BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
  • ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ
  • ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ
  • ಜಿಪಂ, ತಾಪಂ ಚುನಾವಣೆ ಎದುರಿಸಲು ಕಾರ್ಯಕರ್ತರು ಸನ್ನದ್ಧರಾಗಿ: ಕೆ.ಎನ್. ರಾಜಣ್ಣ
  • ಅನ್ನದಾತನ ಅಸ್ತಿತ್ವಕ್ಕೆ ಹೋರಾಟವೇ ಸಾಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸಿಕೊಳ್ಳಿ
ತುಮಕೂರು

ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸಿಕೊಳ್ಳಿ

ವರದರಾಜ ಸಮೂಹ ಸಂಸ್ಥೆಗಳ ವತಿಯಿಂದ ಅದ್ದೂರಿ ಮಾವು ಮೇಳ ಯಶಸ್ವಿ
By News Desk BenkiyabaleUpdated:June 07, 2025 3:49 pm

ತುಮಕೂರು: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅತ್ಯಂತ ಸಹಕಾರಿಯಾಗಲಿದೆ ಎಂದು ವರದರಾಜ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ.ದುರ್ಗಾದಾಸ್ ಅಸ್ರಣ್ಣರವರು ತಿಳಿಸಿದರು.
ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಶಿಕ್ಷಣ ಸಂಸ್ಥೆಯಲ್ಲಿ ಜೂನ್ ೫ ರಂದು ಗುರುವಾರ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ಮಾವು ಮೇಳ-೨೦೨೫ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ದುರ್ಗಾದಾಸ್ ಅಸ್ರಣ್ಣರವರು ಮಾತನಾಡುತ್ತಾ ಉದ್ಯಮಶೀಲತಾ ಕೌಶಲ್ಯಗಳನ್ನು ಬೆಳೆಸುವ ಉದ್ದೇಶದಿಂದ ವಿದ್ಯಾರ್ಥಿಗಳಿಂದಲೇ ಪ್ರಾರಂಭಿಸಲಾದ ಈ ಮೇಳದಲ್ಲಿ ಸುಮಾರು ೪೦ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸುಮಾರು ೫೦೦ಕ್ಕೂ ಹೆಚ್ಚು ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಲಾಗಿತ್ತು. ಈ ಮಾವು ಮೇಳದ ಯಶಸ್ಸಿಗೆ ಕಾರಣರಾಗಿದ್ದಾರೆ. ರುಚಿ-ರುಚಿಯಾದ ಬಾದಾಮಿ, ರಸಪೂರಿ, ತೋತಾಪುರಿ ಸೇರಿದಂತೆ ಹಲವು ತಳಿಯ ಮಾವಿನ ಹಣ್ಣುಗಳನ್ನು ಸವಿಯಲಾಗಿತ್ತು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ವರುಣ್ ಅಸ್ರಣ್ಣರವರು ಮಾತನಾಡುತ್ತಾ ಮಾವು ಮೇಳದಲ್ಲಿ ವಿಜೇತರಾದವರಿಗೆ ನಗದು ಬಹುಮಾನಗಳನ್ನು ವಿತರಿಸಲಾಯಿತು. ಮಾವು ಮೇಳವು ಕೇವಲ ವ್ಯಾಪಾರಿಕ ಚಟುವಟಿಕೆಯಾಗಿರದೆ, ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ ವೇದಿಕೆಯಾಯಿತು. ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಮತ್ತಷ್ಟು ಕಾರ್ಯಕ್ರಮಗಳನ್ನು ಆಯೋಜಿಸಲು ಸಂಸ್ಥೆಯು ಚಿಂತನೆ ನಡೆಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವರದರಾಜ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ನ ನಿರ್ದೇಶಕರಾದ ಡಾ.ಮುಬಾರಕ್‌ರವರು ಮಾತನಾಡುತ್ತಾ ಈ ಮಾವು ಮೇಳವು ವರದರಾಜ ಸಮೂಹ ಸಂಸ್ಥೆಗಳ ವಿದ್ಯಾರ್ಥಿಗಳ ಸಂಘಟನಾ ಸಾಮರ್ಥ್ಯ ಮತ್ತು ಸೃಜನಶೀಲತೆಗೆ ಉತ್ತಮ ನಿದರ್ಶನವಾಗಿದೆ. ಯುವ ಪೀಳಿಗೆಯಲ್ಲಿ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸುವ ಮೂಲಕ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುವ ಮಹತ್ವವನ್ನು ಈ ಕಾರ್ಯಕ್ರಮ ಎತ್ತಿ ಹಿಡಿದಿದೆ ಎಂದು ಅರ್ಥಪೂರ್ಣವಾಗಿ ವಿವರಿಸಿದರು.
ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಡಾ.ಅಪ್ರೋವಾ ಅಸ್ರಣ್ಣ, ಡಾ.ವಿಶಾಖಾ, ವರದರಾಜ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ನ ಆಡಳಿತಾಧಿಕಾರಿ ತ್ರಿವೇಣಿ ಮತ್ತು ಪ್ರೊ.ಉಮೇರಾ ಪರ್ವೀನ್ ಅವರು ಮಳಿಗೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

(Visited 1 times, 1 visits today)
tumkur
Previous Articleಉದ್ದಿಮೆ ಪರವಾನಗಿ ಮೇಳ: ಒಂದೇ ದಿನಕ್ಕೆ ೫೦೦ಕ್ಕೂ ಹೆಚ್ಚು ಅರ್ಜಿ
Next Article ಶ್ರೀಕ್ಷೇತ್ರ ಸಿದ್ಧರಬೆಟ್ಟ ಮಠದ ೧೯ನೇ ವಾರ್ಷಿಕೋತ್ಸವ
News Desk Benkiyabale

Related Posts

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm news
ತಾಜಾ ಸುದ್ಧಿಗಳು
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
news

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm
news

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
news

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
news

ಗ್ರಾ.ಪಂ ಮಟ್ಟದ ಸಂಜೀವಿನಿ ಒಕ್ಕೂಟಗಳು ಸಹಕಾರ ಬ್ಯಾಂಕುಗಳ ಭಾಗ

October 14, 2026 6:07 pm
Our Youtube Channel
Our Picks

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ತ್ವರಿತ ಕ್ರಮಕ್ಕೆ ಸೂಚನೆ

October 15, 2026 5:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

By News Desk BenkiyabaleOctober 15, 2026 6:04 pm

ತುಮಕೂರು: ಕಲ್ಪತರು ಹವಮಾನ ಕ್ರಿಯಾ ಸಮಿತಿಯ ಒಕ್ಕೂಟವು ರೈತರ ಪರ ನಿಂತು ರೈತರ ಜೀವನದ ಸುಧಾರಣೆಗೆ ಅಡಿಪಾಯ ಹಾಕಿದೆ ಹಾಗೂ…

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm

ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ

October 15, 2026 6:01 pm

ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ

October 15, 2026 5:59 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.