BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ
ತುಮಕೂರು

ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಕಲಾ ತರಬೇತಿ ಸಹಕಾರಿ: ಎಡಿಸಿ

By News Desk BenkiyabaleUpdated:August 02, 2025 3:17 pm

ತುಮಕೂರು: ಮಣ್ಣಿನಿಂದ ಬಂದಕಾಯ ಮಣ್ಣ ಸೇರುವವರೆಗೂ ಪ್ರಕೃತಿಯೊಂದಿಗೆ ನಿಕಟ ಸಂಪರ್ಕ ಹೊಂದಿರುವ ಮನಸ್ಸು ತನ್ನಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರ ಹಾಕಲು ಇಂತಹ ಕಲಾ ತರಬೇತಿಗಳು ಸಹಕಾರಿಯಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಡಾ: ಬಿ.ಆರ್.ಅಂಬೇಡ್ಕರ್ ಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಹಮ್ಮಿಕೊಂಡಿದ್ದ ಕಲಾ ತರಬೇತಿ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಓದಿನ ಜೊತೆಗೆ ನಮ್ಮಲ್ಲಿ ಅಡಕವಾಗಿರುವ ಕಲೆಗಳನ್ನು ತಿದ್ದಿ-ತೀಡುವ ಕೆಲಸವನ್ನು ಇಂತಹ ಶಿಬಿರಗಳು ಮಾಡಲಿವೆ. ಇವುಗಳ ಉಪಯೋಗವನ್ನು ಪಡೆದು ಯಶಸ್ಸಿನತ್ತ ಮುನ್ನೆಡೆಯಬೇಕೆಂದರು.
ಬಾಲದಲ್ಲಿ ಶಿಕ್ಷಣ ಮುಖ್ಯ. ಶಿಕ್ಷಣದ ಜೊತೆ ಜೊತೆಗೆ ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಗಮನಹರಿಸಬೇಕು. ಪಠ್ಯೇತರ ಚಟುವಟಿಕೆಗಳು ನಿಮ್ಮಲ್ಲಿರುವ ಭಯವನ್ನು ಹೋಗಲಾಡಿಸಿ, ನಾಲ್ಕು ಜನರ ಜೊತೆಗೆ ಬೆರೆತು-ಕಲೆತು ಬದುಕುವುದನ್ನು ಕಲಿಸುತ್ತವೆ. ಹಾಗಾಗಿ ಇಂತಹ ಕಲೆಗಳನ್ನು ನೀವುಗಳು ತೊಡಗಿಸಿಕೊಂಡರೆ ಮುಂದೊAದು ದಿನ ಒಳ್ಳೆಯ ಅಧಿಕಾರಿಯಾಗಿ, ಜನರ ಸಮಸ್ಯೆಗಳನ್ನು ಬಗೆಹರಿಸುವ ಚೈತನ್ಯವನ್ನು ಪಡೆಯುತ್ತೀರಿ. ಮೊಬೈಲ್‌ನಿಂದ ದೂರವಿದ್ದು, ಒಳ್ಳೆಯ ಗುರಿಯೊಂದಿಗೆ ಅಭ್ಯಾಸ ಮಾಡಿದರೆ, ನಿಮ್ಮ ತಂದೆ, ತಾಯಿ ಮೆಚ್ಚುವಂತಹ, ಸಮಾಜ ಹೆಮ್ಮೆ ಪಡುವಂತಹ ವ್ಯಕ್ತಿಗಳಾಗುತ್ತೀರಿ. ಹಾಗಾಗಿ ಎಲ್ಲರೂ ಓದಿನತ್ತ ಗಮನಹರಿಸಿ. ನಿಮ್ಮ ಮುಂದಿರುವ ಅವಕಾಶಗಳನ್ನು ಬಳಸಿಕೊಂಡು ಮೇಲ್ಮುಖವಾಗಿ ಬೆಳೆಯಿರಿ ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಉಗಮ ಶ್ರೀನಿವಾಸ್ ಮಾತನಾಡಿ, ಕಲೆಗಳು ಆರೋಗ್ಯಕರ ಸಮಾಜವನ್ನು ಸೃಷ್ಟಿಸಲು ಸಹಕಾರಿಯಾಗಿವೆ. ಚಿಕ್ಕ ಮಕ್ಕಳಿಗೆ ಕಲಾ ತರಬೇತಿ ನೀಡುತ್ತಿರುವುದು ಒಳ್ಳೆಯ ವಿಚಾರ. ಮನುಷ್ಯನ ಒಳಗಿನ ಅಂತಃಕರಣ ತೆರೆದುಕೊಳ್ಳಲು ಕಲೆ ಸಹಕಾರಿಯಾಗಿದೆ. ಆರು ತಿಂಗಳ ತರಬೇತಿ ನಂತರ ನಿಮ್ಮಲ್ಲಿಯೂ ಓರ್ವ ಒಳ್ಳೆಯ ಗಾಯಕ ಜಗತ್ತಿಗೆ ಪರಿಚಯವಾಗಲಿ ಎಂದು ಶುಭ ಹಾರೈಸಿದರು.
