BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ
  • ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?
  • ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ
  • ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ
  • ರಸ್ತೆ ಕಾಮಗಾರಿ ವಿಳಂಬ: ಪೂರ್ಣಗೊಳಿಸಲು ಸಿಪಿಐ(ಎಂ) ಒತ್ತಾಯ
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು : ಸಚಿವ ದಿನೇಶ್ ಗುಂಡುರಾವ್
ಇತರೆ ಸುದ್ಧಿಗಳು

ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು : ಸಚಿವ ದಿನೇಶ್ ಗುಂಡುರಾವ್

By News Desk BenkiyabaleUpdated:July 25, 2023 4:42 pm

ತುಮಕೂರು


ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ ವೈದ್ಯರಿಗೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅಭಿಪ್ರಾಯ ಪಟ್ಟರು.
ನಗರದ ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ನೆರವೇರಿಸಿ, ನಂತರ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಯಾವುದೇ ದೇಶದ ಅಥವಾ ರಾಜ್ಯದ ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ.
ಸಮಾಜದ ಸಾಮಾನ್ಯ ಮನುಷ್ಯನಿಗೂ ಸಹ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆಗಳು ದೊರಕಬೇಕು ಎಂಬುವುದೇ ತಮ್ಮ ಆಶಯವಾಗಿದೆ ಎಂದ ಅವರು, ವೈದ್ಯ ವೃತ್ತಿ ಅತ್ಯಂತ ಪವಿತ್ರ ಹಾಗೂ ಉತ್ತಮ ವೃತ್ತಿಯಾಗಿದೆ. ಜನರ ಸೇವೆಯೇ ದೇಶ ಸೇವೆಯಾಗಿದ್ದು, ಈ ಮೂಲಕ ವೈದ್ಯರು ರಾಷ್ಟç ಸೇವೆಗೆ ತಮ್ಮನ್ನು ತಾವು ಮುಡುಪಾಗಿಡಬೇಕು. ಜನರ ಜೀವನದ ಮೇಲೆ ಪ್ರಭಾವ ಬೀರುವ, ಬದುಕನ್ನು ಬದಲಾಯಿಸುವ ಶಕ್ತಿ ವೈದ್ಯಕೀಯ ಲೋಕಕ್ಕಿದೆ. ಬಡ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿದಾಗ ಅವರನ್ನು ನಗು ಮುಖದಿಂದ ಮಾತನಾಡಿಸಿ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗಿ ಕಳುಹಿಸುವ ನಿಟ್ಟಿನಲ್ಲಿ ವೈದ್ಯರುಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.
ಶ್ರೀ ಸಿದ್ಧಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಸಕಲ ಆಧುನಿಕ ವೈದ್ಯಕೀಯ ಸೌಲಭ್ಯ ಹಾಗೂ ಹಚ್ಚ ಹಸಿರಿನ ವಾತಾವರಣವನ್ನೊಳಗೊಂಡ ಅತ್ಯುತ್ತಮ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.
ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ: ಜಿ. ಪರಮೇಶ್ವರ್, ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ನೀಡುವಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ. ರಾಜ್ಯದಲ್ಲಿ ಸುಮಾರು ಎರಡೂವರೆ ಸಾವಿರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಗ್ರಾಮೀಣ ಜನರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.
ಗ್ರಾಮೀಣ ಭಾಗದ ಜನರಿಗೆ ಗುಣಮಟ್ಟದ ಚಿಕಿತ್ಸೆಯನ್ನು ಕಡಿಮೆ ಖರ್ಚಿನಲ್ಲಿ ನೀಡುವುದು ಸಿದ್ಧಾರ್ಥ ಸಂಸ್ಥೆಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ವೈದ್ಯರು ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಜನರು ಯಾವುದೇ ರೀತಿಯ ಶಸ್ತç ಚಿಕಿತ್ಸೆ ಮಾಡಿಸಿಕೊಳ್ಳುವುದಕ್ಕೆ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಹೋದರೆ ಕನಿಷ್ಠ ೫ಲಕ್ಷ ಹಣ ಖರ್ಚಾಗುತ್ತದೆ. ನಮ್ಮ ಸಂಸ್ಥೆಯಲ್ಲಿ ಕಡಿಮೆ ಖರ್ಚಿನಲ್ಲಿ ಶಸ್ತç ಚಿಕಿತ್ಸೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಮಾಜಿ ಪ್ರಧಾನ ಮಂತ್ರಿಗಳಾದ ಡಾ: ಮನಮೋಹನ್ ಸಿಂಗ್ ಅವರು ರಾಷ್ಟಿçÃಯ ಆರೋಗ್ಯ ನೀತಿಯನ್ನು ಜಾರಿಗೆ ತಂದ ಪರಿಣಾಮ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳು ಆಗಿದ್ದು, ಪ್ರತಿ ಸಾವಿರ ಮಕ್ಕಳಿಗೆ ೫೫ರಷ್ಟಿದ್ಧ ಶಿಶು ಮರಣ ಪ್ರಕರಣಗಳು ೩೦ಕ್ಕೆ ಇಳಿದಿರುವುದು ಕ್ರಾಂತಿಕಾರಕ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಉಪ ಕುಲಪತಿ ಕೆ.ವಿ. ಲಿಂಗೇಗೌಡ, ಕುಲಸಚಿವ ಕುರಿಯಾನ್, ಪ್ರಾಂಶುಪಾಲರಾದ ಡಾ. ಮಲ್ಲಿಕಾರ್ಜುನ್ ಸಾನಿಕೊಪ್ಪ, ಸಿದ್ದಾರ್ಥ್, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಾಪೂರ್‌ವಾಡ್ ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಪೋಷಕರು ಮಕ್ಕಳು ಒಳ್ಳೆಯ ಸ್ಥಾನ ತಲುಪಬೇಕೆಂಬ ನಿರೀಕ್ಷೆಯಲ್ಲಿರುತ್ತಾರೆ
Next Article ತುಮಕೂರಿನಲ್ಲಿ ತುಂತುರು ಮಳೆ
News Desk Benkiyabale

Related Posts

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm news

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm news

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm news
ತಾಜಾ ಸುದ್ಧಿಗಳು
news

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm
news

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm
news

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm
news

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm
news

ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ

October 19, 2026 5:12 pm
news

ರಸ್ತೆ ಕಾಮಗಾರಿ ವಿಳಂಬ: ಪೂರ್ಣಗೊಳಿಸಲು ಸಿಪಿಐ(ಎಂ) ಒತ್ತಾಯ

October 19, 2026 5:11 pm
Our Youtube Channel
Our Picks

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm

ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ

October 19, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

By News Desk BenkiyabaleOctober 19, 2026 5:21 pm

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ, ದೊಡ್ಡಬೀರನಕೆರೆ ಮತ್ತು ಡಿ.ಬಿ.ಪಟ್ಟ ಡಣನಾಯಕನಪುರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ತಾಲೂಕು…

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.