BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ
ಇತರೆ ಸುದ್ಧಿಗಳು

ರುದ್ರಭೂಮಿ ಲೋಕಾರ್ಪಣೆ – ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನೆ

By News Desk BenkiyabaleUpdated:June 02, 2023 4:53 pm

ತುಮಕೂರು


ನಗರ ವೀರಶೈವ ಸಮಾಜ ಸೇವಾ ಸಮಿತಿವತಿಯಿಂದ ನಗರದ ಗಂಗಸಂದ್ರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ವೀರಶೈವ – ಲಿಂಗಾಯಿತ ರುದ್ರಭೂಮಿ ಲೋಕಾರ್ಪಣೆ ಹಾಗೂ ಶ್ರೀಸಿದ್ದೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮ ಸಿದ್ದಗಂಗಾ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ, ಅಟವಿ ಸುಕ್ಷೇತ್ರದ ಶ್ರೀ ಅಟವಿ ಶಿವಲಿಂಗಸ್ವಾಮೀಜಿ, ಹಿರೇಮಠದ ಶ್ರೀಶಿವಾನಂದ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಾಕನಹಳ್ಳಿ ಜಂಗಮ ಮಠದ ಶ್ರೀಗಂಗಾಧರಸ್ವಾಮೀಜಿ,ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನೆರವೇರಿತು.
ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್.ಬಸವರಾಜು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸಮಾಜ ಒಗ್ಗಟ್ಟಾಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ನಮ್ಮಲ್ಲಿ ನಾವೇ ಭಿನ್ನಮತ ಮೂಡಿಸಿಕೊಂಡರೆ ಏನನ್ನು ಸಾಧಿಸು ಸಾಧ್ಯವಿಲ್ಲ.ಸ್ವಲ್ಪ ಯಾಮಾರಿದರೂ ಇದದ್ದನ್ನು ಕಿತ್ತುಗೊಂಡು ಬಿಡುತ್ತಾರೆ.ಇದು ನಾನು ನಿಮಗೆ ನೀಡುತ್ತಿರುವ ಎಚ್ಚರಿಕೆ.ನನ್ನ ಕಾಲ ಮುಗಿಯಿತು.ಈಗಾಗಲೇ ಪಕ್ಷದ ಹೈಕಮಾಂಡ್‍ಗೆ ಮುಂದಿನ ಬಾರಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಹೇಳಿದ್ದೇನೆ.ಮುಂದೆ ಯಾರೇ ಬರಲಿ ಅವರ ಸಹಾಯ ಪಡೆದು, ಸಮಾಜವನ್ನು ಅಭಿವೃದ್ದಿಯ ಕಡೆಗೆ ತೆಗೆದುಕೊಂಡು ಹೋಗಿ ಎಂದು ಕಿವಿ ಮಾತು ಹೇಳಿದರು.
