BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
  • ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ
  • ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ
  • ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ
  • ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ
  • ರಾಯಚೂರು ಬಿಎಸ್‌ಪಿ ಮುಖಂಡನ ಕೊಲೆ ಪ್ರಕರಣ
  • ಯಲಿಯೂರು ದಲಿತರಿಗೆ ಅಂಬೇಡ್ಕರ್ ಭವನಕ್ಕೆಂದು ಮೀಸಲಿರಿಸಿದ್ದ ಜಾಗ: ಎರಡು ಸಮುದಾಯಗಳ ನಡುವೆ ವೈಮನಸ್ಸು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದತ್ತಾಂಶ ಸಂಗ್ರಹಕ್ಕಾಗಿ ಮೇ ೫ ರಿಂದ ಮನೆ-ಮನೆ ಸಮೀಕ್ಷೆ
ತುಮಕೂರು

ದತ್ತಾಂಶ ಸಂಗ್ರಹಕ್ಕಾಗಿ ಮೇ ೫ ರಿಂದ ಮನೆ-ಮನೆ ಸಮೀಕ್ಷೆ

ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ
By News Desk BenkiyabaleUpdated:April 24, 2025 4:05 pm

ತುಮಕೂರು: ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ಮಧ್ಯಂತರ ವರದಿಯನ್ವಯ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾಗಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಸರ್ಕಾರ ನಿರ್ದೇಶನ ನೀಡಿದ್ದು, ದತ್ತಾಂಶ ಸಂಗ್ರಹಕ್ಕಾಗಿ ಜಿಲ್ಲೆಯಲ್ಲಿ ಮೇ ೫ ರಿಂದ ಮನೆ-ಮನೆ ಸಮೀಕ್ಷೆ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಬುಧವಾರ ವಿಕಾಸ ಸೌಧದಿಂದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕುರಿತು ನಡೆಸಿದ ವಿಡಿಯೋ ಸಂವಾದದ ಸಭೆಯ ನಂತರ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ, ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಿ ದತ್ತಾಂಶ ಸಂಗ್ರಹಿಸಲು ಗಣತಿದಾರರನ್ನಾಗಿ ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗುವುದು. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರನ್ನು ಈ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಬಾರದೆಂದು ಸರ್ಕಾರ ನಿರ್ದೇಶನ ನೀಡಿದೆ. ಸಮೀಕ್ಷಾ ಕಾರ್ಯವನ್ನು ಸರ್ಕಾರದ ಅಗತ್ಯ ಕಾರ್ಯವೆಂದು ಪರಿಗಣಿಸಿ ಗಣತಿದಾರರು ಕರಾರುವಾಕ್ಕಾದ ಪ್ರಮಾಣೀಕೃತ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಸೂಚಿಸಿದರು.
೩ ಹಂತದಲ್ಲಿ ಸಮೀಕ್ಷೆ : ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಸಂಬAಧ ಸರ್ಕಾರದ ಆದೇಶದಂತೆ ಈ ಸಮೀಕ್ಷೆಯನ್ನು ಜಿಲ್ಲೆಯಲ್ಲಿ ೩ ಹಂತದಲ್ಲಿ ನಡೆಸಲಾಗುವುದು. ಮೊದಲ ಹಂತದಲ್ಲಿ ಮೇ ೫ ರಿಂದ ೧೭ರವರೆಗೆ ಗಣತಿದಾರರು ಮನೆ-ಮನೆ ಭೇಟಿ ನೀಡುವ ಮೂಲಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ೨ನೇ ಹಂತದಲ್ಲಿ ಮೇ ೧೯ ರಿಂದ ೨೧ರವರೆಗೆ ಮತಗಟ್ಟೆ ಪ್ರದೇಶವಾರು ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ನಡೆಸಲಾಗುವುದು ಹಾಗೂ ೩ನೇ ಹಂತದಲ್ಲಿ ಮೇ ೧೯ ರಿಂದ ಮೇ ೨೩ರವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಸಮೀಕ್ಷೆಯ ೨ನೇ ಹಂತದಲ್ಲಿ ಪ.ಜಾತಿ ಸಮುದಾಯದವರು ಮತಗಟ್ಟೆ ಪ್ರದೇಶದಲ್ಲಿ ಗುರುತಿಸಿರುವ ವಿಶೇಷ ಶಿಬಿರಗಳಿಗೆ ತೆರಳಿ ತಮ್ಮ ಜಾತಿ ಕುರಿತು ಗಣತಿದಾರರಿಗೆ ಮಾಹಿತಿ ನೀಡಲು ಮೇ ೧೯ ರಿಂದ ೨೧ರವರೆಗೆ ಅವಕಾಶ ಕಲ್ಪಿಸಲಾಗುವುದು. ಮನೆ-ಮನೆ ಸಮೀಕ್ಷೆ ಹಾಗೂ ವಿಶೇಷ ಶಿಬಿರದಲ್ಲಿ ಜಾತಿಯ ಬಗ್ಗೆ ಘೋಷಣೆ ಮಾಡಿಕೊಳ್ಳದವರು ೩ನೇ ಹಂತದಲ್ಲಿ ಮೇ ೧೯ ರಿಂದ ೨೩ರವರೆಗೆ ಆಧಾರ್ ನಂಬರ್ ಮತ್ತು ಆರ್.ಡಿ. ನಂಬರ್‌ನೊAದಿಗೆ ಆನ್‌ಲೈನ್ ಮೂಲಕ ಘೋಷಣೆ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಸಮೀಕ್ಷೆ ಕಾರ್ಯಕ್ಕಾಗಿ ಮಾಸ್ಟರ್ ಟ್ರೆöÊನರ್‌ಗಳಿಂದ ಏಪ್ರಿಲ್ ೨೮ರಂದು ಜಿಲ್ಲಾ ಮಟ್ಟದ ತರಬೇತಿ ಹಾಗೂ ಏಪ್ರಿಲ್ ೨೯ ಮತ್ತು ೩೦ರಂದು ತಾಲ್ಲೂಕು/ ಪಾಲಿಕೆ/ನಗರ ಸ್ಥಳೀಯ ಸಂಸ್ಥೆ ಮಟ್ಟದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಗಣತಿದಾರರಿಗೆ ಸಹಕರಿಸಲು ಮನವಿ : ಪರಿಶಿಷ್ಟ ಜಾತಿಯಲ್ಲಿರುವ ಉಪ ಜಾತಿಗಳ ಸಮೀಕ್ಷೆಗಾಗಿ ಮನೆ-ಮನೆ ಭೇಟಿ ನೀಡುವ ಗಣತಿದಾರರಿಗೆ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ನಿರ್ಧಿಷ್ಟವಾದ ಉಪಜಾತಿಯ ವಿವರವನ್ನು ನೀಡಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ. ಮಾತನಾಡಿ ಸಮೀಕ್ಷೆ ಕಾರ್ಯಕ್ಕೆ ಕೌಶಲ್ಯವುಳ್ಳ ಮಾಸ್ಟರ್ ಟ್ರೆöÊನರ್‌ಗಳನ್ನು ನೇಮಕ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಪ.ಜಾತಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳ ಸಮೀಕ್ಷೆಗೆ ಹೆಚ್ಚಿನ ಗಣತಿದಾರರನ್ನು ನಿಯೋಜಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಉಪ ವಿಭಾಗಧಿಕಾರಿಗಳಾದ ಗೌರವ್ ಕುಮಾರ್ ಶೆಟ್ಟಿ ಹಾಗೂ ಸಪ್ತಶ್ರೀ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಡಾ. ರಾಜ್ ಈ ನೆಲದ ಸಾಂಸ್ಕೃತಿಕ ನಾಯಕ: ಶಾಸಕ
Next Article ಮಯೂರ ವೇದಿಕೆ ವತಿಯಿಂದ ಡಾ. ರಾಜ್‌ಕುಮಾರ್ ಜನ್ಮದಿನ ಆಚರಣೆ
News Desk Benkiyabale

