BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ
  • ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ
  • ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಇನ್‍ಪ್ಲೂಎನ್‍ಜಾ ಪ್ಲೂ : ಮುನ್ನೆಚ್ಚರಿಕಾ ಕ್ರಮವಹಿಸಿ
ಇತರೆ ಸುದ್ಧಿಗಳು

ಇನ್‍ಪ್ಲೂಎನ್‍ಜಾ ಪ್ಲೂ : ಮುನ್ನೆಚ್ಚರಿಕಾ ಕ್ರಮವಹಿಸಿ

By News Desk BenkiyabaleUpdated:March 20, 2023 3:23 pm

ತುಮಕೂರು


ಭಾರತದಲ್ಲಿ ಋತುಮಾನದ ಇನ್‍ಪ್ಲೂಎನ್‍ಜಾ ಪ್ಲೂ ಜ್ವರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇನ್‍ಪ್ಲೂಎನ್‍ಜಾ ನಿಯಂತ್ರಣ ಹಾಗೂ ತಡೆಗಟ್ಟುವ ಚಟುವಟಿಕೆಗಳನ್ನು ಹೆಚ್ಚಿಸುವಂತೆ ಹಾಗೂ ಜಿಲ್ಲೆಯ ಸಾರ್ವಜನಿಕರಲ್ಲಿ ಫ್ಲೂ ಕುರಿತ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವಂತೆ ತುಮಕೂರು ಡಿಹೆಚ್‍ಓ ಮತ್ತು ಟಿಹೆಚ್‍ಓ ಅವರಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ ರಾಜ್ಯಗಳಲ್ಲಿ ಈ ರೋಗವು ಹರಡುತ್ತಿದ್ದು, ಈ ಸಾಂಕ್ರಾಮಿಕ ರೋಗ ಭಾದಿತ ವ್ಯಕ್ತಿಯು ಕೆಮ್ಮುವಾಗ ಅಥವಾ ಸೀನುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡಬಹುದಾಗಿದ್ದು, ಅದರಲ್ಲೂ 15 ವರ್ಷ ಒಳಗಿನ ಹಾಗೂ 65 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ ಪ್ಲೂ ಬರುವ ಸಾಧ್ಯತೆ ಹೆಚ್ಚಿದ್ದು, ಕೆಮ್ಮು, ನೆಗಡಿ ಇದ್ದವರು ಮಾಸ್ಕ್ ಧರಿಸುಕೊಂಡು, ಸ್ವಚ್ಚತೆ ಕಾಪಾಡಿಕೊಳ್ಳಬೇಕು, ಮುನ್ನೆಚ್ಚರಿಕೆ ವಹಿಸಬೇಕು, ಆರೋಗ್ಯ ಕಾರ್ಯಕರ್ತೆಯರು ಪ್ಲೂ ಲಸಿಕೆಯನ್ನು ಪಡೆಯುವುದನ್ನು ಕಡ್ಡಾಯ ಮಾಡಬೇಕೆಂದು ತಿಳಿಸಿದರು.
ಚುನಾವಣಾ ಸಮೀಪಿಸಿದಂತೆ ಕುಕ್ಕರ್, ಸೀರೆ ಇತರೆ ಉಡುಗೊರೆಗಳನ್ನು ಕೊಡುವುದರ ಮೂಲಕ ಮತದಾರರಿಗೆ ಆಮಿಷವನ್ನೊಡ್ಡಿ ಮತ ಸೆಳೆಯುವ ಪ್ರಯತ್ನ ಮಾಡುವವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು ಹಾಗೂ ವಸ್ತುಗಳನ್ನು ಜಪ್ತಿ ಮಾಡಬೇಕು. ಆರ್‍ಓ ಮತ್ತು ಎಆರ್‍ಓಗಳು ಈ ನಿಟ್ಟಿನಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.
ಯುಡಿಐಡಿ ಕಾರ್ಡ್ ವಿತರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಬಹುತೇಕ ಎಲ್ಲಾ ತಾಲ್ಲೂಕುಗಳಲ್ಲೂ ನಿಗಧಿತ ಗುರಿ ಮುಟ್ಟಲಾಗಿದ್ದು, ಕುಣಿಗಲ್, ಗುಬ್ಬಿ, ಮಧುಗಿರಿ ತಾಲ್ಲೂಕುಗಳ ಅಧಿಕಾರಿಗಳು ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ಸೂಚಿಸಿದರು.
ಆರ್.ಓ., ಎ.ಆರ್.ಓ ಹಾಗೂ ಮುಖ್ಯಾಧಿಕಾರಿಗಳು ಕಡ್ಡಾಯವಾಗಿ ಮತಗಟ್ಟೆಗಳಿಗೆ ಭೇಟಿ ನೀಡಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು, ಸದ್ಯದಲ್ಲೇ ಪ್ರಿಂಟಿಂಗ್ ಪ್ರೆಸ್ ಮತ್ತು ಕೇಬಲ್ ಮಾಲೀಕರ ಸಭೆ ಕರೆದು ನಿಯಮ 171-ಎ ಬಗ್ಗೆ ಮಾಹಿತಿ ನೀಡಬೇಕು. ಪಾವಗಡ,ಸಿರಾ, ಮಧುಗಿರಿ ಗಡಿ ಭಾಗದ ತಾಲ್ಲೂಕುಗಳಲ್ಲಿ ಈಗಾಗಲೇ ಗಡಿ ಸಭೆಗಳನ್ನು ನಡೆಸಿ ಚೆಕ್‍ಪೋಸ್ಟ್‍ಗಳನ್ನು ತೆರೆಯಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಿಗೆ ನಿಯಮಿತವಾಗಿ ಅಧಿಕಾರಿಗಳನ್ನು ನೇಮಿಸುವಂತೆ ಸೂಚಿಸಿದರು.
ಚುನಾವಣಾ ಕಾರ್ಯದ ನಿಮಿತ್ತ ಜಿಲ್ಲೆಗೆ ಆಗಮಿಸುವ ಚುನಾವಣಾ ವೀಕ್ಷಕರು ವಾಸ್ತವ್ಯ ಮಾಡುವ ಐಬಿ, ಲೈಸನ್ ಅಧಿಕಾರಿ, ಸ್ಟೆನೋಗ್ರಾಫರ್, ಗಣಕಯಂತ್ರ ಸೇರಿದಂತೆ ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಬೇಕೆಂದರು.
ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ: ಕೆ. ವಿದ್ಯಾಕುಮಾರಿ ಅವರು ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಮಾಡಬೇಕಿರುವ ಕುರಿತು ಬಿಇಓ ಗಳಿಂದ ಪಟ್ಟಿ ಪಡೆದು ನರೇಗಾ ಕನ್ವರ್‍ಜೆನ್ಸ್ ಅನುದಾನ ಬಳಸಿ ತ್ವರಿತ ಗತಿಯಲ್ಲಿ ಬಾಲಕ ಮತ್ತು ಬಾಲಕಿಯರ ಪ್ರತ್ಯೇಕ ಶೌಚಾಲಯವನ್ನು ಶಾಲಾವರಣದಲ್ಲಿ ನಿರ್ಮಿಸಬೇಕು. ಶೌಚಾಲಯವಿಲ್ಲದ ಮತಗಟ್ಟೆಗಳ ಬಗ್ಗೆ ಪಟ್ಟಿ ಮಾಡಿ ನರೇಗಾ ಅಡಿ ಕಾರ್ಯಯೋಜನೆಯನ್ನು ಸಿದ್ದಪಡಿಸಿ ಸಲ್ಲಿಸಿ, ಅನುಮೋದನೆ ಪಡೆದು ಶೌಚಾಲಯ ನಿರ್ಮಾಣ ಮಾಡುವಂತೆ ಸೂಚಿಸಿದರು.
ಇ.ವಿ.ಎಂ., ವಿವಿಪ್ಯಾಟ್ ಮೂಲಕ ಸಾರ್ವಜನಿಕರಿಗೆ ಮತದಾನದ ಕುರಿತು ಅರಿವು ಮೂಡಿಸುವ ಕೆಲಸ ಜಿಲ್ಲೆಯಲಿ ವ್ಯಾಪಕವಾಗಿ ನಡೆದಿರುತ್ತದೆ. ಇಂದು ಕೊನೆಯ ದಿನವಾಗಿದ್ದು, ವಿವಿಪ್ಯಾಟ್‍ಗಳನ್ನು ಸುರಕ್ಷಿತವಾಗಿ ಸ್ಟ್ರಾಂಗ್ ರೂಮ್‍ನಲ್ಲಿ ಇರಿಸುವಂತೆ ಸೂಚಿಸಿದ ಅವರು, ಎಷ್ಟು ಮಂದಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ ಎಂಬುವುದರ ಕುರಿತು ವರದಿ ನೀಡಬೇಕು ಎಂದರು.
ಈ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ ಅವರು
ಉಪಸ್ಥಿತರಿದ್ದರು.

