ತುಮಕೂರು: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕಾರಣ ಮಾಡಬೇಕು. ಉಳಿದಂತೆ ಅಭಿವೃದ್ಧಿ ಕಾರ್ಯಗಳು ಸದ್ದು ಮಾಡಬೇಕು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನನ್ನ ಗುರಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಜಿಲ್ಲೆಯ ತುರುವೇಕೆರೆ-ತಿಪಟೂರು ತಾಲ್ಲೂಕಿನ ಗಡಿಭಾಗ ಕುಂದೂರು ಬಳಿ ರಾಷ್ಟಿçÃಯ ಹೆದ್ದಾರಿ ೧೫೦ಎ ನ ೪೨.೨೩೬ ಕಿ.ಮೀ. ಉದ್ಧದ ಕೆ.ಬಿ. ಕ್ರಾಸ್, ಬಾಣಸಂದ್ರ, ತುರುವೇಕೆರೆ, ಮಾಯಸಂದ್ರ, ಚುಂಚನಹಳ್ಳಿ ಹಾಗೂ ನೆಲ್ಲಿಗೆರೆ ಭಾಗದ ಸುಮಾರು ೬೧೭.೨೮ ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಅಭಿವೃದ್ಧಿ ವಿಚಾರದಲ್ಲಿ ನಾನು ರಾಜಕಾರಣ ಮಾಡುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ಪಕ್ಷ. ಉಳಿದ ದಿನಗಳಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕು. ಯಾವುದೇ ಪಕ್ಷದವರಿಗೆ ನನ್ನಿಂದ ಒಂದು ಸಣ್ಣ ಅಪಚಾರವಾಗಿದ್ದರೆ ನಾನು ಒಂದು ಸೆಕೆಂಡ್ ಸಹ ರಾಜಕಾರಣದಲ್ಲಿ ಇರುವುದಿಲ್ಲ ಎಂದರು.
ಸರ್ಕಾರಗಳಿಗೆ ತೆರಿಗೆ ರೂಪದಲ್ಲಿ ಬರುವ ಸಾರ್ವಜನಿಕರ ಹಣವನ್ನು ಇನ್ನೊಂದು ರೀತಿಯಲ್ಲಿ ಅಂದರೆ ಅಭಿವೃದ್ಧಿ ಕಾರ್ಯಗಳ ಮುಖೇನ ಸಾರ್ವಜನಿಕರಿಗೆ ಸಮರ್ಪಿಸುವ ಕೆಲಸಕ್ಕೆ ನಾನು ಒತ್ತು ನೀಡುತ್ತಿದ್ದೇವೆ ಎಂದರು.
ಹೆದ್ದಾರಿ ರಸ್ತೆ ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಇರುವುದಿಲ್ಲ. ಕಾಮಗಾರಿ ಗುಣಮಟ್ಟದಿಂದ ಕೂಡಿರದಿದ್ದರೆ ಅದನ್ನು ನಾನು ಸಹಿಸುವುದಿಲ್ಲ. ಅಂತಹ ಗುತ್ತಿಗೆದಾರರನ್ನು ಕಪುö್ಪಪಟ್ಟಿಗೆ ಸೇರಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ಮತ್ತು ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಲು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಅವರು ಹೇಳಿದರು.
ರಾಷ್ಟಿçÃಯ ಹೆದ್ದಾರಿ ೧೫೦ಎ ಹೆದ್ದಾರಿಯು ರಾಜ್ಯದ ಉತ್ತರದ ಜೇವರ್ಗಿಯಿಂದ ಪ್ರಾರಂಭಗೊAಡು ದಕ್ಷಿಣದ ಚಾಮರಾಜನಗರದಲ್ಲಿ ಅಂತ್ಯಗೊಳ್ಳುತ್ತದೆ ಎಂದರು.
ಈ ರಾಷ್ಟಿçÃಯ ಹೆದ್ದಾರಿಯನ್ನು ೪೭೨ ಕಿ.ಮೀ. ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ೨೦೧೪ ರಿಂದ ಈವರೆಗೆ ೬೫೨೪ ಕೋಟಿ ರೂ.ಗಳಿಗೆ ಅನುಮೋದನೆ ನೀಡಿದೆ ಎಂದ ಅವರು, ಈಗಾಗಲೇ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ೨೦೨೪ರ ಮಾರ್ಚ್ ತಿಂಗಳಲ್ಲೇ ಮೈಸೂರಿನಲ್ಲಿ ಈ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದರು.
