BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಚಾಲಕರು, ಮಾಲೀಕರ ಪ್ರತಿಭಟನೆ
ತುಮಕೂರು

ಬೈಕ್ ಟ್ಯಾಕ್ಸಿ ವಿರುದ್ಧ ಆಟೋ ಚಾಲಕರು, ಮಾಲೀಕರ ಪ್ರತಿಭಟನೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ
By News Desk BenkiyabaleUpdated:April 23, 2025 4:19 pm

ತುಮಕೂರು: ನಗರದಲ್ಲಿ ಅನಧಿಕೃತವಾಗಿ ಚಲಿಸುತ್ತಿರುವ ಬೈಕ್ ಟ್ಯಾöಕ್ಸಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕು, ಹೊಸದಾಗಿ ಆಟೋ ಪರವಾನಗಿ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಜಿಲ್ಲಾ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ಆಟೋ ಚಾಲಕರ ಕಲ್ಯಾಣ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಆಟೋ ಚಾಲಕರು, ಮಾಲೀಕರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಆವರಣದ ಡಾ.ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿ ಆಟೋ ಚಾಲಕರು, ಮಾಲೀಕರು ಹೋರಾಟ ಆರಂಭಿಸಿದರು. ತಮ್ಮ ಆಟೋಗಳನ್ನು ನಗರಪಾಲಿಕೆ ಆವರಣದಲ್ಲಿ ನಿಲ್ಲಿಸಿ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ತೆರಳಿ, ಅಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಆಟೋ ಚಾಲಕ, ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ವಿ.ಪ್ರತಾಪ್ ಮದಕರಿ ಮಾತನಾಡಿ, ನೀಡಿ, ನಗರದಲ್ಲಿ ನಗರ ಸಾರಿಗೆ ಸೇವೆ ಆರಂಭವಾದಾಗಿನಿAದ ಆಟೋಗಳ ವ್ಯವಹಾರ ಕುಸಿತಗೊಂಡು ಆಟೋ ಚಾಲಕರು ತಮ್ಮ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ನಗರದಲ್ಲಿ ದಿನೇದಿನೆ ಆಟೋಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಮ್ಮಲ್ಲೇ ಬದುಕಿಗಾಗಿ ಪೈಪೋಟಿ ಶುರುವಾಗಿದೆ. ಈ ಪರಿಸ್ಥಿತಿಯಲ್ಲಿ ಹೊಸದಾಗಿ ಆಟೋ ಪರವಾನಗಿ ನೀಡಬಾರದು ಎಂದು ಮನವಿ ಮಾಡಿದರು.
