BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ
  • ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ
  • ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ
  • ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ
  • ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ
  • ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ
  • ಮನುಷ್ಯ ತನ್ನನ್ನು ತಾನು ತಿಳಿಯುವ ಪ್ರಯತ್ನ ಮಾಡಬೇಕು
  • ರಸ್ತೆ ತಡೆಗೋಡೆಗೆ ಆಟೋ ಡಿಕ್ಕಿ, 3 ಮಕ್ಕಳು ಸೇರಿ ದಂಪತಿ ಸಾವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೆಸ್ಕಾಂ ನಿಂದ ವಿದ್ಯುತ್ ಸುರಕ್ಷತಾ ಜಾಥಾ
ತುಮಕೂರು ಜಿಲ್ಲಾ ಸುದ್ಧಿಗಳು

ಬೆಸ್ಕಾಂ ನಿಂದ ವಿದ್ಯುತ್ ಸುರಕ್ಷತಾ ಜಾಥಾ

By News Desk BenkiyabaleUpdated:December 15, 2023 6:26 pm

ತುಮಕೂರು


ವಿದ್ಯುತ್ ಅಪಘಾತ ತಡೆಯುವ ಸಪ್ತಾಹದ ಅಂಗವಾಗಿ ಬೆಸ್ಕಾಂ ತುಮಕೂರು ವಿಭಾಗದ ವತಿಯಿಂದ ವಿದ್ಯುತ್ ಸುರಕ್ಷತಾ ಜಾಥಾವನ್ನು ನಗರದಲ್ಲಿ ನಡೆಸಲಾಯಿತು.
ನಗರದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಆರಂಭವಾದ ವಿದ್ಯುತ್ ಸುರಕ್ಷತಾ ಜನಜಾಗೃತಿ ಜಾಥಾಕ್ಕೆ ಬೆಸ್ಕಾಂ ಅಧೀಕ್ಷಕ ಇಂಜಿನಿಯರ್ ಹೆಚ್.ವಿ. ಕೃಷ್ಣ ಪ್ರಸಾದ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಸಾರ್ವಜನಿಕರು, ರೈತರು, ಶಾಲಾ ಮಕ್ಕಳು ಹಾಗೂ ಬೆಸ್ಕಾಂ ಸಿಬ್ಬಂದಿಗಳಿಗೆ ವಿದ್ಯುತ್ ಅಪಘಾತವನ್ನು ತಡೆಯುವ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಾಥಾ ನಡೆಸಲಾಗುತ್ತಿದೆ ಎಂದರು.
ವಿದ್ಯುತ್ ಅಪಘಾತ ಉಂಟಾಗದAತೆ ಹೇಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಬೆಸ್ಕಾಂ ಮುಂದಾಗಿದೆ.
ಅಪಘಾತಗಳನ್ನು ತಡೆಗಟ್ಟುವ ಸಲುವಾಗಿ ಸುರಕ್ಷತಾ ಜಾಥಾ ನಡೆಸಿ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಕಟ್ಟಡಗಳನ್ನು ವಿದ್ಯುತ್ ತಂತಿಗಳ ಸಮೀಪ ನಿರ್ಮಿಸಬಾರದು. ತುಂಡಾಗಿ ಬಿದ್ದ ವಿದ್ಯುತ್ ತಂತಿಗಳನ್ನು ಮುಟ್ಟಬಾರದುಯ ತಕ್ಷಣ ಬೆವಿಕಂ ಸಹಾಯವಾಣಿ ೧೯೧೨ಗೆ ಕರೆ ಮಾಡಿ ಮಾಹಿತಿ ತಿಳಿಸಬೇಕು ಎಂದರು.
ವಿದ್ಯುತ್ ಸ್ವಿಚ್‌ಗಳು ಹಾಗೂ ವಿದ್ಯುತ್ ಉಪಕರಣಗಳನ್ನು ಒದ್ದೆ ಕೈಗಳಿಂದ ಮುಟ್ಟಬಾರದು. ವಿದ್ಯುತ್ ಕಂಬಗಳಿಗೆ ಬ್ಯಾನರ್ ಅಥವಾ ಜಾಹೀರಾತು ಫಲಕಗಳನ್ನು ಕಟ್ಟಬೇಡಿ ಎಂದು ಅವರು ಸಲಹೆ ನೀಡಿದರು.
ತುಮಕೂರು ತಾಲ್ಲೂಕಿನ ೨೨೦ ಹಾಗೂ ಗುಬ್ಬಿ ತಾಲ್ಲೂಕಿನ ೧೮೦ ಶಾಲೆಗಳಲ್ಲಿ ಚಿತ್ರಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಏರ್ಪಡಿಸಿ ವಿದ್ಯುತ್ ಅಪಘಾತಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.
ವಿದ್ಯುತ್ ಅಪಘಾತ ತಡೆಗಟ್ಟಲು ಸಾರ್ವಜನಿಕರು ಬೆಸ್ಕಾಂನೊAದಿಗೆ ಸಹಕರಿಸಬೇಕು ಎಂದು ಅವರು ಕೋರಿದರು.
ವಿದ್ಯುತ್ ತಂತಿಗಳ ಮೇಲೆ ಬಿದ್ದಿರುವ ಮರಗಳನ್ನು ಹಾಗೂ ಮರದ ಕೊಂಬೆಗಳನ್ನು ತೆಗೆಯಲು ಪ್ರಯತ್ನಿಸಬೇಡಿ. ತಂತಿ ಬೇಲಿಗಳಿಗೆ ವಿದ್ಯುತ್ ಹಾಯಿಸಬಾರದು. ಬೆವಿಕಂ ಲೈನ್‌ನಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆದುಕೊಳ್ಳುವುದು ಅಪರಾಧ ಎಂದರು.
ಇದೇ ಸಂದರ್ಭದಲ್ಲಿ ಅಧೀಕ್ಷಕ ಇಂಜಿನಿಯರ್ ಕೃಷ್ಣಪ್ಪ ಅವರು ಬೆಸ್ಕಾಂ ಪವರ್‌ಮೆನ್‌ಗಳಿಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಿAದ ಹೊರಟ ಜಾಥಾವು ಅಶೋಕ ರಸ್ತೆ, ಟೌನ್‌ಹಾಲ್ ವೃತ್ತ, ಬಿ.ಹೆಚ್. ರಸ್ತೆ ಮುಖೇನ, ಸ್ವಾಮೀಜಿ ಸರ್ಕಲ್ ಮೂಲಕ ಹಾದು ಬೆಸ್ಕಾಂ ಕಚೇರಿ ತಲುಪಿತು.
ಜಾಥಾದಲ್ಲಿ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ಮೇಘರಾಜ್, ಅನಂತರಾಮಯ್ಯ, ಎಇಇಗಳಾದ ಮಲ್ಲಣ್ಣ, ನಾಗರಾಜು, ಹರೀಶ್, ಪುರುಷೋತ್ತಮ್, ಅಮ್ಜದ್, ಶೈಲೇಂದ್ರ, ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಹೆಚ್. ವೆಂಕಟರಮಣಯ್ಯ, ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳು, ಪವರ್‌ಮೆನ್‌ಗಳು ಭಾಗವಹಿಸಿದ್ದರು.

