BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ
ತುಮಕೂರು

ವೀರಶೈವ, ಲಿಂಗಾಯಿತರು ತಮ್ಮ ಅಸ್ತಿತ್ವಕ್ಕಾಗಿ ಹೋರಾಡಿ: ಶಾಸಕ

By News Desk BenkiyabaleUpdated:May 30, 2025 2:57 pm

ತುರುವೇಕೆರೆ: ವೀರಶೈವ ಲಿಂಗಾಯತ ಸಮಾಜ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದಮನ ಮಾಡುತ್ತಿದ್ದಾರೆ ವೀರಶೈವ ಲಿಂಗಾಯಿತರು ನಿಮ್ಮ ಅಸ್ತಿತ್ವಕ್ಕಾಗಿ ಹೋರಾಟ ಮಾಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಗುರುಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕ, ಮಹಿಳಾ ಯುವ ಘಟಕ ಹಾಗೂ ವೀರಶೈವ ಲಿಂಗಾಯಿತ ಸಂಘ ಸಂಸ್ಥೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಸವಜಯಂತಿ ಹಾಗೂ ಸಾಮೂಹಿಕ ಇಷ್ಟಲಿಂಗ ಪೂಜೆ (ವೀರಯೋದರಿಗೆ ಬಲ ನೀಡಲು) ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ೨೦೧೧ರ ಜನಗಣತಿ ಯ ಪ್ರಕಾರ ಸುಮಾರು ೯೩ ಲಕ್ಷ ಜನಸಂಖ್ಯೆ ಹೊಂದಿ ರಾಜ್ಯದ ದೊಡ್ಡ ಸಮಾಜ ವಾಗಿದ್ದ ವೀರಶೈವ ಲಿಂಗಾಯಿತರು ಸಿದ್ದರಾಮಯ್ಯರ ಜಾತಿಗಣತಿಯಲ್ಲಿ ೭೫ ಲಕ್ಷಕ್ಕೆ ಇಳಿಸಿದ್ದಾರೆ. ದೊಡ್ಡ ಸಮಾಜಗಳಲ್ಲಿ ಸಣ್ಣ ಉಪ ಪಂಗಡಗಳನ್ನು ಎತ್ತಿ ಕಟ್ಟಿ ಹೊಡೆದು ಹಾಕುವ ಹುನ್ನಾರ ಮಾಡುತ್ತಿದ್ದಾರೆ. ಜಾತಿ ಆದಾರದಲ್ಲಿ ಬಜೆಟ್ ಮಂಡಿಸಲು ಸಿದ್ದತೆ ದೊಡ್ಡ ಜಾತಿಗಳಿಗೆ ಬಹಳ ಪೆಟ್ಟು ಬೀಳುತ್ತದೆ ಎಂದು ಎಚ್ಚರಿಸಿದರು.
ಬಸವಣ್ಣನವರು ಇನ್ನು ೧೦ ವರ್ಷ ಹೆಚ್ಚು ಬದುಕಿದ್ದರೆ ಇಡೀ ರಾಷ್ಟçವನ್ನು ಧರ್ಮ, ಜಾತಿ ಮುಕ್ತ ಮಾಡಿ ಜಾತಿ ವ್ಯವಸ್ಥೆಯನ್ನೇ ನಿರ್ಣಾಮ ಮಾಡು ತ್ತಿದ್ದರು. ೮ ವರ್ಷದಲ್ಲಿಯೇ ತನ್ನ ಮನೆಯಿಂದಲೇ ಸಮಾನತೆಗಾಗಿ ಹೋರಾಟ ಮಾಡಿದವರು. ಇಡೀ ಜೀವನವನ್ನೇ ಸಮಾಜ ಸುದಾರಣೆಗೆ ಜಾತಿ ಪದ್ದತಿ, ತಾರತಮ್ಯ, ಮೇಲಿ ಕೀಳು ವಿರುದ್ದ ಹೋರಾಟಕ್ಕೆ ಮೀಸಲಿಟ್ಟಿದ್ದರು. ಅನುಭವ ಮಂಟಪದ ಮೂಲಕ ಬಸವಣ್ಣನವರು ರಾಷ್ಟçಕ್ಕೆ ಅಲ್ಲ ವಿಶ್ವಕ್ಕೆ ಮಾದರಿಯಾಗಿದ್ದಾರೆ. ಪ್ರದಾನಿ ಮೋದಿಯವರು ಬಸವ ಣ್ಣನವರ ಅನುಯಾಯಿಗಳಾಗಿದ್ದು ಅನುಭವ ಮಂಟ ಪದಂತೆ ನೂತನ ಪಾರ್ಲಿಮೆಂಟ್ ಭವನ ನಿರ್ಮಿಸಿ ಬಸವಣ್ಣನ ಅದರ್ಶಗಳನ್ನು ಪಾಲಿಸುತ್ತಿದ್ದಾರೆ ಎಂದ ಅವರು ಸಿದ್ದರಾಮೇಶ್ವರ ಸಮುದಾಯ ಭವನ ಆವರಣದಲ್ಲಿ ದೇವಾಲಯ ನಿರ್ಮಾಣಕ್ಕೆ ೧೦ ಲಕ್ಷ ಅನುದಾನ ನೀಡುವ ಭರವಸೆ ನೀಡಿದರು.
