BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
  • ಬುಕ್ಕಾಪಟ್ಟಣ ಗ್ರಾಮ ಸ್ವಚ್ಛತೆಯಲ್ಲಿ ಮರೀಚಿಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಗಲಿನಲ್ಲಿ ರೈತರಿಗೆ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್
ಕರ್ನಾಟಕ ಸುದ್ಧಿಗಳು

ಹಗಲಿನಲ್ಲಿ ರೈತರಿಗೆ ವಿದ್ಯುತ್: ಇಂಧನ ಸಚಿವ ಕೆ.ಜೆ. ಜಾರ್ಜ್

By News Desk BenkiyabaleUpdated:December 30, 2024 7:03 pm

ತುಮಕೂರು : ರಾಜ್ಯದಲ್ಲಿ ಕೃಷಿ ಕ್ಷೇತ್ರವನ್ನು ಸಬಲೀಕರಣಗೊಳಿಸುವ ಸಲುವಾಗಿ ಸೌರಶಕ್ತಿ ಮೂಲಕ ಹಗಲಿನಲ್ಲಿ ರೈತರಿಗೆ ವಿದ್ಯುತ್ ಪೂರೈಕೆ ಮಾಡಲು ಯೋಜಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಜಿಲ್ಲೆಯ ಶಿರಾ ತಾಲ್ಲೂಕು ಚಂಗಾವರ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಪಿಎಂ ಕುಸುಮ್ ಘಟಕ ಸಿ ಯೋಜನೆಯಡಿ ನಿರ್ಮಿಸುತ್ತಿರುವ 2.4 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅಳವಡಿಕೆ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ ತಡೆರಹಿತ ಸುಸ್ಥಿರ ವಿದ್ಯುತ್ ಸರಬರಾಜು ಮಾಡಲು ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು. ಜಿಲ್ಲೆಯ ಶಿರಾ ತಾಲ್ಲೂಕಿನ ಚಂಗಾವರದಲ್ಲಿ ನಿರ್ಮಿಸಿರುವ ಸೋಲಾರ್ ಪ್ಲಾಂಟ್‌ನಿAದ 944 ಕೃಷಿ ಪಂಪ್ ಸೆಟ್‌ಗಳಿಗೆ ವಿದ್ಯುತ್ ಒದಗಿಸಲು ಸಾಧ್ಯವಾಗಲಿದೆ. ಈ ಸೋಲಾರ್ ಪ್ಲಾಂಟ್ ನಿರ್ಮಾಣಕ್ಕಾಗಿ 11 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಚಂಗಾವರದಲ್ಲಷ್ಟೇ ಅಲ್ಲದೆ ಶಿರಾ ತಾಲ್ಲೂಕಿನ ಚಿಕ್ಕಬಾಣಗೆರೆಯಲ್ಲಿಯೂ 25 ಎಕರೆ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು 6.5 ಮೆಗಾ ವ್ಯಾಟ್ ಸಾಮರ್ಥ್ಯದ ಸೋಲಾರ್ ಪ್ಲಾಂಟ್ ಅನ್ನು ನಿರ್ಮಿಸಲಾಗಿದೆ. ಇದರಿಂದ 1355 ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸರಬರಾಜು ಮಾಡುವ ಯೋಜನೆ ಹೊಂದಲಾಗಿದೆ. ಮೆ|| ರಾಮ್ ತರಂಗ್ ಸೆಲ್ಯೂಷನ್ಸ್ ಪ್ರೆöÊವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ಈ ಸೋಲಾರ್ ಪ್ಲಾಂಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಕೃಷಿ ಉತ್ಪಾದಕತೆ ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಲುವಾಗಿ ಕುಸುಮ್ ಸಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಕುಸುಮ್ ಸಿ ಯೋಜನೆಯಡಿ ನಿರ್ಮಿಸಿರುವ ಸೌರ ಸ್ಥಾವರಗಳು ಕೃಷಿ ವಿದ್ಯುತ್ ಸರಬರಾಜಿನಲ್ಲಿ ಹೊಸ ಕ್ರಾಂತಿಯನ್ನೇ ಉಂಟು ಮಾಡಲಿದೆ. ಈ ಸೌರ ಸ್ಥಾವರಗಳು ಸಾಂಪ್ರದಾಯಕ ವಿದ್ಯುತ್ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಗ್ರಾಮೀಣ ರೈತರನ್ನು ಸಬಲಗೊಳಿಸಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಂತೇಶ್ ಬೀಳಗಿ, ಬೆಸ್ಕಾಂ ಮುಖ್ಯ ಇಂಜಿನಿಯರ್(ಯೋಜನೆಗಳು) ರಮೇಶ್ ಗುಡಿ ಹಾಗೂ ಅಧೀಕ್ಷಕ ಇಂಜಿನಿಯರ್ ನರಸಿಂಹಮೂರ್ತಿ, ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ಡಿ. ಶಿವಕುಮಾರ್, ಬೆಸ್ಕಾಂ ಮಧುಗಿರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ಜಗಧೀಶ್, ತುಮಕೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
ಇಂಧನ ಸಚಿವ ಕೆ.ಜೆ. ಜಾರ್ಜ್ ಶಿರಾ ತಾಲ್ಲೂಕು
Previous Article15 ವರ್ಷಗಳಿಂದ ನೀರೇ ಕಾಣದ ಓವರ್ ಹೆಡ್ ಟ್ಯಾಂಕ್
Next Article ಯುವನಿಧಿ ಪೋಸ್ಟರ್ ಬಿಡುಗಡೆ
News Desk Benkiyabale

Related Posts

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm news
ತಾಜಾ ಸುದ್ಧಿಗಳು

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm

 ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ

June 17, 2026 5:26 pm
Our Youtube Channel
Our Picks

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

By News Desk BenkiyabaleJune 18, 2026 1:49 pm

ಕೊರಟಗೆರೆ: ಪ್ರತಿನಿತ್ಯದಂತೆ ತನ್ನ ತೋಟ ನೋಡಿಕೊಂಡು ಬರಲು ಹೋದ ವೃದ್ದೆಗೆ ಅಪರಿಚಿತ ವ್ಯಕ್ತಿಗಳು ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ…

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.