BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗ್ರಾಮೀಣ ಕಲೆಗಳನ್ನು ಜೀವಂತವಾಗಿಡಲು ಗಿರಿಜನ ಉತ್ಸವ
ಇತರೆ ಸುದ್ಧಿಗಳು

ಗ್ರಾಮೀಣ ಕಲೆಗಳನ್ನು ಜೀವಂತವಾಗಿಡಲು ಗಿರಿಜನ ಉತ್ಸವ

By News Desk BenkiyabaleUpdated:January 09, 2024 5:56 pm

ತುಮಕೂರು


ಸೋಮನ ಕುಣಿತ, ಮ್ಯಾಸಿಫ್ ಡೋಲು, ಗಾರುಡಿಗೊಂಬೆ, ಚಕ್ಕೆ ಭಜನೆ, ಸುಗಮ ಸಂಗೀತ, ಜನಪದ ಗೀತೆ, ರಂಗಗೀತೆ, ಪೌರಾಣಿಕ ನಾಟಕಗಳಂತಹ ಗ್ರಾಮೀಣ ಕಲೆಗಳು ನಶಿಸಿ ಹೋಗದಂತೆ ಜೀವಂತವಾಗಿಡಲು ಗಿರಿಜನ ಉತ್ಸವದಂತಹ ಕಾರ್ಯಕ್ರಮಗಳು ಸಹಕಾರಿ ಎಂದು ಗೃಹ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷಾಧಿಕಾರಿ ಡಾ ನಾಗಣ್ಣ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೊರಟಗೆರೆ ತಾಲ್ಲೂಕು ಹಂಚಿಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಂಭಾಗದಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ “ಗಿರಿಜನ ಉತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗಿರಿಜನ ಉತ್ಸವವು ಸರ್ಕಾರದ ಅತ್ಯುತ್ತಮ ಯೋಜನೆಯಾಗಿದ್ದು, ಜಿಲ್ಲೆಯ ಪ್ರತಿಭಾವಂತ ಪರಿಶಿಷ್ಟ ಪಂಗಡದ ಕಲಾವಿದರಿಗೆ ವೇದಿಕೆ ಒದಗಿಸುವ ಮೂಲಕ ಗ್ರಾಮೀಣ ಕಲೆಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿರುವುದು ಶ್ಲಾಘನೀಯ ಎಂದು ತಿಳಿಸಿದರು.
ಹಂಚಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್. ಭೀಮರಾಜು ಅವರು ಮೆರವಣಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಇಂತಹ ಕಾರ್ಯಕ್ರಮಗಳನ್ನು ಗಡಿ ತಾಲ್ಲೂಕು ಮತ್ತು ಗ್ರಾಮದಲ್ಲಿ ನಡೆಸುತ್ತಿರುವುದು ಹೆಚ್ಚು ಅರ್ಥಪೂರ್ಣವಾಗಿದೆ. ಇಂದಿನ ದಿನಗಳಲ್ಲಿ ಟಿವಿ, ಮೊಬೈಲ್‌ಗಳಲ್ಲಿಯೇ ಕಾಲ ಕಳೆಯುವುದು ಗೀಳಾಗಿ ಮಾರ್ಪಟ್ಟಿದೆ. ಇದರ ಬದಲಾಗಿ ಗ್ರಾಮೀಣ ಸೊಗಡನ್ನು ಪಸರಿಸುವಂತಹ ಇಂತಹ ಕಾರ್ಯಕ್ರಮಗಳನ್ನು ವೀಕ್ಷಿಸುವ ಮೂಲಕ ಕಲೆಯನ್ನು ಪ್ರೋತ್ಸಾಹಿಸಬೇಕು ಎಂದು ತಿಳಿಸಿದರು.
ಕೊರಟಗೆರೆ ತಾಲ್ಲೂಕು ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮೈಲಾರಪ್ಪ ಮಾತನಾಡಿ, ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಕಲೆಗಳನ್ನು ಇನ್ನು ಜೀವಂತವಾಗಿ ಉಳಿಸಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಧ್ಯವಾಗುತ್ತಿದೆ. ಇಂತಹ ಕಾರ್ಯಕ್ರಮಗಳಿಂದ ಗಿರಿಜನರ ಪ್ರತಿಭೆ ಹಾಗೂ ಅವರ ವೈವಿಧ್ಯಮಯ ಕಲೆಗಳನ್ನು ಪ್ರದರ್ಶಿಸಲು ಹಾಗೂ ಪ್ರೋತ್ಸಾಹಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.