(Visited 1 times, 1 visits today)
Previous Articleಜವರಾಯನ ಕೆಳಗೆ ಕಂದಮ್ಮಗಳ ಆಟ, ಪಾಠ, ಊಟ!
Next Article ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು: ಜಿಲ್ಲಾಧಿಕಾರಿ ಶುಭಾ ಕಲ್ಯಾಣ್
News Desk Benkiyabale

Related Posts

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm news
ತಾಜಾ ಸುದ್ಧಿಗಳು
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm
news

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm
news

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm
news

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
news

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
news

ಆದೇಶ ಧಿಕ್ಕರಿಸಿ ರಾಜ್ಯದ ಪರ ನಿಲ್ಲಲು ಸರ್ಕಾರಕ್ಕೆ ಒತ್ತಾಯ

August 01, 2026 2:41 pm
Our Youtube Channel
Our Picks

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

August 03, 2026 4:58 pm

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm

ಸಹಕಾರ ಸಂಘದ ಸುವರ್ಣ ಮಹೋತ್ಸವ: ಹಿರಿಯರಿಗೆ ಗೌರವಾರ್ಪಣೆ

August 03, 2026 4:48 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೨ಎ ಮೀಸಲಾತಿ ದೊರೆಯಬೇಕೆಂಬ ಒತ್ತಾಯ

By News Desk BenkiyabaleAugust 03, 2026 4:58 pm

ತುಮಕೂರು: ಬಲಿಜ ಸಮುದಾಯಕ್ಕೆ ಶೈಕ್ಷಣಿಕವಾಗಿ ೨ಎ ಮೀಸಲಾತಿ ದೊರೆಯುತ್ತಿದ್ದು, ಉದ್ಯೋಗ ಮತ್ತು ರಾಜಕೀಯ ಕ್ಷೇತ್ರದಲ್ಲಿಯೂ ೨ಎ ಮೀಸಲಾತಿ ದೊರೆಯು ಬೇಕೆಂಬುದು…

ವಿವೇಕಾನ0ದರ ಸಾಧನೆಯ ಹಾದಿ ಪ್ರತಿಯೊಬ್ಬ ವಿದ್ಯಾರ್ಥಿಯ ಗುರಿಯಾಗಲಿ

August 03, 2026 5:00 pm

ನೀಲಕಂಠೇಶ್ವರ ಸ್ವಾಮಿ ಪತ್ತಿನ ಸಹಕಾರ ಸಂಘಕ್ಕೆ ಬೆಳ್ಳಿಹಬ್ಬ ಸಂಭ್ರಮ

August 03, 2026 4:53 pm

ಬಂದ್‌ಗೆ ಕನ್ನಡ ಪರ, ಇತರೆ ಸಂಘಗಳ ಒಕ್ಕೂಟ ಬೆಂಬಲ

August 03, 2026 4:50 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.