BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಮಿಳುನಾಡಿಗೆ ಕಾವೇರಿ ನೀರು ಆಗ್ರಹ : ಪ್ರತಿಭಟನೆ
ತುಮಕೂರು

ತಮಿಳುನಾಡಿಗೆ ಕಾವೇರಿ ನೀರು ಆಗ್ರಹ : ಪ್ರತಿಭಟನೆ

By News Desk BenkiyabaleUpdated:September 08, 2023 5:41 pm

ತುಮಕೂರು:


ಸಮರ್ಪಕ ವಿದ್ಯುತ್ ಪೂರೈಕೆ ಮಾಡದ, ಸಂಕಷ್ಟದ ನಡುವೆಯೂ ತಮಿಳುನಾಡಿಗೆ ಕಾವೇರಿ ನೀರು ಹರಿಸುತಿರುವ ರಾಜ್ಯ ಸರಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾ ವತಿಯಿಂದ ಬೆಸ್ಕಾಂ ಕಚೇರಿ ಎದುರು ಪ್ರತಿಭಟನಾ ಮರವಣಿಗೆ ನಡೆಸಿ, ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಸ್ಕಾಂ ಕಚೇರಿ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್,ರೈತ ಇಂದು ಬರಗಾಲದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾನೆ.ಮಳೆಯಿಲ್ಲದೆ ಹಾಕಿದ್ದ ಬೆಳೆ ನಷ್ಟವಾಗಿದೆ.ಬೆಳೆ ಉಳಿಸಿಕೊಳ್ಳಲು ನೀರಾವರಿ ಪಂಪ್‌ಸೆಟ್‌ಗಳ ಮೊರೆ ಹೋಗಿದ್ದಾರೆ.ಇಂತಹ ಸಂದರ್ಭದಲ್ಲಿ ಸರಕಾರ ವಿದ್ಯುತ್ ಕಡಿತ ಮಾಡುವ ಮೂಲಕ ರೈತರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದೆ.ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು.
ರಾಜ್ಯದಲ್ಲಿ ಮಳೆಯಿಲ್ಲದೆ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ.ಹೀಗಿದ್ದರೂ ಸರಕಾರ ತೆಮಿಳುನಾಡಿಗೆ ಪ್ರತಿದಿನ ೫ ಸಾವಿರ ಕ್ಯೂಸೆಕ್ಸ್ನಂತೆ ನೀರು ಹರಿಸುತ್ತಿದೆ.ಅಲ್ಲದೆ ಸುಮಾರು ೧೩೫ ತಾಲೂಕುಗಳಲ್ಲಿ ಬರ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಅಧಿಕಾರಿಗಳಾಗಲಿ ಬರ ಅಧ್ಯಯನ ನಡೆಸಿಲ್ಲ. ಇದರ ಬಗ್ಗೆ ಸರಕಾರ ತೀವ್ರ ನಿರ್ಲಕ್ಷ ವಹಿಸಿದೆ.ಅಲ್ಲದೆ ಮೂರು ಬಾರಿ ವಿದ್ಯುತ್ ಬಿಲ್ ಹೆಚ್ಚಳ ಮಾಡಿ ಗಾಯದ ಮೇಲೆ ಬರೆ ಎಳೆದಿದೆ ಇದು ಖಂಡನೀಯ.ಅಲ್ಲದೆ ರೈತರಿಗೆ ಕೇಂದ್ರ ಸರಕಾರ ನೀಡುತ್ತಿದ್ದ ಕೃಷಿ ಸನ್ಮಾನ ಯೋಜನೆಯನ್ನು ನಿಲ್ಲಿಸಿದೆ.ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಅನೇಕ ಯೋಜನೆಗಳನ್ನು ಸ್ಥಗೀತಗೊಳಿಸಿ,ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಶಿವಪ್ರಸಾದ್ ಆರೋಪಿಸಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ,ದಿನದ ೬ ಗಂಟೆ ಗುಣಮಟ್ಟದ ವಿದ್ಯುತ್ ನೀಡುವ ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ೨ ಗಂಟೆ ಗುಣಮಟ್ಟದ ವಿದ್ಯುತ್ ನೀಡಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ೧೦ ಕೋಟಿ ರೂಗಳಿಗೂ ಹೆಚ್ಚು ಖರ್ಚು ಮಾಡಿ ಕ್ಷೀರಭಾಗ್ಯ ಯೋಜನೆಯ ದಶಮಾನೋತ್ಸವ ಆಚರಿಸುವ ಅಗತ್ಯವಿತ್ತೇ ಎಂದು ಪ್ರಶ್ನಿಸಿದ ಅವರು, ಶಕ್ತಿ ಯೋಜನೆ ಮಂಚೂರು ಮಾಡಿ, ಬಸ್‌ಗಳ ಸಂಖ್ಯೆ ಕಡಿಮೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು, ದಿನವಹಿ ಓಡಾಡುವವರು ಪರದಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸರಕಾರದ ಪ್ರತಿ ತಪ್ಪುಗಳ ವಿರುದ್ದ ಹೋರಾಟ ನಡೆಯಲಿದೆ ಎಂದರು.
ಪ್ರತಿಭಟನೆಯಲ್ಲಿ ಹಿರಿಯ ಬಿಜೆಪಿ ಮುಖಂಡರಾದ ಎಂ.ಬಿ.ನAದೀಶ್, ನರಸಿಂಹಮೂರ್ತಿ, ಸತ್ಯಮಂಗಲ ಜಗದೀಶ್, ಬಿಎಸ್.ನಾಗಣ್ಣ, ಹನುಮಂತರಾಜು, ವಿನಯ್ ಬಿದರೆ, ಮಹಿಳಾ ಘಟಕದ ಅಂಬಿಕಾ ಹುಲಿನಾಯ್ಕರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

 

ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶಗೌಡ ಮಾತನಾಡಿ,ಸರಕಾರ ಒಂದು ದಿನದ ವಿದ್ಯುತ್ ಖರೀದಿಗೆ ೪೦ ಕೋಟಿ ರೂ ಬೇಕು. ಗ್ಯಾರಂಟಿಗಳಿಗೆ ಹಣ ಹೊಂದಿಸುವ ಭರದಲ್ಲಿ ವಿದ್ಯುತ್ ಉತ್ಪಾಧನೆಯನ್ನೇ ನಿಲ್ಲಿಸಿದೆ.ಇದರ ಪರಿಣಾಮ ಗುಣಮಟ್ಟದ ವಿದ್ಯುತ್ ಸರಬರಾಜು ಸಾಧ್ಯವಾಗುತ್ತಿಲ್ಲ.ಕಾಂಗ್ರೆಸ್ ಸರಕಾರ ಬಂದ ನೂರು ದಿನಗಳಲ್ಲಿ ನೂರಾರು ತಪ್ಪುಗಳನ್ನು ಮಾಡಿ,ಜನತೆಯಿಂದ ಛೀಮಾರಿಗೆ ಒಳಗಾಗಿದೆ.ಇಂತಹ ಸರಕಾರ ಹೋಗಬೇಕು ಎಂಬುದು ಜನರ ಆಶಯವಾಗಿದೆ.ಶಕ್ತಿಯೋಜನೆ, ಗೃಹ ಲಕ್ಷಿö್ಮ,ಅನ್ನಭಾಗ್ಯ, ಗೃಹ ಜ್ಯೋತಿ ಯೋಜನೆಯಡಿ ಶೇ೫೦ರಷ್ಟು ಪ್ರಗತಿಯಾಗಿಲ್ಲ.ಇವರ ಗ್ಯಾರಂಟಿ ನಂಬಿ ಮತ ನೀಡಿದ ಜನರು ಭ್ರಮನಿರಶನಕ್ಕೆ ಒಳಗಾಗಿದ್ದಾರೆ.ಇದು ಸಾಂಕೇತಿಕ ಹೋರಾಟವಾಗಿದೆ. ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಮಸ್ಯೆ ಬಗೆಹರಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದರು.

(Visited 1 times, 1 visits today)
tumkur
Previous Articleಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ
Next Article ಸಾಕ್ಷರತಾ ದಿನ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.