BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತ ಭಾಗ್ಯವಿಧಾತನ ಛಾಯಾಚಿತ್ರ ಪ್ರದರ್ಶನ
ತುಮಕೂರು

ಭಾರತ ಭಾಗ್ಯವಿಧಾತನ ಛಾಯಾಚಿತ್ರ ಪ್ರದರ್ಶನ

ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಚಾಲನೆ
By News Desk BenkiyabaleUpdated:April 15, 2025 3:59 pm

 

ತುಮಕೂರು: ಭಾರತ ರತ್ನ, ಸಂವಿಧಾನ ಶಿಲ್ಪಿ, ಭಾರತ ಭಾಗ್ಯವಿಧಾತ ಡಾ: ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಇಂದು ಚಾಲನೆ ನೀಡಿದರು.
ಡಾಃ ಬಿ.ಆರ್. ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಅನಾವರಣ ಮತ್ತು ಅವರ ೧೩೪ನೇ ಜಯಂತಿ ಹಾಗೂ ಡಾ: ಬಾಬು ಜಗಜೀವನ ರಾಂ ಅವರ ೧೧೮ನೇ ಜಯಂತಿ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸೋಮವಾರ ಮಹಾನಗರ ಪಾಲಿಕೆ ಆವರಣದಲ್ಲಿಂದು ಇಬ್ಬರು ಮಹನೀಯರ ಛಾಯಾಚಿತ್ರ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.
ಛಾಯಾಚಿತ್ರ ಪ್ರದರ್ಶನದಲ್ಲಿ ಡಾಃ ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನ ರಾಂ ಅವರ ಸುಮಾರು ೧೧೬ ಅಪರೂಪದ ಛಾಯಾಚಿತ್ರಗಳನ್ನು ಇರಿಸಲಾಗಿತ್ತು.
ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನ:
ಅಂಬೇಡ್ಕರ್ ಅವರು ೧೯೪೨ರ ಜುಲೈ ೨೦ರಂದು ಕಮ್ಯಾಂಡಿAಗ್ ಆಫೀಸರ್ ಹುದ್ದೆಯಲ್ಲಿದ್ದಾಗ ಮಿಲಿಟರಿ ಅಧಿಕಾರಿ ಹಾಗೂ ಸೈನಿಕರೊಂದಿಗೆ, ೧೯೫೬ರ ಅಕ್ಟೋಬರ್ ೧೪ರಂದು ಬೌದ್ಧಧರ್ಮಕ್ಕೆ ದೀಕ್ಷೆ ಪಡೆದ, ೧೯೫೦ ಮೇ ೮ರಂದು ರಾಷ್ಟçಪತಿ ಭವನದಲ್ಲಿ ಮೊದಲ ಕಾನೂನು ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ, ೧೯೫೬ರ ಅಕ್ಟೋಬರ್ ೧೫ರಂದು ನಾಗಪುರದಲ್ಲಿ ಧಮ್ಮ ದೀಕ್ಷಾ ಸಮಾರಂಭ, ೧೯೫೪ರ ಅಕ್ಟೋಬರ್ ೨೯ರಂದು ಮುಂಬಯಿಯಲ್ಲಿ ಪರಿಶಿಷ್ಟ ಜಾತಿಗಳ ಒಕ್ಕೂಟದ ಕಾರ್ಯಕ್ರಮದಲ್ಲಿ ಪಾಲ್ಗೊಂಡ, ೧೯೫೫ರ ನವೆಂಬರ್ ೧೧ರ ಪತ್ನಿ ರಮಾಬಾಯಿ ಅವರೊಂದಿಗೆ ದೆಹಲಿಯ ಬಿರ್ಲಾ ಮಂದಿರದ ಬುದ್ಧವಿಹಾರಕ್ಕೆ ಭೇಟಿ ನೀಡಿದ ಸಂದರ್ಭ, ೧೯೫೨ರಲ್ಲಿ ಮೊದಲ ಲೋಕಸಭಾ ಚುನಾವಣೆಯಲ್ಲಿ ಪ್ರತಿನಿಧಿಸಿದ, ೧೯೫೦ರ ಜನವರಿ ೨೬ರಂದು ಸಂವಿಧಾನ ಜಾರಿಗೆ ಬಂದ ದಿನದಂದು ಪ್ರಧಾನಿ ಜವಾಹರ ಲಾಲ್ ನೆಹರೂ ಅವರೊಂದಿಗೆ ಮಾತುಕತೆ, ೧೯೫೧ರ ಸೆಪ್ಟೆಂಬರ್ ೨೭ರಂದು ಹಿಂದು ಕೋಡ್ ಬಿಲ್ ತಿರಸ್ಕೃತಗೊಂಡ ಸಂದರ್ಭದಲ್ಲಿ ಕಾನೂನು ಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ, ೧೯೫೨ರ ಡಿಸೆಂಬರ್ ೨೨ರಂದು ಪೂನಾದಲ್ಲಿ ಜಿಲ್ಲಾ ಕಾನೂನು ಗ್ರಂಥಾಲಯ ಉದ್ಘಾಟನೆ, ೧೯೪೬ರಲ್ಲಿ ಲಂಡನ್ ಭೇಟಿ, ೧೯೪೨ರ ಏಪ್ರಿಲ್ ೧೪ರಂದು ದಾದರ್‌ನ ಹಿಂದೂ ಕಾಲೋನಿಯಲ್ಲಿ ತಮ್ಮ ಜನ್ಮ ದಿನಾಚರಣೆ, ೧೯೫೦ರ ಜನವರಿ ೨೬ರಂದು ಮೊದಲ ಸ್ವತಂತ್ರ ಕ್ಯಾಬಿನೆಟ್ ಸಚವರಾದ ನೆಹರು, ಮೌಲಾನಾ ಅಬ್ದುಲ್ ಕಲಾಂ ಆಜಾದ್, ಚಕ್ರವರ್ತಿ ರಾಜಾಗೋಪಾಲಾಚಾರಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಜಗಜೀವನ ರಾಂ, ರಾಜಕುಮಾರಿ ಅಮ್ರಿತ್ ಕೌರ್ ಹಾಗೂ ಮತ್ತಿತರರೊಂದಿಗೆ ಅಂಬೇಡ್ಕರ್, ೧೯೪೯ರ ಮೇ ೧೬ರಂದು ಸಂವಿಧಾನ ಕರಡು ಸಿದ್ಧತೆಯಲ್ಲಿ ತೊಡಗಿರುವ, ಕಾರ್ಮಿಕ ಮಂತ್ರಿಯಾಗಿದ್ದಾಗ ೧೯೪೩ರ ಡಿಸೆಂಬರ್ ೯ರಂದು ಬಿಹಾರದ ಧನ್‌ಬಾದ್‌ನಲ್ಲಿ ಕಾರ್ಮಿಕರ ಕಾಲೋನಿಗೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ, ೧೯೫೬ರ ನವೆಂಬರ್ ೨೦ರಂದು ನೇಪಾಳದ ಕಠ್ಮಂಡುವಿನಲ್ಲಿ ನಡೆದ ವರ್ಲ್ಡ್ ಫೆಲೋಶಿಪ್ ಆಫ್ ಬುದ್ಧಿಸ್ಟ್ ಕುರಿತ ೪ನೇ ಸಮ್ಮೇಳನದಲ್ಲಿ ಪಾಲ್ಗೊಂಡ, ಸಂದರ್ಭ ಸೇರಿದಂತೆ ಮತ್ತಿತರ ಹಲವಾರು ವಿಶೇಷ ಸಂದರ್ಭಗಳಲ್ಲಿ ಸೆರೆ ಹಿಡಿಯಲಾದ ಅಪರೂಪದ ಛಾಯಾಚಿತ್ರಗಳನ್ನು ಈ ಪ್ರದರ್ಶನದಲ್ಲಿ ಕಾಣಬಹುದಾಗಿತ್ತು.
ಬಾಬು ಜಗಜೀವನ ರಾಂ ಅವರ ಛಾಯಾಚಿತ್ರ ಪ್ರದರ್ಶನ:
ಮತ್ತೊಬ್ಬ ಮಹನೀಯ, ದೇಶ ಕಂಡ ಧೀಮಂತ ವ್ಯಕ್ತಿ, ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ: ಬಾಬು ಜಗಜೀವನರಾಂ ಅವರ ಆಯ್ದ ಛಾಯಾಚಿತ್ರಗಳನ್ನೂ ಸಹ ಪ್ರದರ್ಶಿಸಲಾಗಿತ್ತು.
