BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಮ್ಮ ನಡೆ ಮತಗಟ್ಟೆ ಕಡೆ : ಏಪ್ರಿಲ್ 30ರಂದು ಜಿಲ್ಲೆಯಾದ್ಯಂತ ಪ್ರಜಾಪ್ರಭುತ್ವದ ಹಬ್ಬ
ಇತರೆ ಸುದ್ಧಿಗಳು

ನಮ್ಮ ನಡೆ ಮತಗಟ್ಟೆ ಕಡೆ : ಏಪ್ರಿಲ್ 30ರಂದು ಜಿಲ್ಲೆಯಾದ್ಯಂತ ಪ್ರಜಾಪ್ರಭುತ್ವದ ಹಬ್ಬ

By News Desk BenkiyabaleUpdated:April 28, 2023 6:12 pm

ತುಮಕೂರು


ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಅಂಗವಾಗಿ ಮತದಾರರಲ್ಲಿ ತಮ್ಮ ಮತಗಟ್ಟೆಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಏಪ್ರಿಲ್ 30ರಂದು ಬೆಳಿಗ್ಗೆ 8 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಅದರಂತೆ ತುಮಕೂರು ಜಿಲ್ಲೆಯಾದ್ಯಂತ ಸದರಿ ಕಾರ್ಯಕ್ರಮವನ್ನು ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಆಯೋಜಿಸಲಾಗುವುದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದ್ದಾರೆ.
ಪ್ರಸ್ತುತ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದ್ದು, “ನಮ್ಮ ನಡೆ ಮತಗಟ್ಟೆಯ ಕಡೆ” ಕಾರ್ಯಕ್ರಮವನ್ನು ಏಪ್ರಿಲ್ 30ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುವುದು. ಪ್ರಾಥಮಿಕವಾಗಿ ಮತಗಟ್ಟೆ ಹಂತದಲ್ಲಿ ಮತಗಟ್ಟೆ ಅಧಿಕಾರಿಗಳ ನೇತೃತ್ವದಲ್ಲಿ, ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿಡಿಓ ನೇತೃತ್ವದಲ್ಲಿ, ತಾಲ್ಲೂಕು ಮಟ್ಟದಲ್ಲಿ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಅದೇ ರೀತಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಮಟ್ಟದಲ್ಲಿ ಒಂದೇ ರೀತಿಯ ‘ಪ್ರಜಾಪ್ರಭುತ್ವದ ಹಬ್ಬ ‘ಮೇ 10 ಮತದಾನ’ ಎಂಬ ಧ್ಯೇಯ ಒಳಗೊಂಡಿರುವ ಬಾವುಟವನ್ನು ಸಿದ್ಧಪಡಿಸಿ ಪ್ರತಿ ಮತಗಟ್ಟೆಗಳಿರುವ ಪ್ರದೇಶಾವಾರು ಧ್ವಜಾರೋಹಣವನ್ನು ನೆರವೇರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರೀಯ ಹಬ್ಬದ ಮಾದರಿಯಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಮತದಾರರನ್ನು ಸೆಳೆಯಲು ಸ್ಥಳೀಯ ಜನಪದ ಅಥವಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಕಾಲ್ನಡಿಗೆ ಜಾಥಾ ಸೇರಿದಂತೆ ಚುನಾವಣಾ ವಿಷಯಗಳನ್ನೊಳಗೊಂಡ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಈ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಪ್ರೇರಿತ ಅಥವಾ ಸಂಬಂಧಿತ ವ್ಯಕ್ತಿಗಳು ಭಾಗವಹಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.
ಒಂದು ಗಂಟೆಗೆ ಕಡಿಮೆ ಇಲ್ಲದಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಒಟ್ಟಾರೆ ಪ್ರತಿ ಮತಗಟ್ಟೆಯನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯವಾಗಿ ಭಾರತ ಚುನಾವಣಾ ಆಯೋಗ ಈ ವರ್ಷ ಬಿಡುಗಡೆ ಮಾಡಿರುವ ಚುನಾವಣಾ ಗೀತೆಯನ್ನು ಮತ್ತು ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ 2018 ರಲ್ಲಿ ಬಿಡುಗಡೆ ಮಾಡಿರುವ ಚುನಾವಣಾ ಗೀತೆಗಳನ್ನು ಬಳಸಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಉಸ್ತುವಾರಿ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ನೈತಿಕ ಚುನಾವಣೆಯ ಕುರಿತು ಮತದಾರರಿಗೆ ಬಿತ್ತಿಪತ್ರಗಳ ವಿತರಣೆ, ಎಲ್‍ಇಡಿ ವಾಹನಗಳ ಮೂಲಕ ಜಾಗೃತಿ, ಮತದಾನದ ಮಹತ್ವ ಕುರಿತು ಬೀದಿ ನಾಟಕ, ಜಾನಪದ ಕಲೆಗಳ ಮೂಲಕ
ಮತದಾರರ ಜಾಗೃತಿ, ಸೈಕಲ್, ದ್ವಿಚಕ್ರ ವಾಹನ ಮತ್ತು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳುವುದು, ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ಕುರಿತು ಮಾಹಿತಿ, ಭಾರತ ಚುನಾವಣಾ ಆಯೋಗ ನೈತಿಕ ಚುನಾವಣೆ ನಡೆಸಲು ಮತದಾರರಿಗಾಗಿ ಹೊರ ತಂದಿರುವ ಸಿವಿಜಿಲ್, ಕೆವೈಸಿ, ಚುನಾವಣಾ ಸಕ್ಷಮ್ ಆಪ್‍ಗಳು ಸೇರಿದಂತೆ ಸಹಾಯವಾಣಿ 1950ರ ಬಗ್ಗೆ ಪ್ರಚುರಪಡಿಸಬೇಕು. ನಿಮ್ಮ ಮತಗಟ್ಟೆ ಎಲ್ಲಿದೇ ಎಂದು ತಿಳಿದುಕೊಳ್ಳಿ ಮತ್ತು ಮೇ 10ರಂದು ತಪ್ಪದೇ ಮತದಾನ ಮಾಡಿ ಎನ್ನುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

(Visited 1 times, 1 visits today)
Previous Articleಜೆಡಿಎಸ್ ಬಿಜೆಪಿಯ ಬಿ.ಟೀಮ್ : ಜಮೀರ್ ಅಹಮದ್ ಅರೋಪ
Next Article ಮಸಾಲಜಯರಾಮ್ ಪತ್ನಿ ಮನೆ ಮನೆ ಪ್ರಚಾರ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.