BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
  • ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ
  • ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ
  • ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ : 116 ಮಕ್ಕಳಿಗೆ ನಾಮಕರಣ
ಇತರೆ ಸುದ್ಧಿಗಳು

ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ : 116 ಮಕ್ಕಳಿಗೆ ನಾಮಕರಣ

By News Desk BenkiyabaleUpdated:April 01, 2023 4:13 pm

ತುಮಕೂರು

ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಹೆಸರುವಾಸಿಯಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜನ್ಮ ಜಯಂತಿ ಹಾಗೂ ಗುರುವಂದನಾ ಮಹೋತ್ಸವವನ್ನು ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಲಾಯಿತು.
12ನೇ ಶತಮಾನದ ಬಸವಣ್ಣನವರ ತತ್ವಾದರ್ಶಗಳನ್ನು ಚಾಚೂ ತಪ್ಪದೇ ಪಾಲನೆ ಮಾಡುತ್ತಾ ಸಮಾಜದ ಉದ್ಧಾರಕ್ಕೆ ಸದಾ ತುಡಿಯುತ್ತಿದ್ದ ಆಧುನಿಕ ಬಸವಣ್ಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿಗೆ ವಿವಿಧ ಮಠಾಧೀಶರು, ಹರಗುರುಚರಮೂರ್ತಿಗಳು, ಗಣ್ಯಾತಿ ಗಣ್ಯರು ಹಾಗೂ ಲಕ್ಷಾಂತರ ಭಕ್ತರು ಸಾಕ್ಷಿಯಾದರು.
ನಾಡಿನ ಭಕ್ತಾದಿಗಳ ಮನ ಮನೆಗಳ ದೈವೀ ಪ್ರಭೆಯಾಗಿದ್ದ ಲಿಂ. ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯರಾಗಿರುವ ಶಿವಯೋಗಿ ಮಂದಿರದ ಗದ್ದುಗೆಯಲ್ಲಿ ಮುಂಜಾನೆಯಿಂದಲೇ ಧಾರ್ಮಿಕ ವಿಧಿ ವಿಧಾನಗಳು, ಅಭಿಷೇಕ, ಅಷ್ಟೋತ್ತರ, ಮಹಾಮಂಗಳಾರತಿ, ಭಜನಾ ಮಂತ್ರ ಘೋಷಗಳು ಮೊಳಗಿದವು.
ಕಳಸ ಸ್ಥಾಪನೆ
ಶ್ರೀಗಳ 116ನೇ ಜಯಂತಿ ವಿಶೇಷವಾಗಿ ನಸುಕಿನಲ್ಲೇ ಶ್ರೀಕ್ಷೇತ್ರದ ಬೆಟ್ಟದ ಮೇಲೆ ಪುನರ್ ನಿರ್ಮಾಣಗೊಂಡಿರುವ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ದೇವಸ್ಥಾನದ ವಿಮಾನ ಗೋಪುರದ ಮೇಲೆ ಕಳಸ ಸ್ಥಾಪನೆ ಮಾಡಲಾಯಿತು.
ಕಳಸ ಸ್ಥಾಪನೆ ಬಳಿಕ ಶ್ರೀಗಳ ಗದ್ದುಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಹರಗುರುಚರಮೂರ್ತಿಗಳ ಸಮ್ಮುಖದಲ್ಲಿ ರುದ್ರಾಭಿಷೇಕ, 108 ಅಷ್ಟೋತ್ತರ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯ, ಮಹಾಮಂಗಳಾರತಿ ನೆರವೇರಿತು.
ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರು ಪರಮಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಸಮರ್ಪಿಸುವ ಮೂಲಕ ಆಶೀರ್ವಾದ ಪಡೆದರು. ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು ವಿವಿಧ ಬಗೆಯ ಪುಷ್ಪಗಳಿಂದ ಅಲಂಕರಿಸಿದ್ದ ಗದ್ದುಗೆಗೆ ಪುಷ್ಪ ನಮನ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಕಂಚಿನ ಪುತ್ಥಳಿ ಮೆರವಣಿಗೆ