ಸ್ವರ ಸಿಂಚನ ಸುಗಮ ಸಂಗೀತ ಸಂಸ್ಥೆಯ ಅಧ್ಯಕ್ಷ ಕೆಂಕೆರೆ ಮಲ್ಲಿಕಾರ್ಜುನ್ ಮಾತನಾಡಿ, ಜಾನಪದ ಕಲಾ ಪ್ರಕಾರಗಳ ಉಳಿವು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಾಂಸ್ಕೃತಿಕ ಆಚರಣೆಗಳ ಪುನರುಜ್ಜೀವನಕ್ಕಾಗಿ ಇಲಾಖೆಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕ ಆಚರಣೆಗಳನ್ನು ಜನಪ್ರಿಯಗೊಳಿಸುವ ಮುಖೇನ ಅವುಗಳನ್ನು ಮುಖ್ಯ ವಾಹಿನಿಗೆ ತರಲು ಇಂತಹ ಕಾರ್ಯಕ್ರಮಗಳು ಹೆಚ್ಚು ಪೂರಕವಾಗಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಂಚಿಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ರಮೇಶ್, ಕೊರಟಗೆರೆ ತಾಲ್ಲೋಕಿನ ಭಾರತ್ ಸ್ಕೌಟ್ಸ್ & ಗೈಡ್ಸ್ ಅಧ್ಯಕ್ಷರಾದ ಕೆ.ಆರ್. ಓಬಳರಾಜು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಎಂ.ಎನ್. ರೇಣುಕಾ, ಮಹರ್ಷಿ ವಾಲ್ಮೀಕಿ ಕಲಾಸಂಘದ ಅಧ್ಯಕ್ಷರಾದ ಹನುಮಂತರಾಜು, ಹಿರಿಯ ಕಲಾವಿದರಾದ ರಾಮಕೃಷ್ಣಯ್ಯ ಚಿಕ್ಕಪಾಲನಹಳ್ಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೇಲ್ವಿಚಾರಕರಾದ ಡಿ.ವಿ. ಸುರೇಶ್ ಕುಮಾರ್ ಹಾಗೂ ಹಂಚಿಹಳ್ಳಿ ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರುಗಳು ಭಾಗವಹಿಸಿದ್ದರು. ಕೊರಟಗೆರೆ ಪಟ್ಟಣ ಪಂಚಾಯಿತಿ ಸದಸ್ಯರಾದ ಕೆ.ಆರ್. ಓಬಳರಾಜು ಅವರು ಕಾರ್ಯಕ್ರಮ ನಿರೂಪಿಸಿದರು.
ವೇದಿಕೆ ಕಾರ್ಯಕ್ರಮದ ಪೂರ್ವದಲ್ಲಿ ಏರ್ಪಡಿಸಲಾಗಿದ್ದ ಮೆರವಣಿಗೆ ಕಾರ್ಯಕ್ರಮದಲ್ಲಿ ಕೆಂಪರಾಜು ತಂಡದಿAದ ಸೋಮನಕುಣಿತ, ಶಿವಶಂಕರಯ್ಯ ತಂಡದಿAದ ಮ್ಯಾಸಿಫ್ ಡೋಲು, ಬಲರಾಮ ತಂಡದಿAದ ಗಾರುಡಿಗೊಂಬೆ, ಮಲ್ಲಿಕಾರ್ಜುನ ತಂಡದಿAದ ಚಕ್ಕೆಭಜನೆ, ಜಯಸಿಂಹ ತಂಡದಿAದ ನಾಸಿಕ್ ಡೋಲು ಹಾಗೂ ರಾಜಶೇಖರ್ ತಂಡದಿAದ ಪೂಜಾ ಕುಣಿತ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು. ವೇದಿಕೆಯಲ್ಲಿ ಡಾ: ರಾಜ್ ಕುಮಾರ್ ವಾಯ್ಸ್ ಖ್ಯಾತಿಯ ಎಲ್.ಮಂಜಣ್ಣ ತಂಡದಿAದ ಸಂಗೀತ, ನಾಡಿನ ಖ್ಯಾತ ಜನಪದ ಗಾಯಕರಾದ ಡಿ.ಆರ್.ರಾಜಪ್ಪ ತಂಡದಿAದ ಜನಪದ ಗೀತೆ, ಗೆಜ್ಜೆನಾದ ಸಾಂಸ್ಕೃತಿಕ ಸಂಸ್ಥೆ(ರಿ)ಯ ವತಿಯಿಂದ ರಂಗಗೀತೆ, ಮಹರ್ಷಿ ವಾಲ್ಮೀಕಿ ಕಲಾಸಂಘ(ರಿ)ದ ವತಿಯಿಂದ ಪೌರಾಣಿಕ ನಾಟಕ (ಕುರುಕ್ಷೇತ್ರ) ಕಾರ್ಯಕ್ರಮಗಳನ್ನು ನಡೆಸಲಾಯಿತು.

(Visited 1 times, 1 visits today)
Gubbi
Previous Articleನಾಮಫಲಕಗಳಲ್ಲಿ ಕನ್ನಡ ಬಳಸದಿದ್ದಲ್ಲಿ ಉದ್ದಿಮೆಗಳ ಪರವಾನಗಿ ರದ್ದು: ಅಶ್ವಿಜ ಬಿ.ವಿ.
Next Article ಹುಳಿಯಾರು ಪದವಿ ಕಾಲೇಜಿನಲ್ಲಿ ಕಿರುನಾಟಕಗಳ ಸ್ಪರ್ಧೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.