ತುಮಕೂರು: ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಹಾಗೂ ವಿವಿಧ ಯೋಜನೆಯಡಿ ಈಗಾಗಲೇ ಮುಕ್ತಾಯಗೊಂಡ ಕುಡಿಯುವ ನೀರಿನ ಕಾಮಗಾರಿಗಳಿಗೆ ಸಂಬAಧಿಸಿದAತೆ ಇಓಟಿ(ಎಕ್ಸ್ಟೆನ್ಷನ್ ಆಫ್ ಟೈಮ್) ಪ್ರಸ್ತಾವನೆ ಗಳನ್ನು ನಿಗಧಿತ ನಮೂನೆಯಲ್ಲಿ ಒಂದು ವಾರದೊಳಗಾಗಿ ಸಲ್ಲಿಸಿ ಅನುಮೋದನೆ ಪಡೆ ಯಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಕಚೇರಿ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಂಗಳವಾರ ಜರು ಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಲ್ ಜೀವನ್ ಮಿಷನ್ ಯೋಜನೆಯ ಕಾಮ ಗಾರಿ ವೇಳಾಪಟ್ಟಿ, ಕಾಮಗಾರಿ ಕಾಲವಾಧಿ ವಿಸ್ತರಣಾ ಪ್ರಸ್ತಾವನೆ, ಬಿಲ್ ಪಾವತಿ ದಾಖಲೆ ಗಳು ಹಾಗೂ ಬಾಕಿ ಇರುವ ಕಾಮಗಾರಿಗಳ ಭೌತಿಕ ಪ್ರಗತಿಗೆ ಸಂಬAಧಿಸಿದAತೆ ನಿರ್ಧಿಷ್ಟ ಕಾರ್ಯಯೋಜನೆ ರೂಪಿಸಿ, ಕಾಲ ಮಿತಿಯೊಳಗಾಗಿ ಕಾಮಗಾರಿಗಳನ್ನು ಪೂರ್ಣ ಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬ ಸಹಿಸಲಾಗದು. ಎಲ್ಲಾ ದಾಖಲೆಗಳು ನಿಖರ ಹಾಗೂ ಸಂಪೂರ್ಣವಾಗಿರಬೇಕು. ಶಿಸ್ತು ಬದ್ಧವಾಗಿ ಯೋಜನೆಗಳನ್ನು ಅನುಷ್ಠಾನ ಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸಂಜೀವಪ್ಪ, ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಹಾಗೂ ಎಲ್ಲಾ ತಾಲೂಕಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳು ಉಪಸ್ಥಿತರಿದ್ದರು.
(Visited 1 times, 1 visits today)