨೦೨೮ಕ್ಕೆ ಸ್ಪರ್ಧಿಸುತ್ತೇನೆ: ಪಿ.ಎನ್.ಕೃಷ್ಣಮೂರ್ತಿ

June 27, 2026 5:32 pm

ಎಸ್‌ಐಆರ್ ಬಗ್ಗೆ ವಿರೋಧ ಪಕ್ಷದ ಆರೋಪಗಳು ಸರಿಯಲ್ಲ

June 27, 2026 5:29 pm

ಕೆಂಪೇಗೌಡರ ಜನಪರ ಆಡಳಿತ ಇಂದಿನ ರಾಜಕಾಣಿಗಳಿಗೆ ಮಾದರಿ

June 27, 2026 5:27 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.