BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ
ಇತರೆ ಸುದ್ಧಿಗಳು

ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪನೆ

By News Desk BenkiyabaleUpdated:May 01, 2023 5:22 pm

ತುಮಕೂರು


ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಯಲ್ಲಿರುವ ಗೈರು ಮತದಾರ ರಿಗಾಗಿ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಮೇ 2 ರಿಂದ 4ರವರೆಗೆ ಆಯಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಎಲ್ಲ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಪೋಸ್ಟಲ್ ವೋಟಿಂಗ್ ಸೆಂಟರ್ ಸ್ಥಾಪಿಸಿರುವ ಬಗ್ಗೆ ಎಲ್ಲ ಎವಿಇಎಸ್ ಮತದಾರರಿಗೆ ಎಸ್.ಎಂ.ಎಸ್. ಮೂಲಕ ಕಡ್ಡಾಯವಾಗಿ ಮಾಹಿತಿ ನೀಡಬೇಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ವೆಬೆಸೈಟ್‍ನಲ್ಲಿ ಪ್ರಚುರಪಡಿಸಬೇಕು ಎಂದರು.
ಎಲ್ಲ ಎವಿಇಎಸ್ ಮತದಾರರಿಗೆ ಪಿವಿಸಿ ಸ್ಥಾಪನೆಯ ಸ್ಥಳ, ವಿಳಾಸ, ದಿನಾಂಕ, ಸಮಯದ ಮಾಹಿತಿಯನ್ನು ಎಸ್.ಎಂ.ಎಸ್. ಮೂಲಕ ತಿಳಿಸಬೇಕು. ಪಿವಿ ಸೆಂಟರ್‍ನಲ್ಲಿ ಅಂಚೆ ಮತದಾನ ಮಾಡಲು ಮೇ 2 ರಿಂದ 4ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಮಾತ್ರ ಅವಕಾಶವಿರುತ್ತದೆ. ಅಂಚೆ ಮತದಾನಕ್ಕಾಗಿ ನಮೂನೆ- 12ಡಿಯನ್ನು ಭರ್ತಿ ಮಾಡಿ ಸಲ್ಲಿಸಿದ ಎವಿಇಎಸ್ ಸಿಬ್ಬಂದಿಗಳು ಕೇವಲ ಈ ಪಿವಿಸಿ(ಅಂಚೆ ಮತದಾನ ಕೇಂದ್ರ)ದಲ್ಲಿ ಮಾತ್ರ ಮತ ಚಲಾಯಿಸಲು ಅವಕಾಶವಿರುತ್ತದೆ. ಉಳಿದಂತೆ ಬೇರೆ ಯಾವ ಕ್ರಮದಲ್ಲಿಯೂ ಮತ ಚಲಾಯಿಸಲು ಅವಕಾಶವಿರುವುದಿಲ್ಲ ಎಂಬುದನ್ನು ಕಡ್ಡಾಯವಾಗಿ ತಿಳಿಸಬೇಕು ಎಂದು ತಿಳಿಸಿದರು.
ಪೋಸ್ಟಲ್ ವೋಟಿಂಗ್ ನಡೆಯುವ ದಿನಾಂಕವನ್ನು ಚುನಾವಣಾ ಅಭ್ಯರ್ಥಿಗಳಿಗೆ ಮಾಹಿತಿ ನೀಡಬೇಕು. ಅಂಚೆ ಮತದಾನ ನಡೆಯುವ ವಿಧಾನವನ್ನು ಅಭ್ಯರ್ಥಿ ಅಥವಾ ಅವರ ಏಜೆಂಟ್‍ಗಳಿಗೆ ವೀಕ್ಷಿಸಲು ಅವಕಾಶವಿರುತ್ತದೆ ಎಂದು ಹೇಳಿದರು.
ಅಂಚೆ ಮತದಾನ ಕೇಂದ್ರದಲ್ಲಿ ಮತದಾರರಿಗೆ ಅಂಚೆ ಮತಪತ್ರ, ಮತದಾನಕ್ಕೆ ಸಂಬಂಧಿಸಿದಂತೆ 13ಎ, 13ಬಿ, 13ಸಿ ಇತರೆ ಲಕೋಟೆಗಳನ್ನು ನೀಡಲು ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಬೇಕು. ನಿಯೋಜಿತ ಸಿಬ್ಬಂದಿಗಳು ಮತದಾರನ ಗುರುತು ಪತ್ರ(ಚುನಾವಣಾ ಆಯೋಗ ಸೂಚಿಸಿರುವ ದಾಖಲೆಗಳ ಪೈಕಿ) ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ದೊಡ್ಡ ಕಾರ್ಡ್ ಬೋರ್ಡ್‍ನಲ್ಲಿ ಲಗತ್ತಿಸಿ ಮತದಾನ ಕೇಂದ್ರದ ಹೊರಗಡೆ ಇಡಬೇಕು.
ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾರರ ಸಂಖ್ಯೆಗನುಗುಣವಾಗಿ ಹಾಗೂ ಶೇ.10ರಷ್ಟು ಹೆಚ್ಚುವರಿ ಅಂಚೆ ಮತಮತ್ರಗಳು, ಅಗತ್ಯ ಲಕೋಟೆಗಳು, ನೇರಳೆ ಬಣ್ಣದ ಸ್ಕೆಚ್ ಪೆನ್, ಗೋಂದು ಬಾಟಲಿ, ಸೆಲ್ಫ್ ಇಂಕಿಂಗ್ ಪ್ಯಾಡ್, ಸ್ಟೀಲ್ ಟ್ರಂಕ್, ಅವಶ್ಯಕ ರಿಜಿಸ್ಟರ್, ವೋಟಿಂಗ್ ಕಂಪಾಟ್ಮೆರ್ಂಟ್, ಎವಿಇಎಸ್ ಮತದಾರರ ಪಟ್ಟಿ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಹೊಂದಿರಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ
Next Article ಜೆಡಿಎಸ್‍ಗೆ ಸಂಪೂರ್ಣ ಬಹುಮತ ನೀಡಿ : ದೇವೇಗೌಡರು
News Desk Benkiyabale

Related Posts

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news
ತಾಜಾ ಸುದ್ಧಿಗಳು
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
Our Youtube Channel
Our Picks

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

By News Desk BenkiyabaleAugust 28, 2026 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್…

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.