ತುಮಕೂರು ಜಿಲ್ಲೆಯಲ್ಲಿ ೮೪೩೨.೪೪ ಕೋಟಿ ಮೊತ್ತದ ೨೫೭.೮೯ ಕಿ.ಮೀ. ರಾಷ್ಟಿçÃಯ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈ ಪೈಕಿ ೪೦೬೯.೧೮ ಕೋಟಿ ಮೊತ್ತದ ೧೩೭.೬೩ ಕಿ.ಮೀ. ಉದ್ಧದ ರಾಷ್ಟಿçÃಯ ಹೆದ್ದಾರಿ ಅಭಿವೃದ್ದಿ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.
೪೪.೨೬ ಕಿ.ಮೀ. ಉದ್ದದ ನೆಲಮಂಗಲ-ತುಮಕೂರು ಷಟ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ, ೪೨.೨೩೬ ಕಿ.ಮೀ. ಉದ್ದದ ಕೆ.ಬಿ. ಕ್ರಾಸ್, ಬಾಣಸಂದ್ರ, ತುರುವೇಕೆರೆ, ಮಾಯಸಂದ್ರ, ಚುಂಚನಹಳ್ಳಿ ಭಾಗದ ದ್ವಿಪಥ ರಸ್ತೆ ಅಭಿವೃದ್ದಿ ಕಾಮಗಾರಿ ಹಾಗೂ ೫೦.೬೪ ಕಿ.ಮೀ. ಉದ್ಧದ ರಾಷ್ಟಿçÃಯ ಹೆದ್ದಾರಿ-೨೦೬ರ ಕರಡಿ, ಮಲ್ಲಸಂದ್ರ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
೨೦೨೪-೨೫ನೇ ಸಾಲಿನಲ್ಲಿ ೭೪೩.೨೬ ಕೋಟಿ ಮೊತ್ತದ ೪೩.೨೦ ಕಿ.ಮೀ. ಉದ್ದದ ರಾಷ್ಟಿçÃಯ ಹೆದ್ದಾರಿ ಅಭಿವೃದ್ಧಿಪಡಿಸಲು ೪ ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಗಿದ್ದು, ಸಿರಾ-ಬಡವನಹಳ್ಳಿ ಭಾಗದ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಹಾಗೂ ತುಮಕೂರಿನ ಬಟವಾಡಿಯಿಂದ ಮಲ್ಲಸಂದ್ರವರೆಗೆ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದರು.
ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, ಗುಣಮಟ್ಟದ ಕಾಮಗಾರಿಯೊಂದಿಗೆ ಉತ್ತಮ ರಸ್ತೆ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.
ನಾನು ೨೦೦೬ ರಲ್ಲಿ ಶಾಸಕನಾಗಿದಾಗ ಶ್ರೀರಂಗಪಟ್ಟಣ-ಚಿAಚೋಳಿ ಹೆದ್ದಾರಿ ನಿರ್ಮಾಣ ಮಾಡಲಾಗಿತ್ತು. ಈಗ ಕೇಂದ್ರ ಸಚಿವ ಸೋಮಣ್ಣನವರು ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ. ಹಾಗೆಯೇ ಅವರು ರೈಲ್ವೆ ಸಚಿವರಾದ ಬಳಿಕ ನೆನೆಗುದಿಗೆ ಬಿದ್ದಿರುವ ರೈಲ್ವೆ ಮೇಲ್ವೇತುವೆಗಳ ನಿರ್ಮಾಣಕ್ಕೂ ಚಾಲನೆ ನೀಡಿದ್ದಾರೆ ಎಂದರು.
ಸಚಿವ ಸೋಮಣ್ಣ ಅವರು ಮತದಾರರ ಮತಕ್ಕೆ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೋಮಣ್ಣನವರಿಗೆ ಕೇಂದ್ರ ಸಂಪುಟ ದರ್ಜೆ ಸಚಿವ ಸ್ಥಾನ ದೊರೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ಟಿ. ಕೃಷ್ಣಪ್ಪ, ಮುಖಂಡರಾದ ಚೌದ್ರಿ ರಂಗಪ್ಪ, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಧನರಾಜ್, ಶಿವಶಂಕರ್, ತುರುವೇಕೆರೆ ತಹಶೀಲ್ದಾರ್ ಅಹಮದ್ ಕು.ಞ. ಮತ್ತಿತರರು ಉಪಸ್ಥಿತರಿದ್ದರು.
(Visited 1 times, 1 visits today)