Related Posts

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm news
ತಾಜಾ ಸುದ್ಧಿಗಳು
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm
news

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm
news

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm
news

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
news

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
news

ಹೆದ್ದಾರಿಯಲ್ಲಿ ಅವೈಜ್ಞಾನಿಕ ಅಂಡರ್ ಪಾಸ್ ನಿರ್ಮಾಣ

August 08, 2026 5:13 pm
Our Youtube Channel
Our Picks

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

August 10, 2026 5:47 pm

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm

ಬರ ಪರಿಸ್ಥಿತಿಯ ಸಮಗ್ರ ವರದಿ ಕೇಂದ್ರಕ್ಕೆ ಡಾ.ಜಿ.ಪರಮೇಶ್ವರ

August 10, 2026 5:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು

By News Desk BenkiyabaleAugust 10, 2026 5:47 pm

ತುಮಕೂರು: ಕನ್ನಡ ಉಳಿಸುವ ಪ್ರಶ್ನೆ ಸವಾಲಾಗಿರುವ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಆದ್ಯತೆ ಕನ್ನಡದ ಉಳಿವಿಗೆ ಮುಖ್ಯವಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ…

ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ

August 10, 2026 5:46 pm

ತಳ ಸಮುದಾಯಗಳು ಗುರುತಿಸಿಕೊಳ್ಳಲು ಸಾಂಸ್ಕೃತಿಕ ಮನಸ್ಥಿತಿಯೇ ಕಾರಣ

August 10, 2026 5:45 pm

ಸ್ಲ0 ನಿವಾಸಿಗಳ ಕುಂದು ಕೊರತೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ

August 10, 2026 5:44 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.