ತುಮಕೂರು: ನಗರದ ಹೊರವಲಯದಲ್ಲಿರುವ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಎರಡನೇ ಹಂತದಲ್ಲಿರುವ ಲಾರೆಸ್ಸ್ ಬಯೋ ಪ್ರೆöÊವೇಟ್ ಲಿಮಿಟೆಡ್ ಫ್ಯಾಕ್ಟರಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ ಕಾರ್ಖಾನೆಯಲ್ಲಿರುವ Sಠಿಡಿಚಿಥಿ ಆಡಿಥಿ ಘಟಕ ಸೇರಿದಂತೆ ಸುರಕ್ಷತೆ ಹಾಗೂ ಪರಿಸರ ನಿಯಮಗಳನ್ನು ಪರಿಶೀಲಿಸಿದರು.
ತೆಲಂಗಾಣದ ಔಷಧ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಪೋಟದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿ ಕಾರ್ಖಾನೆಯಲ್ಲಿ ಕೈಗೊಂಡಿರುವ ಸುರಕ್ಷತಾ ವ್ಯವಸ್ಥೆಗಳನ್ನು ವಿವರವಾಗಿ ವೀಕ್ಷಿಸಿದ ಅವರು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ದಾರಿಗಳು, ಕಾರ್ಮಿಕರಿಗೆ ನೀಡಲಾಗುವ ತರಬೇತಿ ಹಾಗೂ ಇತರ ಸುರಕ್ಷತಾ ಉಪಕರಣಗಳ ಸ್ಥಿತಿ-ಗತಿಯನ್ನು ಪರಿಶೀಲಿಸಿದರು.
ಸಂಸ್ಥೆಯು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿರುವ ಕುರಿತು ಪೂರ್ಣ ಪ್ರಮಾಣದಲ್ಲಿ ಸ್ಪಷ್ಟತೆ ಇಲ್ಲದಿರುವುದರಿಂದ ಆಡಿಟ್ ಮಾಡಿಸಿ ವರದಿ ಸಲ್ಲಿಸುವಂತೆ ಕಾರ್ಖಾನೆ ಹಾಗೂ ಬಾಯ್ಲರ್ ಇಲಾಖೆಯ ಉಪ ನಿರ್ದೇಶಕ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು.
ಪೂರ್ಣ ಪ್ರಮಾಣದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ನೋಟಿಸ್ ಜಾರಿಗೊಳಿಸಿ, ಪರಿಸರದ ಮೇಲೆ ಬೀರುವ ಪರಿಣಾಮಗಳ ಕುರಿತು ಸಮಗ್ರ ವಿವರಣೆ ನೀಡಬೇಕೆಂದು ಪರಿಸರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರವಿಚಂದ್ರ ಅವರಿಗೆ ನಿರ್ದೇಶಿಸಿದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಕಾರ್ಮಿಕ ಅಧಿಕಾರಿ ಇಬ್ರಾಹಿಂ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಸಿದ್ದೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
(Visited 1 times, 1 visits today)