BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲೆಯಲ್ಲಿ ಮೇ ೨೦ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ
ತುಮಕೂರು

ಜಿಲ್ಲೆಯಲ್ಲಿ ಮೇ ೨೦ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ

ಮುಂಜಾಗ್ರತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
By News Desk BenkiyabaleUpdated:May 17, 2025 3:06 pm

ತುಮಕೂರು: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ ೨೦ರವರೆಗೆ ಭಾರಿ ಪ್ರಮಾಣದ ಗುಡುಗು-ಸಿಡಿಲು ಸಹಿತ ಗಾಳಿ-ಮಳೆ ಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲಾ/ತಾಲ್ಲೂಕು/ಗ್ರಾಮ ಮಟ್ಟದ ಅಧಿಕಾರಿ/ಸಿಬ್ಬಂದಿಗಳು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಂಗಾ ಮಿನಲ್ಲಿ ಈವರೆಗೆ ಶೇ.೧೩೪ರಷ್ಟು ಅಧಿಕ ಮಳೆಯಾಗಿದ್ದು, ಪ್ರವಾಹ/ಭಾರಿ ಮಳೆಯಿಂದ ಯಾವುದೇ ಜನ-ಜಾನುವಾರುಗಳ ಜೀವ ಹಾನಿ ಯಾಗದಂತೆ ಮುಂಜಾಗ್ರತೆವಹಿಸಬೇಕು. ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬ ಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡ ಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯು ವುದು, ಈಜಾಡುವುದು, ದನ-ಕರುಗಳನ್ನು ತೊಳೆ ಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ. ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿ ಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: ೭೩೦೪೯೭೫೫೧೯ ಅಥವಾ ದೂರವಾಣಿ ಸಂಖ್ಯೆ: ೦೮೧೬-೨೨೧೩೪೦೦, ೧೫೫೩೦೪; ಬೆಸ್ಕಾಂ: ೧೯೧೨/ ೮೨೭೭೮೮೪೦೧೯(ತಿhಚಿಣsಚಿಠಿಠಿ)ನ್ನು ಸಂಪರ್ಕಿಸಬೇಕೆAದು ಮನವಿ ಮಾಡಿದ್ದಾರೆ.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಯಾರಲ್ಲಿ ದುಡಿಮೆಯ ಆಸಕ್ತಿ ಇದೆಯೋ ಅವರು ಮಾತ್ರ ಬೆಳೆಯಲು ಸಾಧ್ಯ
Next Article ಅಧಿಕಾರಿಗಳು ಜನಸಾಮಾನ್ಯರು, ರೈತರ ಸಮಸ್ಯೆಗಳಿಗೆ ಸ್ಪಂದಿಸಿ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.