BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೋಟೆಯೊಳಗಣ ಪೇಟೆಯ ನಿರ್ಮಾತೃ ಕೆಂಪೇಗೌಡರು
ತುಮಕೂರು

ಕೋಟೆಯೊಳಗಣ ಪೇಟೆಯ ನಿರ್ಮಾತೃ ಕೆಂಪೇಗೌಡರು

By News Desk BenkiyabaleUpdated:August 11, 2023 6:02 pm

ತುಮಕೂರು


ಸಂವಿಧಾನದಲ್ಲಿ ಸರ್ವ ಜನಾಂಗಕ್ಕೂ ಬದುಕುವ ಹಕ್ಕು ಕಲ್ಪಿಸುವ ಮೊದಲೇ ಕೆಂಪೇಗೌಡರು ಬೆಂಗಳೂರಿನಲ್ಲಿ ಎಲ್ಲಾ ಶ್ರಮಿಕ ಸಮುದಾಯಗಳಿಗೆ ಪ್ರತ್ಯೇಕ ಪೇಟೆಗಳನ್ನು ನಿರ್ಮಿಸಿ, ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಮಾಡಿಕೊಟ್ಟಿರುವುದು ಮಹತ್ವದ ಹೆಜ್ಜೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.
ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತೋತ್ಸವ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಕೆಂಪೇಗೌಡರ ಜಯಂತಿ , ಕೆಂಪೇಗೌಡ ಪ್ರಶಸ್ತಿ ಪ್ರಧಾನ, ಪ್ರಗತಿಪರ ರೈತರಿಗೆ ಸನ್ಮಾನ ಹಾಗೂ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತಿದ್ದ ಅವರು,ಶ್ರಮಿಕ ವರ್ಗವನ್ನು ಅಭಿವೃದ್ದಿಯ ಭಾಗವನ್ನಾಗಿಸುವ ಕೆಂಪೇಗೌಡರ ದೂರದೃಷ್ಠಿಯನ್ನು ನಾವೆಲ್ಲರೂ ಅನುಸರಿಸುವಂತಹದ್ದು ಎಂದರು.
ಇAದಿನ ಅಧುನಿಕ ಜಗತ್ತಿಗೆ ಅನುಗುಣವಾಗಿ ೫೧೪ ವರ್ಷಗಳ ಹಿಂದೆಯೇ ಒಂದು ಪಟ್ಟಣವನ್ನು ವಿನ್ಯಾಸಗೊಳಿಸಿದ ವ್ಯಕ್ತಿಯನ್ನು ಇತಿಹಾಸದಲ್ಲಿ ಕಾಣಲು ಸಾಧ್ಯವಿಲ್ಲ.ವೃತ್ತಿಗೆ ಅನುಗುಣವಾಗಿ ಪೇಟೆಗಳ ನಿರ್ಮಾಣ ಮಾಡಿ,ಎಲ್ಲ ಶ್ರಮಿಕವರ್ಗಗಳು ಸಂತೋಷದಿAದ ಬದುಕುವಂತಹ ವಾತಾವರಣ ಅಂದೇ ನಿರ್ಮಾಣವಾಗಿತ್ತು ಎಂದರೆ,ಇದಕ್ಕಿAತ ದೊಡ್ಡ ಸಂತೋಷ ಮತ್ತೊಂದಿಲ್ಲ.ಹಾಗಾಗಿ ಕೆಂಪೇಗೌಡರನ್ನು ಒಂದು ವರ್ಗಕ್ಕೆ ಸಿಮೀತಗೊಳಿಸಿ,ಟೀಕಿಸುವುದು ಸಲ್ಲದು,ಎಲ್ಲರ ಅವರ ಆದರ್ಶ ಗಳನ್ನು ಗೌರವಿಸುವಂತಾಗಬೇಕು ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ವೈದ್ಯರ ತಿಪಟೂರಿನ ಗಂಗನಘಟ್ಟದ ಡಾ.