BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ
ತುಮಕೂರು

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ನಿರ್ಧಾರ ಕೈಗೊಳ್ಳಲಿ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯ
By News Desk BenkiyabaleUpdated:June 16, 2025 2:50 pm

 


ತುಮಕೂರು: ರಾಜ್ಯದಲ್ಲಿ ವಿಳಂಬವಾಗಿರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ನಡೆಸುವ ಸಂಬAಧ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದರು.
ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆಯನ್ನು ಸರ್ಕಾರ ತಡೆ ಹಿಡಿದಿದೆ. ಈ ಚುನಾವಣೆಗಳನ್ನು ನಡೆಸಲು ಸರ್ಕಾರ ಮನಸ್ಸು ಮಾಡಬೇಕಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜೆಡಿಎಸ್ ಸದಸ್ಯತ್ವ ನೋಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೀಘ್ರವಾಗಿ ಈ ಚುನಾವಣೆಗಳನ್ನು ನಡೆಸಬೇಕು ಎಂಬುದು ನನ್ನ ಮತ್ತು ನಮ್ಮ ಪಕ್ಷದ ಆಗ್ರಹವಾಗಿದೆ ಎಂದು ತಿಳಿಸಿದರು.
ಜೆಡಿಎಸ್ ಪಕ್ಷ ಮುಳುಗುತ್ತಿರುವ ಹಡಗಲ್ಲ. ಸದಾ ಕಾಲ ಜೆಡಿಎಸ್ ಪಕ್ಷದ ಪರವಾಗಿ ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಹೋರಾಟ ನಡೆಸುತ್ತಾ ಕಾರ್ಯಕರ್ತರು ಹಾಗೂ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿದ್ದರೂ ಸಹ ಶೇ. ೨೦ ರಷ್ಟು ಮತಗಳ ಷೇರನ್ನು ಹೆಚ್ಚಿಸಿಕೊಂಡಿದೆ. ಚುನಾವಣೆಯಲ್ಲಿ ಸೋಲು-ಗೆಲುವುದ ಸರ್ವೇ ಸಾಮಾನ್ಯ. ಇದನ್ನು ಸಮಚಿತ್ತವಾಗಿ ಸ್ವೀಕರಿಸುವ ಮನಸ್ಥಿತಿ ನಮ್ಮ ಪಕ್ಷದವರಿಗಿದೆ ಎಂದರು.
ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಠಿಯಿಂದ ಜೆಡಿಎಸ್-ಬಿಜೆಪಿ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿವೆ. ರಾಜ್ಯದ ಹಿತಕ್ಕಾಗಿ ಈ ಹೊಂದಾಣಿಕೆ ಮುಂದುವರೆಯಲಿದೆ ಎಂದು ಅವರು ಹೇಳಿದರು.
ನವೆಂಬರ್-ಡಿಸೆAಬರ್‌ನಲ್ಲಿ ನಡೆಯುತ್ತೆ ಎಂದು ಹೇಳಲಾಗುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗೂ ಹೊಂದಾಣಿಕೆ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ನವೆಂಬರ್ ನಂತರ ಏನು ಬೆಳವಣಿಗೆ ಆಗತ್ತದೆ ಎಂಬುದನ್ನು ನೋಡೋಣ ಎಂದು ಚುಟುಕಾಗಿ ಉತ್ತರಿಸಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ. ಹೇಮಾವತಿ ಜಲಾಶಯದಿಂದ ಮಂಡ್ಯ, ರಾಮನಗರ, ಹಾಸನ, ತುಮಕೂರು ಈ ಎಲ್ಲ ಜಿಲ್ಲೆಗಳ ರೈತರು ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಜಲಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದುವರೆಗೂ ರೈತರ ಸಭೆ ಕರೆದು ಅವರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಗೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅನುಮೋದನೆ ನೀಡಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಕುಮಾರಣ್ಣನವರ ಕಾಲಘಟ್ಟದಲ್ಲಿ ಈ ರೀತಿ ಘಟನೆ ನಡೆದಿದ್ದರೆ ಅವರು ರೈತರನ್ನು ಕೂರಿಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಮತ್ತು ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಆರೋಪಿಸಿದರು.
ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿನ್ನೆ ಜೆ.ಪಿ. ಭವನದಲ್ಲಿ ಅಧಿಕೃತವಾಗಿ ರಾಜ್ಯ ಪ್ರವಾಸಕ್ಕೆ ಚಾಲನೆ ಕೊಟ್ಟಿದ್ದಾರೆ. ಹಾಗಾಗಿ ಮುಂದಿನ ೬೦ ದಿನಗಳ ಕಾಲ ರಾಜ್ಯಾದ್ಯಂತ ಪ್ರವಾಸ ನಡೆಸಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯ ನಡೆಸಲಾಗುವುದು ಎಂದರು.
