ತುಮಕೂರು: ಕಳೆದ ಜುಲೈ ಮಾಹೆಯಲ್ಲಿ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ೧೦೭೯೨೬ ಪ್ರಕರಣಗಳ ಪೈಕಿ ೧೬೩೭೭ ಪ್ರಕರಣ ಹಾಗೂ ೨೫೨೩೨೪ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು ೨೬೮೭೦೧ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ಹೇಳಿದರು.
ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊ0ಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಸೆಪ್ಟೆಂಬರ್ ೧೩ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಜನತಾ ನ್ಯಾಯಾಲಯ(ಲೋಕ್ ಅದಾಲತ್)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯ ರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಈ ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಜನತಾ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ಭೂಸ್ವಾಧೀನ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ಲೋಕ್ ಅದಾಲತ್‌ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯ ರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಸೆಪ್ಟೆಂಬರ್ ೧೩ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಇತ್ಯ ರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಿಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ:೦೮೧೬-೨೨೫೫೧೩೩ ಮತ್ತು ಮೊ.ಸಂ.೯೧೪೧೧೯೩೯೫೯ ಹಾಗೂ ಕಾನೂನು ಸಹಾಯಕ್ಕಾಗಿ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ: ೧೫೧೦೦ಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.
(Visited 1 times, 1 visits today)