BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರೋತ್ಥಾನ ಯೋಜನೆ ಅನುಷ್ಠಾನ
ತುಮಕೂರು

ನಗರೋತ್ಥಾನ ಯೋಜನೆ ಅನುಷ್ಠಾನ

 ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತು: ಸಚಿವರ ಎಚ್ಚರಿಕೆ
By News Desk BenkiyabaleUpdated:May 15, 2025 4:17 pm

ತುಮಕೂರು: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯ ಅನುಷ್ಠಾನ ಮಾಡುವಲ್ಲಿ ಪ್ರಗತಿಯಲ್ಲಿ ಹಿಂದುಳಿದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಮ್ ಖಾನ್ ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಬುಧವಾರ ಜರುಗಿದ ಜಿಲ್ಲೆಯ ೧೦ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬAಧಿಸಿದAತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಗರೋತ್ಥಾನ ಯೋಜನೆಯು ಪ್ರಾರಂಭವಾಗಿ ೩ ವರ್ಷಗಳು ಕಳೆದರೂ ಕುಣಿಗಲ್ ಪುರಸಭೆಯಲ್ಲಿ ಕೇವಲ ಶೇ.೧೪ರಷ್ಟು ಮಾತ್ರ ಭೌತಿಕ ಸಾಧನೆಯಾಗಿದೆ. ಕಾರಣವೇನೆಂದು ಪುರಸಭೆ ಮುಖ್ಯಾಧಿಕಾರಿ ಮಂಜುಳಾ ಅವರನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ಅನುಮೋದನೆ ನೀಡಿದ ೨೭ ಕಾಮಗಾರಿಗಳ ಪೈಕಿ ಕೇವಲ ೪ ಕಾಮಗಾರಿಗಳನ್ನು ಮಾತ್ರ ಪೂರ್ಣಗೊಳಿಸಲಾಗಿದ್ದು, ೬ ಕಾಮಗಾರಿಗಳು ಇನ್ನೂ ಟೆಂಡರು ಪ್ರಕ್ರಿಯೆ ಹಂತದಲ್ಲಿವೆ. ಇದೇ ರೀತಿ ಕಾಮಗಾರಿ ಪ್ರಗತಿಯಲ್ಲಿ ಹಿನ್ನಡೆ ಕಂಡು ಬಂದರೆ ಸಂಬAಧಿಸಿದ ಅಧಿಕಾರಿಗಳನ್ನು ಮನೆಗೆ ಕಳುಹಿಸಲು ಕ್ರಮವಿಡಲಾಗುವುದು ಎಂದು ಖಡಕ್ ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಕುಡಿಯುವ ನೀರು, ಸ್ವಚ್ಛತಾ ಕಾಮಗಾರಿಗಳಿಗಾಗಿ ಜಿಲ್ಲೆಗೆ ಈವರೆಗೂ ಒಟ್ಟು ೪೪.೭೧ ಕೋಟಿ ರೂ. ಬಿಡುಗಡೆಯಾಗಿದೆ. ಈಗಾಗಲೇ ಈ ಯೋಜನೆ ಪೂರ್ಣಗೊಳ್ಳುವ ಹಂತಕ್ಕೆ ತಲುಪಬೇಕಾಗಿತ್ತು. ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಿರೀಕ್ಷಿತ ಮಟ್ಟಕ್ಕೆ ಯೋಜನೆ ಪ್ರಗತಿಯಾಗಿಲ್ಲವೆಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.
ಕಾಮಗಾರಿ ವಿಳಂಬಕ್ಕೆ ಸಚಿವರು ಕಾರಣ ಕೇಳಿದಾಗ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಯೋಗಾನಂದ ಅವರು ಗುತ್ತಿಗೆದಾರರಿಂದ ಟೆಂಡರು ಅರ್ಜಿಗಳು ಸಲ್ಲಿಕೆಯಾಗದಿರುವುದರಿಂದ ಕಾಮಗಾರಿ ಕೈಗೊಳ್ಳಲು ತಡವಾಗಿದೆ ಎಂದು ಉತ್ತರಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸಿವಿಲ್ ಕಾಮಗಾರಿಗಳಿಗೆ ನಾಮುಂದು-ತಾಮುAದು ಎಂದು ಟೆಂಡರ್ ಸಲ್ಲಿಸಲು ಗುತ್ತಿಗೆದಾರರು ತುದಿಗಾಲಿನಲ್ಲಿ ನಿಂತಿರುತ್ತಾರೆ. ಸಭೆಗೆ ತಪ್ಪು ಮಾಹಿತಿ ನೀಡಿದರೆ ನಾನು ಸಹಿಸುವುದಿಲ್ಲ. ವಿಳಂಬಕ್ಕೆ ಯಾವುದೇ ನೆಪ ಹೇಳದೆ ಆಗಸ್ಟ್ ಮಾಹೆಯೊಳಗೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕಾರ್ಯ ಪ್ರವೃತ್ತರಾಗಬೇಕೆಂದು ಸೂಚನೆ ನೀಡಿದರು.