ಜೆಡಿಎಲ್‌ಪಿ ನಾಯಕ ಸಿ.ಬಿ. ಸುರೇಶ್‌ಬಾಬು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿಯಿಂದ ಜನ ಬೇಸತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂಬುದು ಎಲ್ಲರಿಗೂ ತಿಳಿದಿದೆ. ಇಂತಹ ಪಕ್ಷಕ್ಕೆ ಹೋಗುವ ಮಸ್ಥಿತಿಯನ್ನು ಜೆಡಿಎಸ್ ಶಾಸಕರು ಯಾರೂ ಹೊಂದಿಲ್ಲ ಎಂದರು.
ಕಾAಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಡಿಸಿಎಂ ಡಿಕೆಶಿ ಅವರು ಹೇಳಿದಂತೆ ನಮ್ಮ ಪಕ್ಷದ ಯಾವೊಬ್ಬ ಶಾಸಕರು ಆ ಪಕ್ಷಕ್ಕೆ ಹೋಗುವ ಮನಸ್ಥಿತಿ ಹೊಂದಿಲ್ಲ. ಡಿಕೆಶಿ ಬರೀ ಸುಳ್ಳು ಹೇಳುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಹಲವಾರು ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಂಡಿದ್ದು, ಸಂಘಟನೆ ಮಾಡಿ ಕ್ಷೇತ್ರಗಳನ್ನು ಗೆಲ್ಲಲು ನಿರ್ಧರಿಸಲಾಗಿದೆ. ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಅಥವಾ ಗ್ರಾಮ ಪಂಚಾಯ್ತಿ ಸೇರಿದಂತೆ ಯಾವುದೇ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಂಘಟನೆ ಮಾಡುತ್ತಿದ್ದೇವೆ. ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಇರಬಹುದು ಅಥವಾ ಜೆಡಿಎಸ್ ಅಭ್ಯರ್ಥಿ ಇರಬಹುದು. ಯಾರು ಅಭ್ಯರ್ಥಿಯಾಗುತ್ತಾರೋ ಅವರ ಗೆಲುವಿಗೆ ಪಕ್ಷ ಶ್ರಮಿಸಲಿದೆ ಎಂದರು.
ಜಿಲ್ಲೆಯಿAದ ಹೇಮಾವತಿ ನೀರನ್ನು ಉಪಮುಖ್ಯಮಂತ್ರಿಗಳು ಅವರ ಕ್ಷೇತ್ರಗಳಿಗೆ ಕೊಂಡೊಯ್ಯಲು ವಾಮಮಾರ್ಗ ಅನುಸರಿಸುತ್ತಿದ್ದಾರೆ. ಮೊದಲಿನೀಂದಲೂ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರೋಧಿಸುತ್ತಲೇ ಬಂದಿದ್ದೇವೆ. ಯಾವುದೇ ಕಾರಣಕ್ಕೂ ಈ ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದರು.
ಹೇಮಾವತಿ ನೀರನ್ನು ಮೊದಲು ನಾಲೆಯ ಕೊನೆಯ ಭಾಗಕ್ಕೆ ಹರಿಸಬೇಕು. ಆ ನಂತರ ಬೇರೆ ಕಡೆ ಕೊಂಡೊಯ್ಯಬೇಕು. ಈ ಕೆಲಸವನ್ನು ಹೇಮಾವತಿ ನಾಲಾ ವಲಯದ ಅಧಿಕಾರಿಗಳು ಮಾಡಲಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಲ್‌ಪಿ ನಾಯಕ ಸಿ.ಬಿ. ಸುರೇಶ್‌ಬಾಬು, ಮಾಜಿ ಶಾಸಕ ಹೆಚ್. ನಿಂಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಟಿ.ಆರ್. ಆಂಜಿನಪ್ಪ, ಟಿ.ಆರ್. ನಾಗರಾಜು, ಶಾಂತಕುಮಾರ್, ಮಾಜಿ ಪಾಲಿಕೆ ಸದಸ್ಯರಾದ ಧರಣೇಂದ್ರಕುಮಾರ್, ಲಕ್ಷಿ÷್ಮÃನರಸಿಂಹರಾಜು, ನರಸಿಂಹಮೂರ್ತಿ, ಶ್ರೀನಿವಾಸ್, ಕುಂಭಣ್ಣ, ದಾಂಡೇಲಿ ಗಂಗಣ್ಣ, ಗಂಗಹನುಮಯ್ಯ, ಲೀಲಾವತಿ, ಮೆಡಿಕಲ್ ಮಧು, ಸೋಲಾರ್ ಕೃಷ್ಣಮೂರ್ತಿ, ದರ್ಶನ್ ಯಾದವ್, ಲಕ್ಷ÷್ಮಮ್ಮವೀರಣ್ಣಗೌಡ, ಸುಮ ಜಗನ್ನಾಥ್, ಲೀಲಾವತಿ, ಕುಸುಮ, ತಾಹೇರಾ ಬಾನು ಮತ್ತಿತರರು ಉಪಸ್ಥಿತರಿದ್ದರು.
ಬಿಜೆಪಿ ನಾಯಕರಿಂದ ಸ್ವಾಗತ
ನಗರದ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯವರಿಗೆ ಜಿಲ್ಲೆಯ ಬಿಜೆಪಿ ನಾಯಕರಿಂದ ಅದ್ದೂರಿ ಸ್ವಾಗತ ದೊರೆಯಿತು.
ಶಾಸಕರಾದ ಸುರೇಶ್‌ಗೌಡ, ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ಬಿಜೆಪಿ ಮುಖಂಡರುಗಳು ಸಿದ್ದಗಂಗಾ ಮಠದಲ್ಲಿ ನಿಖಿಲ್ ಕುಮಾರಸ್ವಾಮಿಯವರಿಗೆ ಪುಷ್ಪಹಾರ ಹಾಕಿ ಆತ್ಮೀಯವಾಗಿ ಬರ ಮಾಡಿಕೊಂಡರು.

(Visited 1 times, 1 visits today)
tumkur
Previous Articleಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
Next Article ತುರುವೇಕೆರೆ: ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.