ವಿವೇಚನಗೌಡ ದಂಪತಿಗಳಿಗೆ ೨೦೨೩ನೇ ಸಾಲಿನ ಜಿಲ್ಲಾ ಮಟ್ಟದ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದ ಸಹಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ,ತಾವು ಕಟ್ಟಿದ ಪೇಟೆಯಲ್ಲಿ ಎಲ್ಲಾ ವರ್ಗದ ಜನರಿಗೆ ಆಶ್ರಯ ಕಲ್ಪಿಸಿದ ಕೆಂಪೇಗೌಡರ ಆಶಯದ ಹಿಂದೆ ಮಾನವತಾವಾದವಿದೆ.ಎಲ್ಲಾ ಸಮುದಾಯಗಳ ಅಭಿವೃದ್ದಿಗೆ ಅವಕಾಶ ಕಲ್ಪಿಸಿದ ಕುರುಹುಗಳಿವೆ.ಶೋಷಿತ ಸಮುದಾಯಗಳು ಸಾವಲಂಬಿ ಬದುಕು ಕಟ್ಟಿಕೊಳ್ಳಲು ಅವರು ಅವಕಾಶ ಕಲ್ಪಿಸಿದ್ದರು.ಓರ್ವ ರಾಜಕಾರಣಿಗೆ ರಾಜಕೀಯ ಮುಖ್ಯವಾದರೆ,ಓರ್ವ ದಾರ್ಶಾನಿಕನಿಗೆ ಇಡೀ ಸಮುದಾಯ ಮುಖ್ಯವಾಗುತ್ತದೆ ಎಂಬುದಕ್ಕೆ ಕೆಂಪೇಗೌಡ ಆಡಳಿತವೇ ಸಾಕ್ಷಿ ಎಂದರು.
ಯಾವುದೇ ಒಂದು ಸಮುದಾಯ ರಾಜಕೀಯ ಅಧಿಕಾರ ಪಡೆಯಬೇಕೆಂದರೆ ಒಗ್ಗಟ್ಟು ಮುಖ್ಯ. ಬಹಳ ವರ್ಷಗಳ ನಂತರ ಒಕ್ಕಲಿಗ ಸಮಾಜ ಇಂತಹ ಒಂದು ಕಾರ್ಯಕ್ರಮ ಆಯೋಜಿಸಿದೆ.ಮುಂದಿನ ದಿನಗಳಲ್ಲಿ ಹೀಗೆಯೇ ಮುಂದುವರೆಯಲಿ ಎಂಬ ಆಶಯ ವ್ಯಕ್ತಪಡಿಸಿದ ಸಹಕಾರ ಸಚಿವರು,ಕೆಂಪೇಗೌಡರ ಆಶಯಗಳನ್ನು ಯುವಜನರು ತಿಳಿದು ಮುನ್ನೆಡೆಯುವಂತಹ ವಾತಾವರಣ ಸೃಷ್ಟಿಯಾಗಬೇಕೆಂದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀಶ್ರೀಡಾ.ನಿರ್ಮಲಾನಾಥನಂದಸ್ವಾಮೀಜಿ ತಮ್ಮ ಆಶೀರ್ವಚನದಲ್ಲಿ ಒಕ್ಕಲಿಗ ಸಮುದಾಯವೆಂದರೆ ಎಲ್ಲಾ ಸಮುದಾಯವನ್ನು ತನ್ನೊಟ್ಟಿಗೆ ತೆಗೆದುಕೊಂಡು ಹೋಗುವ ವಿಶ್ವಮಾನವ ಪರಿಕಲ್ಪನೆ ಹೊಂದಿರುವ ಸಮುದಾಯ. ಇದೇ ಪರಿಕಲ್ಪನೆಯಲ್ಲಿ ಕೆಂಪೇಗೌಡರು ಎಲ್ಲ ಸಮುದಾಯಗಳಿಗೆ ಅರ್ಥಿಕವಾಗಿ, ಸಾಮಾಜಿಕವಾಗಿ,ಶೈಕ್ಷಣಿಕವಾಗಿ ಬೆಳೆಯಲು ಅವಕಾಶ ಕಲ್ಪಿಸಿದ್ದರು. ಕೌಶಲ್ಯವನ್ನು ಆಧರಿಸಿ ಸುಮಾರು ೬೪ ಪೇಟೆಗಳನ್ನು ನಿರ್ಮಿಸಿ,ಅವರ ಜೀವನೋಪಾಯಕ್ಕೆ ದಾರಿ ಮಾಡಿಕೊಟ್ಟಿದ್ದರು. ಅವರ ಆಶಯದಂತೆ ನಾವೆಲ್ಲರೂ ನಡೆಯಬೇಕಾಗಿದೆ ಎಂದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಕೇಂದ್ರ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತರಾಯಪ್ಪ,ಬಹುಸAಖ್ಯಾತರಿರುವ ಒಕ್ಕಲಿಗ ಸಮುದಾಯ ಕಲೆ,ಸಾಹಿತ್ಯ,ಸಾಂಸ್ಕೃತಿಕವಾಗಿ ಸಾಕಷ್ಟು ಕೊಡುಗೆಯನ್ನು ನೀಡಿದೆ.ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಒಕ್ಕಲಿಗರ ಭವನಗಳಿವೆ.ಆದರೆ ಬೆಂಗಳೂರಿಗೆ ಹತ್ತಿರದಲ್ಲಿರುವ ತುಮಕೂರಿನಲ್ಲಿ ಸಮುದಾಯಭವನವಿಲ್ಲ.