
ತುಮಕೂರು: ಇಂಡಿಯಾ-ಪಾಕಿಸ್ತಾನ್ ಯುದ್ಧ ಸಂದರ್ಭ ದಲ್ಲಿ ಜಿಲ್ಲೆಯ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಸೇವೆಗಾಗಿ ಹಾಟ್ ಲೈನ್ ಸಹಾಯ ವಾಣಿ ಕೇಂದ್ರಗಳನ್ನು ಸ್ಥಾಪಿಸಲು ಕ್ರಮ ಕೈಗೊ ಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾರತ ಸಂಚಾರ ನಿಗಮದ ಎಜಿಎಂ ಆನಂದಿ ಅವರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ಸಭಾಂ ಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾನುವಾರ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಹಾಗೂ ತಾಲೂಕು ಕಚೇರಿಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪಿಸಬೇಕು. ಈ ಸಹಾಯವಾಣಿ ಕೇಂದ್ರಗಳು ದಿನದ ೨೪ ಗಂಟೆಗಳ ಕಾಲವೂ ಕಾರ್ಯ ನಿರ್ವಹಿಸಬೇಕು. ಸಹಾಯವಾಣಿ ಕೇಂದ್ರದಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಸ್ವೀಕರಿಸಿ ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಆಸ್ಪತ್ರೆ ಹಾಗೂ ಇನ್ನಿತರ ತುರ್ತು ಸೇವೆಯ ಕೇಂದ್ರಗಳಲ್ಲಿ ಅವಶ್ಯಕತೆ ಇರುವ ಎಲ್ಲಾ ಸಾಮಗ್ರಿಗಳನ್ನು ಖರೀದಿಸಿ ಇಟ್ಟುಕೊಳ್ಳಬೇಕು ಹಾಗೂ ತುರ್ತು ಪರಿಸ್ಥಿತಿ ಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮತ್ತು ಸಾರ್ವಜನಿಕರಿಗೆ ಸಕಾಲದಲ್ಲಿ ಸೇವೆ ನೀಡಲು ಕ್ರಮ ವಹಿಸಬೇಕು ಎಂದು ತಿಳಿಸಿದರು.
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾರ್ವಜನಿ ಕರಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಎಲ್ಲ ತಾಲೂಕು ಕಚೇರಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಯಲ್ಲಿ ಸೈರನ್ ಇನ್‌ಸ್ಟುçಮೆಂಟ್ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ರಾಜ್ಯ ನಾಗರಿಕ ರಕ್ಷಣಾ ಕಾಯ್ದೆ ಕಾರ್ಯಚಟು ವಟಿಕೆಗಳನ್ನು ಬಲಪಡಿಸುವ ಉದ್ದೇಶದಿಂದ ಸಿವಿಲ್ ಡಿಫೆನ್ಸ್ ಕಾಯ್ದೆ ೧೯೬೮ರನ್ವಯ ಸ್ವಯಂಸೇ ವಕರನ್ನು ನೇಮಿಸಿಕೊಳ್ಳಲಾಗುವುದು. ಸ್ವ ಯಂ ಸೇವಕರ ನೇಮಕಾತಿಗಾಗಿ ನಿಗಧಿತ ಅರ್ಜಿ ನಮೂನೆ-ಎ ಅನ್ನು ಎಲ್ಲಾ ಗ್ರಾಮ ಪಂಚಾ ಯಿತಿಗಳಲ್ಲಿ ಕಡ್ಡಾಯವಾಗಿ ಲಭ್ಯವಿರಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ನಗರದ ಡಿವೈಎಸ್‌ಪಿ ಕೆ.ಆರ್. ಚಂದ್ರಶೇಖರ್, ತಹಶೀಲ್ದಾರ್ ರಾಜೇಶ್ವರಿ, ಮಧುಗಿರಿ ತಹಶೀಲ್ದಾರ್ ಶಿರೀನ್ ತಾಜ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
(Visited 1 times, 1 visits today)