(Visited 1 times, 1 visits today)
tumkur Tumkur dc yspatil
Previous Articleತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಮಹಿಳಾ ಶಕ್ತಿಪ್ರದರ್ಶನ
Next Article ಇಂದು 3 ಕ್ಷೇತ್ರಗಳಲ್ಲಿ ವಿಜಯ ಸಂಕಲ್ಪ ಯಾತ್ರೆ
News Desk Benkiyabale

Related Posts

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm news
ತಾಜಾ ಸುದ್ಧಿಗಳು
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm
news

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm
news

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
Our Youtube Channel
Our Picks

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

October 03, 2026 5:36 pm

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬೋರ್ ವೆಲ್ ಹೆಚ್ವು ಆಳಕ್ಕೆ ಕೊರೆಯಬೇಕೆಂದು ಗ್ರಾಮಸ್ಥರ ಒತ್ತಾಯ

By News Desk BenkiyabaleOctober 03, 2026 5:36 pm

ತುರುವೇಕೆರೆ: ಗ್ರಾಮಕ್ಕೆ ಕುಡಿಯುವ ನೀರಿಗಾಗಿ ಕೊರೆಯುತ್ತಿದ್ದ ಹೊಸ ಬೋರ್ ವೆಲ್ ನ್ನು ಹೆಚ್ವು ಆಳಕ್ಕೆ ಕೊರೆಯಬೇಕು ಎಂದು ಒತ್ತಾಯಿಸಿ ತಾಲೂಕಿನ…

ಜಿಲ್ಲೆಯಲ್ಲಿ ೧೫೯ ಕೋಟಿ ಬೆಳೆ ನಷ್ಟ: ಕೇಂದ್ರ ತಂಡಕ್ಕೆ ಮನವರಿಕೆ

October 03, 2026 5:35 pm

ಬೃಹತ್ ಮೂರ್ತಿಯ ಮೆರವಣಿಗೆ, ಆಕರ್ಷಕ ಕಲಾ ಪ್ರದರ್ಶನ

October 03, 2026 5:32 pm

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.