BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
ತುಮಕೂರು

ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ

ಕೆ.ಎನ್.ಆರ್ ಸಾಧನೆ, ಹೋರಾಟ ದಾಖಲಿಸುವ ಕಾರ್ಯಕ್ರಮ
By News Desk BenkiyabaleUpdated:June 16, 2025 1:58 pm

ತುಮಕೂರು: ಸಹಕಾರ ಸಚಿವ ಕೆ.ಎನ್.ರಾಜಣ್ಣನವರ ೭೫ನೇ ಹುಟ್ಟುಹಬ್ಬ ಆಚರಣೆಯ ಅಮೃತ ಮಹೋತ್ಸವ ಈ ತಿಂಗಳ ೨೧ರಂದು ನಗರದಲ್ಲಿ ಏರ್ಪಾಟಾಗಿದ್ದು, ಕೆ.ಎನ್.ಆರ್ ಆವರು ಸಾಗಿಬಂದ ಹಾದಿ, ಅವರ ಹೋರಾಟ, ಕೊಡುಗೆಗಳನ್ನು ದಾಖಲುಮಾಡಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮವಾಗಿದೆ ಎಂದು ಆಡಿಟರ್ ಟಿ.ಆರ್.ಆಂಜನಪ್ಪ ಹೇಳಿದರು.
ಕೆ.ಎನ್.ರಾಜಣ್ಣನವರ ಹುಟ್ಟು ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಮುಖಂಡರ ಸಭೆಯಲ್ಲಿ ಸಮಾರಂಭದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣನವರು ಒಂದು ಜಾತಿ ನಂಬಿ ರಾಜಕಾರಣ ಮಾಡಿದವರಲ್ಲ, ಎಲ್ಲರನ್ನೂ ಜೊತೆಯಾಗಿ ತೆಗೆದುಕೊಂಡು ಹೋಗುವ ಮನಸ್ಥಿತಿಯ ನಾಯಕ. ಎಲ್ಲಾ ಜಾತಿಯಲೂ ಇವರನ್ನು ಪ್ರೀತಿಸುವ, ಗೌರವಿಸುವ ಜನರಿದ್ದಾರೆ ಎಂದರು.
೭೫ ವರ್ಷ ಪೂರ್ಣಗೊಳಿಸಿರುವ ಕೆ.ಎನ್.ರಾಜಣ್ಣನವರ ರಾಜಕಾರಣದ ಹಾದಿ ಕಠಿಣವಾಗಿತ್ತು. ಎದುರಾಗುವ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಿಕೊಂಡು ಜನರೊಂದಿಗೆ ನಡೆದು ಬೆಳೆದರು. ರಾಜಕೀಯ ಜೀವನದ ಹೋರಾಟ, ನಡೆದುಬಂದ ಹಾದಿ, ಕೊಟ್ಟಿರುವ ಕೊಡುಗೆಗಳು ಮುಂದಿನ ತಲೆಮಾರಿಗೆ ತಿಳಿಯಬೇಕು. ಅದಕ್ಕಾಗಿ ಕೆ.ಎನ್.ರಾಜಣ್ಣನವರ ಹುಟ್ಟುಹಬ್ಬ ಆಚರಣೆ ಮೂಲಕ ಆವರ ರಾಜಕೀಯ ಬದುಕನ್ನು ದಾಖಲು ಮಾಡುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಇದೇ ೨೧ರಂದು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕೆ.ಎನ್.ರಾಜಣ್ಣನವರ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತಿತರ ನಾಯಕರು ಭಾಗವಹಿಸುತ್ತಾರೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಹೆಚ್ಚು ಜನ ಭಾಗವಹಿಸಿ, ಕೆ.ಎನ್.ರಾಜಣ್ಣನವರಿಗೆ ಶಕ್ತಿ ತುಂಬಿ ಅಭಿಮಾನ ತೋರಬೇಕು ಎಂದು ಟಿ.ಆರ್.ಆಂಜನಪ್ಪ ಹೇಳಿದರು.
ವಿವೇಕಾನಂದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪಿ.ಮೂರ್ತಿ ಮಾತನಾಡಿ, ಕೆ.ಎನ್.ರಾಜಣ್ಣನವರು ಸಹಕಾರ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಬಡವರಿಗೆ ಸಾಲಸೌಲಭ್ಯ ದೊರೆಯದ ಸಂದರ್ಭದಲ್ಲಿ ಸಣ್ಣಪುಟ್ಟ ಸಮಾಜದವರೂ ಸಹಕಾರ ಸಂಸ್ಥೆ ಸ್ಥಾಪಿಸಿ ಸಾಲ ಸೌಕರ್ಯ ಪಡೆಯಬೇಕು ಎಂಬುದು ಅವರ ಆಶಯವಾಗಿತ್ತು. ಇಂದು ಜಿಲ್ಲೆಯ ಬಹುತೇಕ ಎಲ್ಲಾ ಸಮಾಜದವರೂ ಸಹಕಾರ ಸಂಸ್ಥೆಗಳನ್ನು ಹೊಂದಿದ್ದಾರೆ. ಇದಕ್ಕೆ ಕೆ.ಎನ್.ರಾಜಣ್ಣನವರ ಸಾಮಾಜಿಕ ಕಳಕಳಿಯೇ ಕಾರಣ ಎಂದರು.
ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿಜನಾಂಗದ ಜನ ಭಾಗವಹಿಸಿ ಕೆ.ಎನ್.ರಾಜಣ್ಣನವರ ಬಗ್ಗೆ ತಮಗಿರುವ ಅಭಿಮಾನವನ್ನು ವ್ಯಕ್ತಪಡಿಸುತ್ತಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಧನಿಯಾಕುಮಾರ್ ಮಾತನಾಡಿ, ಎಲ್ಲಾ ವರ್ಗದವರೂ ಗೌರವಿಸುವ ಸಹಕಾರ ಸಚಿವ ಕೆ.ಎನ್.ರಾಜಣ್ಣನವರು ಹಿಂದುಳಿದ ವರ್ಗಗಳಿಗೆ ಶಕ್ತಿಯಾಗಿದ್ದಾರೆ. ಶಾಲಾ ಮಕ್ಕಳಿಗೆ ಶೂ ಭಾಗ್ಯ, ಕ್ಷೀರ ಭಾಗ್ಯ ದೊರೆಯಲು ಕೆ.ಎನ್.ರಾಜಣ್ಣನವರು ಸರ್ಕಾರಕ್ಕೆ ನೀಡಿದ್ದ ಸಲಹೆ ಕಾರಣ ಎಂದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ದೇವರಾಜ ಅರಸು ಅವರ ಹೆಸರು ಇಡಲು ಕೆ.ಎನ್.ರಾಜಣ್ಣನವರ ಪಾತ್ರ ಮುಖ್ಯವಾಗಿದೆ. ದೇವರಾಜ ಅರಸು ಮಾದರಿಯಲ್ಲಿ ನಿರ್ಲಕ್ಷಿತ, ಸಣ್ಣ ಸಮಾಜಗಳಿಗೆ ಕೆ.ಎನ್.ರಾಜಣ್ಣನವರು ಧ್ವನಿಯಾಗಿ ಆ ಸಮುದಾಯಗಳಿಗೆ ನ್ಯಾಯ ದೊರಕಿಸುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.
ಮಾಜಿ ಸಚಿವ ಸೊಗಡು ಶಿವಣ್ಣ, ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ನಾಗರಾಜು, ಮುಖಂಡರಾದ ಮಲ್ಲಸಂದ್ರ ಶಿವಣ್ಣ, ಎಂ.ಕೆ.ವೆAಕಟಸ್ವಾಮಿ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷö್ಮಣ್, ಸವಿತಾ ಸಮಾಜ ಅಧ್ಯಕ್ಷ ಮಂಜೇಶ್ ಒಲಂಪಿಕ್, ಮುಖಂಡರಾದ ಹೆಬ್ಬಾಕ ಮಲ್ಲಿಕಾರ್ಜುನ್, ಆರ್.ಎನ್.ವೆಂಕಟಾಚಲ, ಲಕ್ಷಿö್ಮÃಕಾಂತರಾಜೇ ಅರಸು, ನಟರಾಜ ಶೆಟ್ಟಿ, ರಾಜೇಶ್ ದೊಡ್ಮನೆ, ಶಾಂತಕುಮಾರ್, ಡಮರುಗೇಶ್, ಅಣ್ಣೇನಹಳ್ಳಿ ಶಿವಕುಮಾರ್, ನಾರಾಯಣಸ್ವಾಮಿ, ವಿಠಲ್, ತೇಜೇಶ್, ಗುರುರಾಘವೇಂದ್ರ, ಎನ್.ಅರುಣ್‌ಕುಮಾರ್, ರಾಜಣ್ಣ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
tumkur
Previous Articleಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ
Next Article ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.