ಗದ್ದುಗೆ ಮಂದಿರದ ಮುಂಭಾಗದಿಂದ ಆರಂಭವಾದ ಶ್ರೀಗಳ ಕಂಚಿನ ಪುತ್ಥಳಿ ಹೊತ್ತ ರುದ್ರಾಕ್ಷಿ ಮಂಟಪದ ಮೆರವಣಿಗೆಗೆ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ಮೆರವಣಿಗೆಯುದ್ಧಕ್ಕೂ ನಂದಿಧ್ವಜ ಕುಣಿತ, ಕರಡಿ ವಾದ್ಯ, ಡೋಲು ಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಗಮನ ಸೆಳೆದವು. ಶ್ರೀಮಠದ ಆವರಣದಲ್ಲಿ ಮೆರವಣಿಗೆಯುದ್ದಕ್ಕೂ ಪೂರ್ಣಕುಂಭ ಕಳಸ ಹೊತ್ತ ಸುಮಂಗಲಿಯರು ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
116 ಮಕ್ಕಳಿಗೆ ನಾಮಕರಣ
ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅನ್ನದಾ ಸೇವಾ ಟ್ರಸ್ಟ್ ವತಿಯಿಂದ ನಡೆದಾಡುವ ದೇವರು, ತ್ರಿವಿಧ ದಾಸೋಹಮೂರ್ತಿ, ಪದ್ಮಭೂಷಣ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತ್ಯೋತ್ಸವದ ಅಂಗವಾಗಿ 116 ಮಕ್ಕಳಿಗೆ ಶಿ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ನಾಮಕರಣ ಮಾಡಲಾಯಿತು.
ಈ ಉಚಿತ ನಾಮಕರಣ ಮಹೋತ್ಸವದಲ್ಲಿ ಪಾಲ್ಗೊಂಡಿದ್ದವರಿಗೆ ಹೊಸ ತೊಟ್ಟಿಲು, ತೊಟ್ಟಿಲ ಹಾಸಿಗೆ, ತೊಟ್ಟಿಲ ದಿಂಬು ಹಾಗೂ ಶ್ರೀಗಳ ಭಾವಚಿತ್ರವನ್ನು ಉಚಿತವಾಗಿ ನೀಡಲಾಯಿತು.
ಹೂವಿನ ಶಿವಲಿಂಗ ಆಕರ್ಷಣೆ
ಶ್ರೀಮಠದ ಆವರಣದಲ್ಲಿ ಭಕ್ತರೊಬ್ಬರು ಬಗೆ ಬಗೆಯ ಹೂವುಗಳಿಂದ ನಿರ್ಮಿಸಿದ್ದ ಶಿವಲಿಂಗ ಶ್ರೀಗಳ 116ನೇ ಜಯಂತ್ಯೋತ್ಸವದ ಪ್ರಮುಖ ಆಕರ್ಷಣೆಯ ಕೇಂದ್ರ ಬಿಂದುವಾಗಿತ್ತು.
5 ಕಡೆ ದಾಸೋಹ
ರಾಜ್ಯದ ವಿವಿಧೆಡೆಗಳಿಂದ ಶ್ರೀಮಠಕ್ಕೆ ಆಗಮಿಸಿದ್ದ ಲಕ್ಷಾಂತರ ಮಂದಿ ಭಕ್ತಾದಿಗಳಿಗೆ ವಸ್ತುಪ್ರದರ್ಶನ ಆವರಣ, ಪ್ರಾರ್ಥನಾ ಮಂದಿರ, ಹಳೆಯ ಮತ್ತು ಹೊಸ ಪ್ರಸಾದ ನಿಲಯ, ಸಾದರ ಕೊಪ್ಪಲು ಸೇರಿದಂತೆ 5 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.
ಸಂಸದ ಜಿ.ಎಸ್. ಬಸವರಾಜು, ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಾಹುಲ್‍ಕುಮಾರ್ ಹಾಗೂ ವಿವಿಧ ಮಠಾಧೀಶರುಗಳು ಶ್ರೀಗಳ ಗದ್ದುಗೆ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು.
ಭಕ್ತರ ನಿಟ್ಟುಸಿರು
ಈ ಬಾರಿ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶ್ರೀಮಠಕ್ಕೆ ಯಾವುದೇ ರಾಜಕಾರಣಿಗಳು, ಸಚಿವರುಗಳು ಭೇಟಿ ನೀಡಿಲ್ಲ. ಹಾಗಾಗಿ ಶ್ರೀಮಠಕ್ಕೆ ಆಗಮಿಸುತ್ತಿರುವ ಭಕ್ತರಿಗೆ ಪೆÇಲೀಸರಿಂದ ಯಾವುದೇ ರೀತಿಯ ಕಿರಿಕಿರಿ ಇಲ್ಲದೆ ನಿರಾಯಾಸದಾಯಕವಾಗಿ ಭಕ್ತರು ಮಠಕ್ಕೆ ಬಂದು ಗದ್ದುಗೆ ದರ್ಶನ ಪಡೆಯುತ್ತಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
ಎಲ್ಲೆಡೆ ದಾಸೋಹ
ಶ್ರೀಗಳ 116ನೇ ಜಯಂತಿ ಪ್ರಯುಕ್ತ ತುಮಕೂರು ನಗರದಾದ್ಯಂತ ಭಕ್ತವೃಂದ ಪೆಂಡಾಲ್‍ಗಳನ್ನು ಹಾಕಿ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅನ್ನದಾಸೋಹ ಏರ್ಪಡಿಸುವ ಮೂಲಕ ಭಕ್ತಿ ಸಮರ್ಪಿಸಿದರು.

