BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಳೆ ಹಾನಿ ಪರಿಹಾರ: ಕ್ರಮಕ್ಕೆ ಸೂಚನೆ
ತುಮಕೂರು

ಮಳೆ ಹಾನಿ ಪರಿಹಾರ: ಕ್ರಮಕ್ಕೆ ಸೂಚನೆ

By News Desk BenkiyabaleUpdated:May 27, 2025 3:19 pm

ತುಮಕೂರು: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಪರಿಣಾಮವಾಗಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಾನಿಯುಂಟಾಗಿದೆ. ಮನೆ, ಕೃಷಿಭೂಮಿ ಮತ್ತು ಮೂಲಭೂತ ಸೌಲಭ್ಯಗಳು ಹಾನಿಗೊಳಗಾಗಿದ್ದಲ್ಲಿ ಸಂಬAಧಿಸಿದ ಫಲಾನುಭವಿಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಗಂಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದು ಮಳೆ ಗಾಳಿಗೆ ಹಾನಿಗೊಳಗಾದ ಪ್ರಕರಣವನ್ನು ಶೀಘ್ರವಾಗಿ ಪರಿಶೀಲಿಸಿ, ಸೂಕ್ತ ಪರಿಹಾರ ಧನವನ್ನು ವಿತರಿಸಬೇಕೆಂದು ನಿರ್ದೇಶಿಸಿದರು.
ಮಧುಗಿರಿಯ ಪುರಸಭೆ ವ್ಯಾಪ್ತಿ ವಾರ್ಡ್ ನಂಬರ್ ೧೦ರಲ್ಲಿ ಕೊಳವೆ ಬಾವಿ ನೀರಿನ ಮೂಲವನ್ನು ಪರಿಶೀಲಿಸಿದಾಗ ಕುಡಿಯಲು ಯೋಗ್ಯವಿಲ್ಲ ಎಂಬ ವರದಿ ಬಂದಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬೇರೊಂದು ಕೊಳವೆ ಬಾವಿಯಿಂದ ನೀರು ಸರಬರಾಜು ಮಾಡಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ೩೩೦ ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಕ್ಲೋರಿನೇಷನ್ ಪ್ರಕ್ರಿಯೆ ಕಡ್ಡಾಯವಾಗಿ ಮಾಡಬೇಕೆಂದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರಲ್ಲದೆ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ನೀರಿನ ಗುಣಮಟ್ಟದಲ್ಲಿ ನಿರಂತರ ನಿಗಾವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ ಇತ್ತೀಚಿಗೆ ೫೩ ಕೋವಿಡ್ ಪ್ರಕರಣಗಳು ದೃಢಪಟ್ಟ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಅಧಿಕಾರಿಗಳು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕು. ಬೆಂಗಳೂರಿಗೆ ಸುಮಾರು ೭೦ ಕಿಲೋಮೀಟರ್ ದೂರದಲ್ಲಿರುವ ತುಮಕೂರು ಜಿಲ್ಲೆಯಿಂದ ದಿನವೂ ಅನೇಕ ಮಂದಿ ಉದ್ಯೋಗ, ವ್ಯವಹಾರ ಹಾಗೂ ಇತರ ಕಾರಣಗಳಿಗಾಗಿ ಬೆಂಗಳೂರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಹಶೀಲ್ದಾರರು ಕೋವಿಡ್ ನಿಯಂತ್ರಣದ ಮೇಲೆ ಹೆಚ್ಚು ಗಮನಹರಿಸಬೇಕೆಂದು ಸೂಚನೆ ನೀಡಿದರು.
ಗ್ರಾಮಾಂತರ ಮಟ್ಟದಲ್ಲಿಯೂ ಎಚ್ಚರಿಕಾ ಕ್ರಮವಾಗಿ ಗ್ರಾಮ ಪಂಚಾಯತಿಯಲ್ಲಿ ರಚಿಸಲಾಗಿರುವ ಕೋವಿಡ್ ಕಾರ್ಯಪಡೆಯು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಹಳ್ಳಿಗಳಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಕುಡಿಯುವ ನೀರು ಸರಬರಾಜಾಗುವ ಪೈಪ್‌ಲೈನ್‌ಗಳ ಅಳವಡಿಕೆ ಸಂದರ್ಭದಲ್ಲಿ ಕಲುಷಿತ ನೀರು ಮಿಶ್ರಣವಾಗರ್ದಂತೆ ಹೆಚ್ಚಿನ ಗಮನ ಹರಿಸಬೇಕು. ಚರಂಡಿಗಳಲ್ಲಿ ಮಳೆ ನೀರು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಚಂದ್ರಶೇಖರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ. ಗೋಪಾಲ್, ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಗೃಹ ಸಚಿವ ಪರಮೇಶ್ವರ ಅವರಿಂದ ಬುಗುಡನಹಳ್ಳಿ ಕೆರೆ ವೀಕ್ಷಣೆ
Next Article ಪಂಚವಾರ್ಷಿಕ ಯೋಜನೆ, ಅಲಿಪ್ತ ನೀತಿ ಜಾರಿಗೆ ತಂದವರು ನೆಹರು
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.