ಹೇಮಾವತಿ ಲಿಂಕ್ ಕೇನಾಲ್ ನಿಂದ ತಾಲೂಕಿನ ದಂಡಿನಶಿವರ ಹೋಬಳಿ ಗುಬ್ಬಿ ತಾಲೂಕಿಗೆ ಬಹಳ ಹೊಡೆತ ಬೀಳುತ್ತದೆ ಲಿಂಕ್ ಕೆನಾಲ್ ವಿರುದ್ದ ೩೧ ಶನಿವಾರ ಹೋರಾಟ ಹಮ್ಮಿಕೊಂಡಿದ್ದು ತಾಲೂಕಿನ ಎಲ್ಲ ರೈತರು ಸಂಘ ಸಂಸ್ಥೆ ಮುಖಂಡರು ಭಾಗವ ಹಿಸಬೇಕು ಕರೆ ನೀಡಿದರು. ಈಗಾಗಲೇ ಹೋರಾಟ ಕೈ ಬಿಡಿ ನಿಮಗೆ ಅನುದಾನ ನೀಡುತ್ತೇವೆ ಎಂದು ಕೆಲವು ರಾಜ್ಯ ಸಚಿವರು ಕರೆ ಮಾಡುತ್ತಿದ್ದಾರೆ. ನಾನು ಹೋರಾಟ ಮಾಡುತ್ತಾ ಬಂದಿದ್ದೇನೆ ಹೋರಾ ಟದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ರೈತರ ಹಿತಕ್ಕಾಗಿ ಜೈಲಿನಲ್ಲಿಯೇ ಮುದ್ದೆ ಮುರಿಯಲು ಸಿದ್ದ ರಾಗಿದ್ದೇನೆ ಎಂದು ಸರ್ಕಾರವನ್ನು ಎಚ್ಚರಿಸಿದರು.
ವೀರ ಯೋದರಿಗೆ ಬಲ ನೀಡಲು ಬೆಳಿಗ್ಗೆಯಿಂದ ಕಾಡಸಿದ್ದೇಶ್ವರ ಮಠದ ಕರಿವೃಷಭದೇಶಿ ಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ಹಾಗೂ ಗೊಲ್ಲಹಳ್ಳಿ ಸಿದ್ದಲಿಂಗೇಶ್ವರ ಮಹಾಸಂಸ್ಥಾನ ಮಠದ ವಿಭವ ವಿದ್ಯಾ ಶಂಕರ ದೇಶಿ ಕೇಂದ್ರ ಮಹಾ ಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜೆ ಕಾರ್ಯಕ್ರಮದಲ್ಲಿ ಹಲವಾರು ಜನರು ಭಾಗವಹಿಸಿ ಇಷ್ಟಲಿಂಗ ಪೂಜೆ ನೆರವೇರಿಸಿದರು. ಯುವ ಘಟಕದಿಂದ ಹಮ್ಮಿಕೊಂಡಿದ್ದ ರಕ್ತದಾನ ಶಿಭಿರದಲ್ಲಿ ಯುವಕರು ರಕ್ತದಾನ ಮಾಡಿದರು. ಅಕ್ಕನ ಬಳಗದವರಿಂದ ಕಾರ್ಯಕ್ರಮದಲ್ಲಿ ವಚನ ಗಾಯನವನ್ನು ನೆಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ ಹಾಗೂ ಹಿರೇಡೊಂಕಿಹಳ್ಳಿ ಕೃಷಿ ವಿಜ್ಞಾನ ವಿದ್ಯಾರ್ಥಿ ತೇಜಸ್ಸ್ರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾಡಸಿದ್ದೇಶ್ವರ ಮಠದ ಕರಿವೃಷಭದೇಶಿ ಕೇಂದ್ರ ಶಿವ ಯೋಗಿಶ್ವರ ಸ್ವಾಮೀಜಿ, ಕಿರಿಯ ಸ್ವಾಮೀಜಿ ಅಬಿನವ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಗೊಲ್ಲಹಳ್ಳಿ ಸಿದ್ದಲಿಂಗೇಶ್ವರ ಮಹಾಸಂಸ್ಥಾನ ಮಠದ ವಿಭವ ವಿದ್ಯಾ ಶಂಕರ ದೇಶಿ ಕೇಂದ್ರ ಮಹಾ ಸ್ವಾಮಿಗಳು ದಿವ್ಯ ಸಾನಿದ್ಯ ವಹಿಸಿ ಆಶೀರ್ವಚನ ನೀಡಿದರು. ಅದ್ಯಕ್ಷ ತೆಯನ್ನು ವೀರಶೈವ ಲಿಂಗಾಯಿತ ತಾಲೂಕು ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ವಹಿಸಿದ್ದರು. ಪಟ್ಟ ಣ ಪಂಚಾಯತಿ ಅಧ್ಯಕ್ಷೆ ಸ್ವಪ್ನ ನಟೇಶ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು, ವಿಶ್ವನಾಥ ಅಪ್ಪಾಜಪ್ಪ, ಕೋಶಾಧ್ಯಕ್ಷ ಆರ್.ಬಿ.ಜಯ ಣ್ಣ, ಕಾರ್ಯದರ್ಶಿ ಟಿ.ಎಂ.ವಿಜಯಕುಮಾರ್, ನೊಳಂಬ ಲಿಂಗಾಯತ ಸಂಘದ ನಿರ್ದೇಶಕ ಎಂ. ದೇವರಾಜು, ಯುವಘಟಕದ ಜಿಲ್ಲಾಧ್ಯಕ್ಷ ಕೆ.ಎಲ್.ದರ್ಶನ್, ರಾಜ್ಯ ಕಾರ್ಯದರ್ಶಿ ಹೆಚ್.ಎಸ್.ಶ್ರೀಧರ್, ಕೋಳಘಟ್ಟಯೋಗೀಶ್, ಮಹಿಳಾ ಘಟಕದ ಜಿಲ್ಲಾ ಧ್ಯಕ್ಷೆ ಮಮತಾ ದಿವಾಕರ್, ತಾ ಲೂಕು ಅಧ್ಯಕ್ಷೆ ಪುಷ್ಪಾ ವತಿ, ತಾಲೂಕು ಘಟಕದ ಪ್ರದಾನ ಕಾರ್ಯದರ್ಶಿ ಶಿವಾನಂದಯ್ಯ, ಕೋಶಾಧ್ಯಕ್ಷ ಡಿ.ಎಂ.ಸುರೇಶ್, ಉಪನ್ಯಾಸಕ ದಿಬ್ಬದಹಳ್ಳಿಶ್ಯಾಮಸುಂದರ್, ಯಡಗಿ ಹಳ್ಳಿವಿಶ್ವನಾಥ್, ಶರಣೆ ರೂಪಶ್ರೀ ಪದಾದಿಕಾರಿಗಳು ಸೇರಿದಂತೆ ಸಮಾಜದ ಮುಖಂಡರು ಇದ್ದರು.

(Visited 1 times, 1 visits today)
tumkur ತುರುವೇಕೆರೆ
Previous Articleಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಪ.ಪಂ ಜನಪ್ರತಿನಿಧಿ, ಕಾರ್ಯನಿರತ ಪರ್ತಕರ್ತರ ಸಂಘ ಬೆಂಬಲ
Next Article ಕೆರೆ ಅಂಗಳದ ಬಫರ್ ಝೋನ್ ಅಳತೆ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.