BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ
  • ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು
  • ಮದರ್ ಥೆರೆಸಾರವರ ಜನ್ಮದಿನಾಚರಣೆ
  • ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ
  • ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ
  • ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ
  • ಅಡಿಕೆ ತೋಟದಲ್ಲಿ ಕಿಡಿಗೇಡಿಗಳ ಅಟ್ಟಹಾಸ: ಗಿಡಗಳು ನೆಲಸಮ
  • ಗ್ರಾಮ ದೇವತೆ ಅಮ್ಮನವರ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲ
ಕರ್ನಾಟಕ ಸುದ್ಧಿಗಳು

ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲ

By News Desk BenkiyabaleUpdated:December 13, 2024 6:41 pm

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.
ಬಿಜಿಎಸ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಅಹಿಂದ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಹಿಂದುಳಿದ ವರ್ಗದ ಜನರ ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಕೃಷಿ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ. ಹಿಂದಿನ ಬಿಜೆಪಿ ಸರ್ಕಾರ ಹಿಂದುಳಿದವರ ಅಭಿವೃದ್ಧಿಗಾಗಿ ಒಂದು ಸಾವಿರ ಕೋಟಿ ರೂ.ಗಳನ್ನು ನಿಗಮಗಳಿಗೆ ಬಿಡುಗಡೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ 1500 ಕೋಟಿ ರೂ.ಗಳಲ್ಲಿ ಕೇವಲ 170 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.
ಹಿAದುಳಿದ, ಅತಿ ಹಿಂದುಳಿದ, ಅಲೆಮಾರಿ ಸಮುದಾಯಗಳು ಹಿಂದಿನ ಸರ್ಕಾರದಲ್ಲಿ ಪಡೆಯುತ್ತಿದ್ದ ಸ್ವಯಂ ಉದ್ಯೋಗ ಯೋಜನೆ, ವಿದ್ಯಾರ್ಥಿ ಅರಿವು ಯೋಜನೆ, ಗಂಗಾ ಕಲ್ಯಾಣ ಯೋಜನೆಯಡಿ ಉಚಿತ ಬೋರ್‌ವೆಲ್ ಕೊರೆಸುವ ಯೋಜನೆ ಸ್ಥಗಿತಗೊಂಡಿದೆ. ಹಿಂದುಳಿದ ವರ್ಗಕ್ಕೆ ಮೀಸಲಾದ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ ಎಂದು ದೂರಿದರು.
ತಮ್ಮಿಂದ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆಯವರಿಗೆ ಅವಕಾಶ ಮಾಡಿಕೊಡಿ, ವ್ಯವಸ್ಥೆಯನ್ನು ಹಾಳು ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯನವರನ್ನು ಒತ್ತಾಯಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷರು, ನಿಗಮಗಳಿಗೆ ಹಣ ನೀಡಿ ಆಯಾ ಸಮುದಾಯದ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಕಾಂಗ್ರೆಸ್‌ನವರು ಚುನಾವಣೆಗೆ ಬಳಸಿದ್ದಾರೆ, ಇವರಿಗೆ ಜನರ ಹಿತಕ್ಕಿಂಥಾ ಚುನಾವಣೆ ಗೆಲ್ಲುವುದೇ ಮುಖ್ಯವಾಗಿದೆ ಎಂದು ಟೀಕಿಸಿದರು.
ರೈತ ಮೋರ್ಚಾ ಮುಖಂಡ ಎಸ್.ಶಿವಪ್ರಸಾದ್ ಮಾತನಾಡಿ, ದೇವರಾಜ ಅರಸು ಅವರ ನಂತರ ತಾವೇ ಹಿಂದುಳಿದ ನಾಯಕ ಎಂದು ಬಿಂಬಿಸಿಕೊAಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಯಾವುದೇ ಪ್ರಾತಿನಿಧ್ಯ ಸಿಗದ ಹಿಂದುಳಿದ ವರ್ಗಗಳ ಸಣ್ಣಪುಟ್ಟ ಸಮುದಾಯಗಳ ಜನರಲ್ಲಿ ಆರ್ಥಿಕ ಶಕ್ತಿ ತುಂಬುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ನೀಡಿದ್ದ ಭರವಸೆಯನ್ನು ಈಡೇರಿಸದೆ ಜನರನ್ನು ದಿಕ್ಕುತಪ್ಪಿಸಿದರು. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದ ಮಂತ್ರ ಜಪಿಸುತ್ತಿದ್ದಾರೆ, ಈ ಸಮುದಾಯಗಳ ಕಲ್ಯಾಣಕ್ಕೆ ಅನ್ಯಾಯ ಮಾಡಿದ್ದಾರೆ ಎಂದರು.
ಪರಿಶಿಷ್ಟ ಜಾತಿ-ವರ್ಗದ ನಿಗಮಗಳ ಹಣವನ್ನು ತೆಗೆದುಕೊಂಡು ಅನ್ಯ ಉದ್ದೇಶಕ್ಕೆ ಬಳಸಿ ಆ ಸಮುದಾಯಗಳಿಗೆ ಅನ್ಯಾಯ ಮಾಡಿದ್ದಾರೆ ಎಂದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಲ್ಲಿ ಹಿಂದುಳಿದ ವರ್ಗದವರು ಆಶಾಭಾವನೆ ಹೊಂದಿದ್ದರು. ದೇವರಾಜ ಅರಸು ನಂತರ ಹಿಂದುಳಿದ ವರ್ಗದಲ್ಲಿ ದೊಡ್ಡ ಬದಲಾವಣೆ ತರುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಒಂದೂವರೆ ವರ್ಷದಲ್ಲೇ ಇವರ ಮುಖವಾಡ ಕಳಚಿಬಿದ್ದಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಸ್ಥಾಪನೆಗೊಂಡ ನಿಗಮಗಳಿಗೆ ಹಿಂದಿನ ಬೊಮ್ಮಾಯಿ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದಂತೆ 546 ಕೋಟಿ ರೂ ಅನುದಾನ ಬಿಡುಗಡೆ ಮಾಡಿದರೆ, ಸಿದ್ದರಾಮಯ್ಯ ಸರ್ಕಾರ 1500 ಕೋಟಿ ರೂ. ಅನುದಾನ ಘೋಷಿಸಿ ಬಿಡುಗಡೆ ಮಾಡಿರುವುದು ಕೇವಲ 170 ಕೋಟಿ ರೂ. ಎಂದರು. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬ್ಯಾಟರಂಗೇಗೌಡ ಮಾತನಾಡಿ, ಹಿಂದುಳಿದ ವರ್ಗವನ್ನು ಗುರಾಣಿ ಮಾಡಿಕೊಂಡು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಸರ್ಕಾರ ಆ ವರ್ಗ ನೆನಪಿಸಿಕೊಳ್ಳುವಂತಹ ಯಾವುದೇ ಕೆಲಸ ಮಾಡಲಿಲ್ಲ. ಹಿಂದುಳಿದ ವರ್ಗದ ನಾಯಕ ಎಂದು ಹೇಳಿಕೊಂಡು ಆ ವರ್ಗಕ್ಕೆ ಏನೇನೂ ನೀಡದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿಲುವುಗಳ ಬಗ್ಗೆ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಪ್ರಚಾರ ಮಾಡಬೇಕು ಎಂದು ಹೇಳಿದರು. ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ ಮಾತನಾಡಿ, ಹಿಂದುಳಿದ ವರ್ಗಗಳ ಸಣ್ಣಪುಟ್ಟ ಸಮಾಜದವರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕು ಎಂದು ಸ್ಥಾಪನೆಯಾಗಿರುವ ಅಭಿವೃದ್ಧಿ ನಿಗಮಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷ ಮಾಡಿದೆ. ನಿಗಮಗಳಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಲಿ ಇಲ್ಲವೆ ಎಲ್ಲಾ ನಿಗಮಗಳನ್ನು ಮುಚ್ಚಿಬಿಡಲಿ ಎಂದು ಹೇಳಿದರು. ಒಬಿಸಿ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯ ಬನಶಂಕರಿ ಬಾಬು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಚಂದ್ರಬಾಬು, ನಗರ ಅಧ್ಯಕ್ಷ ಹನುಮಂತಪುರ ಹನುಮಂತರಾಜು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚೇತನ್, ಭಾಗವಹಿಸಿದ್ದರು.