ಬಾಬೂಜಿಯವರು ೧೯೬೭ರ ಫೆಬ್ರುವರಿ ೪ರಂದು ವಿಕ್ರಮ್ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಪಡೆದ ಸಂದರ್ಭ, ೧೯೭೧ರಲ್ಲಿ ದೆಹಲಿಯಲ್ಲಿ ಪ್ರಧಾನಿ ಇಂದಿರಾಗಾAಧಿಯವರು ಬಾಬೂಜಿಯವರನ್ನು ಗೌರವಿಸಿದ ಸಂದರ್ಭ, ೧೯೬೬ರಲ್ಲಿ ಫಿಲಿಫೈನ್ಸ್ ಉಪಾಧ್ಯಕ್ಷರ ಮನೆಯಲ್ಲಿ ಔತಣಕೂಟ, ೧೯೮೬ರ ಏಪ್ರಿಲ್ ೫ರಂದು ಪ್ರಧಾನಿ ರಾಜೀವಗಾಂಧಿ ಅವರು ಬಾಬೂಜಿ ಅವರಿಗೆ ಜನ್ಮ ದಿನಾಚರಣೆ ಶುಭ ಕೋರುತ್ತಿರುವ, ತಮಿಳುನಾಡಿನ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್ ಅವರೊಂದಿಗೆ, ತಾಷ್ಕೆಂಟ್ ಅಧ್ಯಕ್ಷೆ ನಸಿರುದ್ದೀನೋವಾ ಅವರೊಂದಿಗೆ, ೧೯೭೪ರಲ್ಲಿ ಇಟಲಿಯಲ್ಲಿ ನಡೆದ ವಿಶ್ವ ಆಹಾರ ಸಮ್ಮೇಳನದಲ್ಲಿ ಪಾಲ್ಗೊಂಡ, ನವದೆಹಲಿಯಲ್ಲಿ ಅಮೆರಿಕಾ ಅಧ್ಯಕ್ಷ ರಿಚರ್ಡ್ ನಿಕ್ಸನ್-೬ ಅವರೊಂದಿಗೆ ಬಾಬು ಜಗಜೀವನ ರಾಂ ಅವರು ಕಳೆದ ಕ್ಷಣಗಳ ಬಗ್ಗೆ ಸೆರೆ ಹಿಡಿಯಲಾದ ಛಾಯಾಚಿತ್ರಗಳು ಬಾಬೂಜಿಯವರ ಜೀವನ ಚರಿತ್ರೆಯ ಹಲವು ಹಂತಗಳನ್ನು ನೋಡುಗರಿಗೆ ಪರಿಚಯಿಸಿದವು.
ಗಮನ ಸೆಳೆದ ಛಾಯಾಚಿತ್ರ ಪ್ರದರ್ಶನಃ
ಡಾ: ಬಿ.ಆರ್. ಅಂಬೇಡ್ಕರ್ ಹಾಗೂ ಡಾ: ಬಾಬು ಜಗಜೀವನ ರಾಂ ಅವರ ಅಪರೂಪದ ಛಾಯಾಚಿತ್ರ ಪ್ರದರ್ಶನವು ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ಜನರು ಸಾಲುಗಟ್ಟಿ ನಿಂತು ಧೀಮಂತ ನಾಯಕರ ಜೀವನದ ಹಲವು ಮಜಲುಗಳ ಬಗ್ಗೆ ತಿಳಿದುಕೊಂಡರು.
ಈ ಸಂದರ್ಭದಲ್ಲಿ ಕೇಂದ್ರ, ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ, ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್, ಸಮಾಜ ಕಲ್ಯಾಣ ಸಚಿವ ಡಾಃ ಹೆಚ್.ಸಿ. ಮಹದೇವಪ್ಪ, ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಹಾಗೂ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್, ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಕುಣಿಗಲ್ ಶಾಸಕ ಡಾ|| ಹೆಚ್.ಡಿ. ರಂಗನಾಥ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ. ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ, ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
BJP Congress Mla jyothiganesh pavagada tumkur ಕಾಂಗ್ರೆಸ್ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಸಂವಿಧಾನಕ್ಕೆ ದಕ್ಕೆತರುವ ಕೆಲಸ ಬಿಜೆಪಿ ಮಾಡುತ್ತಿದೆ
Next Article ಲಾರಿ ಮಾಲೀಕರ ಮುಷ್ಕರ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.