ಪಾವಗಡ: ಪಾವಗಡದ ಜನರ ದಹ ನೀಗಿಸಿದ ಭಗೀರಥ ಸಿಎಂ ಸಿದ್ದರಾಮಯ್ಯನವರು ಎಂದು ಪಾವಗಡ ಶಾಸಕ ಹೆಚ್. ವಿ. ವೆಂಕಟೇಶ್ ತಿಳಿಸಿದ್ದಾರೆ
ಗುರುವಾರ ಪಾವಗಡ ಪಟ್ಟಣದ ಸಮುದಾಯ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮದ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಾ ಸಿದ್ದರಾಮಯ್ಯ ಅವರು ೨೦೧೮ರಲ್ಲಿ ಮುಖ್ಯಮಂತ್ರಿಗಳಾದAತಹ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಮಣಪ್ಪ ಅವರು ಮುಖ್ಯಮಂತ್ರಿಗಳಿಗೆ ಗಡಿನಾಡು ಭಾಗದ ಬಡಜನರ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮನವಿ ಮಾಡಿದ್ದರು ಜೊತೆಗೆ ಅನೇಕ ಹೋರಾಟಗಾರರಿಗೆ ಬೆಂಬಲವಾಗಿ ನಿಂತಿದ್ದರು, ಈ ಎಲ್ಲರ ಫಲವಾಗಿ ಪಾವಗಡ ತಾಲೂಕಿಗೆ ತುಂಗಭದ್ರಾ ಕುಡಿಯುವ ನೀರು ಬಂದಿದೆ ಇದನ್ನ ಉದ್ಘಾಟಿಸಲು ಜುಲೈ ೨೧ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾವಗಡಕ್ಕೆ ಆಗಮಿಸುತ್ತಿದ್ದು ಅಂದು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಕಾರ್ಯಕ್ರಮದ ಬಗ್ಗೆ ಜನರಿಗೆ ಅರಿವು ನೀಡುವುದರ ಜೊತೆಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ವಹಿಸಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು ಪ್ರತಿ ಬೂತ್ ನಿಂದ ನೂರು ಜನರನ್ನ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ವಹಿಸುವಂತೆ ಅವರು ಕರೆ ನೀಡಿದರು
೨,೦೦೦ಕ್ಕೂ ಅಧಿಕ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ಗುದ್ದಲಿ ಪೂಜೆ ಮತ್ತು ಉದ್ಘಾಟನೆ ಮಾಡಲಿದ್ದಾರೆ ಎಂದವರು ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದರ ಮೂಲಕ ಭಾರತದಲ್ಲಿ ಮಾದರಿ ಮುಖ್ಯಮಂತ್ರಿ ಎನ್ನಿಸಿಕೊಂಡಿದ್ದಾರೆ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ವಿನಂತಿಸಿದರು
ಮಾಜಿ ಸಚಿವ ವೆಂಕಟರಮಣಪ್ಪ ಮಾತನಾಡಿ ಯಾವುದೇ ಜನಪ್ರತಿನಿಧಿ ಆದರೂ ಸಹ ಜನರ ಸೇವೆಗೆ ಬದರಾಗಿರಬೇಕು ಅದೇ ಹಾದಿಯಲ್ಲಿ ನಡೆದು ಬಂದವರು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾವಗಡ ಜನರ ಮೇಲಿನ ವಿಶ್ವಾಸ ಮತ್ತು ನಂಬಿಕೆಯನ್ನು ಪರಿಗಣಿಸಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸಕ್ಕೆ ಸದಾ ಪ್ರೋತ್ಸಾಹ ನೀಡುತ್ತಾರೆ ಅವರ ಕಾರ್ಯಕ್ರಮಕ್ಕೆ ಪಾವಗಡ ತಾಲೂಕಿನ ಮೂಲೆ ಮೂಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಜನ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಾನು ಎಲ್ಲಿಯೇ ಇದ್ದರೂ ಸಹ ಜನರ ಸೇವೆಯನ್ನು ಮಾಡುತ್ತಿದ್ದೇನೆ ಎಂದರು
ಕಾರ್ಯಕ್ರಮವನ್ನು ಉದ್ದೇಶಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೇಶ್ ಬಾಬು, ಗ್ರಾಮಾಂತರ ಅಧ್ಯಕ್ಷ ರಾಮಾಂಜಿನಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕೆಎಸ್ ಪಾಪಣ್ಣ ಮುಖಂಡರಾದ ಬೊಮ್ಮನಹಳ್ಳಿ ತಿಪ್ಪೇಸ್ವಾಮಿ ಮತದಾರರು ಮಾತನಾಡಿದರು
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಟಿ ನರಸಿಂಹಯ್ಯ,ಪುರಸಭಾ ಮಾಜಿ ಅಧ್ಯಕ್ಷರಾದ ಗುರ್ರಪ್ಪ, ಪಿ ಎಚ್ ರಾಜೇಶ್, ಶಂಕರ ರೆಡ್ಡಿ, ಪಜುಲ್ಲಾ ಸಾಬ್ ಸಾಬ್, ಹಾಲಿ ಸದಸ್ಯರಾದ ಕಲ್ಪವೃಕ್ಷ ರವಿ, ವೆಂಕಟರಮಣಪ್ಪ, ಬಾಲಸುಬ್ರಮಣಿ, ಸುಮಾ ಅನಿಲ್, ಉಷಾ ಹರೀಶ್, ಅಮರ್, ಕೆ ಟಿ ಹಳ್ಳಿ ರಂಗೇಗೌಡ,
(Visited 1 times, 1 visits today)