(Visited 1 times, 1 visits today)
tumkur
Previous Articleಡಾ. ಶ್ರೀ ಶಿವಕುಮಾರ ಸ್ವಾಮಿಜಿಯವರ ಜಯಂತಿ
Next Article ವಿಡಿಯೋ ಗ್ರಾಫರ್‍ಗಳ ನೇಮಕ ಸೂಚನೆ
News Desk Benkiyabale

Related Posts

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm news
ತಾಜಾ ಸುದ್ಧಿಗಳು
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
news

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm
news

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm
news

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
news

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
news

ವಿಶೇಷ ರೋಜ್ಗಾರ್ ದಿನಾಚರಣೆಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಕುರಿತು ಸಮಗ್ರ ಮಾಹಿತಿ

August 08, 2026 4:26 pm
Our Youtube Channel
Our Picks

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm

ಅತ್ಯಾಚಾರ ಕೊಲೆ ಪ್ರಕರಣ ದಿನ: ಅಭಯ ದಿನವನ್ನಾಗಿ ಆಚರಣೆ

August 08, 2026 4:28 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

By News Desk BenkiyabaleAugust 08, 2026 5:13 pm

ತುಮಕೂರು: ಕೇಂದ್ರ ಸರಕಾರ ಸುಮಾರು ೩೦೦೦ ಕೋಟಿ ರೂಖರ್ಚು ಮಾಡುತ್ತಿರುವ ರಾಷ್ಟಿçÃಯ ಹೆದ್ದಾರಿ ೨೦೬ರಲ್ಲಿ ತಿಪಟೂರು ಸಮೀಪದ ಅಯ್ಯನ ಭಾವಿ…

ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ

August 08, 2026 5:11 pm

ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು

August 08, 2026 5:09 pm

ಹುಳಿಯಾರು ಪ.ಪಂ ತುರ್ತು ಸಭೆಯಲ್ಲಿ ಕಾವೇರಿದ ಚರ್ಚೆ

August 08, 2026 4:30 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.