
ತುಮಕೂರು: ಕಾರ್ಮಿಕ ಇಲಾಖೆಯಿಂದ ಹಮ್ಮಿಕೊಂಡಿದ್ದ ಇ-ಶ್ರಮ್ ನೋಂದಣಿ, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರ ನೋಂದಣಿ ಹಾಗೂ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಅಭಿಯಾನಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಇಂದು ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರನ್ನು ವಿವಿಧ ಯೋಜನೆಗಳಡಿ ನೋಂದಾಯಿಸುವ ಸಲುವಾಗಿ ಹಮ್ಮಿಕೊಂಡಿದ್ದ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಅಸಂ ಘಟಿತ ವರ್ಗಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಹಲವಾರು, ಚಿಂದಿ ಆಯುವವರು, ಗೃಹ ಕಾರ್ಮಿ ಕರು, ಟೈಲರ್, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಬೀಡಿ ಕಾರ್ಮಿ ಕರು ಮತ್ತಿತರ ಅಸಂಘಟಿತ ಕಾರ್ಮಿಕರನ್ನು ನೋಂದಾ ಯಿಸಿಕೊಂಡು ಸ್ಮಾರ್ಟ್ ಕಾರ್ಡ್ ವಿತರಣೆ ಮಾಡ ಲಾಗುವುದು. ಈ ಸ್ಮಾರ್ಟ್ ಕಾರ್ಡ್ ಹೊಂದಿದ ಅಸಂಘಟಿತ ಕಾರ್ಮಿಕರು ಮರಣ ಹೊಂದಿದಲ್ಲಿ ಅವರ ನಾಮ ನಿರ್ದೇಶಿತರಿಗೆ ೧ ಲಕ್ಷ ರೂ.ಗಳ ಪರಿಹಾರ ಹಾಗೂ ೫೦ ಸಾವಿರ ರೂ.ಗಳವರೆಗೆ ಆಸ್ಪತ್ರೆ ವೆಚ್ಚ ಮರುಪಾವತಿ ಸೌಲಭ್ಯ ದೊರೆಯಲಿದ್ದು, ಕಾರ್ಮಿಕರು ಯೋಜನೆಯ ಸದುಪಯೋಗ ಪಡೆದು ಕೊಳ್ಳಬೇಕೆಂದು ಮನವಿ ಮಾಡಿದರು.
ಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಇ-ಶ್ರಮ್ ನೋಂದಣಿ ಅಗತ್ಯ. ಅಸಂಘಟಿತ ಕಾರ್ಮಿಕರ ರಾಷ್ಟಿçÃಯ ದತ್ತಾಂಶವನ್ನು ಸಿದ್ಧಪಡಿಸಲು ಅಭಿವೃದ್ಧಿ ಪಡಿಸಿರುವ ಇ-ಶ್ರಮ್ ಪೋರ್ಟಲ್‌ನಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯ ಛಕರ್ತೆಯರು, ಮನೆಗೆಲಸದವರು, ಚಾಲಕರು ಸೇರಿದಂತೆ ಕೇಂದ್ರ ಸರ್ಕಾರ ಗುರುತಿಸಿರುವ ಒಟ್ಟು ೩೭೯ ವರ್ಗಗಳ ಕಾರ್ಮಿಕರು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ನೋಂದಣಿ ಉಚಿತವಾಗಿದ್ದು, ಯಶಸ್ವಿ ನೋಂದಣಿ ನಂತರ ಫಲಾನುಭವಿಗಳಿಗೆ ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ವಿತರಿಸಲಾಗುವುದು. ಈ ಗುರುತಿನ ಚೀಟಿಯು ದೇಶದಾದ್ಯಂತ ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ. ಇ-ಶ್ರಮ್ ಯೋಜನೆಗೆ ನೋಂದಾಯಿಸಿಕೊAಡ ಕಾರ್ಮಿಕರು ೧ ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಪ್ರಯೋಜನ ಪಡೆಯಬಹುದು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬAಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕಾರ್ಮಿಕರು ನೋಂದಣಿಯಾದಲ್ಲಿ ಅಪಘಾತ ಪರಿಹಾರ ಸೌಲಭ್ಯ, ನೈಸರ್ಗಿಕ ಮರಣ ಪರಿಹಾರ ಹಾಗೂ ಅಂತ್ಯಸAಸ್ಕಾರ ವೆಚ್ಚ, ಫಲಾನುಭವಿಗಳ ಮಕ್ಕಳಿಗೆ ಶೈಕ್ಷಣಿಕ ಧನ ಸಹಾಯ, ಹೆರಿಗೆ ಭತ್ಯೆ ಮತ್ತಿತರ ಸೌಲಭ್ಯಗಳು ದೊರೆಯಲಿವೆ. ಚಾಲಕ/ನಿರ್ವಾಹಕ/ಕ್ಲೀನರ್/ ನಿಲ್ದಾಣ ಸಿಬ್ಬಂದಿ/ಮಾರ್ಗ ಪರಿಶೀಲನಾ ಸಿಬ್ಬಂದಿ/ ಬುಕ್ಕಿಂಗ್ ಗುಮಾಸ್ತ/ ನಗದು ಗುಮಾಸ್ತ ಛ/ ಡಿಪೋ ಗುಮಾಸ್ತ/ ಸಮಯ ಪಾಲಕ/ ಕಾವ ಲುಗಾರ ಅಥವಾ ಪರಿಚಾಲಕ/ ಮೋಟಾರು ಗ್ಯಾರೇಜಿನಲ್ಲಿ ಟೈರ್ ಜೋಡಿಸುವ, ಮತ್ತಿತರ ಕೆಲಸ ನಿರ್ವಹಿಸುವ ಕಾರ್ಮಿಕರು ಯೋಜನೆಯ ಸೌಲಭ್ಯ ಪಡೆಯಬಹುದಾಗಿದೆ ಎಂದು ತಿಳಿಸಿದರು.
ಸ್ಥಳದಲ್ಲಿಯೇ ನೋಂದಣಿಗೆ ಅವಕಾಶ ಕಲ್ಪಿಸ ಲಾಗಿದ್ದು, ಅರ್ಹ ಕಾರ್ಮಿಕರು ತಕ್ಷಣವೇ ತಮ್ಮ ಭಾವಚಿತ್ರ, ಮೊಬೈಲ್ ಸಂಖ್ಯೆ, ಆಧಾರ್ ಮತ್ತು ಬ್ಯಾಂಕ್ ಖಾತೆ ವಿವರ, ಪಡಿತರ ಚೀಟಿ ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದು ಮನವಿ ಮಾಡಿದರು.
ಅಸಂಘಟಿತ ಕಾರ್ಮಿಕರ ನೋಂದಣಿ ಕಾರ್ಯ ವನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ಹಮ್ಮಿ ಕೊಳ್ಳಲು ದಿನಾಂಕ ನಿಗಧಿಪಡಿಸಬೇಕು. ಮುಂದಿನ ೧೫ ದಿನಗಳಲ್ಲಿ ೧೦,೦೦೦ ಕಾರ್ಮಿಕರನ್ನು ನೋಂದಣಿ ಗುರಿ ತಲುಪಬೇಕು. ನೋಂದಣಿ ಮಾಡಿಸಲು ನೋಂದಣಿ ಕೇಂದ್ರಕ್ಕೆ ಆಗಮಿಸುವ ಕಾರ್ಮಿಕರಿಗೆ ನೆರಳಿನ ವ್ಯವಸ್ಥೆ, ಆಸನ ವ್ಯವಸ್ಥೆ ಮಾಡಬೇಕು. ಪ್ರತಿ ದಿನ ನೋಂದಣಿ ಮಾಹಿತಿ ಕುರಿತು ಜಿಲ್ಲಾಧಿಕಾರಿಗಳ ಕಚೇರಿಗೆ ವರದಿ ನೀಡಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಕಾರ್ಮಿಕ ಇಲಾಖೆಯ ನೋಂದಣಾ ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.
(Visited 1 times, 1 visits today)