ಭಾರತೀಯ ಸನಾತನ ಸಂಸ್ಕøತಿಯಲ್ಲಿ ರುದ್ರಭೂಮಿಗಳಿಗೆ ವಿಶೇಷ ಸ್ಥಾನವಿದೆ.ಎಲ್ಲರೂ ಕೊನೆಗೆ ಒಂದು ದಿನ ಹೋಗಲೇಬೇಕು.ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯ ಅಧ್ಯಕ್ಷರಾದ ಟಿ.ಬಿ.ಶೇಖರ್, ಉಪಾಧ್ಯಕ್ಷರಾದ ಚಂದ್ರಮೌಳಿ ಅವರುಗಳು ರುದ್ರಭೂಮಿಯ ಪ್ರಸ್ತಾಪ ಮಾಡಿದ್ದರ ಹಿನ್ನೇಲೆಯಲ್ಲಿ ಗಂಗಸಂದ್ರದ ಶಿಂಷಾ ನದಿಯ ದಡದಲ್ಲಿ ಸುಮಾರು 5 ಎಕರೆ ಜಾಗದಲ್ಲಿ ತಲೆ ಎತ್ತಿರುವ ವೀರಶೈವ-ಲಿಂಗಾಯಿತ ರುದ್ರಭೂಮಿ ನಿರ್ಮಾಣಗೊಂಡಿದೆ. ವೀರಶೈವರಿ ಗಲ್ಲದೆ ಬೇರೆ ಸಮುದಾಯಗಳಿಗೂ ಇದರ ಅಕ್ಕ,ಪಕ್ಕದಲ್ಲಿ ಭೂಮಿ ನೀಡಲಾಗಿದೆ.ಇದರ ಸದ್ಬಳಕೆಯಾಗಬೇಕು ಎಂದು ಸಲಹೆ ನೀಡಿದರು.
ಗಡಿನಾಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ,ನಿವೃತ್ತ ಐಎಎಸ್ ಅಧಿಕಾರಿ ಡಾ.ಸಿ.ಸೋಮಶೇಖರ್ ಮಾತನಾಡಿ,ಇಂದು ಲೋಕಾರ್ಪಣೆಗೊಂಡಿರುವ ವೀರಶೈವ-ಲಿಂಗಾಯಿತ ರುದ್ರಭೂಮಿಯ ಮಂಜೂರಾತಿಯ ಹಿಂದೆ ಸಂಸದ ಜಿ.ಎಸ್.ಬಸವ ರಾಜು ಅವರು ಶ್ರಮವಿದೆ.ತುಮಕೂರು ಜಿಲ್ಲೆಯ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಸಂಸದರ ನಿರಂತರ ಪ್ರಯತ್ನವಿದೆ. ಹುಟ್ಟಿದವನಿಗೆ ಸಾವು ನಿಶ್ಚಿತ. ಹುಟ್ಟು ಸಾವಿನ ನಡುವೆ ನಾಲ್ಕು ಜನರಿಗೆ ಅನುಕೂಲವಾಗುವಂತಹ ಕೆಲಸವನ್ನು ಮಾಡಿ, ಜೀವನವನ್ನು ಸಾರ್ಥಕ ಪಡಿಸಿಕೊಳ್ಳೋಣ ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿಯ ಅಧ್ಯಕ್ಷ ಟಿ.ಬಿ.ಶೇಖರ್,ಊರು ಬೆಳೆದು,ಜನಸಂಖ್ಯೆ ಹೆಚ್ಚಾದಂತೆ ಈಗಿರುವ ರುದ್ರಭೂಮಿ ಕಿರಿದಾದ ಹಿನ್ನೆಲೆಯಲ್ಲಿ ಊರಿನ ಹೊರವಲಯದಲ್ಲಿ ದೊಡ್ಡದಾದ ರುದ್ರಭೂಮಿಯ ಅಗತ್ಯವಿತ್ತು.ಹಾಗಾಗಿ ಇಂದು ಗಂಗಸಂದ್ರದಲ್ಲಿ ಸಂಸದ ಜಿ.ಎಸ್.ಬಸವರಾಜು, ಮಾಜಿಸಚಿವ ಸೊಗಡು ಶಿವಣ್ಣ ಅವರ ಸಹಕಾರದಿಂದ ಈ ಭೂಮಿಯನ್ನು ಪಡೆದು ವೀರಶೈವ ರುದ್ರಭೂಮಿಗೆ ಚಾಲನೆ ನೀಡಲಾಯಿತು. ಸಂಸದರು,ಶಾಸಕರ ನಿಧಿ ಹಾಗೂ ಸಾರ್ವಜನಿಕರ ಧೇಣಿಯಿಂದ ಇಂದು ಸುಸಜ್ಜಿತ ರುದ್ರಭೂಮಿ ತಲೆ ಎತ್ತಿದೆ.ಇಲ್ಲಿಗೆ ಬಂದವರಿಗೆ ಒಂದು ಆಹ್ಲಾದಕರ ವಾತಾವರಣ ನಿರ್ಮಾಣಕ್ಕೆ ರುದ್ರವನ, ಶ್ರೀಸಿದ್ದೇಶ್ವರಸ್ವಾಮಿ ದೇವಾಲಯ ಇದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಹಿರೇಮಠದ ಡಾ.ಶ್ರೀಶಿವಾನಂದಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ,