ಸ್ಮಾರ್ಟ್ ಸಿಟಿ ಕಾಮಗಾರಿಗಾಗಿ ನಗರದ ಸುಮಾರು ೧೫೦ಕ್ಕೂ ಹೆಚ್ಚು ಆಟೋ ನಿಲ್ದಾಣಗಳನ್ನು ಕಿತ್ತುಹಾಕಿ ಆಟೋಗಳಿಗೆ ನೆಲೆ ಇಲ್ಲದಂತೆ ಮಾಡಲಾಗಿದೆ. ಈ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡಬೇಕು. ಈ ಎಲ್ಲಾ ಸಮಸ್ಯೆಗಳ ಜೊತೆಗೆ ಇತ್ತೀಚೆಗೆ ನಗರದಲ್ಲಿ ಬೈಕ್ ಟ್ಯಾಕ್ಸಿಗಳು ಚಲಾವಣೆ ಆರಂಭವಾಗಿ ಆಟೋ ಚಾಲಕರ ವ್ಯವಹಾರ ಮತ್ತಷ್ಟು ಮಾರಕವಾಗಿವೆ. ಬೈಕ್ ಟ್ಯಾಕ್ಸಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಇರುವುದರಿಂದ ಮಹಿಳಾ ಪ್ರಯಾಣಿಕರು ಆಟೋ ಹತ್ತುತ್ತಿಲ್ಲ, ಈ ಮೊದಲು ಶಾಲಾ ಮಕ್ಕಳನ್ನು ಆಟೋದವರು ಕರೆದೊಯ್ಯುತ್ತಿದ್ದರು, ಈಗ ಶಾಲೆಗಳೇ ಬಸ್ ವ್ಯವಸ್ಥೆ ಮಾಡಿರುವುದರಿಂದ ಅದಕ್ಕೂ ಕುತ್ತು ಬಂದಿದೆ. ಸಾಲಸೋಲ ಮಾಡಿ ಜೀವನ ನಿರ್ವಹಣೆಗೆ ಆಟೋ ಖರೀದಿಸಿದ ಚಾಲಕರು, ಮಾಲೀಕರು ಸಾಲ ತೀರಿಸಲಾಗದೆ, ಜೀವನ ನಿರ್ವಹಣೆ ಮಾಡಲಾಗದೆ ಪರಿತಪಿಸುತ್ತಿದ್ದಾರೆ ಎಂದು ಪ್ರತಾಪ್ ಮದಕರಿ ಹೇಳಿದರು.
ಆಟೋ ಚಾಲಕರ ರಕ್ಷಣೆಯನ್ನು ಜಿಲ್ಲಾಡಳಿತ ಹಾಗೂ ಸರ್ಕಾರ ಮಾಡಬೇಕಾಗಿದೆ. ಮಾನವೀಯ ದೃಷ್ಟಿಯಿಂದ ಆಟೋ ಚಾಲಕರಿಗೆ ಸರ್ಕಾರ ನೆರವಾಗಬೇಕು. ಅಸಂಘಟಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆ ಆಟೋ ಚಾಲಕರಿಗೂ ನೀಡಬೇಕು ಎಂದು ಒತ್ತಾಯಿಸಿದರು.
ನಂತರ ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿ ತಮ್ಮ ಬೇಡಿಕೆ ಈಡೇರಿಸಿ ಸಮಸ್ಯೆ ನಿವಾರಣೆ ಮಾಡಬೇಕು ಎಂದು ಕೋರಿದರು. ಈ ವೇಳೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರು ಆಟೋ ಸಂಘಟನೆಯ ಪ್ರಮುಖರ ಸಭೆ ನಡೆಸಿ, ಸಂಬAಧಿಸಿದ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಈಡೇರಿಸದಿದ್ದರೆ ಆಟೋ ಸೇವೆ ಬಂದ್ ಮಾಡಿ ತೀವ್ರ ಹೋರಾಟ ಮಾಡುವುದಾಗಿ ಪ್ರತಾಪ್ ಮದಕರಿ ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದರು.
ಆಟೋ ಸಂಘಟನೆಯ ಮುಖಂಡರಾದ ಕುಮಾರಸ್ವಾಮಿ, ಇಂತಿಯಾಜ್, ರಾಮಸ್ವಾಮಿಗೌಡ, ಹನುಮಂತಪುರ ಬಾಬು, ಗಡ್ಡ ಮಂಜು, ಉಪ್ಪಾರಹಳ್ಳಿ ಮಂಜುನಾಥ್, ನವೀನ್‌ಕುಮಾರ್, ಕೋರಾ ಕುಮಾರ್, ನಾಗರಾಜು, ಶಮೀಉಲ್ಲಾ, ರಮೇಶ್, ಫೈರೋಜ್, ತಿಪ್ಪೇಸ್ವಾಮಿ, ಜಾವಿದ್, ಗೋಪಾಲ್, ಜಗದೀಶ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಖಂಡನಿಯ
Next Article ಕಂದಾಯ ಇಲಾಖೆಯ ಅಧಿಕಾರಿಗಳಿಂದಲೇ ನಕಲಿ ದಾಖಲೆ ಸೃಷ್ಠಿ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.