ಮುಂದಿನ ಮಾರ್ಚ್-೨೦೨೬ಕ್ಕೆ ಯೋಜನೆಯನ್ನು ಪೂರ್ಣಗೊಳಿಸಬೇಕಾಗಿರುವುದರಿಂದ ಜನವರಿ-೨೦೨೬ರೊಳಗೆ ಎಲ್ಲಾ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ನಿಗಧಿತ ಅವಧಿಯೊಳಗೆ ಟೆಂಡರು ಪ್ರಕ್ರಿಯೆಯನ್ನೂ ಮುಗಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವುದರಿಂದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿಲ್ಲ. ಎಲ್ಲಾ ವಾರ್ಡುಗಳಿಗೆ ಪ್ರತೀ ದಿನ ನೀರು ಸರಬರಾಜು ಮಾಡಲು ಎಲ್ಲಾ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾವಗಡ ಪುರಸಭೆಯ ೨ ವಾರ್ಡುಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತೀ ದಿನ ಬೆಳಿಗ್ಗೆ ಹಾಗೂ ಸಂಜೆ ಕ್ಷೇತ್ರಗಳಿಗೆ ಭೇಟಿ ನಿಡಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು.
ಸಚಿವರು ಮುಂದುವರೆದು ಮಾತನಾಡಿ, ನಗರ ಪ್ರದೇಶ ವ್ಯಾಪ್ತಿಯಲ್ಲಿ ಕಲುಷಿತ ನೀರಿನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ, ಜೀವಹಾನಿ ಉಂಟಾದ ಯಾವುದೇ ಪ್ರಕರಣ ವರದಿಯಾದರೆ ಕೂಡಲೇ ಸಂಬAಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ನಮಗೆ ಸೂಚನೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದರಲ್ಲದೆ, ನಾಗರಿಕರಿಗೆ ಶುದ್ಧ ನೀರು ಪೂರೈಕೆ ಮಾಡುವುದು ಅಧಿಕಾರಿಗಳ ಹೊಣೆ. ನಿರಂತರವಾಗಿ ಕುಡಿಯುವ ನೀರಿನ ಕ್ಲೋರಿನೇಷನ್ ಆಗಬೇಕು. ಓವರ್ ಹೆಡ್ ಟ್ಯಾಂಕುಗಳನ್ನು ಸ್ವಚ್ಛಗೊಳಿಸಬೇಕು. ಸಿವಿಲ್ ಕಾಮಗಾರಿ ಕೈಗೊಳ್ಳುವಾಗ ಒಳಚರಂಡಿ ನೀರು ಕುಡಿಯುವ ನೀರಿನ ಕೊಳವೆ ಮಾರ್ಗಕ್ಕೆ ಮಿಶ್ರಣವಾಗದಂತೆ ಜಾಗರೂಕತೆವಹಿಸಬೇಕು. ಕುಡಿಯುವ ನೀರಿನ ಪೈಪು ಹಾಗೂ ಒಳ ಚರಂಡಿ ಮಾರ್ಗಕ್ಕೂ ಅಂತರವಿರುವAತೆ ಕಾಮಗಾರಿ ನಿರ್ವಹಿಸಬೇಕೆಂದು ನಿರ್ದೇಶನ ನೀಡಿದರು.
ಪೌರಾಡಳಿತ ಇಲಾಖೆಯು ಜನರ ಸೇವೆಗಾಗಿ ಬದ್ಧವಾಗಿರಬೇಕು. ಸ್ವಚ್ಛತೆ, ತ್ಯಾಜ್ಯ ವಿಲೇವಾರಿ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದರು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್‌ಗಳನ್ನು ಶೀಘ್ರದಲ್ಲೇ ಉದ್ಘಾಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಭೆಗೆ ಮಾಹಿತಿ ನೀಡಿದಾಗ ಸಚಿವರು ಮಾತನಾಡಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಗುತ್ತಿಗೆದಾರರು ಊಟ ಮಾಡುವವರ ಲೆಕ್ಕವನ್ನು ತಪ್ಪಾಗಿ ನೀಡಿ ಸುಳ್ಳು ಬಿಲ್ ಮಾಡಿಕೊಳ್ಳುವುದನ್ನು ತಡೆಯಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಇನ್ನು ಮುಂದೆ ಸುಳ್ಳು ಬಿಲ್ಲುಗಳಿಗೆ ಅವಕಾಶವಿಲ್ಲ ಎಂದು ತಿಳಿಸಿದರಲ್ಲದೆ, ಪೌರ ಕಾರ್ಮಿಕರ ನೇಮಕಾತಿ ಹಾಗೂ ವೇತನ ಪಾವತಿ ಬಗ್ಗೆ ಮಾಹಿತಿ ಪಡೆದರು.
ಸಭೆಯಲ್ಲಿ ಎಸ್‌ಎಫ್‌ಸಿ, ೧೫ನೇ ಹಣಕಾಸು, ಸ್ವಚ್ಛ ಭಾರತ್ ಮಿಷನ್ ಯೋಜನೆ, ತೆರಿಗೆ ವಸೂಲಾತಿ, ಎ-ಖಾತಾ/ಬಿ-ಖಾತಾ, ಕುಡಿಯುವ ನೀರಿನ ಕಾಮಗಾರಿ, ತ್ಯಾಜ್ಯ ವಿಲೇವಾರಿಗೆ ಸಂಬAಧಿಸಿದAತೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಪೌರಾಡಳಿತ ಇಲಾಖೆಯ ಮುಖ್ಯ ಇಂಜಿನಿಯರ್ ರಾಧಾಕೃಷ್ಣ, ನಗರ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ಮತ್ತಿತರರು ಹಾಜರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಬಿ-ಖಾತೆ: ೩ ತಿಂಗಳ ಕಾಲಾವಧಿ ವಿಸ್ತರಣೆ
Next Article ಮೇ ೧೮ರಂದು ಖಾತೆದಾರರಿಗೆ ಭೂ ಪರಿಹಾರ ಪಾವತಿಸಿ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.