BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ
  • ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ
  • ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ
  • ವಿಶ್ವಕರ್ಮ ಜನಾಂಗ ಕಾಯಕ, ಶ್ರಮ ಸಂಸ್ಕತಿಯ ಸಂಕೇತ
  • ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ
  • ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ
  • ಶಾಲಾ ಸಾಮಗ್ರಿಗಳಿಂದ ಅರಳಿದ ವಿದ್ಯಾ ಗಣಪತಿ
  • ನ್ಯಾಯ ಸಮ್ಮತ ಬೇಡಿಕೆಗಳ ಈಡೇರಿಕೆಗಾಗಿ ಸೆ. ೨೧ ರಿಂದ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿ ಅಸಹಕಾರ ಚಳವಳಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಸುಗೆ ‘ಕರ್ನಾಟಕ ರತ್ನ’ ನೀಡಿ
ಕರ್ನಾಟಕ ಸುದ್ಧಿಗಳು

ಅರಸುಗೆ ‘ಕರ್ನಾಟಕ ರತ್ನ’ ನೀಡಿ

By News Desk BenkiyabaleUpdated:December 03, 2024 5:32 pm

ತುಮಕೂರು: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿಬೇಕು ಎಂದು ಕೋರಿ ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರು ಸೋಮವಾರ ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ ಸಲ್ಲಿಸಿದರು.
ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಒಕ್ಕೂಟದ ಮುಖಂಡರು, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಅವರು ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಿಂದುಳಿದವರು, ಶೋಷಿತರಿಗೆ ನೆರವಾಗಿವೆ. ಧ್ವನಿ ಇಲ್ಲದ ವರ್ಗದ ಧ್ವನಿಯಾಗಿ ಅರಸು ಅವರು ಹಲವಾರು ಕಾರ್ಯಕ್ರಮಗಳ ಮೂಲಕ ನಾಡಿಗೆ ಕೊಡುಗೆ ನೀಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯ ಜಾರಿಗೆ ತಂದು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಲು ಕಾರಣಕರ್ತರು. ಇವರ ಸೇವೆ ಸದಾ ಸ್ಮರಣೀಯ. ಇಂತಹ ಮಹನೀಯರಿಗೆ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪÀ್ರಶಸ್ತಿ ನೀಡಿ ಅವರ ಸೇವೆಯನ್ನು ಗೌರವಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಮನವಿಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದರು.ದೇವರಾಜ ಅರಸು ಅವರು ಹುಟ್ಟಿದ ಮನೆಯನ್ನು ದುರಸ್ತಿಗೊಳಿಸಬೇಕು, ಅವರ ಸಮಾಧಿಯನ್ನು ಸ್ಮಾರಕವಾಗಿ ಅಭಿವೃದ್ಧಿಪಡಿಸಬೇಕು ಎಂದು ಮನವಿ ಮಾಡಿದರು.
ಹಿಂದುಳಿದ ವರ್ಗಗಳ ಒಕ್ಕೂಟದ ಗೌರವಾಧ್ಯಕ್ಷ ಟಿ.ಎನ್.ಮಧುಕರ್, ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಗೌರವ ಸಲಹೆಗಾರರಾದ ವೆಂಕಟಸ್ವಾಮಿ, ಪಿ.ಮೂರ್ತಿ, ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಉಪಾಧ್ಯಕ್ಷ ಡಿ.ಎಂ.ಸತೀಶ್, ಪದಾಧಿಕಾರಿಗಳಾದ ಹರೀಶ್ ಆಚಾರ್ಯ, ಮಂಜೇಶ್ ಒಲಿಂಪಿಕ್, ಗುರುರಾಘವೇಂದ್ರ, ಡಮರುಗೇಶ್, ಶಾಂತಕುಮಾರ್, ತೇಜಸ್, ತೇಜೇಶ್ ಮೊದಲಾದವರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಮನವಿ ಮಾಡಿದರು.

(Visited 1 times, 1 visits today)
ಕರ್ನಾಟಕ ರತ್ನ ದೇವರಾಜ ಅರಸು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗ
Previous Articleಅಪಘಾತ: ಪತ್ರಕರ್ತೆ ಸೇರಿ ಮೂವರು ಮಹಿಳೆಯರು ಸಾವು
Next Article ಜಗತ್ತಿಗೆ ಯೋಗ ಹೇಳಿಕೊಟ್ಟವರು ಭಾರತೀಯರು
News Desk Benkiyabale

Related Posts

ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ

September 17, 2026 5:36 pm news

ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ

September 17, 2026 5:35 pm news

ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ

September 17, 2026 5:33 pm news
ತಾಜಾ ಸುದ್ಧಿಗಳು

ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ

September 17, 2026 5:36 pm
news

ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ

September 17, 2026 5:35 pm
news

ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ

September 17, 2026 5:33 pm
news

ವಿಶ್ವಕರ್ಮ ಜನಾಂಗ ಕಾಯಕ, ಶ್ರಮ ಸಂಸ್ಕತಿಯ ಸಂಕೇತ

September 17, 2026 5:31 pm
news

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
news

ಉಪ ಮುಖ್ಯಮಂತ್ರಿಗಳಿ0ದ ತುಮಕೂರು ದಸರಾ-೨೦೨೬ ಲಾಂಛನ ಬಿಡುಗಡೆ

September 16, 2026 5:18 pm
Our Youtube Channel
Our Picks

ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ

September 17, 2026 5:36 pm

ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ

September 17, 2026 5:35 pm

ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ

September 17, 2026 5:33 pm

ವಿಶ್ವಕರ್ಮ ಜನಾಂಗ ಕಾಯಕ, ಶ್ರಮ ಸಂಸ್ಕತಿಯ ಸಂಕೇತ

September 17, 2026 5:31 pm

ಸರ್ಕಾರದಿಂದ ಇಂಜಿನಿಯರ್ಸ್ ದಿನ ಆಚರಣೆ

September 16, 2026 5:32 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೆರೆಯ ನೀರನ್ನ ಅಕ್ರಮವಾಗಿ ತೋಟಕ್ಕೆ ಹರಿಸಿಕೊಂಡ ಆರೋಪ: ಆಕ್ರೋಶ

By News Desk BenkiyabaleSeptember 17, 2026 5:36 pm

ಕೊರಟಗೆರೆ: ಮಳೆ ಇಲ್ಲದೆ ಜಾನುವಾರು, ಪ್ರಾಣಿ ಪಕ್ಷಿಗಳಿಗೆ ಕುಡಿಯುವ ನೀರಿಗೂ ತೊಂದರೆ ಉಂಟಾಗಿದ್ದು, ರಾತ್ರಿ ಹೊತ್ತಲ್ಲಿ ಕೆರೆಯ ನೀರನ್ನು ಖಾಸಗಿ…

ದಸರಾ ಉತ್ಸವ: ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯ

September 17, 2026 5:35 pm

ಶಾಸಕರೇ ವಿಶ್ವಕರ್ಮ ಸಮುದಾಯದವರಿಗೂ ಅನುದಾನ ನೀಡಿ

September 17, 2026 5:33 pm

ವಿಶ್ವಕರ್ಮ ಜನಾಂಗ ಕಾಯಕ, ಶ್ರಮ ಸಂಸ್ಕತಿಯ ಸಂಕೇತ

September 17, 2026 5:31 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.