ಕಲಾ ತರಬೇತುದಾರ ಕಾಂತರಾಜು ನಿನಾಸಂ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಒಗ್ಗೂಡಿ ಮಕ್ಕಳಿಗೆ ರಂಗಗೀತೆ ಮತ್ತು ಜನಪದ ಗೀತೆಗಳ ತರಬೇತಿಯನ್ನು ಹಮ್ಮಿಕೊಂಡಿದೆ. ಆರು ತಿಂಗಳ ಕಾಲ ಪ್ರತಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಆಸಕ್ತ ಮಕ್ಕಳಿಗೆ ಪೌರಾಣಿಕ, ಆಧುನಿಕ ಮತ್ತು ಹವ್ಯಾಸಿ ರಂಗಭೂಮಿಯ ಗೀತೆಗಳು ಹಾಗೂ ಮೂಲ ಜನಪದ ಗೀತೆಗಳ ಗಾಯನ ತರಬೇತಿ ನೀಡಲಾಗುವುದು. ಕೃತಕ ಬುದ್ದಿಮತ್ತೆ ಮೇಲುಗೈ ಸಾಧಿಸುತ್ತಿರುವ ಇಂದಿನ ಸನ್ನಿವೇಶದಲ್ಲಿ ಮಕ್ಕಳಿಗೆ ಜನಪದ ಕಲೆಗಳ ತರಬೇತಿ ಮರಳಿ ಮಣ್ಣಿಗೆ ಎಂಬ ಸಾಲುಗಳನ್ನು ನೆನಪಿಗೆ ತರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಎಸ್.ಶಿವಣ್ಣ ಮಾತನಾಡಿ, ಸರಕಾರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಾ ಬಂದಿದೆ. ಊಟ, ತಿಂಡಿ, ವಾಸ್ತವ್ಯ ವ್ಯವಸ್ಥೆಯ ಜೊತೆಗೆ, ಲೇಖನ ಸಾಮಗ್ರಿಗಳು, ಬಟ್ಟೆ, ಇನ್ನಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಇದರ ಜೊತೆಗೆ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಯ ಭಾಗವಾಗಿ ಈ ಕಲಾ ತರಬೇತಿ ಆಯೋಜಿಸಿದೆ. ಆಸಕ್ತರು ತರಬೇತಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ತಮ್ಮಲ್ಲಿರುವ ಕಲೆಯನ್ನು ಚೊಕ್ಕಗೊಳಿಸಿಕೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಕು ಮರ್ಜಿ, ಮೇಲ್ವಿಚಾಕರಾದ ಸುರೇಶಕುಮಾರ್, ನಿಲಯ ಮೇಲ್ವಿಚಾರಕಿ ವಾಸಂತಿ ಆರ್., ಕಲಾವಿದರಾದ ಕುಮಾರ್ ಡಿ.ಸಿ., ರಾಜುಗೌಡ, ಡಾ: ಬಿ.ಆರ್. ಅಂಬೇಡ್ಕರ್ ಬಾಲಕಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದ ಸಿಬ್ಬಂದಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಮತ್ತೊಮ್ಮೆ ಸಿಎಂ ಪಟ್ಟಣಕ್ಕೆ: ಶಾಸಕ ಎಚ್.ವಿ. ವೆಂಕಟೇಶ್
Next Article ಆ. ೫: ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ: ಡಾ. ಜಿ. ಪರಮೇಶ್ವರ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.