BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀಕ್ಷೇತ್ರ ಸಿದ್ಧರಬೆಟ್ಟ ಮಠದ ೧೯ನೇ ವಾರ್ಷಿಕೋತ್ಸವ
ತುಮಕೂರು

ಶ್ರೀಕ್ಷೇತ್ರ ಸಿದ್ಧರಬೆಟ್ಟ ಮಠದ ೧೯ನೇ ವಾರ್ಷಿಕೋತ್ಸವ

ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ
By News Desk BenkiyabaleUpdated:June 07, 2025 3:51 pm

ತುಮಕೂರು: ಕೊರಟಗೆರೆ ತಾಲ್ಲೂಕು ಶ್ರೀ ಕ್ಷೇತ್ರ ಸಿದ್ಧರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ ಸಮಾರಂಭ ಈ ತಿಂಗಳ ೮ರಂದು ನಡೆಯಲಿದ್ದು, ಇದರ ಅಂಗವಾಗಿ ಜಗದ್ಗುರು ರೇಣುಕಾಚಾರ್ಯರು, ಜಗಜ್ಯೋತಿ ಬಸವೇಶ್ವರರ ಜಯಂತುತ್ಸವ, ಸಾಮೂಹಿಕ ವಿಹಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭ ಏರ್ಪಾಟಾಗಿದೆ.
ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ಮಠದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಇದೇ ೭ರಂದು ನಡೆಯುವ ಪುಸ್ತಕ ದಾಸೋಹ ಸಮಾರಂಭವನ್ನು ಅಟವಿ ಶಿವಲಿಂಗ ಸ್ವಾಮೀಜಿ ಉದ್ಘಾಟಿಸುವರು. ತಗ್ಗಿಹಳ್ಳಿ ರಾಮಕೃಷ್ಣ ಮಠದ ರಮಾನಂದ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಸಿದ್ಧಲಿಂಗ ದೇಶಿಕೇಂದ್ರ ಸ್ವಾಮೀಜಿ, ಚಿಮ್ಮಲಗಿ ಮಠದ ಸಿದ್ಧರೇಣುಕಾ ಶಿವಾಚಾರ್ಯ ಸ್ವಾಮೀಜಿ, ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಏಶ್ವರ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು ಎಂದರು.
ಇದೇ ೮ರಂದು ಭಾನುವಾರ ಬೆಳಿಗ್ಗೆ ೭.೩೦ಕ್ಕೆ ರೇಣುಕಾಚಾರ್ಯರು, ಸಿದ್ಧೇಶ್ವರಸ್ವಾಮಿ, ಬಸವೇಶ್ವರರ ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ನಂತರ ಸಾಮೂಹಿಕ ವಿವಾಹದ ಶಾಸ್ತç ಹಾಗೂ ಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಬೆಳಿಗ್ಗೆ ೧೦ ಗಂಟೆಗೆ ಬಾಳೆಹೊನ್ನೂರು ಪೀಠದ ರಂಭಾಪುರಿ ವೀರಸಿಂಹಾಸನಾಧೀಶ್ವರ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಜನ ಜಾಗೃತಿ ಧರ್ಮ ಸಮಾರಂಭ ನಡೆಯಲಿದೆ. ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ನೇತೃತ್ವದ ಸಮಾರಂಭದಲ್ಲಿ ವಿವಿಧ ಮಠಗಳ ಅಧ್ಯಕ್ಷರಾದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಡಾ.ಹನುಮಂತನಾಥ ಸ್ವಾಮೀಜಿ, ರುದ್ರಮುನಿ ಸ್ವಾಮೀಜಿ, ಕಾರದ ವೀರಬಸವ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಭಾಗವಹಿಸುವರು. ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಗೃಹ ಸಚಿವ ಡಾ.ಜಿ.ಪರಮೇಶ್ವರ ಅಧ್ಯಕ್ಷತೆ ವಹಿಸುವರು ಎಂದು ಹೇಳಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ನೂತನ ದಾಸೋಹ ಭವನ ಉದ್ಘಾಟಿಸುವರು. ಮಾಜಿ ಸಚಿವ ರಘುವೀರರೆಡ್ಡಿ, ಶಾಸಕರಾದ ಟಿ.ಬಿ.ಜಯಚಂದ್ರ, ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಚಿದಾನಂದಗೌಡ, ವೆಂಕಟೇಶ್ ಮೊದಲಾದವರು ಭಾಗವಹಿಸುವರು. ಈ ವೇಳೆ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ವಿಶೇಷ ಗುರು ರಕ್ಷೆ ನೀಡಲಾಗುವುದು ಎಂದು ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಎಸ್.ಜಿ.ಚಂದ್ರಮೌಳಿ, ಖಜಾಂಚಿ ಜಿ.ಕೆ.ಸ್ವಾಮಿ, ಜಗದ್ಗುರು ಪಂಚಾಚಾರ್ಯ ಸೇವಾ ಟ್ರಸ್ಟ್ ಅಧ್ಯಕ್ಷ ಟಿ.ಆರ್.ಸದಾಶಿವಯ್ಯ, ಮುಖಂಡರಾದ ಮಲ್ಲಸಂದ್ರ ಶಿವಣ್ಣ, ವೀರಶೈವ ಲಿಂಗಾಯತ ಮಹಾ ಸಭಾ ಜಿಲ್ಲಾ ಯುವ ಅಧ್ಯಕ್ಷ ಡಾ.ಕೆ.ಎಲ್.ದರ್ಶನ್, ಮುಖಂಡರಾದ ಶಶಿಧರ್, ಮಹೇಶ್, ಶಿವಕುಮಾರ್, ಟಿ.ಆರ್.ಅನುಸೂಯಮ್ಮ, ಕನ್ನಡ ಪ್ರಕಾಶ್, ಎಸ್.ವಿ.ತಿಪ್ಪೇಸ್ವಾಮಿ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleವಿದ್ಯಾರ್ಥಿಗಳಲ್ಲಿ ಉದ್ಯಮಶೀಲತಾ ಮನೋಭಾವವನ್ನು ಬೆಳೆಸಿಕೊಳ್ಳಿ
Next Article ಸಾಮಂತ ರಾಜ್ಯಗಳನ್ನು ಸಾಮ್ರಾಟರಂತೆ ವೈಭವೀಕರಿಸುವುದು ಸಲ್ಲದು. – ಡಾ. ಚನ್ನಸ್ವಾಮಿ ಸೋಸಲೆ
News Desk Benkiyabale

Related Posts

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm news

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
May 2026
M T W T F S S
 123
45678910
11121314151617
18192021222324
25262728293031
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.