(Visited 1 times, 1 visits today)
: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಭಿವೃದ್ಧಿ ನಿಗಮ ಬಿಜೆಪಿ ಒಬಿಸಿ ಮೋರ್ಚಾ
Previous Articleಪಾಂಚಜನ್ಯ ಮೊಳಗಿಸಿದ ಕರ್ನಾಟಕದ ಧೀಮಂತನಾಯಕ
Next Article ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ
News Desk Benkiyabale

Related Posts

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm news
ತಾಜಾ ಸುದ್ಧಿಗಳು
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm
news

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm
news

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm
news

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
news

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
news

ಬೆಂಗಳೂರಿನಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ರಜತ ಮಹೋತ್ಸವ

August 28, 2026 5:06 pm
Our Youtube Channel
Our Picks

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

August 28, 2026 5:44 pm

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm

ಅಪಘಾತವಲ್ಲ, ಅದು ಪೂರ್ವಯೋಜಿತ ಕೊಲೆ: ಗ್ರಾಮಸ್ಥರಿಂದ ಪ್ರತಿಭಟನೆ

August 28, 2026 5:08 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ವಿಬಿ ಜಿ ರಾಮ್ ಜಿ ಯೋಜನೆಯ ಕರಪತ್ರ ಬಿಡುಗಡೆ

By News Desk BenkiyabaleAugust 28, 2026 5:44 pm

ತುಮಕೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ.ಬಿ.ವಿ ಅವರು ಜಿಲ್ಲಾ ಪಂಚಾಯತಿಯಲ್ಲಿAದು ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್…

ತಾಂತ್ರಿಕ ಎಡವಟ್ಟು: ರೇಷನ್ ಅಂಗಡಿಗಳಲ್ಲಿ ಗಂಟೆಗಟ್ಟಲೆ ಕಾದು ಸುಸ್ತಾದ ಜನಸಾಮಾನ್ಯರು

August 28, 2026 5:12 pm

ಮದರ್ ಥೆರೆಸಾರವರ ಜನ್ಮದಿನಾಚರಣೆ

August 28, 2026 5:11 pm

ಮೈಸೂರಿನಿಂದ ಶಿರಡಿಗೆ ೧,೦೦೦ ಕಿ.ಮೀ ಸುದೀರ್ಘ ಯಾತ್ರೆ

August 28, 2026 5:09 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.