BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
  • ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೂಲಗಿತ್ತಿ ನರಸಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ: ಶಾಸಕ ಜಿ.ಬಿ.ಜೋತಿಗಣೇಶ್
ಕರ್ನಾಟಕ ಸುದ್ಧಿಗಳು

ಸೂಲಗಿತ್ತಿ ನರಸಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ: ಶಾಸಕ ಜಿ.ಬಿ.ಜೋತಿಗಣೇಶ್

By News Desk BenkiyabaleUpdated:December 25, 2024 6:44 pm

ತುಮಕೂರು: ಅತ್ಯಂತ ಕುಗ್ರಾಮದಲ್ಲಿ ಹುಟ್ಟಿ, ಯಾವುದೇ ಆಧುನಿಕ ಪರಿಕರಗಳಿಲ್ಲದೆ, ತಾಯಿ, ಅಜ್ಜಿಯಿಂದ ಕಲಿತ ವಿದ್ಯೆಯಿಂದಲೂ ಸಾವಿರಾರು ಹೆರಿಗೆಗಳನ್ನು ಸುಸೂತ್ರವಾಗಿ ಮಾಡಿಸುವ ಮೂಲಕ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ತುಮಕೂರು ನಗರ ಶಾಸಕ ಜಿ.ಬಿ.ಜೋತಿಗಣೇಶ್ ತಿಳಿಸಿದ್ದಾರೆ.
ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಪಾರ್ಕಿನಲ್ಲಿ ಆಯೋಜಿಸಿದ್ದ ಡಾ.ಸೂಲಗಿತ್ತಿ ನರಸಮ್ಮ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ನರಸಮ್ಮ ನವರ ಭಾವಚಿತ್ರ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು,ಪದ್ಮಶ್ರೀಯಂತಹ ದೇಶದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಅವರ ಮಗನಾದ ಪಾವಗಡ ಶ್ರೀರಾಮ್ ಕೆಲಸ ಮಾಡುತ್ತಿದ್ದಾರೆ ಎಂದರು. ಎಲೆಮೆರೆಯ ಕಾಯಿಯಂತೆ ತಮ್ಮ ಕಾಯಕದಲ್ಲಿ ತೊಡಗಿದ್ದ ಡಾ.ಸೂಲಗಿತ್ತಿ ನರಸಮ್ಮ ಅವರ ಕೊಡುಗೆಯನ್ನು ಗುರುತಿಸಿ, ಪ್ರಧಾನಿ ನರೇಂದ್ರಮೋದಿ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ,ಜನಸಾಮಾನ್ಯರು ದೇಶದ ಉನ್ನತ ಪ್ರಶಸ್ತಿಗೆ ಆರ್ಹರು ಎಂದು ತೋರಿಸಿಕೊಟ್ಟಿದ್ದಾರೆ. ನರಸಮ್ಮ ಅವರು ನಂಬಿದ್ದ ದಾರಿಯಲ್ಲಿ ನಾವೆಲ್ಲರೂ ನಡೆಯುವ ಮೂಲಕ ಅವರು ಜನಮಾನಸದಲ್ಲಿ ಉಳಿಯುವಂತೆ ಮಾಡಬೇಕಿದೆ ಎಂದು ಶಾಸಕ ಜಿ.ಬಿ.ಜೋತಿಗಣೇಶ ತಿಳಿಸಿದರು.
ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ಮಾತನಾಡಿ,ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಅವರ ಸಾಧನೆ ವಿಶಿಷ್ಟವಾದುದು, ಪಾವಗಡ ತಾಲೂಕಿನಂತಹ ಸಣ್ಣ ಪ್ರದೇಶದಲ್ಲಿ ಹುಟ್ಟಿ,ತಮ್ಮ ಹಿರಿಯರಿಂದ ಬಂದ ಸೂಲಗಿತ್ತಿ ವೃತ್ತಿ ಮಾಡುವ ಕಾಯಕದಲ್ಲಿ ತೊಡಗಿದ್ದ ನರಸಮ್ಮ ಅವರನ್ನು ಸರಕಾರ ಗುರುತಿಸಿದೆ.ಸಾವಿರಾರು ಮಕ್ಕಳಿಗೆ ಜೀವದಾನ ನೀಡಿರುವ ಅವರ ಕೈಗುಣ ನಿಜಕ್ಕೂ ಮೆಚ್ಚುವಂತಹದ್ದು,ಅವರ ಒಡನಾಟವಿತ್ತು ಎಂಬುದು ಖುಷಿಯ ವಿಚಾರ ಎಂದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಮಾತನಾಡಿ,ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಅವರ ನೆನಪು ಮಾಡಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸವನ್ನು ಪಾವಗಡ ಶ್ರೀರಾಮ ಮಾಡುತಿದ್ದಾರೆ.