BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ
  • ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ
  • ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಅನುಭವಗಳನ್ನು ದಾಖಲಿಸಿ
ತುಮಕೂರು

ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ: ಅನುಭವಗಳನ್ನು ದಾಖಲಿಸಿ

ಶೂದ್ರರು ವಿದ್ಯಾವಂತರಾಗಿ ಏನಾದರೂ ಬರೆದರೆ ಅವರ ಬಗ್ಗೆ ಕತೆ ಕಟ್ಟಿ ಬಿಡ್ತಾರೆ ಹುಷಾರು: ಸಿಎಂ
By News Desk BenkiyabaleUpdated:April 19, 2025 4:28 pm

ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದ ರಾಮಯ್ಯ ಕರೆ ನೀಡಿದರು.
ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ ೩೧ ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.
ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹ ತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.
ಬಸವಣ್ಣ ೮೫೦ ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು. ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು.
ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.
ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.
ಕಾಯಕ, ದಾಸೋಹ ಬಸವಣ್ಣನವರ ತತ್ವ. ಇದನ್ನು ಎಲ್ಲರೂ ಪಾಲಿಸಬೇಕು. ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು. ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.


ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ. ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು ಬೇಸರದ ಸಂಗತಿ. ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು. ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ. ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು. ಪಟ್ಟಭದ್ರರು ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ. ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ.. ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ. ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ.
> ಸಿದ್ದರಾಮಯ್ಯ, ಮುಖ್ಯಮಂತ್ರಿ

(Visited 1 times, 1 visits today)
BJP Congress Mla jyothiganesh tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಜಾತಿಗಣತಿ: ಮರು ಸಮೀಕ್ಷೆ ನಡೆಸಬೇಕು
Next Article ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆರವು ಖಂಡಿಸಿ ನಗರದಲ್ಲಿ ಪ್ರತಿಭಟನೆ
News Desk Benkiyabale

Related Posts

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm news

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am news

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am news
ತಾಜಾ ಸುದ್ಧಿಗಳು

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm
Our Youtube Channel
Our Picks

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

July 10, 2026 12:00 pm

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜು.೧೯ರಂದು ಚಿತ್ರದುರ್ಗದಲ್ಲಿ ಭೋವಿ ಜನೋತ್ಸವ: ಡಾ.ಎಂ.ರಾಮಪ್ಪ

By News Desk BenkiyabaleJuly 10, 2026 12:00 pm

ತುಮಕೂರು: ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ೧೭ನೇ ಪಟ್ಟಾಭಿಷೇಕ ಹಾಗೂ ೪೦ನೇ ಜನ್ಮ ವರ್ಧಂತ್ಯೋತ್ಸವ ಅಂಗವಾಗಿ…

ಉಪಮುಖ್ಯಮಂತ್ರಿಗಳ ಮೇಲಿನ ಆರೋಪ ಸರಿಯಲ್ಲ

July 10, 2026 11:58 am

ಕನಿಷ್ಠ ವೇತನ, ಪಿಎಫ್-ಇ.ಎಸ್.ಐ ಮಿತಿ ರದ್ದುಗೊಳಿಸಿ: ಸಿಐಟಿಯು ಪ್ರತಿಭಟನೆ

July 10, 2026 11:56 am

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.