ತುಮಕೂರಿನಲ್ಲಿ 1902ರಲ್ಲಿ ವೀರಶೈವ-ಲಿಂಗಾಯಿತರ ರುದ್ರಭೂಮಿ ಇತ್ತು.1957ರಲ್ಲಿ ಬನಶಂಕರಿಯಲ್ಲಿ ಒಂದು ರುದ್ರಭೂಮಿ ಆರಂಭವಾಯಿತು. ಪ್ರಸ್ತುತ ಗಂಗಸಂದ್ರದಲ್ಲಿ ರುದ್ರಭೂಮಿ ಆರಂಭಗೊಂಡಿದೆ.ಇದು ವೀರಶೈವ ಸಮಾಜದ ದೂರದೃಷ್ಟಿಯ ಫಲ.ಇದು ಸ್ಮಶಾನವಲ್ಲ.ಜೋರ್ತಿಲಿಂಗ.ಭಾರತೀಯರಲ್ಲಿ ರುದ್ರಭೂಮಿ ಎಂದರೆ ಪೈಶಾಚಿಕ ಶಕ್ತಿಗಳು ಇರುವ ಜಾಗ ಎಂಬಕಲ್ಪನೆ ಇದೆ. ಆದರೆ ವಿದೇಶಿಯರಲ್ಲಿ ಆ ಭಾವನೆ ಇಲ್ಲ. ಅಲ್ಲಿ ರುದ್ರಭೂಮಿಗಳನ್ನು ರುದ್ರವನಗಳಾಗಿ ಅಭಿವೃದ್ದಿ ಪಡಿಸಿ,ಅಹ್ಲಾದಕರ ವಾತಾವರಣ ನಿರ್ಮಾಣ ಮಾಡಿರುತ್ತಾರೆ.ಅದೇ ಪರಿಕಲ್ಪನೆಯಲ್ಲಿ ಇದನ್ನು ನಿರ್ಮಿಸಲಾಗಿದೆ. ಪ್ರತಿಯೊಬ್ಬರು ಇಲ್ಲಿಗೆ ಬರಲೇಬೇಕು.ಯಾವುದೆ ಗೊಂದಲವಿಲ್ಲದೆ ಇದನ್ನು ಬಳಕೆ ಮಾಡುವಂತಹ ವಾತಾವರಣ ನಿರ್ಮಾಣವಾಗಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಪೂಜಾ ಕೈಂಕರ್ಯಗಳು ನೆರವೇರಿದವು.ವೇದಿಕೆಯಲ್ಲಿ ಶಾಸಕ ಜಿ.ಬಿ.ಜೋತಿಗಣೇಶ್,
ತುಮಕೂರು ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಉಪಾಧ್ಯಕ್ಷ ಚಂದ್ರಮೌಳಿ, ಮುಖಂಡರಾದ ಸಿ.ವಿ.ಮಹದೇವಯ್ಯ, ಕೆ.ಜೆ.ರುದ್ರಪ್ಪ, ಮೋಹನ್‍ಕುಮಾರ್ ಪಟೇಲ್, ಎಸ್.ಎಂ.ರಾಜು, ವೀಣಾ, ಕೋರಿ ಮಂಜುನಾಥ್, ಭಸ್ಮಾಂಗಿ ರುದ್ರಯ್ಯ, ಓಹಿಲೇಶ್ವರ್, ಪಾಲಿಕೆ ಸದಸ್ಯರಾದ ಮಂಜುಳ ಆದರ್ಶ, ಮಹೇಶ್, ದೀಪಶ್ರೀ ಮಹೇಶ್ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಿದೇರ್ಶಕರುಗಳು ಉಪಸ್ಥಿತರಿದ್ದರು.

(Visited 3 times, 1 visits today)
tumkur
Previous Articleನಮಗೆ ಆಹಾರ ಬೇಕು ತಂಬಾಕು ಬೇಡ
Next Article 10 ನಿಮಿಷದಲ್ಲಿ ಆಸ್ತಿ ನೋಂದಣಿ : ಕಾವೇರಿ- 2.0 ತಂತ್ರಾಂಶ ಅಳವಡಿಕೆ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.