ಅವರ ಆದರ್ಶಗಳನ್ನು ಯುವಜನರು ಮೈಗೂಡಿಸಿಕೊಂಡರೆ, ಸಮಾಜದಲ್ಲಿ ನೀವು ಕೂಡ ಸಾಧನೆಯ ಶಿಖರ ತಲುಪಬಹುದು ಎಂದರು. ಕನ್ನಡ ಸೇನೆಯ ಜಿಲ್ಲಾಧ್ಯಕ್ಷ ಧನಿಯಕುಮಾರ್ ಮಾತನಾಡಿ,ನಗರಪಾಲಿಕೆಯವರು ಟೌನ್‌ಹಾಲ್ ಮುಂಭಾಗದಲ್ಲಿರುವ ಉದ್ಯಾನವನಕ್ಕೆ ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಅವರ ಹೆಸರಿಡುವ ಮೂಲಕ ಅವರ ಹೆಸರನ್ನು ಶಾಶ್ವತವಾಗಿಡುವ ಕೆಲಸ ಮಾಡಿದೆಎಂದರು. ಪದ್ಮಶ್ರೀ ಡಾ.ಸೂಲಗಿತ್ತಿ ನರಸಮ್ಮ ಅವರ ಮಗ ಪಾವಗಡ ಶ್ರೀರಾಮ್ ಮಾತನಾಡಿದರು.
ಈ ವೇಳೆ ಅಲೆಮಾರಿ ಸಮುದಾಯದ ಹಂದಿಜೋಗಿ ರಾಮಕ್ಕ ಮಾತನಾಡಿದರು. ಸಾಹಿತಿ ದೊಂಬರನಹಳ್ಳಿ ನಾಗರಾಜು,ಛಾಯಾದೇವಿ, ಬಿ.ಜಿ.ಸಾಗರ್,ಬ್ಯಾಂಕ್ ಅಧಿಕಾರಿಗಳ ಸಂಘ ಕೊಪ್ಪಲ್ ನಾಗರಾಜು, ಮೋನಿಯಾ, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
ಡಾ.ಸೂಲಗಿತ್ತಿ ನರಸಮ್ಮ ಶಾಸಕ ಜಿ.ಬಿ.ಜೋತಿಗಣೇಶ್
Previous Articleರೈತರಿಗೆ ಜಾತಿಯಿಲ್ಲ, ಪಕ್ಷವಿಲ್ಲ: ಶಾಸಕ ಸಿ.ಬಿ ಸುರೇಶ್ ಬಾಬು
Next Article ದಬ್ಬೇಘಟ್ಟದ ಸುಡುಗಾಡು ಸಿದ್ಧ ಜನಾಂಗದವರಿಗೆ ಹಂಚಿಕೆಯಾಗಿರುವ ನಿವೇಶನಗಳ ಹಕ್ಕುಪತ್ರ ವಿತರಣೆ
News Desk Benkiyabale

Related Posts

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm news

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm news

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm news
ತಾಜಾ ಸುದ್ಧಿಗಳು

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm
Our Youtube Channel
Our Picks

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm

ಹುಳಿಯಾರು ಹೆದ್ದಾರಿಯಲ್ಲಿ ಧೂಳಿನ ಕಣ್ಣಾಮುಚ್ಚಾಲೆ

June 19, 2026 4:44 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

By News Desk BenkiyabaleJune 19, 2026 4:59 pm

ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಮತ್ತು ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ಇಂದು…

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm

ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ

June 19, 2026 4:47 pm

ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 

June 19, 2026 4:45 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.