ಹಾಗಾಗಿ ಜಿಲ್ಲಾಡಳಿತ ಎರಡು ಎಕರೆ ಭೂಮಿ ನೀಡಿದರೆ ಸುಸಜ್ಜಿತ ಭವನ ನಿರ್ಮಾಣಕ್ಕೆ ಸಹಾಯ ಮಾಡಿದಂತಾಗುತ್ತದೆ.ಇದರ ಜೊತೆಗೆ ನಗರ ಟೌನ್‌ಹಾಲ್ ಮುಂಭಾಗದಲ್ಲಿ ಶ್ರೀಬಾಲ ಗಂಗಾಧರನಾಥಸ್ವಾಮೀಜಿಯವರ ಪುತ್ಥಳಿ ಹಾಗು ಜಿಲ್ಲಾಡಳಿತದ ಮಿನಿ ವಿಧಾನಸೌಧದ ಮುಂಭಾಗ ಕೆಂಪೇಗೌಡರ ಪುತ್ಥಳಿ ಆನಾವರಣ ಮಾಡಬೇಕೆಂಬ ಮನವಿಯನ್ನು ಗೃಹ ಸಚಿವರು ಹಾಗೂ ಸಹಕಾರ ಸಚಿವರಿಗೆ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ೧೦ಜನ ಪ್ರಗತಿಪರ ರೈತರಿಗೆ ಹಾಗೂ ನೂರಾರು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೆರವೇರಿ ಸಲಾಯಿತು.
ಆದಿಚುಂಚನಗಿರಿ ತುಮಕೂರು ಶಾಖಾ ಮಠದ ಶ್ರೀ ಮಂಗಳನಾಥಸ್ವಾಮೀಜಿ ಉಪಸ್ಥಿತರಿದ್ದರು.ವೇದಿಕೆಯಲ್ಲಿ ಶಾಸಕರಾದ ಎಸ್.ಆರ್.ಶ್ರೀನಿವಾಸ್,ಬಿ.ಸುರೇಶಗೌಡ,ಡಾ.ಕೆ.ರಂಗನಾಥ್,ಜಿ.ಬಿ.ಜೋತಿಗಣೇಶ್, ಚಿದಾನಂದಗೌಡ,ಮಾಜಿ ಸಂಸದ ಮುದ್ದ ಹನುಮೇಗೌಡ, ಮೇಯರ್ ಶ್ರಿಮತಿಪ್ರಭಾವತಿ ಸುಧೀಶ್ವರ್, ಮಾಜಿ ಶಾಸಕ ಹೆಚ್.ನಿಂಗಪ್ಪ, ಮುರುಳೀಧರ ಹಾಲಪ್ಪ,ಪಾಲಿಕೆ ಸದಸ್ಯ ಜೆ.ಕುಮಾರ್,ಧರಣೇಂದ್ರಕುಮಾರ್,ಕೇAದ್ರ ಒಕ್ಕಲಿಗರ ಸಂಘದ ನಿರ್ದೇಶಕ ಹನುಮಂತ ರಾಯಪ್ಪ,ಬಯಲು ಸೀಮೆ ಅಭಿವೃದ್ದಿ ಮಂಡಳಿ ಮಾಜಿ ಅಧ್ಯಕ್ಷ ಕಲ್ಲಹಳ್ಳಿ ದೇವರಾಜು,ಗಿರೀಶ್,ಕೃಷ್ಣೇಗೌಡ, ಕೆ.ಮುನು, ಶ್ರೀನಿವಾಸಮೂರ್ತಿ, ಉದಯ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬಿ.ಜಿ.ಎಸ್.ವೃತ್ತದಿಂದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದವರೆಗೆ ವಿವಿಧ ಕಲಾ ತಂಡಗಳ ಮೆರವಣಿಗೆಯೊಂದಿಗೆ ಕೆಂಪೇಗೌಡರ ಪುತ್ಥಳಿ ಮತ್ತು ಭಾವಚಿತ್ರವನ್ನು ಸಾವಿರಾರು ಜನರೊಂದಿಗೆ ವೇದಿಕೆಗೆ ತರಲಾಯಿತು.

(Visited 1 times, 1 visits today)
tumkur
Previous Articleಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದಿದ್ದರೆ ಶಿಸ್ತುಕ್ರಮ ಶಾಸಕ ಬಿ.ಸುರೇಶಗೌಡ ಎಚ್ಚರಿಕೆ
Next Article ಡಿಕೆಶಿ ನಾಯಕತ್ವವನ್ನು ಹೊಗಳಿದ ಶಾಸಕ ಬಿ. ಸುರೇಶ್ ಗೌಡ
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.